ಯೆಹೆಜ್ಕೇಲನು 20:5 - ಕನ್ನಡ ಸತ್ಯವೇದವು J.V. (BSI)5 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಯಾವ ದಿವಸದಲ್ಲಿ ನಾನು ಇಸ್ರಾಯೇಲನ್ನು ಆರಿಸಿಕೊಂಡು ಯಾಕೋಬ ಸಂತಾನದವರಿಗೆ ಮಾತುಕೊಟ್ಟು ನಾನು ನಿಮ್ಮ ದೇವರಾದ ಯೆಹೋವನು ಎಂದು ಐಗುಪ್ತ ದೇಶದಲ್ಲಿ ಪ್ರಮಾಣಪೂರ್ವಕವಾಗಿ ತಿಳಿಯಪಡಿಸಿದೆನೋ ಆ ದಿವಸದಲ್ಲಿ ನಾನು ಅವರಿಗೆ - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಯಾವ ದಿನದಲ್ಲಿ ನಾನು ಇಸ್ರಾಯೇಲನ್ನು ಆರಿಸಿಕೊಂಡು, ಯಾಕೋಬ ಸಂತಾನದವರಿಗೆ ಮಾತುಕೊಟ್ಟು, ನಾನು ನಿಮ್ಮ ದೇವರಾದ ಯೆಹೋವನು’ ಎಂದು ಐಗುಪ್ತ ದೇಶದಲ್ಲಿ ಪ್ರಮಾಣ ಪೂರ್ವಕವಾಗಿ ತಿಳಿಯಪಡಿಸಿದೆನೋ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಸರ್ವೇಶ್ವರ ದೇವರು ಇಂತೆನ್ನುತ್ತಾರೆ - ನಾನು ಇಸ್ರಯೇಲರನ್ನು ಆರಿಸಿಕೊಂಡ ದಿನದಂದು ಯಕೋಬ ಸಂತಾನದವರಿಗೆ ಮಾತುಕೊಟ್ಟು, ‘ನಾನೇ ನಿಮ್ಮ ದೇವರಾದ ಸರ್ವೇಶ್ವರ’ ಎಂದು ಈಜಿಪ್ಟ್ ದೇಶದಲ್ಲಿ ಪ್ರಮಾಣಪೂರ್ವಕವಾಗಿ ತಿಳಿಯಪಡಿಸಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ನೀನು ಅವರಿಗೆ, ‘ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ನಾನು ಇಸ್ರೇಲನ್ನು ಆರಿಸಿಕೊಂಡ ದಿವಸ ನಾನು ನನ್ನನ್ನು ಈಜಿಪ್ಟ್ ದೇಶದಲ್ಲಿ ಅವರಿಗೆ ಪ್ರಕಟಿಸಿಕೊಂಡೆನು. ನಾನು ನನ್ನ ಕೈಯನ್ನು ಮೇಲೆತ್ತಿ ಯಾಕೋಬನ ಕುಟುಂಬಕ್ಕೆ ವಾಗ್ದಾನ ಮಾಡಿದೆನು. ನಾನು ಅವರಿಗೆ, “ನಿಮ್ಮ ಒಡೆಯನಾದ ಯೆಹೋವನು ನಾನೇ.” ಎಂದು ಹೇಳಿದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಅವರಿಗೆ ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಇಸ್ರಾಯೇಲನ್ನು ಆಯ್ದುಕೊಂಡ ದಿವಸದಲ್ಲಿ ಯಾಕೋಬನ ವಂಶದವರಿಗೆ ನನ್ನ ಕೈಯೆತ್ತಿ, “ನಿಮ್ಮ ಸಾರ್ವಭೌಮ ಯೆಹೋವ ದೇವರು ನಾನೇ” ಎಂದು ಈಜಿಪ್ಟ್ ದೇಶದಲ್ಲಿ ಅವರಿಗೆ ಹೇಳಿದೆನು. ಅಧ್ಯಾಯವನ್ನು ನೋಡಿ |
ಆಸ್ತಿಯನ್ನು ನೀನೇ ತಕ್ಕೋ ಎಂದು ಹೇಳಲು ಅಬ್ರಾಮನು ಅವನಿಗೆ - ಒಂದು ದಾರವನ್ನಾಗಲಿ ಕೆರದ ಬಾರನ್ನಾಗಲಿ ನಿನ್ನದರಲ್ಲಿ ಯಾವದನ್ನೂ ತೆಗೆದುಕೊಳ್ಳುವದಿಲ್ಲವೆಂದು ಭೂಮ್ಯಾಕಾಶಗಳನ್ನು ನಿರ್ಮಾಣಮಾಡಿದ ಪರಾತ್ಪರದೇವರಾಗಿರುವ ಯೆಹೋವನ ಕಡೆಗೆ ಕೈಯೆತ್ತಿ ಪ್ರಮಾಣ ಮಾಡುತ್ತೇನೆ. ಅಬ್ರಾಮನು ನನ್ನ ಸೊತ್ತಿನಿಂದಲೇ ಐಶ್ವರ್ಯವಂತನಾದನೆಂದು ಹೇಳಿಕೊಳ್ಳುವದಕ್ಕೆ ನಿನಗೆ ಆಸ್ಪದವಾಗಬಾರದು, ನನಗೆ ಏನೂ ಬೇಡ.