Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 23:23 - ಕನ್ನಡ ಸತ್ಯವೇದವು J.V. (BSI)

23 ಸಮಸ್ತ ಕಸ್ದೀಯರು, ಪೆಕೋದಿನವರು, ಷೋಯದವರು, ಕೋಯದವರು, ಇವರನ್ನೂ ಇವರೊಂದಿಗೆ ಅಶ್ಶೂರ್ಯರೆಲ್ಲರನ್ನೂ ನಾನು ನಿನಗೆ ವಿರುದ್ಧವಾಗಿ ಎಬ್ಬಿಸಿ ಎಲ್ಲಾ ಕಡೆಯಿಂದಲೂ ನಿನ್ನ ಮೇಲೆ ಬೀಳಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಬಾಬಿಲೋನಿನವರು, ಎಲ್ಲಾ ಕಸ್ದೀಯರು, ಪೆಕೋದಿನವರು, ಷೋಯದವರು, ಕೋಯದವರು ಮತ್ತು ಎಲ್ಲಾ ಅಶ್ಶೂರ್ಯರೆಲ್ಲರೊಂದಿಗೂ ಅವರೆಲ್ಲಾ ಅಪೇಕ್ಷಿಸುವಂತಹ ಯೌವನಸ್ಥರೂ, ಸೈನ್ಯಾಧಿಪತಿಗಳೂ, ಅಧಿಕಾರಸ್ಥರೂ, ಯುದ್ಧವೀರರು, ಖ್ಯಾತಿ ಹೊಂದಿದವರೂ, ಎಲ್ಲರೂ ಕುದರೆಗಳ ಮೇಲೆ ಬೀಳುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಸಮಸ್ತ ಕಸ್ದೀಯರು, ಪಕೋದಿನವರು, ಷೋಯದವರು, ಕೋಯದವರು, ಇವರನ್ನೂ ಇವರೊಂದಿಗೆ ಅಸ್ಸೀರಿಯರೆಲ್ಲರನ್ನೂ ನಾನು ನಿನಗೆ ವಿರುದ್ಧ ಎಬ್ಬಿಸಿ, ಎಲ್ಲ ಕಡೆಯಿಂದಲೂ ನಿನ್ನ ಮೇಲೆ ಬೀಳುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನಾನು ಬಾಬಿಲೋನಿನ ಕಸ್ದೀಯ ಪುರುಷರನ್ನು ಬರಮಾಡುವೆನು. ನಾನು ಪೆಕೋದ್, ಷೋಯ ಮತ್ತು ಕೋಯ ಇಲ್ಲಿಂದಲೂ, ಅಶ್ಶೂರದ ಯೌವನಸ್ಥರನ್ನು ಬರಮಾಡುವೆನು. ಅಲ್ಲಿಯ ಎಲ್ಲಾ ಅಧಿಕಾರಿಗಳನ್ನೂ ನಾಯಕರನ್ನೂ ಬರಮಾಡುವೆನು. ಅವರೆಲ್ಲರೂ ಸುಂದರವಾದ ಯುವಕರು, ಅಧಿಕಾರಿಗಳು, ಆರಿಸಲ್ಪಟ್ಟ ಯೋಧರು ಮತ್ತು ಅಶ್ವರೂಢರು ಆಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಬಾಬಿಲೋನಿನವರು ಎಲ್ಲಾ ಕಸ್ದೀಯರು, ಪೆಕೋದಿನವರು, ಷೋಯದವರು, ಕೋಯದವರು, ಎಲ್ಲಾ ಅಸ್ಸೀರಿಯರ ಜೊತೆಗೆ ಅವರೆಲ್ಲಾ ಅಪೇಕ್ಷಿಸುವಂತಹ ಯೌವನಸ್ಥರೂ ಸೈನ್ಯಾಧಿಪತಿಗಳೂ ಅಧಿಕಾರಸ್ಥರೂ ಯುದ್ಧಶಾಲಿಗಳೂ ಖ್ಯಾತಿ ಹೊಂದಿದವರೂ ಎಲ್ಲರೂ ಕುದುರೆಗಳ ಮೇಲೆ ಬೀಳುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 23:23
16 ತಿಳಿವುಗಳ ಹೋಲಿಕೆ  

ಯೆಹೋವನು ಇಂತೆನ್ನುತ್ತಾನೆ - ಮೆರಾಥಯಿಮ್ ದೇಶಕ್ಕೂ ಪೆಕೋದಿನ ನಿವಾಸಿಗಳಿಗೂ ವಿರುದ್ಧವಾಗಿ ದಂಡೆತ್ತಿ ಹೋಗಿ ಅವರನ್ನು ಸಂಹರಿಸಿ ಅನಂತರ ದೇಶವನ್ನು ತೀರಾ ಹಾಳುಮಾಡಿ ನಾನು ನಿನಗೆ ಆಜ್ಞಾಪಿಸಿದ್ದನ್ನೆಲ್ಲಾ ನೆರವೇರಿಸು.


ಯೆಹೋವನು ತನ್ನ ಸೇವಕರಾದ ಪ್ರವಾದಿಗಳ ಮುಖಾಂತರವಾಗಿ ಮುಂತಿಳಿಸಿದ ಪ್ರಕಾರ ಯೆಹೂದರಾಜ್ಯವನ್ನು ಹಾಳುಮಾಡುವದಕ್ಕೋಸ್ಕರ ಕಸ್ದೀಯರ, ಅರಾಮ್ಯರ, ಮೋವಾಬ್ಯರ, ಅಮ್ಮೋನಿಯರ ಸುಲಿಗೆಯ ಗುಂಪುಗಳನ್ನು ಕಳುಹಿಸಿದನು.


ಇವಳು ನಾಯಕೋಪನಾಯಕರೂ ಯೋಧರೂ ವಿಚಿತ್ರಾಂಬರರೂ ಅಶ್ವಾರೂಢರೂ ಯಾರೂ ತಪ್ಪದೆ ಮನೋಹರ ಯುವಕರೂ ಆದ ಅಶ್ಶೂರ್ಯರನ್ನು ಮೋಹಿಸಿದಳು.


ಯೋಧರೂ ನೀಲಾಂಬರರೂ ಅಶ್ವಾರೂಢರೂ ನಾಯಕೋಪನಾಯಕರೂ ಯಾರೂ ತಪ್ಪದೆ ಮನೋಹರ ಯುವಕರೂ ಆದ ಅಶ್ಶೂರ್ಯರನ್ನು ಮೋಹಿಸಿ


ಇಗೋ, ಕಸ್ದೀಯರ ದೇಶವು! ಈ ಜನಾಂಗವು ನಿರ್ನಾಮವಾಯಿತು; ಅಶ್ಶೂರ್ಯರು ಈ ದೇಶವನ್ನು ಕಾಡುಮೃಗಗಳಿಗೆ ಈಡುಮಾಡಿದರು; ಬುರುಜುಗಳನ್ನು ಕಟ್ಟಿಕೊಂಡು ಇದರ ಕೋಟೆಗಳನ್ನು ಕೆಡವಿ ಇದನ್ನು ನಾಶಪಡಿಸಿದರು.


ಅಷ್ಟರಲ್ಲಿ ಇನ್ನೊಬ್ಬನು ಬಂದು ಕಸ್ದೀಯರು ಮೂರು ಗುಂಪುಗಳಾಗಿ ಬಂದು ಒಂಟೆಗಳ ಮೇಲೆ ಬಿದ್ದು ಹೊಡೆದುಕೊಂಡು ಹೋದರು; ಇದಲ್ಲದೆ ಆಳುಗಳನ್ನು ಕತ್ತಿಯಿಂದ ಹತಮಾಡಿದರು; ಇದನ್ನು ತಿಳಿಸುತ್ತಿರುವ ನಾನೊಬ್ಬನೇ ತಪ್ಪಿಸಿಕೊಂಡು ಉಳಿದಿದ್ದೇನೆ ಅಂದನು.


ಇದಲ್ಲದೆ ಇಸ್ರಾಯೇಲ್‍ದೇವರ ಆಲಯವನ್ನು ಕಟ್ಟುವದರಲ್ಲಿ ಅಶ್ಶೂರದ ಅರಸನು ತಮಗೆ ಸಹಾಯ ಮಾಡುವಂತೆ ಯೆಹೋವನು ಅವನ ಮನಸ್ಸನ್ನು ತಿರುಗಿಸಿ ತಮಗೆ ಸಂತೋಷವನ್ನು ಉಂಟುಮಾಡಿದ್ದಾನೆ ಎಂದು ಹರ್ಷಿಸುತ್ತಾ ಏಳು ದಿವಸಗಳವರೆಗೂ ಹುಳಿಯಿಲ್ಲದ ರೊಟ್ಟಿಗಳ ಜಾತ್ರೆಯನ್ನು ಆಚರಿಸಿದರು.


ಇಷ್ಮಾಯೇಲ್ಯರು ಹವೀಲದಿಂದ ಐಗುಪ್ತದೇಶದ ಮೂಡಲಲ್ಲಿರುವ ಅಶ್ಶೂರಿನ ದಾರಿಯಲ್ಲಿರುವ ಶೂರಿನ ತನಕ ವಾಸಮಾಡಿದರು. ಹೀಗೆ ಅವರಿಗೆ ತಮ್ಮ ಸಂಬಂಧಿಕರ ಎದುರಿನಲ್ಲಿಯೇ ವಾಸಸ್ಥಳ ಸಿಕ್ಕಿತು.


ಮೂರನೆಯ ನದಿಯ ಹೆಸರು ಹಿದ್ದೆಕೆಲ್; ಅದು ಅಶ್ಶೂರ್ ದೇಶದ ಮುಂದೆ ಹರಿಯುವದು. ನಾಲ್ಕನೆಯದು ಯೂಫ್ರೇಟೀಸ್ ನದಿ.


ಆಗ ಅವನು ಕಸ್ದೀಯರ ದೇಶದಿಂದ ಹೊರಟುಹೋಗಿ ಖಾರಾನಿನಲ್ಲಿ ವಾಸವಾಗಿದ್ದನು. ಅವನ ತಂದೆ ಸತ್ತಮೇಲೆ ದೇವರು ಅವನನ್ನು ಅಲ್ಲಿಂದ ನೀವು ಈಗ ವಾಸವಾಗಿರುವ ಈ ದೇಶಕ್ಕೆ ಬರಮಾಡಿದನು.


ಇವಳು ತನ್ನ ಸೂಳೆತನವನ್ನು ಇನ್ನೂ ಹೆಚ್ಚಿಸಿದಳು; ಇಗೋ, ಕಸ್ದೀಯರ ಚಿತ್ರಗಳು ಅಂದರೆ ಸೊಂಟಕ್ಕೆ ನಡುಕಟ್ಟನ್ನು ಕಟ್ಟಿ ತಲೆಗೆ ಚುಂಗಿನ ರುಮಾಲನ್ನು ಧರಿಸಿ ಯಾರೂ ತಪ್ಪದೆ ನೋಟಕ್ಕೆ ಸರದಾರರಂತಿದ್ದು ತಮ್ಮ ಜನ್ಮಭೂವಿುಯಾದ ಬಾಬೆಲಿನ ಕಸ್ದೀಯರೇ ಆಗಿ ಕಂಡು ಬರುವ ಮನುಷ್ಯರ ಆಕಾರಗಳು


ಹೀಗಿರಲು, ಒಹೊಲೀಬಳೇ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ಯಾವ ವಿುಂಡರಿಂದ ನಿನ್ನ ಆಶೆ ತೊಲಗಿತೋ ಆ ವಿುಂಡರನ್ನು ಅಂದರೆ ಮನೋಹರ ಯುವಕರೂ ಯಾರೂ ತಪ್ಪದೆ ನಾಯಕೋಪನಾಯಕರೂ ಪ್ರಭುಪ್ರಧಾನರೂ ಅಶ್ವಾರೂಢರೂ ಆದ ಬಾಬೆಲಿನವರು,


ಆಮೇಲೆ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು