ಯೆಹೆಜ್ಕೇಲನು 23:38 - ಕನ್ನಡ ಸತ್ಯವೇದವು J.V. (BSI)38 ಇದಲ್ಲದೆ ನನಗೆ ಈ ಅಪರಾಧವನ್ನು ನಡಿಸಿದ್ದಾರೆ; ಆಹುತಿಕೊಟ್ಟ ದಿನದಲ್ಲೇ ನನ್ನ ಪವಿತ್ರಾಲಯವನ್ನು ಅಪವಿತ್ರಪಡಿಸಿ ನಾನು ನೇವಿುಸಿದ ಸಬ್ಬತ್ ದಿನವನ್ನು ಹೊಲಸುಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಇದನ್ನು ಮಾಡಿದ ದಿನದಲ್ಲೇ ನನ್ನ ಪವಿತ್ರಾಲಯವನ್ನು ಅಪವಿತ್ರ ಪಡಿಸಿ, ನಾನು ನೇಮಿಸಿದ ಸಬ್ಬತ್ ದಿನವನ್ನು ಅಪವಿತ್ರ ಮಾಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ಇದಲ್ಲದೆ, ನನಗೆ ಈ ಅಪರಾಧವನ್ನು ನಡೆಸಿದ್ದಾರೆ: ಆಹುತಿಕೊಟ್ಟ ದಿನದಲ್ಲೇ ನನ್ನ ಪವಿತ್ರಾಲಯವನ್ನು ಅಪವಿತ್ರಪಡಿಸಿ, ನಾನು ನೇಮಿಸಿದ ಸಬ್ಬತ್ ದಿನವನ್ನು ಅಶುದ್ಧ ಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 ಅಲ್ಲದೆ ನನ್ನ ಪವಿತ್ರ ಆಲಯವನ್ನೂ ನನ್ನ ಪವಿತ್ರವಾದ ವಿಶೇಷ ವಿಶ್ರಾಂತಿ ದಿವಸಗಳನ್ನೂ ಆಲಕ್ಷ್ಯ ಮಾಡಿ ಅದಕ್ಕೆ ಮಹತ್ವವನ್ನು ಕೊಡದೆ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 ಇದನ್ನು ಮಾಡಿದ ದಿನದಲ್ಲಿಯೇ ನನ್ನ ಪರಿಶುದ್ಧ ಸ್ಥಳವನ್ನು ಅಪವಿತ್ರಪಡಿಸಿ ನನ್ನ ವಿಶ್ರಾಂತಿಯ ದಿನಗಳನ್ನು ಕೆಡಿಸಿದ್ದಾರೆ. ಅಧ್ಯಾಯವನ್ನು ನೋಡಿ |