ಯೆಹೆಜ್ಕೇಲನು 21:26 - ಕನ್ನಡ ಸತ್ಯವೇದವು J.V. (BSI)26 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಮುಂಡಾಸವನ್ನು ಕಿತ್ತುಬಿಡು! ಕಿರೀಟವನ್ನು ಎತ್ತಿಹಾಕು! ಎಲ್ಲವೂ ವ್ಯತ್ಯಸ್ತವಾಗಲಿ; ಕೆಳಗಿನದನ್ನು ಮೇಲೆ ಮಾಡು, ಮೇಲಿನದನ್ನು ಕೆಳಗೆ ಮಾಡು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಮುಂಡಾಸವನ್ನು ಕಿತ್ತುಬಿಡು! ಕಿರೀಟವನ್ನು ತೆಗೆದುಹಾಕು! ಅದು ಹಾಗೆಯೇ ಇರುವುದಿಲ್ಲ; ತಗ್ಗಿಸಲ್ಪಟ್ಟವನನ್ನು ಹೆಚ್ಚಿಸಿ, ಹೆಚ್ಚಿಸಲ್ಪಟ್ಟವನನ್ನು ತಗ್ಗಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನಿನ್ನ ರುಮಾಲನ್ನು ಕಿತ್ತುಬಿಡು, ಕಿರೀಟವನ್ನು ತೆಗೆದುಹಾಕು. ಎಲ್ಲವೂ ಮೊದಲಿದ್ದ ಹಾಗೆ ಇರುವುದಿಲ್ಲ; ಕೆಳಗಿರುವುದನ್ನು ಮೇಲೆ ಸೇರಿಸಲಾಗುವುದು, ಮೇಲಿರುವುದನ್ನು ಕೆಳಕ್ಕಿಳಿಸಲಾಗುವುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ನಿನ್ನ ಮುಂಡಾಸವನ್ನು ತೆಗೆ! ನಿನ್ನ ಕಿರೀಟವನ್ನು ತೆಗೆ! ಈಗ ಇರುವಂತೆಯೇ ಸಂಗತಿಗಳು ಇರುವುದಿಲ್ಲ. ಮುಖ್ಯಾಧಿಕಾರಿಗಳು ತಗ್ಗಿಸಲ್ಪಡುವರು. ಈಗ ಸಾಧಾರಣ ವ್ಯಕ್ತಿಗಳಾಗಿರುವವರು ಪ್ರಮುಖ ನಾಯಕರುಗಳಾಗುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಮುಂಡಾಸವನ್ನು ಎತ್ತಿಡು, ಕಿರೀಟವನ್ನು ತೆಗೆದುಹಾಕು; ಅದು ಮೊದಲಿದ್ದ ಹಾಗೆಯೇ ಇರುವುದಿಲ್ಲ; ತಗ್ಗಿಸಿಕೊಂಡವನನ್ನು ಹೆಚ್ಚಿಸಿ, ಹೆಚ್ಚಿಸಿಕೊಂಡವನನ್ನು ತಗ್ಗಿಸು. ಅಧ್ಯಾಯವನ್ನು ನೋಡಿ |