Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 22:29 - ಕನ್ನಡ ಸತ್ಯವೇದವು J.V. (BSI)

29 ಸಾಧಾರಣರು ಹಿಂಸಿಸಿ ಸೂರೆಮಾಡಿದ್ದಾರೆ, ದೀನದರಿದ್ರರನ್ನು ಬಾಧಿಸಿ ವಿದೇಶಿಗಳನ್ನು ಅನ್ಯಾಯವಾಗಿ ಅರೆದು ಬಿಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಸಾಮಾನ್ಯ ಜನರನ್ನು ಹಿಂಸಿಸಿ ಸೂರೆಮಾಡಿದ್ದಾರೆ, ದೀನದರಿದ್ರರನ್ನು ಬಾಧಿಸಿ, ವಿದೇಶಿಗಳನ್ನು ಅನ್ಯಾಯಕ್ಕೆ ಒಳಪಡಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಜನಸಾಮಾನ್ಯರೂ ಹಿಂಸಿಸಿ ಸೂರೆಮಾಡಿದ್ದಾರೆ, ದೀನದರಿದ್ರರನ್ನು ಬಾಧಿಸಿದ್ದಾರೆ, ವಿದೇಶಿಗಳನ್ನು ಅನ್ಯಾಯವಾಗಿ ನಸುಕಿಬಿಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 “ಸಾಮಾನ್ಯ ಜನರು ಮೋಸ ಮಾಡುತ್ತಾರೆ ಮತ್ತು ದರೋಡೆ ಮಾಡುತ್ತಾರೆ. ತಾವು ಧನಿಕರಾಗುವದಕ್ಕೆ ನಿಸ್ಸಹಾಯಕರಾದ ಭಿಕ್ಷೆಗಾರರನ್ನು ಸುಲುಕೊಳ್ಳುವರು. ಅವರು ಪರದೇಶಿಗಳಿಗೆ ಮೋಸಮಾಡಿ ಅವರಿಗೆ ಅನ್ಯಾಯ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ದೇಶದ ಜನರು ಬಲಾತ್ಕಾರದಿಂದ ಸೂರೆಮಾಡಿದ್ದಾರೆ, ಕೊಳ್ಳೆಯನ್ನು ಹೊಡೆದಿದ್ದಾರೆ. ಬಡವನನ್ನೂ, ದರಿದ್ರರನ್ನೂ ಪೀಡಿಸಿದ್ದಾರೆ; ಹೌದು, ಅವರು ನ್ಯಾಯ ಕೊಡದೆ ವಿದೇಶಿಯರನ್ನು ಬಲಾತ್ಕಾರ ಪಡಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 22:29
21 ತಿಳಿವುಗಳ ಹೋಲಿಕೆ  

ನಿನ್ನವರು ತಾಯಿತಂದೆಗಳನ್ನು ತುಚ್ಫೀಕರಿಸಿದ್ದಾರೆ, ನಿನ್ನವರು ವಿದೇಶಿಗಳನ್ನು ಬಾಧಿಸಿದ್ದಾರೆ, ನಿನ್ನವರು ಅನಾಥರನ್ನೂ ವಿಧವೆಯರನ್ನೂ ಹಿಂಸಿಸಿದ್ದಾರೆ.


ಪರದೇಶಸ್ಥರಿಗೆ ಉಪದ್ರವಕೊಡಬಾರದು. ನೀವೂ ಐಗುಪ್ತದೇಶದಲ್ಲಿ ಪರದೇಶಸ್ಥರಾಗಿದ್ದಿರಷ್ಟೆ; ಅಂಥವರ ಮನೋವ್ಯಥೆಯನ್ನು ತಿಳಿದೇ ಇರುತ್ತೀರಿ.


ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ, ಯಾಜಕರು ಅವರಿಂದ ಅಧಿಕಾರ ಹೊಂದಿ ದೊರೆತನ ಮಾಡುತ್ತಾರೆ, ನನ್ನ ಜನರು ಇದನ್ನೇ ಪ್ರೀತಿಸುತ್ತಾರೆ; ಕಟ್ಟಕಡೆಗೆ ನೀವು ಏನು ಮಾಡುವಿರಿ?


ಸೇನಾಧೀಶ್ವರನಾದ ಯೆಹೋವನ ದ್ರಾಕ್ಷೆಯ ತೋಟವು ಇಸ್ರಾಯೇಲ್ಯರ ಮನೆತನ, ಯೆಹೂದದ ಜನವೋ ಆತನ ಇಷ್ಟದ ಗಿಡವೇ; ಆತನು ನ್ಯಾಯವನ್ನು ನಿರೀಕ್ಷಿಸಿದಾಗ ಆಹಾ, ಸಿಕ್ಕಿದ್ದು ನರಹತ್ಯವೇ; ಧರ್ಮವನ್ನು ಎದುರುನೋಡಿದಾಗ ಆಹಾ, ದೊರಕಿದ್ದು ಅರಚಾಟವೇ.


ವಿಧವೆಯನ್ನೂ ಪರದೇಶಿಯನ್ನೂ ಕೊಲ್ಲುತ್ತಾರೆ; ಅನಾಥರನ್ನು ಹತಮಾಡುತ್ತಾರೆ.


ನಿಮ್ಮ ದೇಶದಲ್ಲಿ ಇಳುಕೊಂಡಿರುವ ಪರದೇಶದವರಿಗೆ ಅನ್ಯಾಯವೇನೂ ಮಾಡಬಾರದು.


ಪರದೇಶಸ್ಥನಿಗೆ ಅನ್ಯಾಯಮಾಡಬಾರದು, ಉಪದ್ರವಕೊಡಲೂಬಾರದು. ನೀವೂ ಐಗುಪ್ತದೇಶದಲ್ಲಿ ಪರದೇಶಸ್ಥರಾಗಿದ್ದಿರಲ್ಲವೇ.


ತಮ್ಮ ಉಪ್ಪರಿಗೆಗಳಲ್ಲಿ ಬಾಧೆಕೊಳ್ಳೆಗಳಿಂದ ಸಂಪಾದಿಸಿದ್ದನ್ನು ಕೂಡಿಸಿಟ್ಟುಕೊಂಡಿರುವವರು ನ್ಯಾಯವಾಗಿ ನಡೆಯಲು ಅರಿಯರು; ಇದು ಯೆಹೋವನ ನುಡಿ.


ಅನ್ಯಾಯವಾದ ತೀರ್ಪುಗಳನ್ನು ತೀರಿಸಿ ಕೇಡಿನ ಪತ್ರಗಳನ್ನು ಬರೆಯಿಸುವವರ ಗತಿಯನ್ನು ಏನೆಂದು ಹೇಳಲಿ!


ನಿಮ್ಮ ಹೊಲಗಳನ್ನು ಕೊಯಿದವರ ಕೂಲಿಯನ್ನು ನೀವು ಅನ್ಯಾಯವಾಗಿ ಹಿಡಿದುಕೊಂಡಿದ್ದೀರಿ. ಅಗೋ, ಆ ಕೂಲಿ ನಿಮ್ಮ ಮೇಲೆ ಕೂಗಿಕೊಳ್ಳುತ್ತದೆ; ಮತ್ತು ಕೊಯಿದವರ ಕೂಗು ಸಕಲಸೇನಾಧಿಪತಿಯಾಗಿರುವ ಕರ್ತನ ಕಿವಿಗಳಲ್ಲಿ ಬಿದ್ದಿದೆ.


ಪರದೇಶಿಯಾಗಿದ್ದೆನು, ನೀವು ನನ್ನನ್ನು ಸೇರಿಸಿಕೊಳ್ಳಲಿಲ್ಲ; ಬಟ್ಟೆಯಿಲ್ಲದವನಾಗಿದ್ದೆನು, ನೀವು ನನಗೆ ಉಡುವದಕ್ಕೆ ಕೊಡಲಿಲ್ಲ; ರೋಗದಲ್ಲಿ ಬಿದ್ದಿದ್ದೆನು, ಸೆರೆಮನೆಯಲ್ಲಿದ್ದೆನು, ನೀವು ನನ್ನನ್ನು ಆರೈಕೆಮಾಡುವದಕ್ಕೆ ಬರಲಿಲ್ಲವೆಂದು ಹೇಳುವನು.


ನನ್ನ ಪ್ರಜೆಯ ಮಾಂಸವನ್ನು ತಿನ್ನುತ್ತಾರೆ, ಅವರ ಚರ್ಮವನ್ನು ಸುಲಿದುಹಾಕಿ ಅವರ ಎಲುಬುಗಳನ್ನು ಮುರಿಯುತ್ತಾರೆ; ಹಂಡೆಯಲ್ಲಿನ ತುಂಡುಗಳಂತೆ, ಕೊಪ್ಪರಿಗೆಯಲ್ಲಿನ ಮಾಂಸದ ಹಾಗೆ ಅವರನ್ನು ಚೂರುಚೂರಾಗಿ ಕತ್ತರಿಸುತ್ತಾರೆ.


ಹೊಲಗದ್ದೆಗಳನ್ನು ದುರಾಶೆಯಿಂದ ಆಕ್ರವಿುಸಿಕೊಳ್ಳುತ್ತಾರೆ, ಮನೆಗಳನ್ನು ಲೋಭದಿಂದ ಅಪಹರಿಸುತ್ತಾರೆ; ಮನೆಯನ್ನೂ ಮನೆಯವನನ್ನೂ ಸ್ವಾಸ್ತ್ಯವನ್ನೂ ಸ್ವಾಸ್ತ್ಯದವನನ್ನೂ ತುಳಿದುಬಿಡುತ್ತಾರೆ.


ದೀನದರಿದ್ರರನ್ನು ಹಿಂಸಿಸಿ ಜನರ ಸೊತ್ತನ್ನು ಅಪಹರಿಸಿ ಸಾಲಗಾರನ ಒತ್ತೆಯನ್ನು ಬಿಗಿಹಿಡಿದು ವಿಗ್ರಹಗಳ ಕಡೆಗೆ ಕಣ್ಣೆತ್ತಿ ಅಸಹ್ಯಕಾರ್ಯವನ್ನು ಮಾಡಿ


ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರು ಬಾಚಿಕೊಳ್ಳುತ್ತಲೇ ಇದ್ದಾರೆ; ಪ್ರವಾದಿಗಳು ಮೊದಲಾಗಿ ಯಾಜಕರವರೆಗೆ ಸಕಲರು ಮೋಸಮಾಡುತ್ತಾರೆ.


ಅನ್ಯಾಯದಿಂದ ಸಂಪಾದಿಸಿದ್ದನ್ನು ನೆಚ್ಚಬೇಡಿರಿ; ಸುಲಿಗೆಯಿಂದ ಗಳಿಸಿ ಸೊಕ್ಕಿರಬೇಡಿರಿ; ಹೆಚ್ಚಿದ ಆಸ್ತಿಯಲ್ಲಿ ಮನಸ್ಸಿಡಬೇಡಿರಿ.


ಆತನು ನನಗೆ - ಇಸ್ರಾಯೇಲ್ ಮತ್ತು ಯೆಹೂದ ವಂಶದವರ ಅಧರ್ಮವು ಅತ್ಯಂತವಾಗಿದೆ; ದೇಶವು ರಕ್ತಪೂರ್ಣವಾಗಿದೆ, ಪಟ್ಟಣವು ಅನ್ಯಾಯಭರಿತವಾಗಿದೆ; ಆ ವಂಶದವರು - ನಮ್ಮ ದೇಶವನ್ನು ಯೆಹೋವನು ಬಿಟ್ಟುಬಿಟ್ಟಿದ್ದಾನೆ, ಯೆಹೋವನು ನೋಡನು ಎಂಬದಾಗಿ ಮಾತಾಡಿಕೊಳ್ಳುತ್ತಿದ್ದಾರಲ್ಲಾ;


ಮತ್ತೊಬ್ಬನನ್ನು ಬಲಾತ್ಕರಿಸಬಾರದು; ಅವನ ಸೊತ್ತನ್ನು ಅಪಹರಿಸಬಾರದು. ಕೂಲಿಯವನ ಕೂಲಿಯನ್ನು ಮರುದಿನದವರೆಗೆ ನಿನ್ನ ಬಳಿಯಲ್ಲಿ ಇಟ್ಟುಕೊಳ್ಳಬಾರದು.


ಪಟ್ಟಣದ ಧನಿಕರು ತುಂಬಾ ಬಲಾತ್ಕಾರಿಗಳು, ಅದರ ನಿವಾಸಿಗಳು ಸುಳ್ಳುಗಾರರು, ಅವರ ಬಾಯನಾಲಿಗೆಯು ಮೋಸಕರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು