Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 23:46 - ಕನ್ನಡ ಸತ್ಯವೇದವು J.V. (BSI)

46 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ಈ ಹೆಂಗಸರ ದಂಡನೆಗಾಗಿ ಸಭೆಯನ್ನು ಕೂಡಿಸಿ ಇವರನ್ನು ಸೂರೆಗೆ ಸಿಕ್ಕಿಸಿ ಎಲ್ಲರಿಗೂ ಭಯಾಸ್ಪದವಾಗುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಈ ಹೆಂಗಸರ ವಿರುದ್ಧವಾಗಿ ಸಭೆಯನ್ನು ಸೇರಿಸಿ, ಇವರನ್ನು ಸೂರೆಗೆ ಸಿಕ್ಕಿಸಿ, ಎಲ್ಲರಿಗೂ ಭಯಾಸ್ಪದವಾಗುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

46 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ನಾನು ಈ ಹೆಂಗಸರ ದಂಡನೆಗಾಗಿ ಸಭೆಯನ್ನು ಸೇರಿಸುವೆನು. ಇವರನ್ನು ಸೂರೆಗೆ ಒಳಗಾಗಿಸಿ ಎಲ್ಲರಿಗೂ ಭಯಾಸ್ಪದವಾಗುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

46 ನನ್ನ ಒಡೆಯನಾದ ಯೆಹೋವನು ನನಗೆ ಹೀಗೆ ಹೇಳಿದನು, “ಜನರನ್ನು ಒಟ್ಟುಗೂಡಿಸು. ಅವರು ಒಟ್ಟಾಗಿ ಸೇರಿ ಒಹೊಲ ಮತ್ತು ಒಹೊಲೀಬರನ್ನು ಶಿಕ್ಷಿಸಲಿ. ಆ ಜನರು ಈ ಸ್ತ್ರೀಯರನ್ನು ಶಿಕ್ಷಿಸಿ ಗೇಲಿ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

46 “ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಅವರಿಗೆ ವಿರೋಧವಾಗಿ ಸಂಘವನ್ನು ಕೂಡಿಸಿ, ಅವರನ್ನು ಸೂರೆಗೂ ಹೆದರಿಕೆಗೂ ಒಪ್ಪಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 23:46
9 ತಿಳಿವುಗಳ ಹೋಲಿಕೆ  

ಅವರು ನಿನ್ನ ವಿಚಾರವಾಗಿ ನ್ಯಾಯಸಭೆಯನ್ನು ಕೂಡಿಸಿ ನಿನ್ನನ್ನು ಕಲ್ಲೆಸೆದು ಕೊಲ್ಲುವರು, ಕತ್ತಿಗಳಿಂದ ಹತಿಸುವರು.


ಅವರ ಕೇಡಿಗಾಗಿ ನಾನು ಅವರನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು; ನಾನು ಅವರನ್ನು ಅಟ್ಟಿಬಿಡುವ ಸ್ಥಳಗಳಲ್ಲೆಲ್ಲಾ ಅವರು ನಿಂದೆ, ಕಟ್ಟುಗಾದೆ, ಪರಿಹಾಸ್ಯ, ಶಾಪ, ಇವುಗಳಿಗೆ ಗುರಿಯಾಗುವರು.


ಹಿಜ್ಕೀಯನ ಮಗನೂ ಯೆಹೂದದ ಅರಸನೂ ಆದ ಮನಸ್ಸೆಯು ಯೆರೂಸಲೇವಿುನಲ್ಲಿ ನಡಿಸಿದ್ದಕ್ಕೆ ಪ್ರತಿಫಲವಾಗಿ ನಾನು ಅವರನ್ನು ಲೋಕದ ಸಮಸ್ತರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು.


ಆದಕಾರಣ ಯೆಹೋವನು ಇಂತೆನ್ನುತ್ತಾನೆ - ನೀವು ನನ್ನನ್ನು ಕೇಳಲಿಲ್ಲ, ನಿಮ್ಮ ನಿಮ್ಮ ಸಹೋದರರಿಗೂ ನೆರೆಹೊರೆಯವರಿಗೂ ಬಿಡುಗಡೆಯನ್ನು ಪ್ರಕಟಿಸಲಿಲ್ಲ; ಇದೇ ಯೆಹೋವನ ನುಡಿ - ಇಗೋ, ನಾನು ನಿಮಗೆ ಬಿಡುಗಡೆಯನ್ನು ಪ್ರಕಟಿಸುತ್ತೇನೆ; ನಿಮ್ಮನ್ನು ಖಡ್ಗವ್ಯಾಧಿಕ್ಷಾಮಗಳಿಗೆ ಗುರಿಯಾಗುವಂತೆ ಬಿಡುತ್ತೇನೆ; ನಿಮ್ಮನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು.


ಇಗೋ, ನಾನು ಬಡಗಣ ಜನಾಂಗಗಳನ್ನೆಲ್ಲಾ ಕರೆಯಿಸಿ ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನನ್ನು ಬರಮಾಡಿ ಇವರೆಲ್ಲರನ್ನು ಈ ದೇಶದ ಮೇಲೂ ಇದರ ನಿವಾಸಿಗಳ ಮೇಲೂ ಸುತ್ತಲಿನ ಸಕಲ ಜನಾಂಗಗಳ ಮೇಲೂ ಬೀಳಿಸಿ ಅವುಗಳನ್ನು ತುಂಬಾ ಹಾಳುಗೈದು ಬೆರಗಿನ ಸಿಳ್ಳಿಗೆ ಗುರಿಪಡಿಸಿ ನಿತ್ಯನಾಶನಕ್ಕೆ ಈಡುಮಾಡುವೆನು.


ನೀವು ಶತ್ರುಗಳಿಂದ ಪರಾಜಯವನ್ನು ಹೊಂದುವಂತೆ ಯೆಹೋವನು ಮಾಡುವನು; ನೀವು ಒಂದೇ ದಾರಿಯಿಂದ ಅವರೆದುರಿಗೆ ಹೋಗಿ ಏಳು ದಾರಿಗಳಿಂದ ಓಡಿಹೋಗುವಿರಿ. ಲೋಕದ ಎಲ್ಲಾ ರಾಜ್ಯಗಳವರೂ ಇದನ್ನು ಕಂಡು ಬೆರಗಾಗುವರು.


ನಾನು ಖಡ್ಗಕ್ಷಾಮವ್ಯಾಧಿಗಳಿಂದ ಅವರನ್ನು ಹಿಂದಟ್ಟುತ್ತಾ ಲೋಕದ ಸಮಸ್ತರಾಜ್ಯಗಳಿಗೆ ಭಯಾಸ್ಪದವಾಗುವಂತೆಯೂ ನಾನು ಅವರನ್ನು ಅಟ್ಟಿಬಿಟ್ಟಿರುವ ಸಕಲ ಜನಾಂಗಗಳಲ್ಲಿ ಶಾಪ, ಬೆರಗಿನ ಸಿಳ್ಳು, ದೂಷಣೆ, ಇವುಗಳಿಗೆ ಗುರಿಯಾಗುವಂತೆಯೂ ಮಾಡುವೆನು.


ಬೈಲಿನ ನನ್ನ ಪರ್ವತದ ಜನರೇ, ನಿಮ್ಮ ಸಕಲ ಪ್ರಾಂತಗಳಲ್ಲಿ ನೀವು ಮಾಡಿದ ಪಾಪದ ನಿವಿುತ್ತ ನಾನು ನಿಮ್ಮ ಎಲ್ಲಾ ಸೊತ್ತು ಸಂಪತ್ತುಗಳನ್ನೂ ಪೂಜಾಸ್ಥಳಗಳನ್ನೂ ಸೂರೆಗೆ ಈಡುಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು