Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 23:28 - ಕನ್ನಡ ಸತ್ಯವೇದವು J.V. (BSI)

28 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಇಗೋ, ನೀನು ಯಾರನ್ನು ಹಗೆ ಮಾಡುತ್ತೀಯೋ ನಿನ್ನ ಆಶೆಯು ಯಾರಿಂದ ಹಿಂದಿರುಗಿತೋ ಅವರ ಕೈಗೆ ನಿನ್ನನ್ನು ನಾನು ಒಪ್ಪಿಸಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ನೀನು ಯಾರನ್ನು ಹಗೆಮಾಡುತ್ತೀಯೋ, ನಿನ್ನ ಆಶೆಯು ಯಾರಿಂದ ಹಿಂದಿರುಗಿತೋ ಅವರ ಕೈಗೆ ನಿನ್ನನ್ನು ನಾನು ಒಪ್ಪಿಸಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ಇಗೋ, ನೀನು ಯಾರನ್ನು ಹಗೆಮಾಡುತ್ತೀಯೋ ಯಾರ ಬಗ್ಗೆ ಅಸಹ್ಯಪಡುತ್ತಿಯೋ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ನನ್ನ ಒಡೆಯನಾದ ಯೆಹೋವನು ಇದನ್ನು ಹೇಳುತ್ತಾನೆ. “ನೀನು ದ್ವೇಷಿಸುವ ಜನರ ಕೈಗೆ ನಿನ್ನನ್ನು ಒಪ್ಪಿಸುವೆನು. ನೀನು ಜಿಗುಪ್ಸೆಗೊಂಡ ಜನರಿಗೆ ನಿನ್ನನ್ನು ಒಪ್ಪಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 “ಏಕೆಂದರೆ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ನೀನು ಹಗೆಮಾಡುವವರ ಕೈಯಲ್ಲಿಯೂ ಯಾರ ಕಡೆಯಿಂದ ನಿನ್ನ ಮನಸ್ಸು ಕುಂದಿಹೋಯಿತೋ ಅವರ ಕೈಯಲ್ಲಿಯೂ ನಿನ್ನನ್ನು ಒಪ್ಪಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 23:28
6 ತಿಳಿವುಗಳ ಹೋಲಿಕೆ  

ಹೀಗಿರಲು, ಒಹೊಲೀಬಳೇ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ಯಾವ ವಿುಂಡರಿಂದ ನಿನ್ನ ಆಶೆ ತೊಲಗಿತೋ ಆ ವಿುಂಡರನ್ನು ಅಂದರೆ ಮನೋಹರ ಯುವಕರೂ ಯಾರೂ ತಪ್ಪದೆ ನಾಯಕೋಪನಾಯಕರೂ ಪ್ರಭುಪ್ರಧಾನರೂ ಅಶ್ವಾರೂಢರೂ ಆದ ಬಾಬೆಲಿನವರು,


ಆಗ ಬಾಬೆಲಿನವರು ಇವಳ ರತಿಮಂಚವನ್ನೇರಿ ತಮ್ಮ ಸೂಳೆಗಾರಿಕೆಯಿಂದ ಇವಳನ್ನು ಕೆಡಿಸಿದರು; ಇವಳು ಅವರಿಂದ ಹೊಲಸಾಗಲು ಇವಳ ಆಶೆಯು ಅವರಿಂದ ತೊಲಗಿತು.


ಇವುಗಳನ್ನು ನಾನು ನೋಡಿ ನೀನು ರವಿುಸಿದ ನಿನ್ನ ಎಲ್ಲಾ ವಿುಂಡರನ್ನೂ ನೀನು ಮೋಹಿಸಿದ ಸಮಸ್ತರನ್ನೂ ನೀನು ಹಗೆಮಾಡಿದ ಎಲ್ಲರೊಂದಿಗೆ ಸುತ್ತುಮುತ್ತಲು ನಿನಗೆ ವಿರುದ್ಧವಾಗಿ ಕೂಡಿಸಿ ಅವರ ಕಣ್ಣೆದುರಿಗೆ ನಿನ್ನನ್ನು ಬೆತ್ತಲೆಗೈದು ನಿನ್ನ ಮಾನವನ್ನು ಬಟ್ಟಬೈಲುಮಾಡುವೆನು.


ಇವರೆಲ್ಲರನ್ನೂ ಇವರ ಪ್ರಾಣವನ್ನು ಹುಡುಕುವ ಶತ್ರುಗಳ ಕೈಗೆ ಕೊಡುವೆನು; ಇವರ ಹೆಣಗಳು ಆಕಾಶಪಕ್ಷಿಗಳಿಗೂ ಭೂಜಂತುಗಳಿಗೂ ಆಹಾರವಾಗುವವು.


ಇದಲ್ಲದೆ ಯೆಹೋವನು ಇಂತೆನ್ನುತ್ತಾನೆ - ಯೆಹೂದದ ಅರಸನಾದ ಚಿದ್ಕೀಯ, ಅವನ ಪ್ರಧಾನರು, ಈ ದೇಶದಲ್ಲಿ ನಿಂತಿರುವ ಯೆರೂಸಲೇವಿುನವರ ಶೇಷ, ಐಗುಪ್ತದೇಶಕ್ಕೆ ವಲಸೆಯಾದವರು, ಇವರೆಲ್ಲರನ್ನು ಕೆಟ್ಟು ಯಾರೂ ತಿನ್ನದ ಹಾಗೆ ಕೇವಲ ಅಸಹ್ಯವಾದ ಅಂಜೂರದ ಹಣ್ಣುಗಳ ಗತಿಗೆ ತರುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು