Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 22:19 - ಕನ್ನಡ ಸತ್ಯವೇದವು J.V. (BSI)

19 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನೀವೆಲ್ಲರು ಕಸರಾಗಿರುವದರಿಂದ ಇಗೋ, ನಿಮ್ಮನ್ನು ಯೆರೂಸಲೇವಿುನೊಳಕ್ಕೆ ಕೂಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನೀವೆಲ್ಲರು ಕಲ್ಮಷವಾಗಿರುವುದರಿಂದ ಇಗೋ, ನಿಮ್ಮನ್ನು ಯೆರೂಸಲೇಮಿನೊಳಕ್ಕೆ ಸೇರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನೀವೆಲ್ಲರು ಕಲ್ಮಷವಾಗಿರುವುದರಿಂದ ಇಗೋ, ನಿಮ್ಮನ್ನು ಜೆರುಸಲೇಮಿನ ಒಳಕ್ಕೆ ಸೇರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ. ‘ನೀವೆಲ್ಲರೂ ಪ್ರಯೋಜನವಿಲ್ಲದ ಲೋಹವಾಗಿದ್ದೀರಿ. ಆದ್ದರಿಂದ ನಾನು ನಿಮ್ಮನ್ನು ಜೆರುಸಲೇಮಿನೊಳಗೆ ಒಟ್ಟುಗೂಡಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನೀವೆಲ್ಲರೂ ಕೆಟ್ಟವರಾಗಿರುವುದರಿಂದ ಇಗೋ, ನಾನು ನಿಮ್ಮನ್ನು ಯೆರೂಸಲೇಮಿನ ಮಧ್ಯಕ್ಕೆ ಕೂಡಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 22:19
9 ತಿಳಿವುಗಳ ಹೋಲಿಕೆ  

ಸುಗ್ಗೀಕಾಲದ ತನಕ ಎರಡೂ ಕೂಡ ಬೆಳೆಯಲಿ; ಸುಗ್ಗೀಕಾಲದಲ್ಲಿ ನಾನು ಕೊಯ್ಯುವವರಿಗೆ - ಮೊದಲು ಹಣಜಿಯನ್ನು ಆರಿಸಿತೆಗೆದು ಅದನ್ನು ಸುಡುವದಕ್ಕೆ ಹೊರೆಕಟ್ಟಿಹಾಕಿ, ಗೋದಿಯನ್ನು ನನ್ನ ಕಣಜಕ್ಕೆ ತುಂಬಿರಿ ಎಂದು ಹೇಳುವೆನು ಅಂದನು.


ಆಹಾ, ಅವು ಯೆಹೋವನ ಆಲೋಚನೆಗಳನ್ನು ತಿಳಿದಿಲ್ಲ, ಆತನ ಸಂಕಲ್ಪವನ್ನು ಗ್ರಹಿಸಿಲ್ಲ; ಕಣಕ್ಕೆ ಹಾಕಿದ ಸಿವುಡುಗಳ ಹಾಗೆ ಅವುಗಳನ್ನು ಕೂಡಿಸಿದ್ದಾನಲ್ಲಾ.


ಆದಕಾರಣ ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಿಮ್ಮ ದೋಷದಿಂದ ಹತರಾಗಿ ಪಟ್ಟಣದಲ್ಲಿ ಬಿದ್ದಿರುವ ನಿಮ್ಮವರ ಶವಗಳೇ ಹಂಡೆಯಲ್ಲಿನ ಮಾಂಸ, ಈ ಪಟ್ಟಣವು ಹಂಡೆ, ನಿಮ್ಮನ್ನಾದರೋ ನಾನು ಪಟ್ಟಣದೊಳಗಿಂದ ಕಿತ್ತುಹಾಕುವೆನು.


ಭೂಲೋಕದ ದುಷ್ಟರೆಲ್ಲರನ್ನು ಕಿಟ್ಟದಂತೆ ತೆಗೆದುಬಿಡುತ್ತೀ; ಆದದರಿಂದ ನಾನು ನಿನ್ನ ಕಟ್ಟಳೆಗಳನ್ನು ಪ್ರೀತಿಸುತ್ತೇನೆ.


ನಿನ್ನ ಮೇಲೆ ಕೈಮಾಡಿ ಪುಟಹಾಕಿ ನಿನ್ನ ಕಲ್ಮಷವನ್ನು ಸಂಪೂರ್ಣವಾಗಿ ಹೋಗಲಾಡಿಸಿ ನಿನ್ನ ಕಂದುಕಸರನ್ನೆಲ್ಲಾ ತೆಗೆದು ಬಿಡುವೆನು.


ನರಪುತ್ರನೇ, ಇಸ್ರಾಯೇಲ್ ವಂಶವೆಂಬ ಲೋಹವು ನನ್ನ ದೃಷ್ಟಿಯಲ್ಲಿ ಕಲ್ಮಷವಾಗಿದೆ; ಅದೆಲ್ಲಾ ಕುಲುಮೆಯಲ್ಲಿನ ತಾಮ್ರ, ತವರ, ಕಬ್ಬಿಣ, ಸೀಸ; ಅದು ಕಂದುಬೆಳ್ಳಿ.


ಬೆಳ್ಳಿ, ತಾಮ್ರ, ಕಬ್ಬಿಣ, ಸೀಸ, ತವರ ಇವುಗಳನ್ನು ಕುಲುಮೆಯೊಳಗೆ ಕೂಡಿಸಿ ಊದಿ ಉರಿಹತ್ತಿಸಿ ಕರಗಿಸುವಂತೆ ನಾನು ನಿಮ್ಮನ್ನು ನನ್ನ ಉಗ್ರಕೋಪದಲ್ಲಿ ಕೂಡಿಸಿ ಇಟ್ಟುಬಿಟ್ಟು ಕರಗಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು