Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 22:8 - ಕನ್ನಡ ಸತ್ಯವೇದವು J.V. (BSI)

8 ನೀನು ನಿನ್ನ ಪವಿತ್ರವಸ್ತುಗಳನ್ನು ಅಲಕ್ಷ್ಯಮಾಡಿ ನಾನು ನೇವಿುಸಿದ ಸಬ್ಬತ್‍ದಿನಗಳನ್ನು ಹೊಲೆಮಾಡಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನೀನು ನನ್ನ ಪವಿತ್ರ ವಸ್ತುಗಳನ್ನು ಅಲಕ್ಷ್ಯಮಾಡಿ ನಾನು ನೇಮಿಸಿದ ಸಬ್ಬತ್ ದಿನಗಳನ್ನು ಹೊಲೆಮಾಡಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನೀನು ನನ್ನ ಪವಿತ್ರವಸ್ತುಗಳನ್ನು ಅಲಕ್ಷ್ಯಮಾಡಿ, ನಾನು ನೇಮಿಸಿದ ಸಬ್ಬತ್ ದಿನಗಳನ್ನು ಅಪವಿತ್ರಗೊಳಿಸಿರುವೆ. ಚಾಡಿಕೋರರು ನಿನ್ನಲ್ಲಿ ರಕ್ತ ಹರಿಸಿದ್ದಾರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನೀವು ನನ್ನ ಪವಿತ್ರ ವಸ್ತುಗಳನ್ನು ಕಡೆಗಾಣಿಸಿರುವಿರಿ. ನಾನು ನೇಮಿಸಿರುವ ವಿಶೇಷ ವಿಶ್ರಾಂತಿಯ ದಿವಸಗಳನ್ನು ಅಲಕ್ಷ್ಯ ಮಾಡುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನೀನು ನನ್ನ ಪರಿಶುದ್ಧ ಸಂಗತಿಗಳನ್ನು ತಿರಸ್ಕರಿಸಿ, ನನ್ನ ಸಬ್ಬತ್ ದಿನಗಳನ್ನು ಅಪವಿತ್ರ ಪಡಿಸಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 22:8
10 ತಿಳಿವುಗಳ ಹೋಲಿಕೆ  

ಅಲ್ಲಿನ ಯಾಜಕರು ನನ್ನ ವಿಧಿಗಳನ್ನು ಭಂಗಮಾಡಿದ್ದಾರೆ, ನನ್ನ ಪರಿಶುದ್ಧವಸ್ತುಗಳನ್ನು ಹೊಲೆಮಾಡಿದ್ದಾರೆ; ಮೀಸಲಾದದ್ದಕ್ಕೂ ಮೀಸಲಲ್ಲದ್ದಕ್ಕೂ ಭೇದವೆಣಿಸಲಿಲ್ಲ, ಶುದ್ಧಾಶುದ್ಧವಿವೇಚನೆಯನ್ನು ಬೋಧಿಸಲಿಲ್ಲ; ನಾನು ನೇವಿುಸಿದ ಸಬ್ಬತ್ ದಿನಗಳಿಗೆ ವಿಮುಖರಾಗಿದ್ದಾರೆ; ಇದರಿಂದ ನಾನು ಅವರ ಮಧ್ಯದಲ್ಲಿ ಅಪಕೀರ್ತಿಗೆ ಗುರಿಯಾಗಿದ್ದೇನೆ.


ಆದರೆ ಇಸ್ರಾಯೇಲ್ ವಂಶದವರು ಅರಣ್ಯದಲ್ಲಿ ನನ್ನ ಮೇಲೆ ತಿರುಗಿಬಿದ್ದರು. ಕೈಕೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅನುಸರಿಸದೆ ನಿರಾಕರಿಸಿದರು, ನಾನು ನೇವಿುಸಿದ ಸಬ್ಬತ್ ದಿನಗಳನ್ನು ವಿಶೇಷವಾಗಿ ಹೊಲೆಮಾಡಿದರು; ಆಗ ನಾನು ಅವರ ಮೇಲೆ ಅರಣ್ಯದೊಳಗೆ ನನ್ನ ರೋಷಾಗ್ನಿಯನ್ನು ಸುರಿಸಿ ಇವರನ್ನು ಧ್ವಂಸಮಾಡುವೆನು ಅಂದುಕೊಂಡೆನು.


ನಾನು ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ ದೇಶದೇಶಗಳಿಗೆ ತೂರಿಬಿಡುವೆನು ಎಂದು ಅರಣ್ಯದಲ್ಲಿ ಅವರಿಗೆ ಪ್ರಮಾಣಮಾಡಿದೆನು.


ಆ ಸಂತಾನದವರಾದರೋ ನನ್ನ ಮೇಲೆ ತಿರುಗಿಬಿದ್ದರು; ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ; ಕೈಕೊಂಡವರಿಗೆ ಜೀವಾಧಾರವಾದ ನನ್ನ ವಿಧಿಗಳನ್ನು ಕೈಕೊಂಡು ನಡಿಸಲಿಲ್ಲ; ನಾನು ನೇವಿುಸಿದ ಸಬ್ಬತ್ ದಿನಗಳನ್ನು ಹೊಲೆಮಾಡಿದರು; ಆದದರಿಂದ ನಾನು ಅರಣ್ಯದಲ್ಲಿ ಇವರ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ ನನ್ನ ಕೋಪವನ್ನು ತೀರಿಸಿಕೊಳ್ಳುವೆನು ಅಂದುಕೊಂಡೆನು.


ನೀವೋ - ಯೆಹೋವನ ಮೇಜು ಅಶುದ್ಧ, ಅದರ ಮೇಲಣ ಎಡೆಯು ತುಚ್ಫ ಅಂದುಕೊಳ್ಳುವದರಿಂದ ನನ್ನ ನಾಮವನ್ನು ಅಪಕೀರ್ತಿಗೆ ಗುರಿಮಾಡಿದ್ದೀರಿ.


ನಾನು ನೇವಿುಸಿರುವ ಸಬ್ಬತ್‍ದಿನಗಳನ್ನು ಆಚರಿಸಬೇಕು; ನನ್ನ ದೇವಸ್ಥಾನದ ವಿಷಯದಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ನಾನು ಯೆಹೋವನು.


ನಾನು ನೇವಿುಸಿದ ಸಬ್ಬತ್ ದಿನಗಳನ್ನು ನನ್ನ ದಿನಗಳೆಂದು ಆಚರಿಸಿರಿ; ನಾನು ನಿಮ್ಮ ದೇವರಾದ ಯೆಹೋವನು ಎಂದು ನೀವು ತಿಳುಕೊಳ್ಳುವಂತೆ ಅವು ನಿಮಗೂ ನನಗೂ ಗುರುತಾಗಿರುವವು ಎಂದು ಹೇಳಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು