ಯೆಹೆಜ್ಕೇಲನು 22:12 - ಕನ್ನಡ ಸತ್ಯವೇದವು J.V. (BSI)12 ನಿನ್ನವರು ರಕ್ತಸುರಿಸುವದಕ್ಕೆ ಲಂಚತೆಗೆದುಕೊಂಡಿದ್ದಾರೆ; ನಿನ್ನವರು ಸಾಲಕ್ಕೆ ಬಡ್ಡಿ ತೆಗೆದುಕೊಂಡು ಲಾಭಕ್ಕೆ ಹಣಕೊಟ್ಟು ತಮ್ಮ ನೆರೆಯವರನ್ನು ಬಾಧಿಸಿ ದೋಚಿಕೊಂಡು ನನ್ನನ್ನು ಮರೆತೇಬಿಟ್ಟಿದ್ದಾರೆ; ಇದು ಕರ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನಿನ್ನವರು ರಕ್ತ ಸುರಿಸುವುದಕ್ಕೆ ಲಂಚ ತೆಗೆದುಕೊಂಡಿದ್ದಾರೆ; ನಿನ್ನವರು ಸಾಲಕ್ಕೆ ಬಡ್ಡಿ ತೆಗೆದುಕೊಂಡು ಲಾಭಕ್ಕೆ ಹಣಕೊಟ್ಟು ತಮ್ಮ ನೆರೆಯವರನ್ನು ಬಾಧಿಸಿ, ದೋಚಿಕೊಂಡು ನನ್ನನ್ನು ಮರೆತೇ ಬಿಟ್ಟಿದ್ದಾರೆ ಇದು ಕರ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 “ನಿನ್ನವರು ರಕ್ತ ಸುರಿಸುವುದಕ್ಕೆ ಲಂಚಪಡೆದಿದ್ದಾರೆ; ನಿನ್ನವರು ಸಾಲಕ್ಕೆ ಬಡ್ಡಿ ತೆಗೆದುಕೊಂಡು, ಲಾಭಕ್ಕೆ ಹಣಕೊಟ್ಟು ತಮ್ಮ ನೆರೆಯವರನ್ನು ಬಾಧಿಸಿ, ಸುಲಿಗೆಮಾಡಿ, ನನ್ನನ್ನು ಮರೆತೇಬಿಟ್ಟಿದ್ದಾರೆ; ಇದು ಸರ್ವೇಶ್ವರನಾದ ದೇವರ ನುಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಜೆರುಸಲೇಮಿನಲ್ಲಿ ನೀವು ಕೊಲೆ ಮಾಡುವದಕ್ಕಾಗಿ ಹಣ ತೆಗೆದುಕೊಳ್ಳುತ್ತೀರಿ. ಸಾಲಕೊಟ್ಟು ಅದಕ್ಕೆ ಬಡ್ಡಿ ತೆಗೆದುಕೊಳ್ಳುತ್ತೀರಿ. ಸ್ವಲ್ಪ ಹಣ ಮಾಡುವದಕ್ಕಾಗಿ ನಿಮ್ಮ ನೆರೆಯವನನ್ನೆ ಮೋಸ ಮಾಡುತ್ತೀರಿ. ನನ್ನನ್ನು ನೀವು ಮರೆತುಬಿಟ್ಟಿರುವಿರಿ.’” ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ನಿನ್ನಲ್ಲಿ ರಕ್ತ ಚೆಲ್ಲುವ ಹಾಗೆ ಲಂಚ ತೆಗೆದುಕೊಂಡಿದ್ದಾರೆ. ಬಡ್ಡಿಯನ್ನು ಲಾಭವನ್ನೂ ತೆಗೆದುಕೊಂಡಿದ್ದಾರೆ. ಬಲಾತ್ಕಾರದಿಂದ ನಿನ್ನ ನೆರೆಯವರಲ್ಲಿ ದುರ್ಲಾಭ ಮಾಡಿಕೊಂಡಿದ್ದಾರೆ. ನನ್ನನ್ನು ಮರೆತುಬಿಟ್ಟಿದ್ದಾರೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |