Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 21:27 - ಕನ್ನಡ ಸತ್ಯವೇದವು J.V. (BSI)

27 ನಾನು ದೊಬ್ಬಿಬಿಡುವೆನು, ದೊಬ್ಬಿಬಿಡುವೆನು, ದೊಬ್ಬಿಬಿಡುವೆನು; [ರಾಜ್ಯಕ್ಕೆ] ಬಾಧ್ಯನು ಬರುವದರೊಳಗೆ ಒಂದೂ ಇದ್ದಂತಿರದು; ಅವನಿಗೇ ರಾಜ್ಯವನ್ನು ವಹಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಧ್ವಂಸ, ನಾನು ಧ್ವಂಸ ಮಾಡುವೆನು; ರಾಜ್ಯಕ್ಕೆ ಬಾಧ್ಯನು ಬರುವುದರೊಳಗೆ ಒಂದೂ ಇದ್ದಂತೆ ಇರದು; ಅವನಿಗೆ ರಾಜ್ಯವನ್ನು ವಹಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಧ್ವಂಸ, ಧ್ವಂಸ, ನಾನು ಧ್ವಂಸ ಮಾಡುವೆನು; ರಾಜ್ಯಕ್ಕೆ ಬಾಧ್ಯನು ಬರುವುದರೊಳಗೆ ಒಂದೂ ಇದ್ದಂತಿರದು; ಅವನಿಗೇ ರಾಜ್ಯವನ್ನು ವಹಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ನಾನು ಆ ನಗರವನ್ನು ಸಂಪೂರ್ಣವಾಗಿ ನಾಶಮಾಡುವೆನು ಆದರೆ ನಾನು ನೇಮಿಸಿದ ವ್ಯಕ್ತಿಯು ರಾಜನಾಗುವ ತನಕ ಇದು ಸಂಭವಿಸುವುದಿಲ್ಲ; ಅವನು ರಾಜನಾದ ಮೇಲೆ ಈ ಪಟ್ಟಣವನ್ನು ಅವನಿಗೊಪ್ಪಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಬಾ, ನಾಶನ! ನಾಶನ! ನಾನು ಅದನ್ನು ಪಾಳು ಬೀಳುವಂತೆ ಮಾಡುವೆನು. ಅದು ಯಾರದೋ, ಅವನು ಬರುವವರೆಗೆ ನಾನು ಅದನ್ನು ಪುನಃ ಕಟ್ಟಿಸುವುದಿಲ್ಲ; ಅವನಿಗೆ ನಾನು ಅದನ್ನು ಒಪ್ಪಿಸುವೆನು.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 21:27
40 ತಿಳಿವುಗಳ ಹೋಲಿಕೆ  

ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಗ್ರಾಮಗಳಲ್ಲಿ ಚಿಕ್ಕದ್ದಾಗಿದ್ದರೂ ಇಸ್ರಾಯೇಲನ್ನು ಆಳತಕ್ಕವನು ನಿನ್ನೊಳಗಿಂದ ನನಗಾಗಿ ಹೊರಡುವನು; ಆತನ ಹೊರಡೋಣದ ಮೂಲವು ಪುರಾತನವೂ ಅನಾದಿಯೂ ಆದದ್ದು.


ಆತನು ಮಹಾಪುರುಷನಾಗಿ ಪರಾತ್ಪರನ ಕುಮಾರನೆನಿಸಿಕೊಳ್ಳುವನು; ಇದಲ್ಲದೆ ದೇವರಾಗಿರುವ ಕರ್ತನು ಆತನ ಮೂಲಪಿತನಾದ ದಾವೀದನ ಸಿಂಹಾಸನವನ್ನು ಆತನಿಗೆ ಕೊಡುವನು.


ಕೋಪಾವೇಶದಿಂದ ಅವರನ್ನು ಕಳವಳಗೊಳಿಸುವನು.


ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೇವದೂತರೂ ಅಧಿಕಾರಿಗಳೂ ಮಹತ್ವಗಳೂ ಆತನ ಸ್ವಾಧೀನವಾಗಿವೆ.


ನಿಜವಾದ ಬೆಳಕು ಲೋಕಕ್ಕೆ ಬರುವದಾಗಿತ್ತು; ಆ ಬೆಳಕೇ ಪ್ರತಿ ಮನುಷ್ಯನಿಗೂ ಬೆಳಕನ್ನು ಕೊಡುವಂಥದು.


ಆಗ ಯೇಸು ಹತ್ತರಕ್ಕೆ ಬಂದು - ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರವು ನನಗೆ ಕೊಡಲ್ಪಟ್ಟಿದೆ.


ಇಗೋ, ನನ್ನ ದೂತನನ್ನು ಕಳುಹಿಸುತ್ತೇನೆ, ಆತನು ನನ್ನ ಮುಂದೆ ದಾರಿಯನ್ನು ಸರಿಮಾಡುವನು; ನೀವು ಹಂಬಲಿಸುವ ಕರ್ತನು ತನ್ನ ಆಲಯಕ್ಕೆ ಫಕ್ಕನೆ ಬರುವನು; ಆಹಾ, ನಿಮಗೆ ಇಷ್ಟನಾದ ಒಡಂಬಡಿಕೆಯ ದೂತನು ಐತರುತ್ತಾನೆ; ಇದು ಸೇನಾಧೀಶ್ವರ ಯೆಹೋವನ ನುಡಿ.


ಚೀಯೋನ್ ನಗರಿಯೇ, ಬಹು ಸಂತೋಷಪಡು; ಯೆರೂಸಲೇಮ್ ಪುರಿಯೇ, ಹರ್ಷಧ್ವನಿಗೈ! ನೋಡು, ನಿನ್ನ ಅರಸು ನಿನ್ನ ಬಳಿಗೆ ಬರುತ್ತಾನೆ; ಆತನು ನ್ಯಾಯವಂತನು, ಸುರಕ್ಷಿತನು; ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು, ಪ್ರಾಯದ ಕತ್ತೆಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆ.


ಅನಂತರ ಅವರು ತಮ್ಮ ದೇವರಾದ ಯೆಹೋವನನ್ನೂ ತಮ್ಮ ರಾಜನಾದ ದಾವೀದನನ್ನೂ ಪುನಃ ಆಶ್ರಯಿಸುವರು; ಹೌದು, ಅಂತ್ಯಕಾಲದಲ್ಲಿ ಯೆಹೋವನನ್ನೂ ಆತನ ದಯೆಯನ್ನೂ ಭಯಭಕ್ತಿಯಿಂದ ಮರೆಹೊಗುವರು.


ರಾಜದಂಡವನ್ನು ಹಿಡಿಯತಕ್ಕವನು ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವದಿಲ್ಲ, ಮುದ್ರೆಕೋಲು ಅವನ ಪಾದಗಳ ಬಳಿಯಿಂದ ಕದಲುವದಿಲ್ಲ; ಅವನಿಗೆ ಅನ್ಯಜನಗಳೂ ವಿಧೇಯರಾಗಿರುವರು.


ಇದನ್ನು ತಿಳಿದು ಮಂದಟ್ಟುಮಾಡಿಕೋ; ಯೆರೂಸಲೇಮು ಜೀರ್ಣೋದ್ಧಾರವಾಗಿ ಕಟ್ಟಲ್ಪಡಲಿ ಎಂಬ ದೈವೋಕ್ತಿಯು ಹೊರಡುವಂದಿನಿಂದ ಅಭಿಷಿಕ್ತನಾದ ಪ್ರಭುವು ಬರುವದರೊಳಗೆ ಏಳು ವಾರಗಳು ಕಳೆಯಬೇಕು! ಅದು ಪುನಃ ಕಟ್ಟಲ್ಪಟ್ಟು ಅರುವತ್ತೆರಡು ವಾರ ಇರುವದು; ಅದಕ್ಕೆ ಚೌಕವೂ ಕಂದಕವೂ ಇರುವವು; ಆ ಕಾಲವು ಬಹು ಕಷ್ಟಕಾಲ.


ಆ ರಾಜರ ಕಾಲದಲ್ಲಿ ಪರಲೋಕದೇವರು ಒಂದು ರಾಜ್ಯವನ್ನು ಸ್ಥಾಪಿಸುವನು; ಅದು ಎಂದಿಗೂ ಅಳಿಯದು, ಅದರ ಪ್ರಾಬಲ್ಯವು ಬೇರೆ ಜನಾಂಗಕ್ಕೆ ಕದಲಿಹೋಗದು, ಆ ರಾಜ್ಯಗಳನ್ನೆಲ್ಲಾ ಭಂಗಪಡಿಸಿ ನಿರ್ನಾಮ ಮಾಡಿ ಶಾಶ್ವತವಾಗಿ ನಿಲ್ಲುವದು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಶೋಧನೆಯು ಸಂಭವಿಸಿತು; ತಿರಸ್ಕರಿಸುತ್ತಿದ್ದ ರಾಜದಂಡವೇ ನಾಶವಾದರೆ ಗತಿಯೇನು?


ಆತನಲ್ಲಿ ಜೀವವಿತ್ತು; ಆ ಜೀವವು ಮನುಷ್ಯರಿಗೆ ಬೆಳಕಾಗಿತ್ತು.


ಅದೇನಂದರೆ, ಈ ಹೊತ್ತು ನಿಮಗೋಸ್ಕರ ದಾವೀದನೂರಲ್ಲಿ ಒಬ್ಬ ರಕ್ಷಕನು ಹುಟ್ಟಿದ್ದಾನೆ. ಆತನು ಕರ್ತನಾಗಿರುವ ಕ್ರಿಸ್ತನೇ.


ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೋ [ದೇವರ] ಧರ್ಮವೆಂಬ ಸೂರ್ಯನು ಸ್ವಸ್ಥತೆಯನ್ನುಂಟುಮಾಡುವ ಕಿರಣಗಳುಳ್ಳವನಾಗಿ ಮೂಡುವನು; ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಹೊರಟು ಬಂದು ಕುಣಿದಾಡುವಿರಿ;


ಸಕಲಜನಾಂಗಗಳನ್ನು ನಡುಗಿಸುವೆನು; ಆಗ ಸಮಸ್ತಜನಾಂಗಗಳ ಇಷ್ಟವಸ್ತುಗಳು ಬಂದು ಒದಗಲು ಆ ಆಲಯವನ್ನು ವೈಭವದಿಂದ ತುಂಬಿಸುವೆನು; ಇದು ಸೇನಾಧೀಶ್ವರ ಯೆಹೋವನ ನುಡಿ.


ನನ್ನ ಹಿಂಡನ್ನು ಕಾಯಲಿಕ್ಕೆ ಒಬ್ಬನೇ ಕುರುಬನನ್ನು ಏರ್ಪಡಿಸುವೆನು; ನನ್ನ ಸೇವಕನಾದ ದಾವೀದನೆಂಬ ಆ ಕುರುಬನು ಅದನ್ನು ಮೇಯಿಸುವನು; ಹೌದು, ಅದರ ಕುರುಬನಾಗಿ ಅದನ್ನು ಮೇಯಿಸುತ್ತಾ ಬರುವನು.


ಆಗ ನಾನು ಯಾಕೋಬನ ಸಂತಾನದವರನ್ನು ತ್ಯಜಿಸಿ ಅಬ್ರಹಾಮ, ಇಸಾಕ, ಯಾಕೋಬ, ಇವರ ಸಂತತಿಯನ್ನು ಆಳತಕ್ಕ ಒಡೆಯರನ್ನು ನನ್ನ ದಾಸನಾದ ದಾವೀದನ ವಂಶದಿಂದ ಆರಿಸದೆ ಆ ವಂಶದವರನ್ನು ನಿರಾಕರಿಸಿಬಿಟ್ಟೇನು. ಅವರನ್ನು ದುರವಸ್ಥೆಯಿಂದ ತಪ್ಪಿಸಿ ಕರುಣಿಸೇ ಕರುಣಿಸುವೆನು.


ಅವರಲ್ಲೇ ಒಬ್ಬನು ಅವರಿಗೆ ಪ್ರಭುವಾಗಿರುವನು, ಅವರ ವಂಶದವನೇ ಅವರನ್ನಾಳುವನು; ನಾನು ಅವನನ್ನು ನನ್ನ ಹತ್ತಿರಕ್ಕೆ ಬರಗೊಡಿಸಲಾಗಿ ಅವನು ನನ್ನ ಸನ್ನಿಧಾನಕ್ಕೆ ಸೇರುವನು; ನನ್ನನ್ನು ಸಮೀಪಿಸುವದಕ್ಕೆ ಯಾರು ಧೈರ್ಯಗೊಂಡಾರು? ಇದು ಯೆಹೋವನ ನುಡಿ.


ಇಸ್ರಾಯೇಲ್ಯರೋ ಬಲಗೊಂಡವರು; ಯಾಕೋಬ್ಯರಿಗೇ ದೊರೆತನವಾಯಿತು; ಪಟ್ಟಣಗಳಿಂದ ತಪ್ಪಿಸಿಕೊಂಡವರೂ ನಾಶವಾದರು ಅಂದನು.


ಆಗ ನನ್ನ ದಾಸನಾದ ದಾವೀದನಿಗೂ ನನ್ನ ಸೇವಕರಾಗಿರುವ ಲೇವಿಯರಾದ ಯಾಜಕರಿಗೂ ನಾನು ಮಾಡಿದ ನಿಬಂಧನೆಯು ನಿಂತುಹೋಗಿ ದಾವೀದನ ಸಿಂಹಾಸನಾಸೀನನಾಗಿ ಆಳತಕ್ಕ ಅವನ ಸಂತಾನದವನೊಬ್ಬನೂ ಉಳಿಯದೆ ಹೋದಾನು.


ಯೆಹೋವನಾದ ನಾನು ನನ್ನ ಜನರ ದೇವರಾಗಿರುವೆನು; ನನ್ನ ಸೇವಕನಾದ ದಾವೀದನು ಅವರನ್ನಾಳುವ ಪ್ರಭುವಾಗಿರುವನು; ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ.


ಇಗೋ, ಮುತ್ತಿಗೆಯ ದಿಬ್ಬಗಳು, ಪಟ್ಟಣವನ್ನು ಆಕ್ರವಿುಸುವದಕ್ಕೆ ಬಂದಿದ್ದಾರೆ; ಪಟ್ಟಣವು ಖಡ್ಗಕ್ಷಾಮವ್ಯಾಧಿಗಳಿಂದ ಕ್ಷೀಣವಾಗಿ ವಿರೋಧಿಗಳಾದ ಕಸ್ದೀಯರ ಕೈಗೆ ಸಿಕ್ಕಿದೆ; ನೀನು ನುಡಿದದ್ದು ನೆರವೇರಿದೆ, ಇಗೋ, ನೋಡುತ್ತಿದ್ದೀ.


ಅವನು ಚಿದ್ಕೀಯನ ಆಳಿಕೆಯ ಒಂಭತ್ತನೆಯ ವರುಷ ಹತ್ತನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಸರ್ವಸೈನ್ಯಸಹಿತನಾಗಿ ಯೆರೂಸಲೇವಿುಗೆ ಬಂದು ಅಲ್ಲಿ ಪಾಳೆಯ ಮಾಡಿಕೊಂಡು ಅದರ ಸುತ್ತಲು ಮಣ್ಣಿನ ದಿಬ್ಬವನ್ನು ಮಾಡಿ


ಆ ನಕ್ಷೆಯ ಸುತ್ತುಮುತ್ತಲು ದಿಬ್ಬಹಾಕಿ ಒಡ್ಡುಕಟ್ಟಿ ಪಾಳೆಯಗಳನ್ನು ಮಾಡಿ ಭಿತ್ತಿಭೇದಕಯಂತ್ರಗಳನ್ನು ನಿಲ್ಲಿಸಿ ಅದನ್ನು ಮುತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು