Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 23:44 - ಕನ್ನಡ ಸತ್ಯವೇದವು J.V. (BSI)

44 ಸೂಳೆಯನ್ನು ಸೇರುವ ಹಾಗೆ ಈ ಜನರು ಅವಳನ್ನು ಸೇರಿದರು; ಹೌದು, ಕೆಟ್ಟ ಹೆಂಗಸರಾದ ಒಹೊಲಳನ್ನೂ ಒಹೊಲೀಬಳನ್ನೂ ಸೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ವ್ಯಭಿಚಾರಿಯನ್ನು ಸೇರುವ ಹಾಗೆ ಈ ಜನರು ಅವಳನ್ನು ಸೇರಿದರು; ಹೌದು, ಕೆಟ್ಟ ಹೆಂಗಸರಾದ ಒಹೊಲಳನ್ನೂ ಮತ್ತು ಒಹೊಲೀಬಳನ್ನೂ ಸೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

44 ಸೂಳೆಯನ್ನು ಸೇರುವ ಹಾಗೆ ಈ ಜನರು ಅವಳನ್ನು ಸೇರಿದರು; ಹೌದು, ಕೆಟ್ಟಹೆಂಗಸರಾದ ಒಹೊಲಳನ್ನೂ ಒಹೊಲೀಬಳನ್ನೂ ಸೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 ಆದರೆ ಅವರು ಒಬ್ಬ ವೇಶ್ಯೆಯ ಬಳಿಗೆ ಹೋಗುವಂತೆಯೇ ಅವರ ಬಳಿಗೆ ಹೋದರು. ಹೌದು ಒಹೊಲ ಮತ್ತು ಒಹೊಲೀಬ ಎಂಬ ಕಾಮುಕ ಸ್ತ್ರೀಯರ ಬಳಿಗೆ ಅವರು ತಿರುಗಿ ಮತ್ತೆಮತ್ತೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 ಆದರೂ ವ್ಯಭಿಚಾರಿಣಿಯನ್ನು ಸೇರುವ ಹಾಗೆ ಅವರು ಅವಳನ್ನು ಸೇರಿದರು. ಹಾಗೆಯೇ ದುಷ್ಕರ್ಮಿ ಸ್ತ್ರೀಯರಾದ ಒಹೊಲಳ ಬಳಿಗೂ ಒಹೊಲೀಬಳ ಬಳಿಗೂ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 23:44
6 ತಿಳಿವುಗಳ ಹೋಲಿಕೆ  

ಅವರು ಐಗುಪ್ತದಲ್ಲಿ ಸೂಳೆತನ ಮಾಡುತ್ತಿದ್ದರು, ಬಾಲ್ಯದಲ್ಲೇ ಸೂಳೆಯರಾಗಿ ನಡೆಯುತ್ತಿದ್ದರು; ಅಲ್ಲಿ ಅವರ ಸ್ತನಗಳು ಹಿಸಕಲ್ಪಟ್ಟವು, ಎಳೆಯ ತೊಟ್ಟುಗಳು ನಸುಕಲ್ಪಟ್ಟವು.


ಅವರ ಹೆಸರುಗಳೇನಂದರೆ, ಒಹೊಲ ಎಂಬದು ಅಕ್ಕನದು, ಒಹೊಲೀಬ ಎಂಬದು ತಂಗಿಯದು; ಅವರು ನನ್ನ ಹೆಂಡರಾಗಿ ಗಂಡುಹೆಣ್ಣುಮಕ್ಕಳನ್ನು ಹೆತ್ತರು. (ಒಹೊಲ ಎಂಬದು ಸಮಾರ್ಯವನ್ನೂ, ಒಹೊಲೀಬ ಎಂಬದು ಯೆರೂಸಲೇಮನ್ನೂ ಸೂಚಿಸತಕ್ಕ ಹೆಸರುಗಳಾಗಿವೆ.)


ಆಗ ನಾನು - ಆಹಾ, ಕಳೆಗುಂದಿದವಳಿಗೆ ಇನ್ನೂ ವ್ಯಭಿಚಾರವೇ! ಇವರು ಅವಳೊಂದಿಗೆ ಅವಳು ಇವರೊಂದಿಗೆ ಜಾರತನ ಮಾಡುತ್ತಾರಲ್ಲಾ ಅಂದುಕೊಂಡೆನು.


ಸದ್ಧರ್ಮಿಗಳು ಅವರಿಗೆ ನ್ಯಾಯತೀರಿಸಿ ವ್ಯಭಿಚಾರಿಣಿಯರಿಗೂ ರಕ್ತಸುರಿಸುವ ಹೆಂಗಸರಿಗೂ ತಕ್ಕ ದಂಡನೆಯನ್ನು ಅವರಿಗೆ ವಿಧಿಸುವರು; ಅವರು ವ್ಯಭಿಚಾರಿಣಿಯರು, ಅವರ ಕೈ ರಕ್ತವಾಗಿದೆ.


ಭ್ರಷ್ಟಳಾದ ಇಸ್ರಾಯೇಲು ಹಾದರಮಾಡಿದ ಕಾರಣದಿಂದಲೇ ನಾನು ಅವಳನ್ನು ನಿರಾಕರಿಸಿ ತ್ಯಾಗಪತ್ರ ಕೊಟ್ಟದ್ದನ್ನು ಯೆಹೂದವೆಂಬ ದ್ರೋಹಿಯಾದ ಅವಳ ತಂಗಿಯು ನೋಡಿಯೂ ಅಂಜದೆ ತಾನೂ ಹೋಗಿ ಸೂಳೆತನವನ್ನು ನಡಿಸಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು