Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 22:26 - ಕನ್ನಡ ಸತ್ಯವೇದವು J.V. (BSI)

26 ಅಲ್ಲಿನ ಯಾಜಕರು ನನ್ನ ವಿಧಿಗಳನ್ನು ಭಂಗಮಾಡಿದ್ದಾರೆ, ನನ್ನ ಪರಿಶುದ್ಧವಸ್ತುಗಳನ್ನು ಹೊಲೆಮಾಡಿದ್ದಾರೆ; ಮೀಸಲಾದದ್ದಕ್ಕೂ ಮೀಸಲಲ್ಲದ್ದಕ್ಕೂ ಭೇದವೆಣಿಸಲಿಲ್ಲ, ಶುದ್ಧಾಶುದ್ಧವಿವೇಚನೆಯನ್ನು ಬೋಧಿಸಲಿಲ್ಲ; ನಾನು ನೇವಿುಸಿದ ಸಬ್ಬತ್ ದಿನಗಳಿಗೆ ವಿಮುಖರಾಗಿದ್ದಾರೆ; ಇದರಿಂದ ನಾನು ಅವರ ಮಧ್ಯದಲ್ಲಿ ಅಪಕೀರ್ತಿಗೆ ಗುರಿಯಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅಲ್ಲಿನ ಯಾಜಕರು ನನ್ನ ವಿಧಿಗಳನ್ನು ಭಂಗಮಾಡಿದ್ದಾರೆ, ನನ್ನ ಪರಿಶುದ್ಧ ವಸ್ತುಗಳನ್ನು ಅಪವಿತ್ರ ಮಾಡಿದ್ದಾರೆ; ಮೀಸಲಾದದ್ದಕ್ಕೂ, ಮೀಸಲಿಲ್ಲದ್ದಕ್ಕೂ ಭೇದವೆಣಿಸಲಿಲ್ಲ, ಶುದ್ಧವಾದ ವಿವೇಚನೆಯನ್ನು ಬೋಧಿಸಲಿಲ್ಲ; ನಾನು ನೇಮಿಸಿದ ಸಬ್ಬತ್ ದಿನಗಳನ್ನು ಕಡೆಗಣಿಸಿದ್ದಾರೆ. ಇದರಿಂದ ನಾನು ಅವರ ಮಧ್ಯದಲ್ಲಿ ಅಪಕೀರ್ತಿಗೆ ಗುರಿಯಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಅಲ್ಲಿನ ಯಾಜಕರು ನನ್ನ ವಿಧಿಗಳನ್ನು ಉಲ್ಲಂಘಿಸಿದ್ದಾರೆ, ನನ್ನ ಪರಿಶುದ್ಧ ವಸ್ತುಗಳನ್ನು ಅಪವಿತ್ರಗೊಳಿಸಿದ್ದಾರೆ; ಮೀಸಲಾದುದಕ್ಕೂ ಮೀಸಲಲ್ಲದ್ದಕ್ಕೂ ಭೇದವೆಣಿಸಲಿಲ್ಲ. ಶುದ್ಧಾ ಶುದ್ಧ ವಿವೇಚನೆಯನ್ನು ಬೋಧಿಸಲಿಲ್ಲ; ನಾನು ನೇಮಿಸಿದ ಸಬ್ಬತ್ ದಿನಗಳನ್ನು ಕಡೆಗಣಿಸಿದ್ದಾರೆ. ಇದರಿಂದ ನಾನು ಅವರ ಮಧ್ಯೆ ಅಪಕೀರ್ತಿಗೆ ಗುರಿಯಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 “ಯಾಜಕರು ನನ್ನ ಉಪದೇಶವನ್ನು ನಿರಾಕರಿಸಿರುತ್ತಾರೆ; ಪರಿಶುದ್ಧ ವಸ್ತುಗಳನ್ನು ಸರಿಯಾಗಿ ಲಕ್ಷ್ಯ ಮಾಡುತ್ತಿಲ್ಲ; ಅವುಗಳಿಗೆ ಮಹತ್ವವನ್ನು ಕೊಡುತ್ತಿಲ್ಲ. ಅವರು ಪವಿತ್ರ ವಸ್ತುಗಳನ್ನು ಅಪವಿತ್ರ ವಸ್ತುಗಳಂತೆ ನೋಡುತ್ತಿದ್ದಾರೆ. ಯಾವುದು ಶುದ್ಧ, ಯಾವುದು ಅಶುದ್ಧ ಎಂಬುದರ ಬಗ್ಗೆ ಅವರು ಜನರಿಗೆ ಸರಿಯಾಗಿ ಉಪದೇಶಿಸುತ್ತಿಲ್ಲ. ನನ್ನ ವಿಶೇಷ ವಿಶ್ರಾಂತಿ ದಿವಸಗಳನ್ನು ಮಾನ್ಯ ಮಾಡುತ್ತಿಲ್ಲ. ನಾನು ಏನೂ ಅಲ್ಲವೆಂಬಂತೆ ನನ್ನನ್ನು ಅವರು ನೋಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಅದರ ಯಾಜಕರು ನನ್ನ ವಿಧಿಗಳನ್ನು ಭಂಗಪಡಿಸಿದ್ದಾರೆ. ನನ್ನ ಪರಿಶುದ್ಧ ವಸ್ತುಗಳನ್ನು ಅಪವಿತ್ರಪಡಿಸಿದ್ದಾರೆ. ಅವರು ಪರಿಶುದ್ಧವಾದದ್ದಕ್ಕೂ, ಅಪವಿತ್ರವಾದದ್ದಕ್ಕೂ ಬೇಧವೆಣಿಸಲಿಲ್ಲ. ಶುದ್ಧ, ಅಶುದ್ಧಗಳ ವ್ಯತ್ಯಾಸವಿಲ್ಲ ಎಂದು ಬೋಧಿಸಿದರು. ನನ್ನ ಸಬ್ಬತ್ ದಿನಗಳಿಗೆ ತಮ್ಮ ಕಣ್ಣುಗಳನ್ನು ಮರೆಮಾಡಿದ್ದಾರೆ. ಆದ್ದರಿಂದ ನಾನು ಅವರಲ್ಲಿ ಅಪಕೀರ್ತಿಗೆ ಗುರಿಯಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 22:26
31 ತಿಳಿವುಗಳ ಹೋಲಿಕೆ  

ಅದಲ್ಲದೆ ದೇವರಿಗೆ ಮೀಸಲಾದ ವಸ್ತುಗಳನ್ನೂ ಅಲ್ಲದ ವಸ್ತುಗಳನ್ನೂ ಶುದ್ಧವಾದವುಗಳನ್ನೂ ಅಶುದ್ಧವಾದವುಗಳನ್ನೂ ವಿವೇಚಿಸುವದೂ


ನೀವೋ ದಾರಿತಪ್ಪಿದ್ದೀರಿ; ನಿಮ್ಮ ಧರ್ಮೋಪದೇಶದಿಂದ ಬಹು ಜನರನ್ನು ಮುಗ್ಗರಿಸುವ ಹಾಗೆ ಮಾಡಿದ್ದೀರಿ; ಲೇವಿಯ ಒಡಂಬಡಿಕೆಯನ್ನು ಭಂಗಪಡಿಸಿದ್ದೀರಿ, ಇದು ಸೇನಾಧೀಶ್ವರ ಯೆಹೋವನ ನುಡಿ.


ನೀನು ನಿನ್ನ ಪವಿತ್ರವಸ್ತುಗಳನ್ನು ಅಲಕ್ಷ್ಯಮಾಡಿ ನಾನು ನೇವಿುಸಿದ ಸಬ್ಬತ್‍ದಿನಗಳನ್ನು ಹೊಲೆಮಾಡಿದ್ದೀ.


ಮೀಸಲಾದದ್ದಕ್ಕೂ ಮೀಸಲಲ್ಲದ್ದಕ್ಕೂ ಭೇದವನ್ನು ನನ್ನ ಜನರಿಗೆ ತೋರಿಸಿ ಶುದ್ಧಾಶುದ್ಧವಿವೇಚನೆಯನ್ನು ಅವರಿಗೆ ಬೋಧಿಸಲಿ.


ಯಾಜಕರಿಗೆ ಯೆಹೋವನು ಎಲ್ಲಿ ಎಂಬ ವಿಚಾರವೇ ಇರಲಿಲ್ಲ, ಧರ್ಮೋಪದೇಶಕರು ನನ್ನನ್ನು ತಿಳಿಯಲಿಲ್ಲ, ಪಾಲಕರು ನನಗೆ ದ್ರೋಹಮಾಡಿದರು, ಪ್ರವಾದಿಗಳು ಬಾಳ್‍ದೇವತೆಯ ಆವೇಶದಿಂದ ಪ್ರವಾದಿಸಿ ಕೆಲಸಕ್ಕೆ ಬಾರದವುಗಳನ್ನು ಸೇವಿಸಿದರು.


ಅವರು ಆ ಜನಾಂಗಗಳೊಳಗೆ ಸೇರಿಕೊಂಡ ಮೇಲೆ ಓಹೋ, ಇವರು ಯೆಹೋವನ ಪ್ರಜೆಗಳು, ಆತನ ದೇಶದಿಂದ ಭ್ರಷ್ಟರಾಗಿ ಬಂದಿದ್ದಾರೆ ಎಂದೆನ್ನಿಸಿಕೊಂಡು ನನ್ನ ಪರಿಶುದ್ಧನಾಮಕ್ಕೆ ಅಪಕೀರ್ತಿಯನ್ನು ತರಲು


ಬಹುವೃದ್ಧನಾದ ಏಲಿಯು ತನ್ನ ಮಕ್ಕಳು ಎಲ್ಲಾ ಇಸ್ರಾಯೇಲ್ಯರಲ್ಲಿ ನಡಿಸುತ್ತಿರುವದನ್ನೂ ಅವರು ದೇವದರ್ಶನದ ಗುಡಾರದ ಬಾಗಲಿನಲ್ಲಿ ಸೇವೆಮಾಡುವ ಸ್ತ್ರೀಯರೊಡನೆ ಸಂಗವಿುಸುತ್ತಿರುವದನ್ನೂ ಕೇಳಿ ಅವರಿಗೆ -


ನಿಮ್ಮ ದೆಸೆಯಿಂದ ಅನ್ಯಜನರಲ್ಲಿ ದೇವರ ನಾಮವು ದೂಷಣೆಗೆ ಗುರಿಯಾಗುತ್ತದೆಂದು ಬರೆದದೆಯಲ್ಲಾ.


ಚೀಯೋನಿನ ಮಧ್ಯದಲ್ಲಿ ಶಿಷ್ಟರ ರಕ್ತವನ್ನು ಸುರಿಸಿದ ಯಾಜಕಪ್ರವಾದಿಗಳ ಪಾಪದೋಷಗಳಿಂದಲೇ ಈ ಗತಿ ಬಂತು.


ಇದರಿಂದ ಯೆಹೋವನು ಹೀಗಂದಿದ್ದಾನೆ - ನೀನು [ನನ್ನ ಕಡೆಗೆ] ಹಿಂದಿರುಗಿದರೆ ನನ್ನ ಸಮ್ಮುಖದಲ್ಲಿ ನಿಲ್ಲುವಂತೆ ನಾನು ನಿನ್ನನ್ನು ತಿರುಗಿ ಸೇರಿಸಿಕೊಳ್ಳುವೆನು; ನೀನು ತುಚ್ಫವಾದದ್ದನ್ನು ನಿರಾಕರಿಸಿ ಅಮೂಲ್ಯವಾದದ್ದನ್ನು ಪ್ರಕಾಶಪಡಿಸಿದರೆ ನೀನು ನನ್ನ ಬಾಯಂತಿರುವಿ. ಜನರು ನಿನ್ನ ಕಡೆಗೆ ತಿರುಗಿಕೊಳ್ಳುವರು, ನೀನು ಅವರ ಕಡೆಗೆ ತಿರುಗದಿರುವಿ.


ನನ್ನ ಪ್ರಜೆಗಳಾದ ಇಸ್ರಾಯೇಲ್ಯರು ನನ್ನ ಆಜ್ಞಾನುಸಾರವಾಗಿ ನನ್ನ ಮಂದಿರಕ್ಕೆ ತರುವ ಯಜ್ಞನೈವೇದ್ಯಗಳ ಘನತೆಯನ್ನು ನೀವು ಭಂಗಪಡಿಸಿ ಅವುಗಳ ಶ್ರೇಷ್ಠ ಭಾಗಗಳಿಂದ ನಿಮ್ಮನ್ನು ಕೊಬ್ಬಿಸಿಕೊಳ್ಳುವದೇಕೆ? ನೀನು ನನ್ನನ್ನು ಗೌರವಿಸುವದಕ್ಕಿಂತ ಹೆಚ್ಚಾಗಿ ನಿನ್ನ ಮಕ್ಕಳನ್ನೇ ಗೌರವಿಸುವದು ಸರಿಯೋ?


ನೀವು ಶುದ್ಧಾಶುದ್ಧ ಜಂತುಗಳನ್ನೂ ಪಕ್ಷಿಗಳನ್ನೂ ವಿವೇಚನೆಮಾಡಿ ನಾನು ಅಶುದ್ಧವೆಂದು ನಿರ್ಣಯಿಸಿರುವ ಯಾವ ಪಶುಪಕ್ಷಿ ಕ್ರಿವಿುಕೀಟಗಳಿಂದಲೂ ನಿಮ್ಮನ್ನು ಹೇಯಮಾಡಿಕೊಳ್ಳಬಾರದು.


ಇದರಿಂದ ಶುದ್ಧಾಶುದ್ಧಗಳನ್ನೂ ಭಕ್ಷ್ಯಾಭಕ್ಷ್ಯಗಳನ್ನೂ ವಿವೇಚಿಸುವದಕ್ಕೆ ನಿಮ್ಮಿಂದಾಗುವದು.


ಯಾಜಕನು ಅವನನ್ನು ನೋಡಬೇಕು. ಆಗ ಅದರಿಂದುಂಟಾದ ಬಾವು ಕೆಂಪು ಬಿಳುಪು ವಿುಶ್ರವಾಗಿ ಚರ್ಮದಲ್ಲಿನ ಕುಷ್ಠದಂತೆ ತೋರಿದರೆ ಅವನು ಕುಷ್ಠರೋಗಿ; ಅಶುದ್ಧನು.


ಉಪದ್ರವದ ಮೇಲೆ ಉಪದ್ರವ, ಸುದ್ದಿಯ ಮೇಲೆ ಸುದ್ದಿ, ಬರುವವು; ದಿವ್ಯದರ್ಶನವಾಯಿತೇ ಎಂದು ಪ್ರವಾದಿಯನ್ನು ಕೇಳುತ್ತಲೇ ಇರುವರು; ಯಾಜಕರಲ್ಲಿ ಧರ್ಮೋಪದೇಶವು ಅಡಗಿಹೋಗುವದು, ಹಿರಿಯರಲ್ಲಿ ಮಂತ್ರಾಲೋಚನೆಯು ಇಲ್ಲವಾಗುವದು.


ಆಲಯವನ್ನು ನಾಲ್ಕು ಪಾರ್ಶ್ವಗಳಲ್ಲಿಯೂ ಅಳೆದನು; ಪರಿಶುದ್ಧವಾದ ಮತ್ತು ಅಪರಿಶುದ್ಧವಾದ ಪ್ರದೇಶಗಳನ್ನು ವಿಂಗಡಿಸುವದಕ್ಕೆ ಐನೂರಳತೇ ಕೋಲುದ್ದದ ಐನೂರಳತೇ ಕೋಲಗಲದ ಗೋಡೆಯು ಸುತ್ತುಮುತ್ತಲಿತ್ತು.


ಇಸ್ರಾಯೇಲ್ಯರು ನನ್ನನ್ನು ತೊರೆದಾಗ ನನ್ನಿಂದಗಲಿ ತಮ್ಮ ಬೊಂಬೆಗಳ ಕಡೆಗೆ ತಿರುಗಿಕೊಂಡು ನನಗೆ ದೂರವಾಗಿ ಹೋದ ಲೇವಿಯರು ತಮ್ಮ ದೋಷಫಲವನ್ನು ಅನುಭವಿಸುವರು.


ಪ್ರಧಾನಯಾಜಕರೂ ಪ್ರಜೆಗಳೂ ಕೂಡಾ ಮಹಾದ್ರೋಹಿಗಳಾಗಿ ಅನ್ಯಜನಾಂಗಗಳ ಅಸಹ್ಯಕೃತ್ಯಗಳನ್ನು ಅನುಸರಿಸಿ ಯೆಹೋವನು ತನಗೆ ಪ್ರತಿಷ್ಠಿಸಿಕೊಂಡಿದ್ದ ಯೆರೂಸಲೇವಿುನ ದೇವಾಲಯವನ್ನು ಹೊಲೆಮಾಡಿದರು.


ಇದಲ್ಲದೆ ನನಗೆ ಈ ಅಪರಾಧವನ್ನು ನಡಿಸಿದ್ದಾರೆ; ಆಹುತಿಕೊಟ್ಟ ದಿನದಲ್ಲೇ ನನ್ನ ಪವಿತ್ರಾಲಯವನ್ನು ಅಪವಿತ್ರಪಡಿಸಿ ನಾನು ನೇವಿುಸಿದ ಸಬ್ಬತ್ ದಿನವನ್ನು ಹೊಲಸುಮಾಡಿದರು.


ವ್ಯಾಜ್ಯವಾಗುವಲ್ಲಿ ಅದನ್ನು ತೀರಿಸಲು ನಿಂತು ನನ್ನ ನ್ಯಾಯವಿಧಿಗಳಿಗೆ ಅನುಸಾರವಾಗಿ ತೀರಿಸಲಿ; ನಾನು ಏರ್ಪಡಿಸಿದ ಹಬ್ಬಗಳಲ್ಲಿ ನನ್ನ ನಿಯಮನಿಷ್ಠೆಗಳನ್ನು ಕೈಕೊಂಡು ನನ್ನ ಸಬ್ಬತ್ತುಗಳು ಆಚರಿಸಲ್ಪಡುವಂತೆ ನೋಡಿಕೊಳ್ಳಲಿ.


ಜ್ಞಾನಾನುಸಾರವಾಗಿ ಮಾತಾಡುವದು ಯಾಜಕನ ತುಟಿಗಳ ಧರ್ಮವಷ್ಟೆ; ಅವನು ಸೇನಾಧೀಶ್ವರ ಯೆಹೋವನ ದೂತನಾಗಿರುವ ಕಾರಣ ಜನರು ಅವನ ಬಾಯಿಂದ ಧರ್ಮೋಪದೇಶವನ್ನು ಕೇಳಿಕೊಳ್ಳತಕ್ಕದ್ದು .


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು