Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 23:21 - ಕನ್ನಡ ಸತ್ಯವೇದವು J.V. (BSI)

21 [ಒಹೊಲೀಬಳೇ,] ನಿನ್ನ ಪುಟ್ಟಮೊಲೆಗಳಿಗೆ ಆಶೆಬಿದ್ದ ಐಗುಪ್ತ್ಯರಿಂದ ತೊಟ್ಟುಗಳನ್ನು ನಸುಕಿಸಿಕೊಂಡ ನಿನ್ನ ಎಳೆಪ್ರಾಯದ ಕಾಮವನ್ನು ನೀನು ನೆನಪಿಗೆ ತಂದುಕೊಂಡು ಆ ವಿುಂಡರನ್ನು ಮೋಹಿಸಿದಿಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಹೀಗೆ ಐಗುಪ್ತ್ಯರಿಂದ ನಿನ್ನ ಯೌವನದ ಸ್ತನಗಳ ತೊಟ್ಟುಗಳನ್ನು ಬತ್ತಿಸಿಕೊಂಡ, ನಿನ್ನ ಯೌವನದ ದುಷ್ಕರ್ಮವನ್ನು ನೆನಪಿಗೆ ತಂದುಕೋ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಒಹೊಲೀಬಳೇ, ನಿನ್ನ ಪುಟ್ಟ ಮೊಲೆಗಳಿಗೆ ಆಸೆಬಿದ್ದ ಈಜಿಪ್ಟ್‌ರಿಂದ ತೊಟ್ಟುಗಳನ್ನು ಚಿವುಟಿಸಿಕೊಂಡ ನಿನ್ನ ತಾರುಣ್ಯದ ಕಾಮವನ್ನು ನೀನು ನೆನಪಿಗೆ ತಂದುಕೊಂಡು ಆ ಮಿಂಡರನ್ನು ಮೋಹಿಸಿದೆಯಲ್ಲವೆ?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 “ಒಹೊಲೀಬಳೇ, ನಿನ್ನ ಯೌವನ ಕಾಲದಲ್ಲಿ ನೀನು ಅನುಭೋಗಿಸಿದ್ದನ್ನು ಕನಸು ಕಾಣುತ್ತಿ, ನಿನ್ನ ಈಜಿಪ್ಟಿನ ಪ್ರಿಯತಮರು ನಿನ್ನ ಸ್ತನದ ತೊಟ್ಟುಗಳನ್ನು ಮುಟ್ಟಿ ನಿನ್ನ ಎಳೆ ಸ್ತನಗಳನ್ನು ಹಿಸುಕಿದ್ದನ್ನು ನೀನು ಜ್ಞಾಪಕಕ್ಕೆ ತಂದುಕೊಳ್ಳುತ್ತಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಹೀಗೆ ಈಜಿಪ್ಟಿನಿಂದ ನಿನ್ನ ಯೌವನದ ಸ್ತನಗಳ ತೊಟ್ಟುಗಳನ್ನು ಬತ್ತಿಸಿಕೊಂಡು ನಿನ್ನ ಯೌವನದ ದುಷ್ಕರ್ಮವನ್ನು ನೆನಪಿಗೆ ತಂದುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 23:21
6 ತಿಳಿವುಗಳ ಹೋಲಿಕೆ  

ಕಲ್ಲು ಮರಗಳೊಡನೆ ಹಾದರಮಾಡಿ ಲಘುವೆಂದು ಭಾವಿಸಿಕೊಂಡ ತನ್ನ ಸೂಳೆತನದಿಂದ ದೇಶವನ್ನು ಅಪವಿತ್ರಪಡಿಸಿದಳು.


ಅವರು ಐಗುಪ್ತದಲ್ಲಿ ಸೂಳೆತನ ಮಾಡುತ್ತಿದ್ದರು, ಬಾಲ್ಯದಲ್ಲೇ ಸೂಳೆಯರಾಗಿ ನಡೆಯುತ್ತಿದ್ದರು; ಅಲ್ಲಿ ಅವರ ಸ್ತನಗಳು ಹಿಸಕಲ್ಪಟ್ಟವು, ಎಳೆಯ ತೊಟ್ಟುಗಳು ನಸುಕಲ್ಪಟ್ಟವು.


ಹೀಗಿರಲು, ಒಹೊಲೀಬಳೇ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ಯಾವ ವಿುಂಡರಿಂದ ನಿನ್ನ ಆಶೆ ತೊಲಗಿತೋ ಆ ವಿುಂಡರನ್ನು ಅಂದರೆ ಮನೋಹರ ಯುವಕರೂ ಯಾರೂ ತಪ್ಪದೆ ನಾಯಕೋಪನಾಯಕರೂ ಪ್ರಭುಪ್ರಧಾನರೂ ಅಶ್ವಾರೂಢರೂ ಆದ ಬಾಬೆಲಿನವರು,


ಅವಳು ಐಗುಪ್ತದಲ್ಲಿದ್ದಂದಿಂನಿಂದಲೂ ತನ್ನ ಸೂಳೆತನವನ್ನು ಬಿಡಲಿಲ್ಲ; ಅವಳ ಬಾಲ್ಯದಲ್ಲಿಯೇ ಅಲ್ಲಿನವರು ಅವಳೊಂದಿಗೆ ಮಲಗಿ ಅವಳ ಎಳೆಯ ತೊಟ್ಟುಗಳನ್ನು ನಸುಕಿ ಅವಳ ಸಂಗಡ ಸೂಳೆಗಾರಿಕೆಯನ್ನು ಹೆಚ್ಚೆಚ್ಚಾಗಿ ಮಾಡಿದರು.


ಆದರೂ ಇವಳು ತಾನು ಐಗುಪ್ತದೇಶದಲ್ಲಿ ಸೂಳೆಯಾಗಿದ್ದ ತನ್ನ ಎಳೆಪ್ರಾಯವನ್ನು ಜ್ಞಾಪಕಮಾಡಿಕೊಂಡು ತನ್ನ ಸೂಳೆತನವನ್ನು ಇನ್ನೂ ಹೆಚ್ಚಿಸಿ


ನಾನು ನನ್ನ ತಂದೆಯ ಹೆಸರಿನ ಮೇಲೆ ಬಂದಿದ್ದೇನೆ; ನನ್ನನ್ನು ನೀವು ಒಪ್ಪಿಕೊಳ್ಳುವದಿಲ್ಲ; ಮತ್ತೊಬ್ಬನು ಸ್ವಂತ ಹೆಸರಿನ ಮೇಲೆ ಬಂದರೆ ಅವನನ್ನು ಒಪ್ಪಿಕೊಳ್ಳುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು