ಯೆಹೆಜ್ಕೇಲನು 21:14 - ಕನ್ನಡ ಸತ್ಯವೇದವು J.V. (BSI)14 ನರಪುತ್ರನೇ, ನೀನು ದೈವಸಂಕಲ್ಪವನ್ನು ಸಾರಿ ಚಪ್ಪಾಳೆಬಡಿ; ಖಡ್ಗವು ಎರಡರಷ್ಟು ಮೂರರಷ್ಟು ಸಂಹರಿಸಲಿ! ಪ್ರಜೆಯನ್ನು ಹತಿಸುವ ಖಡ್ಗ! ಸುತ್ತಲು ಬೀಸಿ ಅಧಿಪತಿಯನ್ನು ಹತಿಸುವ ಖಡ್ಗ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನರಪುತ್ರನೇ, ನೀನು ದೈವೋಕ್ತಿಯನ್ನು ಸಾರಿ ಚಪ್ಪಾಳೆ ಹೊಡಿ; ಖಡ್ಗವು ಎರಡರಷ್ಟು, ಮೂರರಷ್ಟು ಸಂಹರಿಸಲಿ! ಪ್ರಜೆಯನ್ನು ಹತಿಸುವ ಖಡ್ಗ! ಸುತ್ತಲು ಬೀಸಿ, ಅಧಿಪತಿಯನ್ನು ಹತಿಸುವ ಖಡ್ಗ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ನರಪುತ್ರನೇ, ಪ್ರವಾದಿಸು, ಚಪ್ಪಾಳೆ ಬಡಿ, ಹತಿಸುವುದಾ ಖಡ್ಗ ಇಮ್ಮಡಿ ಮುಮ್ಮಡಿ. ಪ್ರಜೆಯನ್ನು ಸಂಹರಿಸುವುದಾ ಖಡ್ಗ ಅಧಿಪತಿಯನ್ನೇ ಸುತ್ತಲು ಬೀಸಿ ಹತಿಸುವುದಾ ಖಡ್ಗ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಆತನು ಹೀಗೆ ಹೇಳಿದನು: “ನರಪುತ್ರನೇ, ಕೈತಟ್ಟಿ ನನ್ನ ಪರವಾಗಿ ಜನರೊಂದಿಗೆ ಮಾತನಾಡು. “ಖಡ್ಗವು ಎರಡು ಬಾರಿ ಕೆಳಕ್ಕೆ ಹಾಕಲ್ಪಡಲಿ, ಹೌದು, ಮೂರು ಬಾರಿ! ಈ ಖಡ್ಗವು ಜನರನ್ನು ಕೊಲ್ಲುವದಕ್ಕಾಗಿಯೇ ಇದೆ. ಇದು ಮಹಾಹತ್ಯೆ ಮಾಡುವದಕ್ಕಾಗಿ ಇದೆ. ಈ ಖಡ್ಗವು ಅವರನ್ನು ತೂರಿಹೋಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 “ಆದ್ದರಿಂದ ನೀನು ಮನುಷ್ಯಪುತ್ರನೇ, ಕೈಗೆ ಕೈತಟ್ಟಿ ಪ್ರವಾದಿಸು. ಹತರಾದವರ ಖಡ್ಗವಾದ ಆ ಖಡ್ಗವೇ ಎರಡರಷ್ಟು, ಮೂರರಷ್ಟು ಸಂಹರಿಸಲಿ. ಪ್ರಜೆಯನ್ನು ಹತಿಸುವ ಆ ಖಡ್ಗ ಸುತ್ತಲೂ ಬೀಸಿ ಆ ಕೊಠಡಿಗಳಲ್ಲಿ ಸೇರುವವರನ್ನು ಆ ದೊಡ್ಡ ಖಡ್ಗ ಸಂಹರಿಸುವುದು. ಅಧ್ಯಾಯವನ್ನು ನೋಡಿ |