ಯೆಹೆಜ್ಕೇಲನು 22:30 - ಕನ್ನಡ ಸತ್ಯವೇದವು J.V. (BSI)30 ನಾನು ದೇಶವನ್ನು ಹಾಳುಮಾಡದಂತೆ ನನ್ನೆದುರಿಗೆ ದೇಶರಕ್ಷಣೆಗಾಗಿ ಪೌಳಿಯ ಒಡಕಿನಲ್ಲಿ ನಿಲ್ಲುವದಕ್ಕೂ ಗೋಡೆಯನ್ನು ಗಟ್ಟಿಮಾಡುವದಕ್ಕೂ ತಕ್ಕವನನ್ನು ನಾನು ಹುಡುಕಲು ಯಾರೂ ಸಿಕ್ಕಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 “‘ನಾನು ದೇಶವನ್ನು ಹಾಳು ಮಾಡದಂತೆ ನನ್ನೆದುರಿಗೆ ದೇಶ ರಕ್ಷಣೆಗಾಗಿ ಪೌಳಿ ಗೋಡೆಯ ಬಿರುಕಿನಲ್ಲಿ ನಿಲ್ಲುವುದಕ್ಕೂ, ಗೋಡೆಯನ್ನು ಗಟ್ಟಿಮಾಡುವುದಕ್ಕೂ ತಕ್ಕವನನ್ನು ನಾನು ಹುಡುಕಲು ಯಾರೂ ಸಿಕ್ಕಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ನಾನು ದೇಶವನ್ನು ಹಾಳುಮಾಡದಂತೆ ನನ್ನೆದುರಿಗೆ ದೇಶ ರಕ್ಷಣೆಗಾಗಿ, ಪೌಳಿಯ ಒಡಕಿನಲ್ಲಿ ನಿಲ್ಲುವುದಕ್ಕೂ ಗೋಡೆಯನ್ನು ಗಟ್ಟಿಮಾಡುವುದಕ್ಕೂ ತಕ್ಕವನನ್ನು ನಾನು ಹುಡುಕಿದರೂ ಯಾರೂ ಸಿಕ್ಕಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 “ನನ್ನ ಕೋಪದಿಂದ ದೇಶವು ನಾಶವಾಗದಂತೆ ಅದನ್ನು ರಕ್ಷಿಸಲು ಗೋಡೆಯನ್ನು ಸರಿಪಡಿಸುವುದಕ್ಕಾಗಿಯೂ ಗೋಡೆಯು ಒಡೆದುಹೋಗಿದ್ದ ಸ್ಥಳದಲ್ಲಿ ನಿಂತುಕೊಳ್ಳುವುದಕ್ಕಾಗಿ ಅವರಲ್ಲಿ ನಾನು ಒಬ್ಬನನ್ನು ಎದುರುನೋಡಿದೆ. ಆದರೆ ಯಾರೂ ನನಗೆ ಸಿಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 “ಗೋಡೆಯನ್ನು ಕಟ್ಟಿ ನಾಡನ್ನು ನಾನು ಹಾಳುಮಾಡದಂತೆ ನಾಡಿನ ಪರವಾಗಿ ಪೌಳಿಗೋಡೆಯ ಬಿರುಕಿನಲ್ಲಿ ನಿಲ್ಲುವ ಒಬ್ಬ ಮನುಷ್ಯನನ್ನು ಅವರೊಳಗೆ ನಾನು ಹುಡುಕಿದೆನು. ಆದರೆ ಯಾರೂ ಸಿಕ್ಕಲಿಲ್ಲ. ಅಧ್ಯಾಯವನ್ನು ನೋಡಿ |