Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 23:17 - ಕನ್ನಡ ಸತ್ಯವೇದವು J.V. (BSI)

17 ಆಗ ಬಾಬೆಲಿನವರು ಇವಳ ರತಿಮಂಚವನ್ನೇರಿ ತಮ್ಮ ಸೂಳೆಗಾರಿಕೆಯಿಂದ ಇವಳನ್ನು ಕೆಡಿಸಿದರು; ಇವಳು ಅವರಿಂದ ಹೊಲಸಾಗಲು ಇವಳ ಆಶೆಯು ಅವರಿಂದ ತೊಲಗಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆಗ ಬಾಬೆಲಿನವರು ಇವಳ ಪ್ರೀತಿಯ ಮಂಚವನ್ನೇರಿ ತಮ್ಮ ವ್ಯಭಿಚಾರಿಕೆಯಿಂದ ಇವಳನ್ನು ಕೆಡಿಸಿದರು; ಇವಳು ಅವರಿಂದ ಅಪವಿತ್ರವಾಗಲು, ಅವಳಿಗೆ ಈ ಬಗ್ಗೆ ಜಿಗುಪ್ಸೆಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಆ ಬಾಬಿಲೋನಿನವರು ಇವಳ ರತಿಮಂಚವನ್ನೇರಿ ತಮ್ಮ ಕಾಮತೃಷೆಯಿಂದ ಇವಳನ್ನು ಕೆಡಿಸಿದರು; ಇವಳು ಅವರಿಂದ ಎಷ್ಟು ಅಶುದ್ಧಳಾದಳೆಂದರೆ ಇವಳಿಗೇ ಅವರ ಬಗ್ಗೆ ಜಿಗುಪ್ಸೆ ಹುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆಗ ಆ ಬಾಬಿಲೋನಿನವರು ಬಂದು ಆಕೆಯ ರತಿಮಂಚವನ್ನೆರೀ ಆಕೆಯನ್ನು ಸಂಗಮಿಸಿದರು. ಆಕೆಯನ್ನು ಚೆನ್ನಾಗಿ ಅನುಭೋಗಿಸಿ ಮಲಿನವನ್ನಾಗಿ ಮಾಡಿದರು. ಆದ್ದರಿಂದ ಆಕೆಗೆ ಅವರು ಅಸಹ್ಯವೆನಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆಗ ಬಾಬಿಲೋನಿನವರು ಅವರ ಪ್ರೀತಿಯ ಹಾಸಿಗೆಯ ಮೇಲೆ ಬಂದು ಆಕೆಯನ್ನು ವ್ಯಭಿಚಾರದಿಂದ ಅಪವಿತ್ರಪಡಿಸಿದರು. ಅವಳು ಅವರಿಂದ ಅಪವಿತ್ರಳಾದ ಮೇಲೆ ಅವರ ಬಗ್ಗೆ ಇವಳಿಗೇ ಜಿಗುಪ್ಸೆ ಹುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 23:17
8 ತಿಳಿವುಗಳ ಹೋಲಿಕೆ  

ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಇಗೋ, ನೀನು ಯಾರನ್ನು ಹಗೆ ಮಾಡುತ್ತೀಯೋ ನಿನ್ನ ಆಶೆಯು ಯಾರಿಂದ ಹಿಂದಿರುಗಿತೋ ಅವರ ಕೈಗೆ ನಿನ್ನನ್ನು ನಾನು ಒಪ್ಪಿಸಲು


ಹೀಗಿರಲು, ಒಹೊಲೀಬಳೇ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ಯಾವ ವಿುಂಡರಿಂದ ನಿನ್ನ ಆಶೆ ತೊಲಗಿತೋ ಆ ವಿುಂಡರನ್ನು ಅಂದರೆ ಮನೋಹರ ಯುವಕರೂ ಯಾರೂ ತಪ್ಪದೆ ನಾಯಕೋಪನಾಯಕರೂ ಪ್ರಭುಪ್ರಧಾನರೂ ಅಶ್ವಾರೂಢರೂ ಆದ ಬಾಬೆಲಿನವರು,


ಇವುಗಳನ್ನು ನಾನು ನೋಡಿ ನೀನು ರವಿುಸಿದ ನಿನ್ನ ಎಲ್ಲಾ ವಿುಂಡರನ್ನೂ ನೀನು ಮೋಹಿಸಿದ ಸಮಸ್ತರನ್ನೂ ನೀನು ಹಗೆಮಾಡಿದ ಎಲ್ಲರೊಂದಿಗೆ ಸುತ್ತುಮುತ್ತಲು ನಿನಗೆ ವಿರುದ್ಧವಾಗಿ ಕೂಡಿಸಿ ಅವರ ಕಣ್ಣೆದುರಿಗೆ ನಿನ್ನನ್ನು ಬೆತ್ತಲೆಗೈದು ನಿನ್ನ ಮಾನವನ್ನು ಬಟ್ಟಬೈಲುಮಾಡುವೆನು.


ಇದಾದ ಮೇಲೆ ಅವನಿಗೆ ಆಕೆಯಲ್ಲಿ ತುಂಬಾ ದ್ವೇಷಹುಟ್ಟಿತು. ಅವನ ಮುಂಚಿನ ಪ್ರೀತಿಗಿಂತ ದ್ವೇಷವೇ ಹೆಚ್ಚಾಯಿತು.


ಸಮಸ್ತಲೋಕದ ಭಾಷೆಯನ್ನು ಯೆಹೋವನು ಅಲ್ಲಿ ತಾರುಮಾರುಮಾಡಿ ಅವರನ್ನು ಅಲ್ಲಿಂದ ಭೂಲೋಕದಲ್ಲೆಲ್ಲಾ ಚದರಿಸಿದ್ದರಿಂದ ಆ ಪಟ್ಟಣಕ್ಕೆ ಬಾಬೆಲ್ ಎಂಬ ಹೆಸರಾಯಿತು.


ಶಿನಾರ್ ದೇಶದಲ್ಲಿರುವ ಬಾಬೆಲ್, ಯೆರೆಕ್, ಅಕ್ಕದ್, ಕಲ್ನೇ ಎಂಬ ಪಟ್ಟಣಗಳೇ ಅವನ ರಾಜ್ಯದ ಮೂಲ ಪಟ್ಟಣಗಳು.


ಸುಮಾರು ಮೂರು ತಿಂಗಳಾದ ಮೇಲೆ ಯೆಹೂದನು ತನ್ನ ಸೊಸೆಯಾದ ತಾಮಾರಳು ವ್ಯಭಿಚಾರದಿಂದ ಬಸುರಾಗಿದ್ದಾಳೆ ಎಂಬ ವರ್ತಮಾನವನ್ನು ತಿಳಿದು - ಅವಳನ್ನು ಹೊರಗೆ ತನ್ನಿರಿ, ಸುಡಬೇಕಾಗಿದೆ ಎಂದು ಹೇಳಿದನು.


ಬಾಬೆಲಿನ ಅರಸನು ಯೆಹೋಯಾಖೀನನಿಗೆ ಬದಲಾಗಿ ಅವನ ಚಿಕ್ಕಪ್ಪನಾದ ಮತ್ತನ್ಯ ಎಂಬವನನ್ನು ಅರಸನನ್ನಾಗಿ ನೇವಿುಸಿ ಅವನಿಗೆ ಚಿದ್ಕೀಯ ಎಂಬ ಹೆಸರಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು