Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 21:29 - ಕನ್ನಡ ಸತ್ಯವೇದವು J.V. (BSI)

29 [ಅಮ್ಮೋನೇ,] ನಿನ್ನ ಜೋಯಿಸರು ವಿುಥ್ಯೆಯನ್ನು ಸಾಕ್ಷಾತ್ಕರಿಸಿ ಸುಳ್ಳುಸುಳ್ಳಾಗಿ ಕಣಿ ಹೇಳುತ್ತಿದ್ದಾರೆ. ಸಮಯವು ಹತ್ತರಿಸಿ ಅಪರಾಧದ ಕಡೆಗಾಲವು ಸಂಭವಿಸಿ ಹತರಾಗಿ ಬಿದ್ದಿರುವ ದುಷ್ಟರ ಗತಿಯನ್ನು ನೋಡು! ಜೋಯಿಸರನ್ನು ನಂಬಿದ ನೀನೂ ಆ ದುಷ್ಟರ ಕತ್ತುಗಳ ಮೇಲೆ ಒರಗಿಹೋಗುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಅಮ್ಮೋನೇ, ಪ್ರವಾದಿಗಳೆಂದು ಹೇಳಿಕೊಳ್ಳುತ್ತಿರುವ ನಿನ್ನವರು ದರ್ಶನವನ್ನು ನೋಡಿದೆವು ಎಂದು ಸುಳ್ಳು ಸುಳ್ಳಾಗಿ ಶಕುನ ಹೇಳುತ್ತಿದ್ದಾರೆ. ಸಮಯವು ಹತ್ತಿರವಾಗಿ, ಅಪರಾಧದ ಕಡೆಗಾಲವು ಸಂಭವಿಸಿ, ಹತರಾಗಿ ಬಿದ್ದಿರುವ ದುಷ್ಟರ ಗತಿಯನ್ನು ನೋಡು! ಜೋಯಿಸರನ್ನು ನಂಬಿದ ನೀನೂ ಆ ದುಷ್ಟರ ಕತ್ತುಗಳ ಮೇಲೆ ಒರಗಿ ಬೀಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಅಮ್ಮೋನೇ, ನಿನ್ನ ಜೋಯಿಸರು ಮಿಥ್ಯೆಯನ್ನು ಕಲ್ಪಿಸಿಕೊಂಡು ಸುಳ್ಳುಸುಳ್ಳಾಗಿ ಕಣಿ ಹೇಳುತ್ತಿದ್ದಾರೆ. ಸಮಯವು ಸಮೀಪಿಸಿ ಅಪರಾಧದ ಕಡೆಗಾಲವು ಸಂಭವಿಸಿ ಹತರಾಗಿ ಬಿದ್ದಿರುವ ದುಷ್ಟರ ಗತಿಯನ್ನು ನೋಡು; ಜೋಯಿಸರನ್ನು ನಂಬಿದ ನೀನೂ ಆ ದುಷ್ಟರ ಕತ್ತುಗಳ ಮೇಲೆ ಬೀಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 “‘ಓ ಖಡ್ಗವೇ, ನಿನ್ನ ಕುರಿತು ಅವರು ಸುಳ್ಳುದರ್ಶನಗಳನ್ನು ಕಾಣುವರು. ನಿನ್ನ ಕುರಿತು ಅವರು ಹೇಳುವ ಕಣಿಯು ದಾರಿ ತಪ್ಪಿಸುತ್ತದೆ. ಅದು ಕೇವಲ ಸುಳ್ಳುಗಳ ಕಂತೆ. ಓ ಖಡ್ಗವೇ, ನಿನ್ನನ್ನು ದುಷ್ಟರ ಕುತ್ತಿಗೆಗಳ ಮೇಲೆ ಇರಿಸಲಾಗುವುದು. ಬೇಗನೇ ಅವರು ಹೆಣಗಳಾಗಿ ಬೀಳುವರು. ಅವರ ಸಮಯವು ಬಂದಿದೆ. ಇದು ಅವರ ಅಂತ್ಯದಂಡನೆಯ ಸಮಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ನಿನ್ನ ಜೋಯಿಸರು ವ್ಯರ್ಥವಾದದ್ದನ್ನು ನೋಡಿ, ಸಾಕ್ಷಾತ್ಕರಿಸಿ ಸುಳ್ಳಾಗಿ ಶಕುನ ಹೇಳುತ್ತಿದ್ದಾರೆ. ಹೀಗೆ ನಿನ್ನನ್ನು ಹತರಾದ ದುಷ್ಟರ ಕುತ್ತಿಗೆಗಳ ಮೇಲೆ ತಂದಿದ್ದಾರೆ. ಅವರ ಅಂತ್ಯದಿನವು ಬಂದಿದೆ. ಅದೇ ಅವರ ಅಕ್ರಮಗಳಿಗೆ ಅಂತ್ಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 21:29
15 ತಿಳಿವುಗಳ ಹೋಲಿಕೆ  

ಇಸ್ರಾಯೇಲಿನ ದೊರೆಯೇ, ದುಷ್ಟನೇ, ಭ್ರಷ್ಟನೇ! ನಿನಗೆ ಸಮಯವು ಹತ್ತರಿಸಿದೆ; ಇದೇ ನಿನ್ನ ಅಪರಾಧದ ಕಡೆಗಾಲ.


ಅಲ್ಲಿನ ಪ್ರವಾದಿಗಳು ಇವರಿಗಾಗಿ ವಿುಥ್ಯಾದರ್ಶನವನ್ನೂ ಸುಳ್ಳು ಕಣಿಯನ್ನೂ ಕಂಡು ಯೆಹೋವನು ಮಾತಾಡದಿದ್ದರೂ ಕರ್ತನಾದ ಯೆಹೋವನು ಇಂತೆನ್ನುತ್ತಾನೆ ಎಂದು ನುಡಿಯುತ್ತಾ ಮೇಲೆ ಮೇಲೆ ಸುಣ್ಣ ಬಳಿದಿದ್ದಾರೆ.


ನೀವು ಬಾಬೆಲಿನ ಅರಸನ ಅಡಿಯಾಳಾಗುವದಿಲ್ಲ ಎಂದು ನಿಮಗೆ ನುಡಿಯುವ ನಿಮ್ಮ ಪ್ರವಾದಿಗಳು, ಶಕುನದವರು, ಕನಸಿನವರು, ಕಣಿಯವರು, ಮಾಟದವರು, ಇವರಿಗೆ ಕಿವಿಗೊಡಲೇಬಾರದು;


ಆದರೆ ಕರ್ತನು ಅವನಿಗೆ ಶಿಕ್ಷಾಕಾಲ ಬರುತ್ತದೆಂದು ನಗುತ್ತಾನೆ.


ನೀನು ಇಸ್ರಾಯೇಲ್ಯರ ಮೇಲೆ ದೀರ್ಘದ್ವೇಷವಿಟ್ಟು ಅವರ ಅಪರಾಧದ ಕಡೆಗಾಲದಲ್ಲಿ ಆಪತ್ತು ಸಂಭವಿಸಿದಾಗ ಅವರನ್ನು ಕತ್ತಿಯ ಬಾಯಿಗೆ ಗುರಿಮಾಡಿದ್ದರಿಂದ


ನೀವು ವಿುಥ್ಯಾದರ್ಶನವನ್ನು ಹೊಂದಿ ಕಣಿಹೇಳುವ ಕೆಲಸವು ಇನ್ನು ನಡಿಯುವದೇ ಇಲ್ಲ; ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುವೆನು; ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು.


ಕ್ಷೇಮವಿಲ್ಲದಿದ್ದರೂ ಅವರು ಕ್ಷೇಮ ಎಂದು ಹೇಳಿ ನನ್ನ ಜನರನ್ನು ವಂಚಿಸಿದ್ದಾರಲ್ಲಾ. ಒಬ್ಬನು ತೆಳುವಾದ ಗೋಡೆಯನ್ನು ಕಟ್ಟಿದ್ದರೆ, ಇಗೋ, ಅದಕ್ಕೆ ಸುಣ್ಣ ಬಳಿಯುತ್ತಾರೆ;


ಯೆಹೋವನು ಇಂತೆನ್ನುತ್ತಾನೆ ಎಂದು ನುಡಿಯುವವರಿಗೆ ಆದ ದರ್ಶನ ವಿುಥ್ಯ, ಕೇಳಿಸಿದ ಕಣಿ ಸುಳ್ಳು; ಯೆಹೋವನು ಅವರನ್ನು ಕಳುಹಿಸಲಿಲ್ಲ, ತಾವು ನುಡಿದ ಮಾತು ನೆರವೇರುವದೆಂದು ಸುಮ್ಮ ಸುಮ್ಮನೆ ನಿರೀಕ್ಷಿಸಿಕೊಂಡಿದ್ದಾರೆ.


ಇನ್ನು ಮೇಲೆ ಇಸ್ರಾಯೇಲ್ ವಂಶದವರಲ್ಲಿ ಯಾರಿಗೂ ವಿುಥ್ಯಾದರ್ಶನವಾಗದು, ಮೋಸದ ಕಣಿಯೂ ಇರದು.


ನಿನ್ನ ಪ್ರವಾದಿಗಳು ಕಂಡುಹೇಳಿದ ಕಣಿಗಳು ವ್ಯರ್ಥ, ನಿಸ್ಸಾರ; ಅವರು ನಿನ್ನ ದೋಷವನ್ನು ಬೈಲಿಗೆ ತಾರದಕಾರಣ ನಿನ್ನ ದುರವಸ್ಥೆಯು ನೀಗಲಿಲ್ಲ; ನಿನ್ನ ವಿಷಯವಾಗಿ ಅವರಿಗೆ ಕಂಡುಬಂದ ವ್ಯರ್ಥ ದೈವೋಕ್ತಿಗಳು ನೀನು ಗಡೀಪಾರಾಗಿ ಒಯ್ಯಲ್ಪಡುವದಕ್ಕೆ ಆಸ್ಪದವಾದವು.


ಮಂತ್ರಾಲೋಚನೆಗಳನ್ನು ಕೇಳಿ ಕೇಳಿ ನಿನಗೆ ಸಾಕಾಯಿತಲ್ಲವೇ; ಖಗೋಲಜ್ಞರು, ಜೋಯಿಸರು, ಪಂಚಾಂಗದವರು, ಇವರೆಲ್ಲರೂ ನಿಂತು ನಿನಗೆ ಬರುವ ವಿಪತ್ತುಗಳಿಂದ ನಿನ್ನನ್ನು ಉದ್ಧರಿಸಲಿ.


ನಾನು ಕೊಚ್ಚಿಕೊಳ್ಳುವವರ ಶಕುನಗಳನ್ನು ನಿರರ್ಥಕಪಡಿಸಿ ಕಣಿಹೇಳುವವರನ್ನು ಮರುಳುಗೊಳಿಸಿ ಜ್ಞಾನಿಗಳನ್ನು ಹಿಂದಕ್ಕೆ ತಳ್ಳಿ ಅವರ ತಿಳುವಳಿಕೆಯನ್ನು ಹುಚ್ಚುತನವಾಗಮಾಡಿ


ಹಿಂದಿನವರು ಅವನ [ನಾಶನ] ದಿನವನ್ನು ನೋಡಿ ಹೇಗೆ ಬೆರಗಾದರೋ ಹಾಗೆಯೇ ಮುಂದಿನವರೂ ಅದಕ್ಕೆ ವಿಸ್ಮಯಪಡುವರು.


ತೊಟ್ಟಿಯು ತನ್ನಲ್ಲಿನ ನೀರನ್ನು ತಿಳಿಯಾಗಿ ಇಟ್ಟುಕೊಳ್ಳುವಂತೆ ಈ ಪಟ್ಟಣವು ತನ್ನಲ್ಲಿನ ದುಷ್ಟತನವನ್ನು ನಿಚ್ಚಳವಾಗಿ ಇಟ್ಟುಕೊಂಡಿದೆ; ಅಲ್ಲಿ ಬಲಾತ್ಕಾರದ ಮತ್ತು ಕೊಳ್ಳೆಯ ಸುದ್ದಿಯೇ ಕೇಳಬರುತ್ತದೆ; ರೋಗಗಳೂ ವ್ರಣಗಳೂ ಸದಾ ನನ್ನ ಕಣ್ಣಿಗೆ ಬೀಳುತ್ತವೆ.


ತಮ್ಮ ದುರ್ಮಾರ್ಗವೆಲ್ಲಾ ಯೆಹೋವನ ಜ್ಞಾಪಕದಲ್ಲಿರುತ್ತದೆ ಎಂದು ಅವರು ಮಂದಟ್ಟುಮಾಡಿಕೊಳ್ಳುವದಿಲ್ಲ; ಅವರ ದುಷ್ಕೃತ್ಯಗಳು ಈಗ ಅವರನ್ನು ಮುತ್ತಿಕೊಂಡಿವೆ, ನನ್ನ ಕಣ್ಣೆದುರಿಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು