Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 23:48 - ಕನ್ನಡ ಸತ್ಯವೇದವು J.V. (BSI)

48 ಹೀಗೆ ನಾನು ದೇಶದೊಳಗಿಂದ ಪುಂಡಾಟವನ್ನು ತೊಲಗಿಸುವೆನು; ಇದರಿಂದ ಸಮಸ್ತ ಸ್ತ್ರೀಯರಿಗೂ ನಿಮ್ಮ ಪುಂಡಾಟವನ್ನು ಅನುಸರಿಸಬಾರದೆಂದು ಬುದ್ಧಿಬರುವದು. ನಿಮ್ಮ ಪುಂಡಾಟದ ಫಲವನ್ನು ನಿಮಗೆ ತಿನ್ನಿಸುವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

48 “ಹೀಗೆ ನಾನು ದೇಶದೊಳಗಿಂದ ದುಷ್ಕರ್ಮವನ್ನು ತೊಲಗಿಸುವೆನು; ಇದರಿಂದ ಸಮಸ್ತ ಸ್ತ್ರೀಯರಿಗೂ ನಿಮ್ಮ ದುಷ್ಕರ್ಮವನ್ನು ಅನುಸರಿಸಬಾರದೆಂದು ಬುದ್ಧಿ ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

48 ಹೀಗೆ ನಾನು ನಾಡಿನೊಳಗಿಂದ ಲಂಪಟತನವನ್ನು ತೊಲಗಿಸುವೆನು; ಇದರಿಂದ ಸಮಸ್ತ ಮಹಿಳೆಯರಿಗೂ ನಿಮ್ಮ ಲಂಪಟತನವನ್ನೂ ಅನುಸರಿಸಬಾರದೆಂಬ ಬುದ್ಧಿ ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

48 ಈ ರೀತಿ, ನಾನು ಅವರ ಅವಮಾನಕರವಾದ ನಡತೆಯನ್ನು ದೇಶದಿಂದ ತೆಗೆದುಹಾಕುವೆನು. ಬೇರೆ ಸ್ತ್ರೀಯರು ಇಂಥಾ ನಾಚಿಕೆಗೆಟ್ಟ ಕೆಲಸ ಮಾಡಬಾರದೆಂದು ಎಚ್ಚರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

48 “ಹೀಗೆ ಸ್ತ್ರೀಯರೆಲ್ಲರೂ ನಿಮ್ಮ ದುಷ್ಕರ್ಮದ ಪ್ರಕಾರ ಮಾಡದಿರಲೆಂದು ಅವರಿಗೆ ಬೋಧಿಸಿ ದೇಶದೊಳಗಿಂದ ದುಷ್ಕರ್ಮವನ್ನು ತೆಗೆದುಹಾಕುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 23:48
15 ತಿಳಿವುಗಳ ಹೋಲಿಕೆ  

ಆತನು ಸೊದೋಮ್‍ಗೊಮೋರ ಪಟ್ಟಣಗಳನ್ನು ಸುಟ್ಟು ಬೂದಿಮಾಡಿ ಮುಂದೆ ಭಕ್ತಿಹೀನರಾಗಿ ಬದುಕುವವರ ಗತಿ ಇಂಥದೆಂದು ಸೂಚಿಸುವದಕ್ಕಾಗಿ ಅವುಗಳಿಗೆ ನಾಶನವನ್ನು ವಿಧಿಸಿದನು.


ಹೀಗೆ ನಾನು ನಿನ್ನ ಪುಂಡಾಟವನ್ನೂ ನೀನು ಐಗುಪ್ತದಲ್ಲಿದ್ದಂದಿನಿಂದ ನಡೆದು ಬಂದ ನಿನ್ನ ಸೂಳೆತನವನ್ನೂ ನಿನ್ನಿಂದ ತೊಲಗಿಸುವೆನು; ಆಮೇಲೆ ನೀನು ಅವರ ಕಡೆಗೆ ಇನ್ನು ಕಣ್ಣೆತ್ತದೆ ಐಗುಪ್ತವನ್ನು ಜ್ಞಾಪಕಕ್ಕೆ ತಾರದೆ ಇರುವಿ.


ನಿನ್ನ ಮನೆಗಳನ್ನು ಬೆಂಕಿಯಿಂದ ಸುಡುವರು; ಬಹುಮಂದಿ ಹೆಂಗಸರ ಕಣ್ಣೆದುರಿನಲ್ಲಿ ನಿನ್ನನ್ನು ದಂಡಿಸುವರು; ನೀನು ನಿನ್ನ ಸೂಳೆತನವನ್ನು ನಿಲ್ಲಿಸಿಬಿಡುವಂತೆ ನಾನು ಮಾಡುವೆನು; ನೀನು [ನಿನ್ನ ವಿುಂಡರಿಗೆ] ಇನ್ನು ಹಣಕೊಡದಿರುವಿ.


ನೀವು ವಾಸಿಸುವ ದೇಶದಲ್ಲೆಲ್ಲಾ ಊರುಗಳು ಹಾಳಾಗುವದರಿಂದಲೂ ಪೂಜಾಸ್ಥಳಗಳು ಪಾಳು ಬೀಳುವದರಿಂದಲೂ ನಿಮ್ಮ ಯಜ್ಞವೇದಿಗಳು ಹಾಳುಪಾಳಾಗುವವು, ನಿಮ್ಮ ಬೊಂಬೆಗಳು ಒಡೆಯಲ್ಪಟ್ಟು ಇಲ್ಲವಾಗುವವು, ನಿಮ್ಮಸೂರ್ಯಸ್ತಂಭಗಳು ಕಡಿಯಲ್ಪಡುವವು, ನೀವು ರೂಪಿಸಿದ ವಿಗ್ರಹಗಳು ಅಳಿದುಹೋಗುವವು,


ಜನಪಶುಗಳನ್ನೂ ಆಕಾಶದ ಪಕ್ಷಿಗಳನ್ನೂ ಸಮುದ್ರದ ಮೀನುಗಳನ್ನೂ ನಾಶಪಡಿಸುವೆನು; ವಿಗ್ರಹಗಳೆಂಬ ವಿಘ್ನಗಳನ್ನೂ ಅವುಗಳಿಗೆ ಎಡವುವ ದುಷ್ಟರನ್ನೂ ಸಂಹರಿಸುವೆನು; ಭೂವಿುಯ ಮೇಲಿಂದ ನರಸಂತಾನವನ್ನು ಕಿತ್ತುಹಾಕುವೆನು; ಇದು ಯೆಹೋವನ ನುಡಿ.


ನಾನು ನಿಮ್ಮ ಮೇಲೆ ನಿರ್ಮಲೋದಕವನ್ನು ಪ್ರೋಕ್ಷಿಸಲು ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ ಸಕಲವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.


ನಾನು ನಿನ್ನನ್ನು ಜನಾಂಗಗಳಲ್ಲಿ ಚದರಿಸಿ ದೇಶದೇಶಗಳಿಗೆ ತೂರಿಬಿಟ್ಟು ನಿನ್ನ ಹೊಲಸನ್ನು ನಿನ್ನೊಳಗಿಂದ ತೆಗೆದು ನಾಶಮಾಡುವೆನು.


ನಾನು ಕೋಪದಿಂದಲೂ ರೋಷದಿಂದಲೂ ಕಠಿನವಾದ ಖಂಡನೆಯಿಂದಲೂ ನಿನಗೆ ಮಾಡುವ ದಂಡನೆಗಳು ಸುತ್ತಲಿನ ಜನಾಂಗಗಳ ದೂಷಣಪರಿಹಾಸಗಳಿಗೂ ಬುದ್ಧಿವಾದಾಶ್ಚರ್ಯಗಳಿಗೂ ಆಸ್ಪದವಾಗುವವು; ಇದು ಯೆಹೋವನಾದ ನನ್ನ ನುಡಿ.


ರಾತ್ರಿಯಲ್ಲಿ ನಿನ್ನನ್ನು ಮನಃಪೂರ್ವಕವಾಗಿ ಹಾರೈಸಿದ್ದೇವೆ, ಹೌದು, ನಮ್ಮ ಆತ್ಮದಲ್ಲಿ ನಿನ್ನನ್ನು ತವಕದಿಂದ ಹುಡುಕಿದ್ದೇವೆ. ನೀನು ಲೋಕದಲ್ಲಿ ನ್ಯಾಯಕಾರ್ಯಗಳನ್ನು ನಡಿಸುವಾಗ ಭೂನಿವಾಸಿಗಳು ಧರ್ಮಜ್ಞಾನವನ್ನು ಪಡೆದುಕೊಳ್ಳುವರು.


ಇದನ್ನು ಇಸ್ರಾಯೇಲ್ಯರೆಲ್ಲರೂ ಕೇಳಿ ಭಯಪಟ್ಟು ಅಂಥ ದುಷ್ಕಾರ್ಯವನ್ನು ಅಲ್ಲಿಂದ ಮುಂದೆ ಮಾಡದೆ ಇರುವರು.


ಸಭೆಯವರು ಇವರ ಮೇಲೆ ಕಲ್ಲೆಸೆದು ಕತ್ತಿಗಳಿಂದ ಇವರನ್ನು ಸಂಹರಿಸಿ ಇವರ ಗಂಡು ಹೆಣ್ಣುಮಕ್ಕಳನ್ನು ಕೊಂದು ಇವರ ಮನೆಗಳನ್ನು ಬೆಂಕಿಯಿಂದ ಸುಟ್ಟುಬಿಡುವರು.


ನಿಮ್ಮ ಬೊಂಬೆಗಳಿಂದಾದ ನಿಮ್ಮ ಪಾಪವನ್ನು ನೀವು ಅನುಭವಿಸಿ ನಾನೇ ಕರ್ತನಾದ ಯೆಹೋವನು ಎಂದು ತಿಳಿದುಕೊಳ್ಳುವಿರಿ.


ನಿಮ್ಮ ದೇವರಾದ ಯೇಹೋವನು ನಿಮ್ಮ ನಿವಾಸಕ್ಕಾಗಿ ಕೊಡುವ ಯಾವದಾದರೂ ಒಂದು ಊರಿನ ವಿಷಯದಲ್ಲಿ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು