Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 21:20 - ಕನ್ನಡ ಸತ್ಯವೇದವು J.V. (BSI)

20 ಅಮ್ಮೋನ್ಯರ ರಬ್ಬಾ ಎಂಬ ಪಟ್ಟಣಕ್ಕೂ ಯೆಹೂದದೊಳಗೆ ಕೋಟೆಕೊತ್ತಲಗಳಿಂದ ಕೂಡಿದ ಯೆರೂಸಲೇವಿುಗೂ ಖಡ್ಗವು ಬರುವದಕ್ಕೆ ದಾರಿಗಳನ್ನು ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅಮ್ಮೋನ್ಯರ ರಬ್ಬಾ ಎಂಬ ಪಟ್ಟಣಕ್ಕೂ, ಯೆಹೂದದೊಳಗೆ ಕೋಟೆ ಕೊತ್ತಲಗಳಿಂದ ಕೂಡಿದ ಯೆರೂಸಲೇಮಿಗೂ ಖಡ್ಗವು ಬರುವುದಕ್ಕೆ ದಾರಿಗಳನ್ನು ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅಮ್ಮೋನ್ಯರ ರಬ್ಬಾ ಪಟ್ಟಣಕ್ಕೂ ಜುದೇಯದಲ್ಲಿ ಕೋಟೆಕೊತ್ತಲಗಳಿಂದ ಕೂಡಿದ ಜೆರುಸಲೇಮಿಗೂ ಆ ಖಡ್ಗ ಬರುವುದಕ್ಕೆ ದಾರಿಗಳನ್ನು ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಯಾವ ಮಾರ್ಗದಲ್ಲಿ ಖಡ್ಗವು ಬರುವದೋ ಆ ದಾರಿಯನ್ನು ಗುರುತಿಸು. ಒಂದು ರಸ್ತೆಯು ಅಮ್ಮೋನಿಯರ ನಗರವಾದ ರಬ್ಬಾಗೆ ಹೋಗುವದು. ಇನ್ನೊಂದು ಮಾರ್ಗವು ಯೆಹೂದದಲ್ಲಿರುವ ಭದ್ರಪಡಿಸಲ್ಪಟ್ಟ ಪಟ್ಟಣವಾಗಿರುವ ಜೆರುಸಲೇಮಿಗೆ ಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಅಮ್ಮೋನ್ಯರ ರಬ್ಬಾ ಪಟ್ಟಣಕ್ಕೂ, ಯೆಹೂದದ ಕೋಟೆ ಕೊತ್ತಲಗಳಿಂದ ಕುಡಿದ ಯೆರೂಸಲೇಮಿಗೂ ಆ ಖಡ್ಗವು ಬರುವುದಕ್ಕೆ ದಾರಿಗಳನ್ನು ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 21:20
13 ತಿಳಿವುಗಳ ಹೋಲಿಕೆ  

ನಾನು ರಬ್ಬದ ಕೋಟೆಯಲ್ಲಿ ಬೆಂಕಿಯನ್ನು ಉರಿಸುವೆನು, ಅದು ಅವರ ಅರಮನೆಗಳನ್ನು ನುಂಗಿಬಿಡುವದು; ಆ ಯುದ್ಧದಿನದಲ್ಲಿ ಆರ್ಭಟವಾಗುವದು. ಆ ಸುಂಟರಗಾಳಿಯ ದಿವಸದಲ್ಲಿ ರೋಷಮಾರುತವು ಬೀಸುವದು;


ಆದದರಿಂದ ಇಗೋ, ಶತ್ರುಗಳು ನನ್ನ ಅಪ್ಪಣೆಯ ಮೇರೆಗೆ ರಬ್ಬಾ ಎಂಬ ಅಮ್ಮೋನ್ಯರ ಪಟ್ಟಣದ ಮೇಲೆ ಬಿದ್ದು ಯುದ್ಧಘೋಷಮಾಡುವ ದಿನಗಳು ಬರುವವು; ಆ ಪಟ್ಟಣವು ಹಾಳುದಿಬ್ಬವಾಗುವದು; ಅದಕ್ಕೆ ಸೇರಿದ ಗ್ರಾಮಗಳು ಬೆಂಕಿಯಿಂದ ಸುಟ್ಟುಹೋಗುವವು; ಆಗ ಇಸ್ರಾಯೇಲು ತನ್ನನ್ನು ವಶಮಾಡಿಕೊಂಡವರನ್ನು ತಾನು ವಶಮಾಡಿಕೊಳ್ಳುವದು. ಇದು ಯೆಹೋವನ ನುಡಿ.


ನಾನು ರಬ್ಬಾಪಟ್ಟಣವನ್ನು ಒಂಟೆಗಳಿಗೆ ಲಾಯವನ್ನಾಗಿಯೂ ಅಮ್ಮೋನ್ ಸೀಮೆಯನ್ನು ಹಿಂಡುಗಳಿಗೆ ರೊಪ್ಪವನ್ನಾಗಿಯೂ ಮಾಡುವೆನು; ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು.


(ರೆಫಾಯರೊಳಗೆ ಬಾಷಾನಿನ ಅರಸನಾದ ಓಗನೊಬ್ಬನೇ ಉಳಿದಿದ್ದನು. ಅವನ ಮಂಚ ಕಬ್ಬಿಣದು; ಅಮ್ಮೋನಿಯರ ರಬ್ಬಾ ಎಂಬ ಪಟ್ಟಣದಲ್ಲಿ ಅದನ್ನು ಈಗಲೂ ನೋಡಬಹುದು. ಪುರುಷನ ಕೈಯಳತೆಯ ಪ್ರಕಾರ ಅದರ ಉದ್ದ ಒಂಭತ್ತು ಮೊಳ; ಅಗಲ ನಾಲ್ಕು ಮೊಳ.)


ವೈರಿಗಳೂ ವಿರೋಧಿಗಳೂ ಯೆರೂಸಲೇವಿುನ ಬಾಗಿಲುಗಳಲ್ಲಿ ಹೆಜ್ಜೆಯಿಡುವರೆಂದು ಭೂಪತಿನಿವಾಸಿಗಳಲ್ಲಿ ಯಾರೂ ನಂಬಿರಲಿಲ್ಲ.


ಯೆರೂಸಲೇವಿುನ ಮನೆಗಳನ್ನು ಲೆಕ್ಕಿಸಿ ಪೌಳಿಗೋಡೆಯನ್ನು ಭದ್ರಪಡಿಸುವದಕ್ಕೆ ಮನೆಗಳನ್ನು ಕೆಡವಿಬಿಟ್ಟಿರಿ.


ಇದಾದ ಮೇಲೆ ಅವನು ಗೀಹೋನ್ ಬುಗ್ಗೆಯ ಪಡುವಣ ಕಡೆಯಿಂದ ಮೀನು ಬಾಗಲಿನ ಮಾರ್ಗದವರೆಗಿರುವ ತಗ್ಗಿನಲ್ಲಿ ಓಫೆಲ್ ಗುಡ್ಡದ ಸುತ್ತಲೂ ದಾವೀದ ನಗರದ ಹೊರಗಣ ಬಲು ಎತ್ತರವಾದ ಗೋಡೆಯನ್ನು ಕಟ್ಟಿಸಿ ಯೆಹೂದದೇಶದ ಕೋಟೆ ಕೊತ್ತಲುಗಳುಳ್ಳ ಎಲ್ಲಾ ಪಟ್ಟಣಗಳಲ್ಲಿ ಸೇನಾಪತಿಗಳನ್ನಿರಿಸಿದನು.


ಇದಲ್ಲದೆ ಅರಸನು ಧೈರ್ಯಗೊಂಡು ಅಲ್ಲಲ್ಲಿ ಬಿದ್ದುಹೋದ ಪೌಳಿಗೋಡೆಯನ್ನು ಜೀರ್ಣೋದ್ಧಾರಮಾಡಿಸಿ ಅದರ ಮೇಲೆ ಬುರುಜುಗಳನ್ನೂ ಹೊರಗೆ ಇನ್ನೊಂದು ಗೋಡೆಯನ್ನೂ ಕಟ್ಟಿಸಿ ದಾವೀದ ನಗರದ ವಿುಲ್ಲೋಕೋಟೆಯನ್ನು ಭದ್ರಪಡಿಸಿ ಅನೇಕಾಯುಧಗಳನ್ನೂ ಗುರಾಣಿಗಳನ್ನೂ ಮಾಡಿಸಿದನು.


ಅವನು ಯೆರೂಸಲೇವಿುನಲ್ಲಿ ಮೂಲೆಬಾಗಲು, ತಗ್ಗಿನ ಬಾಗಲು, ಗೋಡೆ ತಿರುಗುವ ಭಾಗ ಇವುಗಳ ಮೇಲೆ ಬುರುಜುಗಳನ್ನು ಕಟ್ಟಿಸಿದನು.


ಯೋವಾಬನು ಅಮ್ಮೋನಿಯರ ಪಟ್ಟಣವಾದ ರಬ್ಬಕ್ಕೆ ಮುತ್ತಿಗೆಹಾಕಿ ಅರಮನೆಯಿದ್ದ ಭಾಗವನ್ನು ಸ್ವಾಧೀನಮಾಡಿಕೊಂಡು


ದಾವೀದನು ಆ ಕೋಟೆಗೆ ದಾವೀದನಗರವೆಂದು ಹೆಸರಿಟ್ಟು ಅಲ್ಲೇ ವಾಸಿಸುತ್ತಾ ಅದರ ಸುತ್ತಲೂ ವಿುಲ್ಲೋವಿನಿಂದ ಪ್ರಾರಂಭಿಸಿ ಒಳಗಣ ಪೌಳಿಗೋಡೆಯನ್ನು ಕಟ್ಟಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು