Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 23:26 - ಕನ್ನಡ ಸತ್ಯವೇದವು J.V. (BSI)

26 ನಿನ್ನ ವಸ್ತ್ರಗಳನ್ನು ಸೆಳೆದು ನಿನ್ನ ಚಂದದ ಒಡವೆಗಳನ್ನು ಕಳಚಿಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ನಿನ್ನ ವಸ್ತ್ರಗಳನ್ನು ತೆಗೆದುಹಾಕಿ, ನಿನ್ನ ಸುಂದರ ಒಡವೆಗಳನ್ನು ಕಸಿದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ನಿನ್ನ ವಸ್ತ್ರಗಳನ್ನು ಸೆಳೆದು, ನಿನ್ನ ಚಂದದ ಒಡವೆಗಳನ್ನು ಕಳಚಿಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ನಿನ್ನಲ್ಲಿರುವ ಉತ್ಕೃಷ್ಟವಾದ ಬಟ್ಟೆ, ಆಭರಣಗಳನ್ನೆಲ್ಲಾ ಸುಲುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ನಿನ್ನ ವಸ್ತ್ರಗಳನ್ನು ತೆಗೆದುಹಾಕಿ, ನಿನ್ನ ಸುಂದರ ಒಡವೆಗಳನ್ನು ಕಸಿದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 23:26
13 ತಿಳಿವುಗಳ ಹೋಲಿಕೆ  

ನಾನು ನಿನ್ನನ್ನು ಸುತ್ತಲಿನವರ ಕೈವಶಮಾಡುವೆನು; ಅವರು ನಿನ್ನ ದಿಬ್ಬವನ್ನು ಕೆಡವಿ ನಿನ್ನ ಜಗಲಿಗಳನ್ನು ಒಡೆದು ನಿನ್ನ ಬಟ್ಟೆಗಳನ್ನು ಕಿತ್ತು ನಿನ್ನ ಒಡವೆಗಳನ್ನು ಸುಲಿದುಕೊಂಡು ನಿನ್ನನ್ನು ಬಟ್ಟಬರಿದಾಗಿ ಬಿಟ್ಟುಹೋಗುವರು.


ಇವು ನನಗೆ ಏಕೆ ಸಂಭವಿಸಿದವು ಎಂದು ನೀನು ಮನದೊಳಗೆ ಅಂದುಕೊಂಡರೆ ನಿನ್ನ ನೆರಿಗೆಯು ಕೀಳಲ್ಪಟ್ಟು ನಿನ್ನ ಹಿಮ್ಮಡಿಯು ನಾಚಿಕೆಗೆ ಈಡಾದದ್ದಕ್ಕೆ ನಿನ್ನ ಮಹಾಪಾಪವೇ ಕಾರಣ ಎಂದು ನಿನಗೆ ಗೊತ್ತಾಗುವದು.


ಅವರು ನಿನ್ನಲ್ಲಿ ಹಗೆ ತೀರಿಸಿಕೊಂಡು ನೀನು ದುಡಿದದ್ದನ್ನೆಲ್ಲಾ ಅಪಹರಿಸಿ ನಿನ್ನನ್ನು ಬಟ್ಟಬರಿದುಮಾಡಿ ಬಿಟ್ಟುಬಿಡುವರು; ಹೀಗೆ ನಾಚಿಕೆಗೀಡಾದ ನಿನ್ನ ಸೂಳೆತನವು, ಹೌದು ನಿನ್ನ ಪುಂಡಾಟವೂ ಸೂಳೆತನವೂ ಬೈಲಿಗೆ ಬರುವವು.


ಇದಲ್ಲದೆ ಹತ್ತು ಕೊಂಬುಗಳನ್ನೂ ಮೃಗವನ್ನೂ ಕಂಡಿಯಲ್ಲ? ಇವುಗಳಿಂದ ಸೂಚಿತರಾದವರು ಆ ಜಾರಸ್ತ್ರೀಯನ್ನು ದ್ವೇಷಿಸಿ ಅವಳನ್ನು ಗತಿಗೆಟ್ಟವಳನ್ನಾಗಿಯೂ ಬಟ್ಟೆಯಿಲ್ಲದವಳನ್ನಾಗಿಯೂ ಮಾಡಿ ಅವಳ ಮಾಂಸವನ್ನು ತಿಂದು ಅವಳನ್ನು ಬೆಂಕಿಯಿಂದ ಸುಟ್ಟುಬಿಡುವರು.


ಇಲ್ಲವಾದರೆ ನಾನು ಅವಳ ಬಟ್ಟೆಯನ್ನು ಕಿತ್ತು ಅವಳನ್ನು ಹುಟ್ಟಿದಾಗ ಇದ್ದಂತೆ ಬೆತ್ತಲೆಯಾಗಿ ನಿಲ್ಲಿಸಿಬಿಟ್ಟು ಕಾಡನ್ನಾಗಿ ಮಾಡಿ ಮರುಭೂವಿುಯ ಸ್ಥಿತಿಗೆ ತಂದು ನೀರಡಿಕೆಯಿಂದ ಸಾಯಿಸುವೆನು;


ಇವುಗಳನ್ನು ನಾನು ನೋಡಿ ನೀನು ರವಿುಸಿದ ನಿನ್ನ ಎಲ್ಲಾ ವಿುಂಡರನ್ನೂ ನೀನು ಮೋಹಿಸಿದ ಸಮಸ್ತರನ್ನೂ ನೀನು ಹಗೆಮಾಡಿದ ಎಲ್ಲರೊಂದಿಗೆ ಸುತ್ತುಮುತ್ತಲು ನಿನಗೆ ವಿರುದ್ಧವಾಗಿ ಕೂಡಿಸಿ ಅವರ ಕಣ್ಣೆದುರಿಗೆ ನಿನ್ನನ್ನು ಬೆತ್ತಲೆಗೈದು ನಿನ್ನ ಮಾನವನ್ನು ಬಟ್ಟಬೈಲುಮಾಡುವೆನು.


ನೀನು ಪೂಜಾಸ್ಥಾನಗಳನ್ನು ಕಟ್ಟಿಕೊಂಡು ನಿನ್ನ ಚಿತ್ರವಿಚಿತ್ರ ವಸ್ತ್ರಗಳಿಂದ ಅವುಗಳನ್ನು ಅಲಂಕರಿಸಿ ಅಲ್ಲಿ ವ್ಯಭಿಚಾರನಡಿಸಿದಿ. (ಇದು ನಡೆಯತಕ್ಕದ್ದಲ್ಲ. ಆಗಬಾರದಾಗಿತ್ತು.)


ಇದಲ್ಲದೆ ಯೆಹೋವನು ಮುಂತಿಳಿಸಿದ ಪ್ರಕಾರ ಅವನು ಯೆಹೋವನ ಆಲಯದ ಮತ್ತು ಅರಮನೆಯ ಭಂಡಾರಗಳಲ್ಲಿದ್ದ ಎಲ್ಲಾ ದ್ರವ್ಯವನ್ನು ತೆಗೆದುಕೊಂಡುಹೋದನು. ಇಸ್ರಾಯೇಲ್ಯರ ಅರಸನಾದ ಸೊಲೊಮೋನನು ಯೆಹೋವನ ಆಲಯಕ್ಕಾಗಿ ಮಾಡಿಸಿದ್ದ ಬಂಗಾರದ ಎಲ್ಲಾ ಸಾಮಾನುಗಳನ್ನು ಮುರಿದುಬಿಟ್ಟನು.


ಆತನು - ನಿನ್ನ ಪೂರ್ವಿಕರ ಕಾಲದಿಂದ ಇಂದಿನವರೆಗೆ ಅರಮನೆಯಲ್ಲಿ ಸಂಗ್ರಹವಾದದ್ದೆಲ್ಲವೂ ಬಾಬೆಲಿಗೆ ಒಯ್ಯಲ್ಪಡುವ ದಿನ ಬರುವದು; ಇಲ್ಲೇನೂ ಉಳಿಯುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು