ಯೆಹೆಜ್ಕೇಲನು 23:37 - ಕನ್ನಡ ಸತ್ಯವೇದವು J.V. (BSI)37 ಅವರು ವ್ಯಭಿಚಾರಿಣಿಯರು, ಅವರ ಕೈ ರಕ್ತವಾಗಿದೆ, ತಮ್ಮ ಬೊಂಬೆಗಳಿಂದ ವ್ಯಭಿಚಾರಮಾಡಿದ್ದಾರೆ, ನನಗೆ ಹೆತ್ತ ತಮ್ಮ ಗಂಡುಮಕ್ಕಳನ್ನು ಆ ಬೊಂಬೆಗಳಿಗೆ ಬಲಿಯಾಗಿ ಆಹುತಿಕೊಟ್ಟಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಅವರು ವ್ಯಭಿಚಾರ ಮಾಡಿದ್ದಾರೆ, ಅವರ ಕೈ ರಕ್ತಮಯವಾಗಿದೆ, ತಮ್ಮ ವಿಗ್ರಹಗಳಿಂದ ವ್ಯಭಿಚಾರಮಾಡಿದ್ದಾರೆ, ತಮ್ಮ ಗಂಡು ಮಕ್ಕಳನ್ನು ಆ ವಿಗ್ರಹಗಳಿಗೆ ಬದಲಾಗಿ ಆಹುತಿಕೊಟ್ಟಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ಅವರು ವ್ಯಭಿಚಾರಿಣಿಯರು, ಅವರ ಕೈ ರಕ್ತಸಿಕ್ತವಾಗಿದೆ, ತಮ್ಮ ವಿಗ್ರಹಗಳಿಂದ ವ್ಯಭಿಚಾರ ಮಾಡಿದ್ದಾರೆ, ನನಗೆ ಹೆತ್ತ ತಮ್ಮ ಗಂಡುಮಕ್ಕಳನ್ನು ಆ ವಿಗ್ರಹಗಳಿಗೆ ಬಲಿಯಾಗಿ ಆಹುತಿಕೊಟ್ಟಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ಅವರು ವ್ಯಭಿಚಾರ ಮಾಡಿದ್ದಾರೆ. ಅವರು ಕೊಲೆ ಮಾಡಿರುತ್ತಾರೆ. ಅವರು ಸೂಳೆಯಂತೆ ವರ್ತಿಸಿದ್ದಾರೆ. ಅವರು ತಮ್ಮ ಹೊಲಸು ವಿಗ್ರಹಗಳೊಂದಿಗೆ ಇರಲು ನನ್ನನ್ನು ತೊರೆದುಬಿಟ್ಟಿದ್ದಾರೆ. ಅವರಲ್ಲಿ ನನ್ನ ಮಕ್ಕಳು ಇದ್ದಾರೆ. ಆದರೆ ಅವರನ್ನು ಬಲವಂತದಿಂದ ಬೆಂಕಿಯ ಮೇಲೆ ದಾಟಿಸಿದರು. ತಮ್ಮ ಹೊಲಸು ವಿಗ್ರಹಗಳಿಗೆ ಆಹಾರ ಕೊಡುವಂತೆ ಅವರು ಹಾಗೆ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಅವರು ವ್ಯಭಿಚಾರ ಮಾಡಿದ್ದಾರೆ, ರಕ್ತವು ಅವರ ಕೈಗಳಲ್ಲಿ ಇದೆ: ತಮ್ಮ ವಿಗ್ರಹಗಳಿಂದ ವ್ಯಭಿಚಾರ ಮಾಡಿದ್ದಾರೆ. ನನಗೆ ಹೆತ್ತ ತಮ್ಮ ಗಂಡು ಮಕ್ಕಳನ್ನು ಆ ವಿಗ್ರಹಗಳಿಗೆ ಬಲಿಯಾಗಿ ಕೊಟ್ಟಿದ್ದಾರೆ. ಅಧ್ಯಾಯವನ್ನು ನೋಡಿ |