ಯೆಹೆಜ್ಕೇಲನು 22:31 - ಕನ್ನಡ ಸತ್ಯವೇದವು J.V. (BSI)31 ಆದಕಾರಣ ನಾನು ನನ್ನ ಕೋಪವನ್ನು ಅವರ ಮೇಲೆ ಸುರಿಸಿ ನನ್ನ ರೋಷಾಗ್ನಿಯಿಂದ ಅವರನ್ನು ಧ್ವಂಸಮಾಡಿ ಅವರ ದುರ್ನಡತೆಯನ್ನು ಅವರ ತಲೆಗೇ ಕಟ್ಟಿದ್ದೇನೆ; ಇದು ಕರ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಆದಕಾರಣ ನಾನು ನನ್ನ ಕೋಪವನ್ನು ಅವರ ಮೇಲೆ ಸುರಿಸಿ, ನನ್ನ ರೋಷಾಗ್ನಿಯಿಂದ ಅವರನ್ನು ಧ್ವಂಸ ಮಾಡಿ ಅವರ ದುರ್ನಡತೆಯನ್ನು ಅವರ ತಲೆಗೇ ಕಟ್ಟಿದ್ದೇನೆ.’ ಇದು ಕರ್ತನಾದ ಯೆಹೋವನ ನುಡಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಆದಕಾರಣ, ನಾನು ನನ್ನ ಕೋಪವನ್ನು ಅವರ ಮೇಲೆ ಸುರಿಸಿ, ನನ್ನ ರೋಷಾಗ್ನಿಯಿಂದ ಅವರನ್ನು ಧ್ವಂಸಮಾಡಿ, ಅವರ ದುರ್ನಡತೆಯ ಹೊಣೆಯನ್ನು ಅವರ ಮೇಲೆ ಹೊರಿಸಿದ್ದೇನೆ. ಇದು ಸರ್ವೇಶ್ವರನಾದ ದೇವರ ನುಡಿ.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಅದಕ್ಕಾಗಿ ನಾನು ಅವರಿಗೆ ನನ್ನ ಕೋಪವನ್ನು ತೋರಿಸುವೆನು. ಅವರ ದುಷ್ಟತನಕ್ಕಾಗಿ ನಾನು ಅವರನ್ನು ಶಿಕ್ಷಿಸುವೆನು. ಅವರೇ ಅದಕ್ಕೆ ಜವಾಬ್ದಾರರು.” ಇವು ನನ್ನ ಒಡೆಯನಾದ ಯೆಹೋವನ ನುಡಿಗಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಆದ್ದರಿಂದ ನನ್ನ ರೋಷವನ್ನು ಅವರ ಮೇಲೆ ಸುರಿಸಿದ್ದೇನೆ. ನನ್ನ ಸಿಟ್ಟಿನ ಬೆಂಕಿಯಿಂದ ಅವರನ್ನು ಸಂಹರಿಸಿದ್ದೇನೆ. ಅವರ ದುರ್ನಡತೆಯ ಹೊಣೆಯನ್ನು ಅವರ ತಲೆಗಳ ಮೇಲೆ ಹೊರಿಸಿದ್ದೇನೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.” ಅಧ್ಯಾಯವನ್ನು ನೋಡಿ |