ಯೆಹೆಜ್ಕೇಲನು 21:22 - ಕನ್ನಡ ಸತ್ಯವೇದವು J.V. (BSI)22 ಯೆರೂಸಲೇಮ್ ಗುರುತಿನ ಬಾಣವು ಅವನ ಬಲಗೈಗೆ ಸಿಕ್ಕಿದೆ; ಭಿತ್ತಿಭೇದಕ ಯಂತ್ರಗಳನ್ನು ನಿಲ್ಲಿಸಿ ಬಾಯಿಬಿಟ್ಟು ಸಂಹಾರಧ್ವನಿಗೈದು ಕೂಗಿ ಹೌದು ಭಿತ್ತಿಭೇದಕಯಂತ್ರಗಳನ್ನು ಪುರದ್ವಾರಗಳೆದುರಿಗೆ ನಿಲ್ಲಿಸಿ ದಿಬ್ಬಹಾಕಿ ಒಡ್ಡುಕಟ್ಟಬೇಕೆಂದು ಅದರಿಂದ ಸೂಚನೆಯಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಯೆರೂಸಲೇಮಿನ ಗುರುತಿನ ಬಾಣವು ಅವನ ಬಲಗೈಗೆ ಸಿಕ್ಕಿದೆ; ಅಲ್ಲಿ ಅವನು ಚಿತ್ತವನ್ನು ಭೇದಿಸುವ ಆಯುಧಗಳನ್ನು ನಿಲ್ಲಿಸಿ, ಬಾಯಿದೆರೆದು ಸಂಹಾರ ಧ್ವನಿಗೈದು ಕೂಗಿ! ಬಾಗಿಲುಗಳ ಎದುರಾಗಿ ಚಿತ್ತ ಭೇದಕ ಯಂತ್ರಗಳನ್ನು ನಿಲ್ಲಿಸಿ, ಒಡ್ಡು ಕಟ್ಟಬೇಕೆಂದು ಅದರಿಂದ ಸೂಚನೆಯಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಜೆರುಸಲೇಮ್ ಗುರುತಿನ ಬಾಣ ಅವನ ಬಲಗೈಗೆ ಸಿಕ್ಕಿದೆ; ಭಿತ್ತಿಭೇದಕ ಯಂತ್ರಗಳನ್ನು ಪುರದ್ವಾರಗಳೆದುರಿಗೆ ನಿಲ್ಲಿಸಿ, ಬಾಯಿತೆರೆದು ಸಂಹಾರ ಧ್ವನಿಮಾಡಿ, ಹೌದು ಭಿತ್ತಿಭೇದಕಯಂತ್ರಗಳನ್ನು ಪುರದ್ವಾರಗಳೆದುರಿಗೆ ನಿಲ್ಲಿಸಿ, ದಿಬ್ಬಹಾಕಿ, ಒಡ್ಡು ಕಟ್ಟಬೇಕೆಂಬ ಸೂಚನೆ ಅದರಿಂದ ಬಂದಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 “ಜೆರುಸಲೇಮನ್ನು ಸೂಚಿಸುವ ಮಂತ್ರಶಕ್ತಿಯ ವಸ್ತು ಅವನ ಬಲಗೈಗೆ ಬರುವುದು. ಅವನು ತನ್ನೊಂದಿಗೆ ಭಿತ್ತಿಭೇದಕ ಯಂತ್ರಗಳನ್ನು ತರುವನು. ಅವನು ಅಪ್ಪಣೆ ಮಾಡಿದ ಕೂಡಲೇ ಅವನ ಸೈನಿಕರು ಕೊಲ್ಲಲು ಪ್ರಾರಂಭಿಸುವರು. ರಣರಂಗದ ಆರ್ಭಟ ಮಾಡುವರು. ಆಮೇಲೆ ನಗರದ ಸುತ್ತಲೂ ಮಣ್ಣಿನ ದಿಬ್ಬ ಕಟ್ಟುವರು. ಕೋಟೆಗೋಡೆಯ ತನಕ ಮಣ್ಣಿನ ರಸ್ತೆ ಮಾಡುವರು. ಮರದಿಂದ ಮಾಡಿದ ಗೋಪುರಗಳನ್ನು ಮಾಡಿ ಅಲ್ಲಿಂದ ನಗರಕ್ಕೆ ಧಾಳಿ ಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಅವನ ಬಲಗೈಯಲ್ಲಿ ಯೆರೂಸಲೇಮಿಗಾಗಿ ಶಕುನವು ಇತ್ತು. ಅಲ್ಲಿ ಅವನು ಬಡಿಯುವ ಆಯುಧಗಳನ್ನಿಟ್ಟು, ಬಾಯಿಬಿಟ್ಟು ಸಂಹಾರ ಧ್ವನಿಗೈದು, ಆರ್ಭಟವಿಟ್ಟು ಬಾಗಿಲುಗಳ ಎದುರಾಗಿ ಬಡಿಯುವ ಆಯುಧಗಳನ್ನಿಟ್ಟು ದಿಬ್ಬ ಹಾಕಿ, ಒಡ್ಡು ಕಟ್ಟಿದ್ದು ಸೂಚನೆಯಾಗಿದೆ. ಅಧ್ಯಾಯವನ್ನು ನೋಡಿ |