Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 23:14 - ಕನ್ನಡ ಸತ್ಯವೇದವು J.V. (BSI)

14 ಇವಳು ತನ್ನ ಸೂಳೆತನವನ್ನು ಇನ್ನೂ ಹೆಚ್ಚಿಸಿದಳು; ಇಗೋ, ಕಸ್ದೀಯರ ಚಿತ್ರಗಳು ಅಂದರೆ ಸೊಂಟಕ್ಕೆ ನಡುಕಟ್ಟನ್ನು ಕಟ್ಟಿ ತಲೆಗೆ ಚುಂಗಿನ ರುಮಾಲನ್ನು ಧರಿಸಿ ಯಾರೂ ತಪ್ಪದೆ ನೋಟಕ್ಕೆ ಸರದಾರರಂತಿದ್ದು ತಮ್ಮ ಜನ್ಮಭೂವಿುಯಾದ ಬಾಬೆಲಿನ ಕಸ್ದೀಯರೇ ಆಗಿ ಕಂಡು ಬರುವ ಮನುಷ್ಯರ ಆಕಾರಗಳು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 “ಇವಳು ತನ್ನ ವ್ಯಭಿಚಾರವನ್ನು ಇನ್ನೂ ಹೆಚ್ಚಿಸಿದಳು; ಗೋಡೆಯ ಮೇಲೆ ಚಿತ್ರಿಸಲ್ಪಟ್ಟ ಕಸ್ದೀಯರ ಪುರುಷರನ್ನು ನೋಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14-15 “ಇವಳು ತನ್ನ ಸೂಳೆತನವನ್ನು ಇನ್ನೂ ಹೆಚ್ಚಿಸಿದಳು; ಬಾಬಿಲೋನಿಯರ ಚಿತ್ರಗಳನ್ನು ಅಂದರೆ, ಸೊಂಟಕ್ಕೆ ನಡುಕಟ್ಟನ್ನು ಕಟ್ಟಿ, ತಲೆಗೆ ಚುಂಗಿನ ರುಮಾಲನ್ನು ಧರಿಸಿ, ನೋಟಕ್ಕೆ ಸರದಾರರಂತಿದ್ದ ಆ ಬಾಬಿಲೋನಿನ ಕಸ್ದೀಯರ ಆಕಾರಗಳನ್ನು ಗೋಡೆಯಲ್ಲಿ ಕಿರಮಂಜಿಯಿಂದ ಚಿತ್ರಿಸಿರುವುದನ್ನು ನೋಡಿದ ಕೂಡಲೆ ಇವಳು ಮೋಹಗೊಳ್ಳುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 “ಒಹೊಲೀಬಳು ನನಗೆ ಅಪನಂಬಿಗಸ್ತಳಾಗಿ ಮುಂದುವರಿದಳು. ಗೋಡೆಯ ಮೇಲೆ ಕೆತ್ತಲ್ಪಟ್ಟಿದ್ದ ಗಂಡಸರ ಚಿತ್ರಗಳನ್ನು ಆಕೆ ನೋಡಿದಳು. ಅವು ಕೆಂಪು ಸಮವಸ್ತ್ರ ಧರಿಸಿದ್ದ ಕಸ್ದೀಯ ಸೈನಿಕರ ಚಿತ್ರಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 “ಅವಳು ತನ್ನ ವ್ಯಭಿಚಾರತ್ವವನ್ನು ಇನ್ನೂ ಹೆಚ್ಚಿಸಿದಳು. ಗೋಡೆಯ ಮೇಲೆ ಕೆಂಪು ಬಣ್ಣದಿಂದ ಚಿತ್ರಿಸಲಾದ ಕಸ್ದೀಯರ ಪುರುಷರನ್ನು ನೋಡಿದಳು. ಅವರು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 23:14
9 ತಿಳಿವುಗಳ ಹೋಲಿಕೆ  

ಅಕಟಾ, ಎಲ್ಲಾ ಜಾತಿಯ ಕ್ರಿವಿುಕೀಟಗಳೂ ಅಸಹ್ಯಮೃಗಗಳೂ ಇಸ್ರಾಯೇಲ್‍ವಂಶದವರು ಪೂಜಿಸುವ ಸಕಲಮೂರ್ತಿಗಳೂ ಸುತ್ತಲೂ ಗೋಡೆಯಲ್ಲಿ ಚಿತ್ರಿಸಲ್ಪಟ್ಟಿದ್ದವು.


ಆಹಾ, ನಾನು ವಿಸ್ತಾರವಾದ ಅರಮನೆಯನ್ನೂ ವಿಶಾಲವಾದ ಮಹಡಿಗಳನ್ನೂ ಕಟ್ಟಿಸಿಕೊಳ್ಳುವೆನು ಎಂದು ಹೇಳಿ ಅಗಲಗಲವಾದ ಕಿಟಕಿಗಳನ್ನಿಡಿಸಿ [ಒಳಗೆ ಗೋಡೆಗೆಲ್ಲಾ] ದೇವದಾರಿನ ಹಲಿಗೆಗಳನ್ನು ಹೊದಿಸಿ ಕಿರಿಮಂಜಿಯ ಬಣ್ಣವನ್ನು ಬಳಿಸಿಕೊಳ್ಳುವವನ ಪಾಡನ್ನು ಏನು ಹೇಳಲಿ!


ಇದಲ್ಲದೆ ನೀನು ತುಂಬಾ ವ್ಯಾಪಾರವುಳ್ಳ ಕಸ್ದೀಯ ದೇಶಕ್ಕೆ ಸೇರಿ ಅಲ್ಲಿಯೂ ಬಹಳ ಸೂಳೆತನ ಮಾಡಿದಿ, ಆದರೂ ನಿನಗೆ ತೃಪ್ತಿಯಾಗಲಿಲ್ಲ.


ಜನಾಂಗಗಳಲ್ಲಿ ಪ್ರಚುರಪಡಿಸಿರಿ, ಧ್ವಜವೆತ್ತಿ ಪ್ರಕಟಿಸಿರಿ, ಮರೆಮಾಜದೆ ಹೀಗೆ ಸಾರಿರಿ - ಬಾಬೆಲ್ ಶತ್ರುವಾಯಿತು, ಬೇಲ್ ದೇವತೆಯು ನಾಚಿಕೆಗೊಂಡಿದೆ, ಮೆರೋದಾಕ್ ದೇವತೆಯು ಬೆಚ್ಚಿಬಿದ್ದಿದೆ, ಅದರ ಮೂರ್ತಿಗಳು ಅವಮಾನಕ್ಕೆ ಗುರಿಯಾಗಿವೆ, ಅದರ ಬೊಂಬೆಗಳು ಚೂರುಚೂರಾಗಿವೆ.


ಬೇಲ್ ದೇವತೆಯು ಬೊಗ್ಗಿದೆ, ನೆಬೋದೇವತೆಯು ಕುಗ್ಗಿದೆ, ಅವುಗಳ ಬೊಂಬೆಗಳು ದನ ಮೊದಲಾದವುಗಳ ಮೇಲೆ ಹೊರಿಸಲ್ಪಟ್ಟಿವೆ, ನೀವು ಮೆರವಣಿಗೆಯಾಗಿ ಹೊರುತ್ತಿದ್ದವುಗಳು ಪಶುಗಳಿಗೆ ಭಾರವಾದ ಹೊರೆಯಾಗಿ ಅವುಗಳನ್ನು ಬಳಲಿಸಿವೆ.


ಇವಳೂ ಹೊಲಸಾಗಿಹೋದದ್ದನ್ನು ಕಂಡೆನು, ಇಬ್ಬರು ಒಂದೇ ಮಾರ್ಗವನ್ನು ಹಿಡಿದರು.


ಗೋಡೆಯಲ್ಲಿ ಕಿರಮಂಜಿಯಿಂದ ಚಿತ್ರಿಸಿರುವದನ್ನು ನೋಡಿದ ಕೂಡಲೆ


ಸಮಸ್ತ ಕಸ್ದೀಯರು, ಪೆಕೋದಿನವರು, ಷೋಯದವರು, ಕೋಯದವರು, ಇವರನ್ನೂ ಇವರೊಂದಿಗೆ ಅಶ್ಶೂರ್ಯರೆಲ್ಲರನ್ನೂ ನಾನು ನಿನಗೆ ವಿರುದ್ಧವಾಗಿ ಎಬ್ಬಿಸಿ ಎಲ್ಲಾ ಕಡೆಯಿಂದಲೂ ನಿನ್ನ ಮೇಲೆ ಬೀಳಮಾಡುವೆನು.


ಶತ್ರುವಿನ ಶೂರರ ಗುರಾಣಿಯು ರಕ್ತವರ್ಣವಾಗಿದೆ, ಪರಾಕ್ರವಿುಗಳ ಉಡುಪು ಕಿರಿಮಂಜಿಯದು; ಅವನ ಸನ್ನಾಹದಿನದಲ್ಲಿ ರಥಗಳ ಉಕ್ಕು ಥಳಥಳಿಸುತ್ತದೆ, ಈಟಿಗಳು ಝಳಪಿಸುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು