Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 22:28 - ಕನ್ನಡ ಸತ್ಯವೇದವು J.V. (BSI)

28 ಅಲ್ಲಿನ ಪ್ರವಾದಿಗಳು ಇವರಿಗಾಗಿ ವಿುಥ್ಯಾದರ್ಶನವನ್ನೂ ಸುಳ್ಳು ಕಣಿಯನ್ನೂ ಕಂಡು ಯೆಹೋವನು ಮಾತಾಡದಿದ್ದರೂ ಕರ್ತನಾದ ಯೆಹೋವನು ಇಂತೆನ್ನುತ್ತಾನೆ ಎಂದು ನುಡಿಯುತ್ತಾ ಮೇಲೆ ಮೇಲೆ ಸುಣ್ಣ ಬಳಿದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಅಲ್ಲಿನ ಸುಳ್ಳು ಪ್ರವಾದಿಗಳು ಇವರಿಗಾಗಿ ವ್ಯರ್ಥ ದರ್ಶನವನ್ನೂ, ಸುಳ್ಳು ಕಣಿಯನ್ನೂ ಕಂಡು ಯೆಹೋವನು ಅವರೊಂದಿಗೆ ಮಾತನಾಡದಿದ್ದರೂ, ‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ’ ಎಂದು ನುಡಿಯುತ್ತಾ ಮೇಲೆ ಸುಣ್ಣ ಹಚ್ಚುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಅಲ್ಲಿನ ಪ್ರವಾದಿಗಳು ಇವರಿಗಾಗಿ ಮಿಥ್ಯ ದರ್ಶನವನ್ನು ಕಂಡು, ಸುಳ್ಳು ಕಣಿಯನ್ನು ಹೇಳಿ, ಸರ್ವೇಶ್ವರ ಮಾತಾಡದಿದ್ದರೂ ‘ಸರ್ವೇಶ್ವರ ದೇವರು ಇಂತೆನ್ನುತ್ತಾರೆ’ ಎಂದು ನುಡಿಯುತ್ತಾ ಮೇಲೆ ಮೇಲೆ ಸುಣ್ಣ ಬಳಿದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 “ಪ್ರವಾದಿಗಳು ಜನರನ್ನು ಎಚ್ಚರಿಸುವದಿಲ್ಲ. ಸತ್ಯವನ್ನು ಮುಚ್ಚಿಡುತ್ತಾರೆ. ಒಂದು ಗೋಡೆಯನ್ನು ದುರಸ್ತಿ ಮಾಡದೆ ಅದರ ರಂಧ್ರಗಳನ್ನು ಗಾರೆಯಿಂದ ಮುಚ್ಚುವ ಕೆಲಸಗಾರರಂತಿದ್ದಾರೆ. ಅವರು ಸುಳ್ಳುದರ್ಶನಗಳನ್ನೆ ನೋಡುತ್ತಾರೆ. ತಮ್ಮ ಭವಿಷ್ಯದ ಬಗ್ಗೆ ಶಕುನದ ಮೂಲಕ ತಿಳಿದುಕೊಳ್ಳುವುದೆಲ್ಲ ಸುಳ್ಳಾಗಿರುತ್ತದೆ. ಅವರು, ‘ನನ್ನ ಒಡೆಯನಾದ ಯೆಹೋವನು ಹೇಳಿದನು’ ಎಂಬುದಾಗಿ ಸುಳ್ಳು ಹೇಳುವರು. ಆದರೆ ನಿಜವಾಗಿಯೂ ಯೆಹೋವನು ಅವರ ಕೂಡ ಮಾತನಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಮೋಸವನ್ನು ದರ್ಶಿಸಿ ಸುಳ್ಳು ಶಕುನ ಹೇಳುತ್ತಾರೆ; ಯೆಹೋವ ದೇವರು ಮಾತನಾಡದಿದ್ದರೂ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ’ ಎಂದು ಅವರ ಪ್ರವಾದಿಗಳು ಅವರಿಗೆ ಸುಣ್ಣ ಹಚ್ಚುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 22:28
17 ತಿಳಿವುಗಳ ಹೋಲಿಕೆ  

ಅದರ ಪ್ರವಾದಿಗಳು ಬಡಾಯಿಗಾರರು, ದ್ರೋಹಿಗಳು; ಅದರ ಯಾಜಕರು ಪವಿತ್ರಾಲಯವನ್ನು ಹೊಲೆಗೆಡಿಸಿದ್ದಾರೆ, ಧರ್ಮವಿಧಿಗಳನ್ನು ಭಂಗಮಾಡಿದ್ದಾರೆ.


ಆ ನಾಡಿನೊಳಗೆ ಪ್ರವಾದಿಗಳು ಒಳಸಂಚುಮಾಡಿಕೊಂಡಿದ್ದಾರೆ, ಬೇಟೆಯನ್ನು ಸೀಳುತ್ತಾ ಗರ್ಜಿಸುವ ಸಿಂಹದಂತಿದ್ದಾರೆ, ನರಪ್ರಾಣಿಗಳನ್ನು ನುಂಗಿದ್ದಾರೆ, ಆಸ್ತಿಯನ್ನೂ ಅಮೂಲ್ಯವಸ್ತುಗಳನ್ನೂ ದೋಚಿಕೊಂಡಿದ್ದಾರೆ; ದೇಶದಲ್ಲಿ ಬಹುಮಂದಿಯನ್ನು ವಿಧವೆಯರನ್ನಾಗಿ ಮಾಡಿದ್ದಾರೆ.


[ಅಮ್ಮೋನೇ,] ನಿನ್ನ ಜೋಯಿಸರು ವಿುಥ್ಯೆಯನ್ನು ಸಾಕ್ಷಾತ್ಕರಿಸಿ ಸುಳ್ಳುಸುಳ್ಳಾಗಿ ಕಣಿ ಹೇಳುತ್ತಿದ್ದಾರೆ. ಸಮಯವು ಹತ್ತರಿಸಿ ಅಪರಾಧದ ಕಡೆಗಾಲವು ಸಂಭವಿಸಿ ಹತರಾಗಿ ಬಿದ್ದಿರುವ ದುಷ್ಟರ ಗತಿಯನ್ನು ನೋಡು! ಜೋಯಿಸರನ್ನು ನಂಬಿದ ನೀನೂ ಆ ದುಷ್ಟರ ಕತ್ತುಗಳ ಮೇಲೆ ಒರಗಿಹೋಗುವಿ.


ನಿನ್ನ ಪ್ರವಾದಿಗಳು ಕಂಡುಹೇಳಿದ ಕಣಿಗಳು ವ್ಯರ್ಥ, ನಿಸ್ಸಾರ; ಅವರು ನಿನ್ನ ದೋಷವನ್ನು ಬೈಲಿಗೆ ತಾರದಕಾರಣ ನಿನ್ನ ದುರವಸ್ಥೆಯು ನೀಗಲಿಲ್ಲ; ನಿನ್ನ ವಿಷಯವಾಗಿ ಅವರಿಗೆ ಕಂಡುಬಂದ ವ್ಯರ್ಥ ದೈವೋಕ್ತಿಗಳು ನೀನು ಗಡೀಪಾರಾಗಿ ಒಯ್ಯಲ್ಪಡುವದಕ್ಕೆ ಆಸ್ಪದವಾದವು.


ಬಾಬೆಲಿನ ಅರಸನು ನಿಮಗೂ ಈ ದೇಶಕ್ಕೂ ವಿರುದ್ಧವಾಗಿ ಬಾರನು ಎಂದು ನಿಮಗೆ ಸಾರಿದ ನಿಮ್ಮ ಪ್ರವಾದಿಗಳು ಈಗ ಎಲ್ಲಿ?


ಆಗ ಪ್ರವಾದಿಯಾದ ಯೆರೆಮೀಯನು ಪ್ರವಾದಿಯಾದ ಹನನ್ಯನಿಗೆ - ಹನನ್ಯನೇ, ಕೇಳು, ಯೆಹೋವನು ನಿನ್ನನ್ನು ಕಳುಹಿಸಲಿಲ್ಲ; ಈ ಜನರು ಸುಳ್ಳನ್ನು ನಂಬುವಂತೆ ಮಾಡುತ್ತೀ.


ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ಬಾಬೆಲಿನ ಅರಸನು [ನಿಮಗೆ] ಹೇರಿರುವ ನೊಗವನ್ನು ಮುರಿದುಬಿಟ್ಟಿದ್ದೇನೆ.


ನಾನು ಈ ಪ್ರವಾದಿಗಳನ್ನು ಕಳುಹಿಸಲಿಲ್ಲ, ತಾವೇ ಆತುರಗೊಂಡರು; ನಾನು ಇವರಿಗೆ ಏನೂ ಹೇಳಲಿಲ್ಲ, ತಾವೇ ಪ್ರವಾದಿಸಿದರು.


ಇವರು ದಿವ್ಯದರ್ಶಿಗಳನ್ನು ಕುರಿತು - ನಿಮಗೆ ದರ್ಶನವಾಗದಿರಲಿ ಅನ್ನುತ್ತಾರೆ; ಮತ್ತು ಸಾಕ್ಷಾತ್ಕಾರಿಗಳಿಗೆ - ನಮಗಾಗಿ ನ್ಯಾಯವಾದವುಗಳನ್ನು ಸಾಕ್ಷಾತ್ಕರಿಸಬೇಡಿರಿ, ನಯವಾದವುಗಳನ್ನು ನಮಗೆ ನುಡಿಯಿರಿ, ಮಾಯವಾದವುಗಳನ್ನೇ ಸಾಕ್ಷಾತ್ಕರಿಸಿರಿ;


ನರಪುತ್ರನೇ, ಪ್ರವಾದನೆಮಾಡಿ ಸ್ವಕಲ್ಪಿತವಾದದ್ದನ್ನೇ ಸಾರುತ್ತಲಿರುವ ಇಸ್ರಾಯೇಲಿನ ಪ್ರವಾದಿಗಳಿಗೆ ಖಂಡನೆಯಾಗಿ ನೀನು ಪ್ರವಾದಿಸುತ್ತಾ ಹೀಗೆ ಹೇಳು - ಯೆಹೋವನ ವಾಕ್ಯವನ್ನು ಕೇಳಿರಿ,


ನೀವು ನಿಮ್ಮೊಳಗೆ - ಮೃತ್ಯುವಿನಿಂದ ಒಡಂಬಡಿಕೆಯನ್ನು ಪಡೆದುಕೊಂಡು ಪಾತಾಳದೊಡನೆ ಒಪ್ಪಂದ ಮಾಡಿಕೊಂಡಿದ್ದೇವೆ; ವಿಪರೀತ ಬಾಧೆಯು ದೇಶದೊಳಗೆ ಹಾದುಹೋಗುವಾಗ ಅದು ನಮ್ಮನ್ನು ಮುಟ್ಟದು; ನಾವು ಅಸತ್ಯವನ್ನು ಆಶ್ರಯಿಸಿಕೊಂಡು ಮೋಸವನ್ನು ಮರೆ ಹೊಕ್ಕಿದ್ದೇವಲ್ಲಾ ಅಂದುಕೊಂಡದರಿಂದ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು