Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 22:11 - ಕನ್ನಡ ಸತ್ಯವೇದವು J.V. (BSI)

11 ನಿನ್ನಲ್ಲಿ ಒಬ್ಬನು ನೆರೆಯವನ ಹೆಂಡತಿಯಲ್ಲಿ ದುರಾಚಾರ ನಡಿಸಿದ್ದಾನೆ; ಇನ್ನೊಬ್ಬನು ಅಕೃತ್ಯಮಾಡಿ ಸೊಸೆಯನ್ನು ಕೆಡಿಸಿದ್ದಾನೆ; ಮತ್ತೊಬ್ಬನು ತನ್ನ ತಂದೆಯ ಮಗಳೇ ಆದ ತಂಗಿಯ ಮಾನವನ್ನು ಭಂಗಪಡಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನಿನ್ನಲ್ಲಿ ಒಬ್ಬನು ನೆರೆಯವನ ಹೆಂಡತಿಯಲ್ಲಿ ದುರಾಚಾರ ನಡಿಸಿದ್ದಾನೆ; ಇನ್ನೊಬ್ಬನು ಅತ್ಯಾಚಾರ ಮಾಡಿ ಸೊಸೆಯನ್ನು ಕೆಡಿಸಿದ್ದಾನೆ; ಮತ್ತೊಬ್ಬನು ತನ್ನ ತಂದೆಯ ಮಗಳೇ ಆದ ತಂಗಿಯ ಮಾನಭಂಗಪಡಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ನಿನ್ನಲ್ಲಿ ಒಬ್ಬನು ನೆರೆಯವನ ಹೆಂಡತಿಯೊಡನೆ ದುರಾಚಾರ ನಡೆಸಿದ್ದಾನೆ; ಇನ್ನೊಬ್ಬನು ಅತ್ಯಾಚಾರಮಾಡಿ ಸೊಸೆಯನ್ನು ಕೆಡಿಸಿದ್ದಾನೆ; ಮತ್ತೊಬ್ಬನು ತನ್ನ ತಂದೆಯ ಮಗಳೇ ಆದ ತಂಗಿಯ ಮಾನಭಂಗ ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಇಂತಹ ಪಾಪಗಳನ್ನು ತಮ್ಮ ನೆರೆಯವನ ಹೆಂಡತಿಯೊಂದಿಗೆ ನಡಿಸುತ್ತಾರೆ. ಒಬ್ಬನು ತನ್ನ ಸ್ವಂತ ಸೊಸೆಯೊಂದಿಗೆ ಮಲಗಿ ಆಕೆಯನ್ನು ಅಶುದ್ಧಳನ್ನಾಗಿ ಮಾಡಿದನು. ಮತ್ತೊಬ್ಬನು ತನ್ನ ತಂದೆಯ ಮಗಳು, ತನ್ನ ತಂಗಿಯನ್ನೇ ಬಲವಂತದಿಂದ ಕೆಡಿಸಿರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಒಬ್ಬನು ತನ್ನ ನೆರೆಯವನ ಹೆಂಡತಿಯ ಸಂಗಡ ಅಸಹ್ಯಕರವಾದದ್ದನ್ನು ಮಾಡಿದ್ದಾನೆ; ಮತ್ತೊಬ್ಬನು ಅತ್ಯಾಚಾರದಿಂದ ಸೊಸೆಯನ್ನು ಕೆಡಿಸಿದ್ದಾನೆ; ಇನ್ನೊಬ್ಬನು ತನ್ನ ತಂದೆಯ ಮಗಳಾದ ತನ್ನ ಸಹೋದರಿಯನ್ನೇ ಮಾನಭಂಗಪಡಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 22:11
25 ತಿಳಿವುಗಳ ಹೋಲಿಕೆ  

ಆದರೆ ಅವನು ಆಕೆಯ ಮಾತನ್ನು ಕೇಳದೆ ಬಲಾತ್ಕಾರದಿಂದ ಆಕೆಯನ್ನು ಕೆಡಿಸಿದನು.


ಯಾವನಾದರೂ ತನ್ನ ಒಡಹುಟ್ಟಿದವಳನ್ನು ಅಂದರೆ ತಂದೆಯ ಮಗಳನ್ನಾಗಲಿ ತಾಯಿಯ ಮಗಳನ್ನಾಗಲಿ ಕರೆದುಕೊಂಡು ಅವಳ ಮಾನವನ್ನು ಇವನೂ ಇವನ ಮಾನವನ್ನು ಅವಳೂ ನೋಡಿದರೆ ಅದು ನಾಚಿಕೆಗೇಡಾದ ಕೆಲಸವಾಗಿರುವದರಿಂದ ಅವರ ಕುಲದವರ ಎದುರಾಗಿಯೇ ಅವರಿಗೆ ಮರಣಶಿಕ್ಷೆಯನ್ನು ಮಾಡಿಸಬೇಕು. ಆ ಮನುಷ್ಯನು ಒಡಹುಟ್ಟಿದವಳನ್ನು ಸಂಗವಿುಸಿದದರಿಂದ ತನ್ನ ಪಾಪದ ಫಲವನ್ನು ಅನುಭವಿಸಬೇಕು.


ಸೊಸೆಯ ಸಹವಾಸ ಮಾಡಬಾರದು; ಆಕೆ ಮಗನ ಹೆಂಡತಿಯಾದವಳಲ್ಲವೇ.


ತಂದೆಯ ಮಗಳನ್ನಾಗಲಿ ತಾಯಿಯ ಮಗಳನ್ನಾಗಲಿ ಇಟ್ಟುಕೊಳ್ಳಬಾರದು; ಅವರು ಒಡಹುಟ್ಟಿದವರಾದರೂ ಪರಸ್ತ್ರೀಯಲ್ಲಿ ಹುಟ್ಟಿದವರಾದರೂ ನಿಮಗೆ ಅಕ್ಕತಂಗಿಯರಲ್ಲವೇ.


ಸುಕೃತ್ಯಗಳಲ್ಲಿ ಯಾವದನ್ನೂ ನಡಿಸದೆ ಗುಡ್ಡಗಳ ಮೇಲೆ [ಯಜ್ಞಶೇಷವನ್ನು] ತಿಂದು ನೆರೆಯವನ ಹೆಂಡತಿಯನ್ನು ಕೆಡಿಸಿ


ಯಾವನಾದರೂ ಸೊಸೆಯನ್ನು ಸಂಗವಿುಸಿದರೆ ಅವರಿಬ್ಬರಿಗೂ ಮರಣ ಶಿಕ್ಷೆಯಾಗಬೇಕು; ಅವರು ಧರ್ಮವಿರುದ್ಧವಾದ ಕಾರ್ಯವನ್ನು ಮಾಡಿದದರಿಂದ ಆ ಶಿಕ್ಷೆಗೆ ಅವರೇ ಕಾರಣರು.


ಯಾವನಾದರೂ ಪರಪತ್ನಿಯನ್ನು ಸಂಗವಿುಸಿದರೆ ಅವರಿಬ್ಬರಿಗೂ ಮರಣಶಿಕ್ಷೆಯಾಗಬೇಕು.


ಪರಸ್ತ್ರೀಗಮನದಿಂದ ಅಪರಿಶುದ್ಧರಾಗಬಾರದು.


ಗಂಡಹೆಂಡರ ಸಂಬಂಧವು ನಿಷ್ಕಳಂಕವಾಗಿರಬೇಕು. ಜಾರರಿಗೂ ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನೆಂದು ತಿಳುಕೊಳ್ಳಿರಿ.


ಶರೀರಭಾವದ ಕರ್ಮಗಳು ಪ್ರಸಿದ್ಧವಾಗಿಯೇ ಅವೆ; ಯಾವವಂದರೆ - ಜಾರತ್ವ ಬಂಡುತನ ನಾಚಿಕೆಗೇಡಿತನ ವಿಗ್ರಹಾರಾಧನೆ ಮಾಟ ಹಗೆತನ ಜಗಳ ಹೊಟ್ಟೇಕಿಚ್ಚು ಸಿಟ್ಟು


ಅನ್ಯಾಯಗಾರರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂಬದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ, ಜಾರರು ವಿಗ್ರಹಾರಾಧಕರು ವ್ಯಭಿಚಾರಿಗಳು ವಿಟರು ಪುರುಷಗಾವಿುಗಳು


ನಾನು ನ್ಯಾಯತೀರಿಸುವದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರ, ಸೂಳೆಗಾರ, ಸುಳ್ಳುಸಾಕ್ಷಿ, ಕೂಲಿಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನೂ ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು, ಅಂತು ನನಗಂಜದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರಸಾಕ್ಷಿಯಾಗಿರುವೆನು; ಇದು ಸೇನಾಧೀಶ್ವರ ಯೆಹೋವನ ನುಡಿ.


ಇವರು ಇಸ್ರಾಯೇಲಿನಲ್ಲಿ ದುರಾಚಾರವನ್ನು ನಡಿಸಿ ನೆರೆಯವರ ಹೆಂಡಿರಲ್ಲಿ ವ್ಯಭಿಚಾರಮಾಡಿ ನಾನು ಆಜ್ಞಾಪಿಸಿದ ಮಾತುಗಳನ್ನು ನನ್ನ ಹೆಸರಿನ ಮೇಲೆ ಸುಳ್ಳಾಗಿ ಸಾರಿದರಲ್ಲಾ; ನಾನೇ ಬಲ್ಲೆ, ನಾನೇ ಸಾಕ್ಷಿ ಎಂದು ಯೆಹೋವನು ಅನ್ನುತ್ತಾನೆ ಎಂಬದೇ.


ಅಕಟಾ, ದಾರಿಗರು ತಂಗುವ ಗುಡಿಸಲು ಕಾಡಿನಲ್ಲಿ ನನಗೆ ಸಿಕ್ಕಿದರೆ ಎಷ್ಟೋ ಒಳ್ಳೇದು! ಆಗ ನನ್ನ ಜನರನ್ನು ತ್ಯಜಿಸಿ ಹೋಗುತ್ತಿದ್ದೆನು. ಅವರೆಲ್ಲರೂ ಸೂಳೆಗಾರರು, ದ್ರೋಹಿಗಳ ಗುಂಪೇ.


ದಾವೀದನ ಮಗನಾದ ಅಬ್ಷಾಲೋಮನಿಗೆ ತಾಮಾರಳೆಂಬ ಬಹು ಸುಂದರಿಯಾದ ಒಬ್ಬ ತಂಗಿಯಿದ್ದಳು. ದಾವೀದನ ಮಗನಾದ ಅಮ್ನೋನನು ಆಕೆಯನ್ನು ಮೋಹಿಸಿದನು.


ಅವರು - ತಂದೆಯ ಮಗಳನ್ನಾಗಲಿ ತಾಯಿಯ ಮಗಳನ್ನಾಗಲಿ ಸಂಗವಿುಸಿದವನು ಶಾಪಗ್ರಸ್ತ ಎನ್ನಲಾಗಿ ಜನರೆಲ್ಲರೂ - ಹೌದು ಅನ್ನಬೇಕು.


ಯಾವನಾದರೂ ಪರನ ಹೆಂಡತಿಯೊಡನೆ ವ್ಯಭಿಚಾರಮಾಡಿದ್ದು ಹೊರಬಿದ್ದರೆ ಆ ಸ್ತ್ರೀ ಪುರುಷರಿಬ್ಬರಿಗೂ ಮರಣ ಶಿಕ್ಷೆಯಾಗಬೇಕು. ಹೀಗೆ ನೀವು ಆ ದುಷ್ಟತ್ವವನ್ನು ಇಸ್ರಾಯೇಲ್ಯರ ಮಧ್ಯದಿಂದ ತೆಗೆದುಹಾಕಬೇಕು.


ಕೂಡಲೇ ಅವನು ಆಕೆಯನ್ನು ಹಿಡಿದು - ನನ್ನ ತಂಗಿಯೇ, ಬಂದು ನನ್ನ ಸಂಗಡ ಮಲಗಿಕೋ ಅಂದನು.


ಗುಡ್ಡಗಳ ಮೇಲೆ [ಯಜ್ಞಶೇಷವನ್ನು] ತಿನ್ನದೆ ಇಸ್ರಾಯೇಲ್ ವಂಶದವರ ವಿಗ್ರಹಗಳ ಕಡೆಗೆ ಕಣ್ಣೆತ್ತದೆ ನೆರೆಯವನ ಹೆಂಡತಿಯನ್ನು ಕೆಡಿಸದೆ


ನೀವು ಕತ್ತಿಯಲ್ಲೇ ನಿರತರಾಗಿದ್ದೀರಿ, ದುರಾಚಾರನಡಿಸುತ್ತೀರಿ, ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ನೆರೆಯವನ ಹೆಂಡತಿಯನ್ನು ಕೆಡಿಸುತ್ತಾನೆ; ನಿಮ್ಮಂಥವರು ದೇಶವನ್ನು ಅನುಭವಿಸಬಹುದೋ?


ನಿಮ್ಮಲ್ಲಿ ಯಾರೂ ರಕ್ತಸಂಬಂಧವುಳ್ಳ ಸ್ತ್ರೀಯ ಸಹವಾಸವನ್ನು ಮಾಡಬಾರದು; ನಾನು ಯೆಹೋವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು