ಯೆಹೆಜ್ಕೇಲನು 21:4 - ಕನ್ನಡ ಸತ್ಯವೇದವು J.V. (BSI)4 ನಾನು ನಿನ್ನಲ್ಲಿನ ಶಿಷ್ಟರನ್ನೂ ದುಷ್ಟರನ್ನೂ ಸಂಹರಿಸಬೇಕೆಂದಿರುವದರಿಂದ ನನ್ನ ಖಡ್ಗವು ಒರೆಯಿಂದ ಹೊರಟು ತೆಂಕಲಿಂದ ಬಡಗಲವರೆಗೆ ಸಕಲನರಪ್ರಾಣಿಗಳ ಮೇಲೆ ಬೀಳುವದು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನಾನು ನಿನ್ನಲ್ಲಿನ ಶಿಷ್ಟರನ್ನೂ, ದುಷ್ಟರನ್ನೂ ಸಂಹರಿಸಬೇಕೆಂದಿರುವುದರಿಂದ ನನ್ನ ಖಡ್ಗವು ಒರೆಯಿಂದ ಹೊರಟು ದಕ್ಷಿಣದಿಂದ ಉತ್ತರದವರೆಗೆ ಸಕಲ ನರಪ್ರಾಣಿಗಳ ಮೇಲೆ ಬೀಳುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನಾನು ನಿನ್ನಲ್ಲಿನ ಸಜ್ಜನರನ್ನೂ ದುರ್ಜನರನ್ನೂ ಸಂಹರಿಸಬೇಕೆಂದಿರುವುದರಿಂದ ನನ್ನ ಖಡ್ಗ ಒರೆಯಿಂದ ಹೊರಟು ದಕ್ಷಿಣದಿಂದ ಉತ್ತರವರೆಗೆ ಸಕಲ ನರಪ್ರಾಣಿಗಳ ಮೇಲೆ ಬೀಳುವುದು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಒಳ್ಳೆಯ ಜನರನ್ನೂ ಕೆಟ್ಟ ಜನರನ್ನೂ ನಿನ್ನಿಂದ ಕಡಿದುಹಾಕುವೆನು. ನನ್ನ ಖಡ್ಗವನ್ನು ಒರೆಯಿಂದ ತೆಗೆದು ದಕ್ಷಿಣದಿಂದ ಉತ್ತರದ ತನಕ ಇರುವ ಎಲ್ಲಾ ಜನರಿಗೆ ವಿರುದ್ಧವಾಗಿ ಉಪಯೋಗಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆಮೇಲೆ ನಾನು ನೀತಿವಂತರನ್ನೂ, ದುಷ್ಟರನ್ನೂ ಕಡಿದುಬಿಡುವುದರಿಂದ ನನ್ನ ಖಡ್ಗವು ದಕ್ಷಿಣದಿಂದ ಮೊದಲುಗೊಂಡು ಉತ್ತರದ ಮನುಷ್ಯರೆಲ್ಲರಿಗೆ ವಿರೋಧವಾಗಿ ಅದರ ಒರೆಯನ್ನು ಬಿಟ್ಟು ಹೋಗುವುದು. ಅಧ್ಯಾಯವನ್ನು ನೋಡಿ |