Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 21:6 - ಕನ್ನಡ ಸತ್ಯವೇದವು J.V. (BSI)

6 ನರಪುತ್ರನೇ, ಮೊರೆಯಿಡು; ಸೊಂಟಮುರಿದಷ್ಟು ದುಃಖದಿಂದ ಜನರ ಮುಂದೆ ನರಳಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 “ನರಪುತ್ರನೇ, ಮೊರೆಯಿಡು; ಸೊಂಟಮುರಿದಷ್ಟು ದುಃಖದಿಂದ ಜನರ ಮುಂದೆ ನರಳಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನರಪುತ್ರನೇ, ಮೊರೆಯಿಡು; ಸೊಂಟಮುರಿದಷ್ಟು ದುಃಖದಿಂದ ಜನರ ಮುಂದೆ ನರಳಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ದೇವರು ನನಗೆ ಹೇಳಿದ್ದೇನೆಂದರೆ, “ನರಪುತ್ರನೇ, ಹೃದಯ ಒಡೆದ ಮನುಷ್ಯನು ದುಃಖದಿಂದಿರುವಾಗ ಅಳುವ ಶಬ್ದವನ್ನು ಮಾಡು. ಈ ಶಬ್ದವನ್ನು ಜನರ ಮುಂದೆ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ಆದ್ದರಿಂದ ಮನುಷ್ಯಪುತ್ರನೇ, ನರಳಾಡು! ಮುರಿದ ಹೃದಯ ಮತ್ತು ಕಹಿ ದುಃಖದಿಂದ ಅವರ ಮುಂದೆ ನರಳಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 21:6
21 ತಿಳಿವುಗಳ ಹೋಲಿಕೆ  

ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನೀನು ಚಪ್ಪಾಳೆ ಹೊಡೆದು ನೆಲವನ್ನೊದ್ದು ಹೀಗೆ ಹೇಳು - ಹಾ, ಇಸ್ರಾಯೇಲ್ ವಂಶದವರ ಅಸಹ್ಯವಾದ ಕೆಟ್ಟಕೆಲಸಗಳೆಷ್ಟು! ಅವರು ಖಡ್ಗ ಕ್ಷಾಮವ್ಯಾಧಿಗಳಿಂದ ಸತ್ತೇ ಸಾಯುವರು.


ಹೀಗಿರಲು ನನ್ನ ಕಡೆಯಿಂದ ದೃಷ್ಟಿ ತಿರುಗಿಸಿರಿ. ಬಹುಸಂಕಟದಿಂದ ಅಳುವೆನು, ನನ್ನ ಜನವೆಂಬ ಯುವತಿಯು ಹಾಳಾದ ವಿಷಯದಲ್ಲಿ ನನ್ನನ್ನು ಸಂತೈಸುವದಕ್ಕೆ ತವಕಗೊಳ್ಳದಿರಿ ಅಂದೆನು.


ಅದು ನನಗೆ ಕೇಳಿಸಲು ನನ್ನ ಹೊಟ್ಟೆಯು ತಳಮಳಗೊಂಡಿತು, ಆ ಶಬ್ದಕ್ಕೆ ನನ್ನ ತುಟಿಗಳು ಅದರಿದವು. ವಿಪತ್ಕಾಲವು ಜನರನ್ನು ಎದುರಾಯಿಸಿ ಅವರ ಮೇಲೆ ಬೀಳುವಾಗ ನಾನು ಅದನ್ನು ತಾಳ್ಮೆಯಿಂದ ಕಾದಿರಬೇಕೆಂದು ನನಗೆ ತಿಳಿಯಲು ಕ್ಷಯವು ನನ್ನ ಎಲುಬುಗಳಲ್ಲಿ ಸೇರಿತು, ನಾನು ನಿಂತ ಹಾಗೆಯೇ ನಡುಗಿದೆನು.


ನಗರಿಯು ಬರಿದಾಗಿದೆ, ಬಟ್ಟಬರಿದಾಗಿ ಬೀಳುಬಿದ್ದಿದೆ; ಎದೆಯು ನೀರಾಗಿ ಹೋಗಿದೆ, ಮೊಣಕಾಲುಗಳು ಅದರುತ್ತವೆ, ಎಲ್ಲರ ಸೊಂಟಗಳಿಗೂ ವೇದನೆಯಾಗಿದೆ, ಎಲ್ಲರ ಮುಖಗಳೂ ಬಾಡಿವೆ.


ಆಗ ದಾನಿಯೇಲನಾದ ನಾನು ಬೆಂಡಾಗಿ ಕೆಲವು ದಿವಸ ಕಾಯಿಲೆಬಿದ್ದೆನು; ಆಮೇಲೆ ಎದ್ದು ರಾಜಕಾರ್ಯವನ್ನು ನಡಿಸಿದೆನು; ಆ ಕನಸಿಗೆ ಬೆಚ್ಚಿಬೆರಗಾದೆನು; ಅದು ಯಾರಿಗೂ ತಿಳಿಯಲಿಲ್ಲ.


ಆಗ ಅವನ ಮುಖ ಕಳೆಗುಂದಿತು, ಮನಸ್ಸು ಕಳವಳಗೊಂಡಿತು, ಸೊಂಟದ ಕೀಲು ಸಡಲಿತು, ಮೊಣಕಾಲುಗಳು ಒಂದಕ್ಕೊಂದು ಬಡಿದುಕೊಂಡವು.


ಹೇಳುವಾಗ ನೀನು ಹೆಸರು ಬರೆದಿರುವ ದಂಡಗಳು ಅವರ ಕಣ್ಣೆದುರಿಗೆ ನಿನ್ನ ಕೈಯಲ್ಲಿರಲಿ.


ನರಪುತ್ರನೇ, ಕೂಗಿಕೋ, ಗೋಳಾಡು! ಖಡ್ಗವು ನನ್ನ ಜನರ ಮೇಲೆಯೂ ಇಸ್ರಾಯೇಲಿನ ಪ್ರಭುಗಳೆಲ್ಲರ ಮೇಲೆಯೂ ಬಿದ್ದಿದೆ; ಆ ಪ್ರಭುಗಳು ನನ್ನ ಜನರೊಂದಿಗೆ ಖಡ್ಗಕ್ಕೆ ತುತ್ತಾಗಿದ್ದಾರೆ; ತೊಡೆಯನ್ನು ಬಡಿದುಕೋ.


ನೀನು ಯೆರೂಸಲೇಮ್ ಪಟ್ಟಣದಲ್ಲೆಲ್ಲಾ ತಿರುಗಿ ಅದರೊಳಗೆ ನಡೆಯುವ ಸಮಸ್ತ ಅಸಹ್ಯಕಾರ್ಯಗಳಿಗಾಗಿ ನರಳಿ ಗೋಳಾಡುತ್ತಿರುವ ಜನರ ಹಣೆಯ ಮೇಲೆ ಗುರುತುಮಾಡು ಎಂದು ಅಪ್ಪಣೆಕೊಟ್ಟನು.


ನೀನು ಸೌದೆಗೆ ಬದಲಾಗಿ ಮನುಷ್ಯರ ಮಲವನ್ನು ಉಪಯೋಗಿಸಿ ನಿನ್ನ ಜನರ ಕಣ್ಣೆದುರಿಗೆ ಆ ಹಿಟ್ಟನ್ನು ರೊಟ್ಟಿಮಾಡಿ ಜವೆಗೋದಿಯ ರೊಟ್ಟಿಗಳಂತೆ ತಿನ್ನು.


ವಿಚಾರಿಸಿ ನೋಡಿರಿ, ಗಂಡಸು ಪ್ರಸವವೇದನೆ ಪಡುವದುಂಟೇ? ಪ್ರತಿಯೊಬ್ಬನು ಹೆರುವವಳಂತೆ ಸೊಂಟವನ್ನು ಹಿಸಕಿಕೊಳ್ಳುವದು, ಎಲ್ಲಾ ಮುಖಗಳು ಬಿಳಿಚಿಕೊಂಡಿರುವದು, ಇವು ಏಕೆ ನನ್ನ ಕಣ್ಣಿಗೆ ಬೀಳುತ್ತವೆ?


ಆಗ ನೀನು ನಿನ್ನ ಸಂಗಡ ಬಂದವರ ಕಣ್ಣೆದುರಿಗೆ ಆ ಕೂಜವನ್ನು ಒಡೆದುಬಿಟ್ಟು ಅವರಿಗೆ ಹೀಗೆ ಹೇಳು -


ಹಾ, ನನ್ನ ಕರುಳು! ಕರುಳು! ಯಾತನೆಪಡುತ್ತೇನೆ; ಆಹಾ, ನನ್ನ ಗುಂಡಿಗೆಯ ಪಕ್ಕಗಳು! ನನ್ನ ಹೃದಯವು ನನ್ನೊಳಗೆ ತಳಮಳಗೊಂಡಿದೆ! ನಾನು ಬಾಯಿಮುಚ್ಚಿಕೊಂಡಿರಲಾರೆ; ನನ್ನ ಆತ್ಮವೇ, ನೀನು ತುತೂರಿಯ ಶಬ್ದವನ್ನೂ ಯುದ್ಧಘೋಷವನ್ನೂ ಕೇಳುತ್ತೀಯಲ್ಲಾ.


ಈ ದರ್ಶನದಿಂದ ನನ್ನ ಸೊಂಟದಲ್ಲಿ ನೋವು ತುಂಬಿದೆ, ಪ್ರಸವವೇದನೆಯಂತಿರುವ ವೇದನೆಯು ನನ್ನನ್ನು ಹಿಡಿದಿದೆ, ಕಿವಿ ಕಿವುಡಾಗುವಷ್ಟು ಯಾತನೆಪಡುತ್ತೇನೆ, ಕಣ್ಣು ಕುರುಡಾಗುವಷ್ಟು ತತ್ತರಗೊಂಡಿದ್ದೇನೆ.


ಆದದರಿಂದ ಮೋವಾಬಿನ ನಿವಿುತ್ತ ನನ್ನ ಹೃದಯವು, ಕೀರ್‍ಹೆರೆಸಿನ ನಿವಿುತ್ತ ನನ್ನ ಅಂತರಂಗವು, ಕಿನ್ನರಿಯಂತೆ ಅಲುಗಿ ನುಡಿಯುತ್ತದೆ.


ಆಗ ಯೆಹೋವನಾದ ನಾನೇ ನನ್ನ ಖಡ್ಗವನ್ನು ಒರೆಯಿಂದ ಹಿರಿದಿದ್ದೇನೆ ಎಂಬದು ಎಲ್ಲಾ ನರಮನುಷ್ಯರಿಗೂ ಗೊತ್ತಾಗುವದು; ಅದು ಪುನಃ ಒರೆಗೆ ಸೇರದು.


ಏಕೆ ನರಳಾಡುತ್ತೀ ಎಂದು ಅವರು ನಿನ್ನನ್ನು ಕೇಳಲು ನೀನು ಅವರಿಗೆ - ದುರ್ವಾರ್ತೆಯ ನಿವಿುತ್ತ ನರಳುತ್ತೇನೆ; ಇಗೋ, ವಿಪತ್ತು ಬಂತು; ಎಲ್ಲರ ಹೃದಯವು ಕರಗಿ ನೀರಾಗುವದು; ಎಲ್ಲರ ಕೈ ಜೋಲು ಬೀಳುವದು, ಎಲ್ಲರ ಮನಸ್ಸು ಕುಂದುವದು, ಎಲ್ಲರ ಮೊಣಕಾಲು ನೀರಿನಂತೆ ಚಂಚಲವಾಗುವದು; ಇಗೋ, ಬಂತು, ಆಯಿತು; ಇದು ಕರ್ತನಾದ ಯೆಹೋವನ ನುಡಿ ಎಂದು ಉತ್ತರಕೊಡು.


ನರಪುತ್ರನೇ, ನೀನು ಐಗುಪ್ತದ ಅಸಂಖ್ಯಾತ ಪ್ರಜೆಗಾಗಿ ಗೋಳಾಡಿ ಅವರನ್ನೂ ಘನವಾದ ಜನಾಂಗಗಳವರನ್ನೂ ಅಧೋಲೋಕಕ್ಕೆ, ಪ್ರೇತಗಳ ಜೊತೆಗೆ ತಳ್ಳಿಬಿಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು