Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 22:14 - ಕನ್ನಡ ಸತ್ಯವೇದವು J.V. (BSI)

14 ನಾನು ನಿನ್ನನ್ನು ದಂಡಿಸುವ ಕಾಲದಲ್ಲಿ ಮನಸ್ಸನ್ನು ಗಟ್ಟಿಮಾಡಿಕೊಂಡೀಯೋ, ಕೈಗಳನ್ನು ಬಲಪಡಿಸಿಕೊಂಡೀಯೋ? ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ, ನಡಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಾನು ನಿನ್ನನ್ನು ದಂಡಿಸುವ ಕಾಲದಲ್ಲಿ ಮನಸ್ಸನ್ನು ಗಟ್ಟಿ ಮಾಡಿಕೊಂಡಿರುವೆಯೋ? ಕೈಗಳನ್ನು ಬಲಪಡಿಸಿಕೊಂಡಿರುವೆಯೋ? ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ, ಅದರಂತೆ ನಡೆಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನಾನು ನಿನ್ನನ್ನು ದಂಡಿಸುವ ಕಾಲದಲ್ಲಿ ಮನಸ್ಸನ್ನು ಗಟ್ಟಿಮಾಡಿಕೊಂಡಿರುವೆಯಾ? ಕೈಗಳನ್ನು ಬಲಪಡಿಸಿಕೊಂಡಿರುವೆಯಾ? ಸರ್ವೇಶ್ವರನಾದ ನಾನೇ ಇದನ್ನು ನುಡಿದಿದ್ದೇನೆ. ಅಂತೆಯೇ ನಡೆಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಾನು ನಿಮ್ಮನ್ನು ಶಿಕ್ಷಿಸಲು ಬಂದಾಗ ನೀವು ಧೈರ್ಯಶಾಲಿಗಳಾಗುವಿರಾ? ನಿಮ್ಮಲ್ಲಿ ಬಲವಿರುವದೋ? ನಾನೇ ಯೆಹೋವನು. ನಾನು ಹೇಳಿದ ಪ್ರಕಾರ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಾನು ನಿನ್ನೊಳಗೆ ಕೆಲಸ ನಡೆಸುವ ದಿವಸಗಳಲ್ಲಿ ನಿನ್ನ ಹೃದಯವು ನಿಲ್ಲುವುದೋ? ನಿನ್ನ ಕೈಗಳು ಬಲವಾಗಿರುವುವೋ? ಯೆಹೋವ ದೇವರಾದ ನಾನೇ ಹೇಳಿದ್ದೇನೆ, ನಾನೇ ಅದನ್ನು ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 22:14
20 ತಿಳಿವುಗಳ ಹೋಲಿಕೆ  

ಏಕೆ ನರಳಾಡುತ್ತೀ ಎಂದು ಅವರು ನಿನ್ನನ್ನು ಕೇಳಲು ನೀನು ಅವರಿಗೆ - ದುರ್ವಾರ್ತೆಯ ನಿವಿುತ್ತ ನರಳುತ್ತೇನೆ; ಇಗೋ, ವಿಪತ್ತು ಬಂತು; ಎಲ್ಲರ ಹೃದಯವು ಕರಗಿ ನೀರಾಗುವದು; ಎಲ್ಲರ ಕೈ ಜೋಲು ಬೀಳುವದು, ಎಲ್ಲರ ಮನಸ್ಸು ಕುಂದುವದು, ಎಲ್ಲರ ಮೊಣಕಾಲು ನೀರಿನಂತೆ ಚಂಚಲವಾಗುವದು; ಇಗೋ, ಬಂತು, ಆಯಿತು; ಇದು ಕರ್ತನಾದ ಯೆಹೋವನ ನುಡಿ ಎಂದು ಉತ್ತರಕೊಡು.


ಆಗ ಯೆಹೋವನಾದ ನಾನು ಎತ್ತರವಾದ ಮರವನ್ನು ತಗ್ಗಿಸಿ ತಗ್ಗಾದದ್ದನ್ನು ಎತ್ತರಪಡಿಸಿ ಹಸುರಾದದ್ದನ್ನು ಒಣಗಿಸಿ ಒಣಗಿದ್ದನ್ನು ಚಿಗುರಿಸಿದ್ದೇನೆ ಎಂದು ಅರಣ್ಯದ ಸಕಲವೃಕ್ಷಗಳು ತಿಳಿಯುವವು; ಇದನ್ನು ಯೆಹೋವನಾದ ನಾನೇ ನುಡಿದು ನಡಿಸಿದ್ದೇನೆ.


ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ; ಇದು ಸಾಗುವದು, ನಾನು ನೆರವೇರಿಸುವೆನು; ಹಿಂದೆಗೆಯೆನು, ಕ್ಷವಿುಸೆನು, ಕರುಣಿಸೆನು; ನಿನ್ನ ದುರ್ಮಾರ್ಗ ದುಷ್ಕೃತ್ಯಗಳಿಗೆ ಸರಿಯಾಗಿ ನಿನಗೆ ನ್ಯಾಯತೀರ್ಪು ಆಗುವದು; ಇದು ಕರ್ತನಾದ ಯೇಹೋವನ ನುಡಿ.


ಜೀವಸ್ವರೂಪನಾದ ದೇವರ ಕೈಯಲ್ಲಿ ಸಿಕ್ಕಿಬೀಳುವದು ಭಯಂಕರವಾದದ್ದು.


ಕರ್ತನನ್ನು ರೇಗಿಸಬೇಕೆಂದಿದ್ದೇವೋ? ಆತನಿಗಿಂತಲೂ ನಾವು ಬಲಿಷ್ಠರೇನು?


ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ಮಾತುಗಳು ಅಳಿದುಹೋಗುವದೇ ಇಲ್ಲ.


ನೀನು ನಿನ್ನನ್ನು ಸಂಹರಿಸುವವನೆದುರಿಗೆ ನಾನು ದೇವರು ಎಂದು ಹೇಳುವಿಯಾ? ಹತಿಸುವವನ ಕೈಗೆ ನೀನು ಎಂದಿಗೂ ದೇವರಲ್ಲ, ನರಪ್ರಾಣಿಯೇ.


ನಿನ್ನಲ್ಲಿ ಬಳಿಕೆಗೊಳ್ಳುವಂತೆ ನೀನು ಅಭ್ಯಾಸಮಾಡಿಸಿದವರನ್ನು [ಯೆಹೋವನು] ನಿನಗೆ ತಲೆಯಾಗಿ ನೇವಿುಸುವಾಗ ಏನು ಹೇಳುವಿ? ವೇದನೆಯು ನಿನ್ನನ್ನು ಹೆರುವವಳನ್ನೋ ಎಂಬಂತೆ ಹಿಡಿಯುವದಲ್ಲವೆ.


ಅಯ್ಯೋ, ತನ್ನನ್ನು ರೂಪಿಸಿದಾತನ ಸಂಗಡ ವ್ಯಾಜ್ಯವಾಡುವವನ ಗತಿ ಏನು! ಮಣ್ಣು ಮಡಕೆಗಳಲ್ಲಿ ಅವನೂ ಒಂದು ಮಡಕೆಯಲ್ಲವೆ. ಮಣ್ಣು - ಏನು ಮಾಡುತ್ತೀ ಎಂದು ರೂಪಿಸುವವನನ್ನು ಕೇಳುವದುಂಟೇ? ನಿನ್ನ ಕಾರ್ಯವು [ನಿನ್ನ ವಿಷಯವಾಗಿ] ಅವನಿಗೆ ಕೈಯಿಲ್ಲ ಅಂದೀತೇ?


ಐಗುಪ್ತ್ಯರು ಮನುಷ್ಯ ಮಾತ್ರದವರೇ, ದೇವರಲ್ಲ; ಅವರ ಅಶ್ವಗಳು ಮಾಂಸಮಯವೇ, ಆತ್ಮವಲ್ಲ; ಯೆಹೋವನು ಕೈಚಾಚುವಾಗ ಸಹಾಯ ಮಾಡಿದವನು ಮುಗ್ಗರಿಸುವನು, ಸಹಾಯಪಡೆದವನು ಬಿದ್ದು ಹೋಗುವನು, ಅಂತು ಎಲ್ಲರೂ ಒಟ್ಟಿಗೆ ಲಯವಾಗುವರು.


ನಿನ್ನ ಕೈಯೂ ದೇವರ ಕೈಯೂ ಸಮವೋ? ದೇವರ ಧ್ವನಿಯಂತೆ ಗುಡುಗಬಲ್ಲಿಯಾ?


ಇಸ್ರಾಯೇಲ್ಯರ ನಿತ್ಯಾಧಾರನು ಸುಳ್ಳಾಡುವವನಲ್ಲ; ಪಶ್ಚಾತ್ತಾಪಪಡುವವನಲ್ಲ; ಯಾಕಂದರೆ ಅವನು ಪಶ್ಚಾತ್ತಾಪಪಡ ಮನುಷ್ಯನಲ್ಲ ಎಂದು ಹೇಳಿದನು.


ಹೀಗೆ ನನ್ನ ಸಿಟ್ಟನ್ನು ತೀರಿಸಿಕೊಳ್ಳುವೆನು, ನನ್ನ ರೋಷವನ್ನು ಅವರ ಮೇಲೆ ಸುರಿದು ಶಾಂತನಾಗುವೆನು; ಆಗ್ರಹದಿಂದ ಮಾತಾಡಿದವನು ಯೆಹೋವನಾದ ನಾನೇ ಎಂಬದು ನನ್ನ ಕೋಪವನ್ನು ಅವರ ಮೇಲೆ ಹೊಯ್ದುಬಿಟ್ಟ ಬಳಿಕ ಅವರಿಗೆ ಗೊತ್ತಾಗುವದು.


ಎಲ್ಲರ ಕೈಗಳು ಜೋಲು ಬಿದ್ದಿರುವವು, ಎಲ್ಲರ ಮೊಣಕಾಲುಗಳು ನೀರಿನಂತೆ ಚಂಚಲವಾಗಿರುವವು.


ಯೆಹೋವನಾದ ನಾನೇ ಬಿದ್ದುಹೋದದನ್ನು ಕಟ್ಟಿ ಹಾಳಾದದನ್ನು ಬೆಳೆಯಿಸಿದ್ದೇನೆಂಬದು ನಿಮ್ಮ ಸುತ್ತಲು ಉಳಿದ ಜನಾಂಗಗಳಿಗೆ ಗೊತ್ತಾಗುವದು; ಯೆಹೋವನಾದ ನಾನೇ ನುಡಿದಿದ್ದೇನೆ, ನಡಿಸುತ್ತೇನೆ.


ಯೆಹೋವನು ತನ್ನ ಸೈನ್ಯದ ಮುಂದೆ ದನಿಗೈಯುತ್ತಾನೆ; ಆತನ ದಂಡು ಬಹು ದೊಡ್ಡದು; ತನ್ನ ಮಾತನ್ನು ನೆರವೇರಿಸಿಕೊಳ್ಳುವಾತನು ಬಲಿಷ್ಟನಾಗಿದ್ದಾನೆ; ಯೆಹೋವನ ದಿನವು ಮಹತ್ತರವೂ ಅತಿ ಭಯಂಕರವೂ ಆಗಿದೆ; ಅದನ್ನು ತಾಳಿಕೊಳ್ಳುವವರು ಯಾರು?


ಆತನು ಬರುವ ದಿನವನ್ನು ಯಾರು ತಾಳಾರು? ಆತನು ಕಾಣಿಸಿಕೊಳ್ಳುವಾಗ ಯಾರು ನಿಂತಾರು? ಆತನು ಅಕ್ಕಸಾಲಿಗನ ಬೆಂಕಿಗೂ ಅಗಸನ ಚೌಳಿಗೂ ಸಮಾನನಾಗಿದ್ದಾನೆ;


ಆದಕಾರಣ ನಿಮ್ಮ ಬಂಧನಗಳು ಇನ್ನೂ ಬಿಗಿಯಾಗದಂತೆ ಧರ್ಮನಿಂದೆಯನ್ನು ಬಿಡಿರಿ; ಭೂಮಂಡಲದಲ್ಲೆಲ್ಲಾ ನಿಶ್ಚಿತಪ್ರಲಯವಾಗಲಿ ಎಂದು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ನುಡಿಯುವದನ್ನು ಕೇಳಿದ್ದೇನೆ.


ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವದು; ಈ ಕೇಡನ್ನು ಅವರಿಗೆ ಮಾಡುವೆನು ಎಂದು ನಾನು ಹೇಳಿದ್ದು ಬರೀ ಮಾತಲ್ಲ.


ಅದರಲ್ಲಿ ಒಂದು ಬೊಟ್ಟನ್ನೂ ಉಳಿಸದೆ ಕುಡಿದು ಅದರ ಬೋಕಿಗಳನ್ನು ಕಚ್ಚಿ ನೆಕ್ಕಿ ನಿನ್ನ ಮೊಲೆಗಳನ್ನು ಬಗಿದುಕೊಳ್ಳುವಿ; ಇದು ನನ್ನ ಅಪ್ಪಣೆ ಎಂಬದೇ ಕರ್ತನಾದ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು