Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 20:48 - ಕನ್ನಡ ಸತ್ಯವೇದವು J.V. (BSI)

48 ಅದನ್ನು ಹೊತ್ತಿಸಿದವನು ಯೆಹೋವನಾದ ನಾನೇ ಎಂಬದು ಸಕಲನರಪ್ರಾಣಿಗಳಿಗೂ ಗೋಚರವಾಗುವದು; ಅದು ಆರಿಹೋಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

48 ಅದನ್ನು ಹೊತ್ತಿಸಿದವನು ಯೆಹೋವನಾದ ನಾನೇ ಎಂಬುದು ಸಕಲ ನರಪ್ರಾಣಿಗಳಿಗೂ ಗೋಚರವಾಗುವುದು; ಅದು ಆರಿಹೋಗದು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

48 ಅದನ್ನು ಹೊತ್ತಿಸಿದವನು ಸರ್ವೇಶ್ವರನಾದ ನಾನೇ ಎಂದು ಸಕಲ ನರಪ್ರಾಣಿಗಳಿಗೆ ಆಗ ಗೋಚರವಾಗುವುದು; ಅದು ಆರಿಹೋಗದು’.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

48 ಆಗ ಎಲ್ಲಾ ಜನರು ಯೆಹೋವನಾದ ನಾನೇ ಬೆಂಕಿಯನ್ನಿಟ್ಟಿದ್ದು ಎಂದು ತಿಳಿದುಕೊಳ್ಳುವರು. ಆ ಬೆಂಕಿಯು ನಂದಿಸಲ್ಪಡುವುದಿಲ್ಲ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

48 ಯೆಹೋವ ದೇವರಾದ ನಾನೇ ಅದನ್ನು ಹಚ್ಚಿದೆನೆಂದು ಪ್ರತಿಯೊಬ್ಬರೂ ತಿಳಿದುಕೊಳ್ಳುವರು, ಅದು ಆರಿಹೋಗುವುದಿಲ್ಲ.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 20:48
11 ತಿಳಿವುಗಳ ಹೋಲಿಕೆ  

ಹೀಗಿರಲು ಕರ್ತನಾದ ಯೆಹೋವನ ಈ ಮಾತನ್ನು ಕೇಳಿರಿ - ಆಹಾ, ನನ್ನ ಕೋಪವೆಂಬ ರೋಷಾಗ್ನಿಯು ಈ ಸ್ಥಳದಲ್ಲಿ ಸುರಿಯಲ್ಪಡುವದು; ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಕಾಡುಮರಗಳ ಮೇಲೆಯೂ ಭೂವಿುಯ ಬೆಳೆಯ ಮೇಲೆಯೂ ಅದನ್ನು ಸುರಿಯುವೆನು; ಆರದೆ ದಹಿಸುವದು.


ಯೆಹೋವನೇ, ನೀನು ಕೈಯೆತ್ತಿದ್ದರೂ ಅವರು ಲಕ್ಷಿಸರು. ಆದರೆ ನಿನ್ನ ಸ್ವಜನಾಭಿಮಾನವನ್ನು ನೋಡಿ ನಾಚಿಕೆಪಡುವರು; ಹೌದು, ಆ ನಿನ್ನ ವಿರೋಧಿಗಳನ್ನು ಅಗ್ನಿಯು ದಹಿಸಿಬಿಡುವದು.


ಆದರೆ ನೀವು ನನ್ನ ಕಡೆಗೆ ಕಿವಿಗೊಡದೆ ಸಬ್ಬತ್ ದಿನದಲ್ಲಿ ಹೊರೆಯನ್ನು ಹೊತ್ತು ಯೆರೂಸಲೇವಿುನ ಬಾಗಿಲುಗಳೊಳಗೆ ಪ್ರವೇಶಿಸಬಾರದೆಂಬ ನಿಯಮವನ್ನು ಕೈಕೊಳ್ಳದೆ ಆ ದಿನವನ್ನು ನನ್ನ ದಿನವೆಂದು ಆಚರಿಸದೆ ಇದ್ದರೆ ಆಗ ನಾನು ಊರಬಾಗಿಲುಗಳಲ್ಲಿ ಬೆಂಕಿಯನ್ನು ಹೊತ್ತಿಸುವೆನು, ಅದು ಯೆರೂಸಲೇವಿುನ ಉಪ್ಪರಿಗೆಗಳನ್ನು ದಹಿಸಿಬಿಡುವದು, ಆರುವದೇ ಇಲ್ಲ.


ದಾವೀದನ ಮನೆತನದವರೇ, ಯೆಹೋವನು ಇಂತೆನ್ನುತ್ತಾನೆ - ನಿಮ್ಮ ದುಷ್ಕೃತ್ಯಗಳ ನಿವಿುತ್ತ ನನ್ನ ರೋಷವು ಜ್ವಾಲೆಯಂತೆ ಹೊರಟು ಯಾರೂ ಆರಿಸಲಾಗದಷ್ಟು ರಭಸವಾಗಿ ದಹಿಸಬಾರದಾಗಿದ್ದರೆ ಮುಂಜಾನೆ ನ್ಯಾಯತೀರಿಸಿರಿ, ಸುಲಿಗೆಯಾದವನನ್ನು ದೋಚಿಕೊಂಡವನ ಕೈಯಿಂದ ಬಿಡಿಸಿರಿ.


ನಿಮ್ಮ ದುಷ್ಕೃತ್ಯಗಳಿಗೆ ಪ್ರತಿಫಲವಾಗಿ ನಿಮ್ಮನ್ನು ದಂಡಿಸುವೆನು; ನಿಮ್ಮ ಪುರಿಯೆಂಬ ವನಕ್ಕೆ ಬೆಂಕಿಹಚ್ಚುವೆನು, ಅದು ಸುತ್ತುಮುತ್ತಣದನ್ನೆಲ್ಲಾ ನುಂಗಿಬಿಡುವದು.


ಬೆಂಕಿಯು ದಂಡರೂಪವಾದ ಅದರ ಶಾಖೆಗಳಿಂದ ಹೊರಟು ಅದರ ಫಲವನ್ನು ನುಂಗಿಬಿಟ್ಟದ್ದರಿಂದ ರಾಜದಂಡಕ್ಕೆ ಯೋಗ್ಯವಾದ ಯಾವ ಗಟ್ಟಿಕೊಂಬೆಯೂ ಅದರಲ್ಲಿ ಉಳಿದಿಲ್ಲ. ಇದು ಶೋಕಗೀತ, ಶೋಕಗೀತವಾಗಿ ವಾಡಿಕೆಯಲ್ಲಿದೆ.


ನೀನು ಅಗ್ನಿಗೆ ಆಹುತಿಯಾಗುವಿ; ನಿನ್ನ ರಕ್ತವು ದೇಶದಲ್ಲೆಲ್ಲಾ ಇಂಗಿರುವದು; ನೀನು ಇನ್ನು ಜ್ಞಾಪಕಕ್ಕೆ ಬರುವದಿಲ್ಲ; ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು