Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 23:49 - ಕನ್ನಡ ಸತ್ಯವೇದವು J.V. (BSI)

49 ನಿಮ್ಮ ಬೊಂಬೆಗಳಿಂದಾದ ನಿಮ್ಮ ಪಾಪವನ್ನು ನೀವು ಅನುಭವಿಸಿ ನಾನೇ ಕರ್ತನಾದ ಯೆಹೋವನು ಎಂದು ತಿಳಿದುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

49 ನಿಮ್ಮ ದುಷ್ಕರ್ಮದ ಫಲವನ್ನು ನಿಮಗೇ ತಿನ್ನಿಸುವರು; ನಿಮ್ಮ ವಿಗ್ರಹಗಳಿಂದಾದ ನಿಮ್ಮ ಪಾಪವನ್ನು ನೀವು ಅನುಭವಿಸುವಿರಿ. ನಾನೇ ಕರ್ತನಾದ ಯೆಹೋವನು” ಎಂದು ತಿಳಿದುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

49 ನಿಮ್ಮ ಲಂಪಟತನದ ಫಲವನ್ನು ನಿಮಗೇ ತಿನ್ನಿಸುವರು; ನಿಮ್ಮ ವಿಗ್ರಹಗಳಿಂದಾದ ನಿಮ್ಮ ಪಾಪದ ಫಲವನ್ನು ನೀವು ಅನುಭವಿಸಿ, ನಾನೇ ಸರ್ವೇಶ್ವರನಾದ ದೇವರು ಎಂದು ತಿಳಿದುಕೊಳ್ಳುವಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

49 ನಿನ್ನ ನಾಚಿಕೆಕರವಾದ ಕಾರ್ಯಗಳಿಗಾಗಿ ಅವರು ನಿನ್ನನ್ನು ಶಿಕ್ಷಿಸುವರು. ನೀನು ಅಸಹ್ಯವಾದ ವಿಗ್ರಹಗಳನ್ನು ಪೂಜೆಮಾಡಿದ್ದಕ್ಕೆ ಶಿಕ್ಷಿಸಲ್ಪಡುವಿ. ಆಗ ನಾನೇ ಒಡೆಯನೂ ಯೆಹೋವನೂ ಎಂದು ನೀನು ತಿಳಿಯುವಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

49 ನಿಮ್ಮ ದುಷ್ಕರ್ಮದ ಫಲವನ್ನು ನೀವೇ ಅನುಭವಿಸುವಂತೆ ಮಾಡುವೆ. ನೀವು ನಿಮ್ಮ ವಿಗ್ರಹಗಳ ಆರಾಧನೆಯಿಂದಾದ ಪಾಪಗಳನ್ನು ಹೊರುವಿರಿ. ಆಗ ಸಾರ್ವಭೌಮ ಯೆಹೋವ ದೇವರು ನಾನೇ ಎಂದು ತಿಳಿದುಕೊಳ್ಳುವಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 23:49
17 ತಿಳಿವುಗಳ ಹೋಲಿಕೆ  

ನಾನಂತು ಅವರನ್ನು ಕಟಾಕ್ಷಿಸೆನು, ಉಳಿಸೆನು, ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು ಎಂದು ಹೇಳಿದನು.


ನಿನ್ನನ್ನು ಕಟಾಕ್ಷಿಸೆನು, ಉಳಿಸೆನು; ನಿನ್ನ ದುರ್ಮಾರ್ಗಗಳ ಫಲವನ್ನು ನಿನಗೆ ತಿನ್ನಿಸುವೆನು; ನಿನ್ನ ಅಸಹ್ಯ ಕಾರ್ಯಗಳು ನಿನ್ನ ಅನುಭವಕ್ಕೆ ಬರುವವು; ಆಗ ನಾನೇ ಯೆಹೋವನು ಎಂದು ನಿನಗೆ ಗೊತ್ತಾಗುವದು.


ದ್ರೋಹಿಗಳಾದವರನ್ನು ನಿಮ್ಮೊಳಗಿಂದ ಗುಡಿಸಿಬಿಡುವೆನು; ಅವರು ಪ್ರವಾಸಿಗಳಾಗಿದ್ದ ದೇಶದಿಂದ ನಾನು ಅವರನ್ನು ಪಾರುಮಾಡಿದರೂ ಅವರು ಇಸ್ರಾಯೇಲ್ ದೇಶಕ್ಕೆ ಸೇರುವದೇ ಇಲ್ಲ ; ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು.


ನಿನ್ನನ್ನು ಕಟಾಕ್ಷಿಸೆನು, ಉಳಿಸೆನು, ನಿನ್ನ ದುರ್ಮಾರ್ಗಗಳಿಗೆ ತಕ್ಕ ಗತಿಯನ್ನು ಕೊಡುವೆನು, ನಿನ್ನ ಅಸಹ್ಯ ಕಾರ್ಯಗಳು ನಿನ್ನ ಅನುಭವಕ್ಕೆ ಬರುವವು; ಯೆಹೋವನಾದ ನಾನು ದಂಡಿಸುವವನು ಎಂಬದು ನಿನಗೆ ಗೊತ್ತೇ ಆಗುವದು.


ಹತರಾದವರು ನಿಮ್ಮ ಮಧ್ಯದಲ್ಲಿ ಬೀಳುವರು; ಆಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು.


ತನ್ನ ವಿರೋಧಿಗಳಲ್ಲಿಟ್ಟ ಕ್ರೋಧವನ್ನು ಈಡೇರಿಸಿ ತನ್ನ ಶತ್ರುಗಳಿಗೆ ದಂಡನೆಯನ್ನು ವಿಧಿಸಿ ಅವರವರ ಕೃತ್ಯಗಳಿಗೆ ತಕ್ಕಂತೆ ಮುಯ್ಯಿತೀರಿಸುವನು; ಕರಾವಳಿಯವರಿಗೂ ಪ್ರತಿಕ್ರಿಯೆಮಾಡುವನು.


ನಾನು ರಬ್ಬಾಪಟ್ಟಣವನ್ನು ಒಂಟೆಗಳಿಗೆ ಲಾಯವನ್ನಾಗಿಯೂ ಅಮ್ಮೋನ್ ಸೀಮೆಯನ್ನು ಹಿಂಡುಗಳಿಗೆ ರೊಪ್ಪವನ್ನಾಗಿಯೂ ಮಾಡುವೆನು; ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು.


ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನೀನು ನನ್ನನ್ನು ಬೆನ್ನ ಹಿಂದಕ್ಕೆ ಎಸೆದು ಮರೆತುಬಿಟ್ಟದ್ದರಿಂದ ನಿನ್ನ ಪುಂಡಾಟದ ಮತ್ತು ಸೂಳೆತನದ ಫಲವನ್ನು ನೀನೂ ಅನುಭವಿಸಬೇಕು.


ಆದಕಾರಣ ನಾನು ನನ್ನ ಕೋಪವನ್ನು ಅವರ ಮೇಲೆ ಸುರಿಸಿ ನನ್ನ ರೋಷಾಗ್ನಿಯಿಂದ ಅವರನ್ನು ಧ್ವಂಸಮಾಡಿ ಅವರ ದುರ್ನಡತೆಯನ್ನು ಅವರ ತಲೆಗೇ ಕಟ್ಟಿದ್ದೇನೆ; ಇದು ಕರ್ತನಾದ ಯೆಹೋವನ ನುಡಿ.


ಇಸ್ರಾಯೇಲ್ ವಂಶದವರೇ, ನಿಮ್ಮ ದುರ್ನಡತೆಗೂ ದುಷ್ಕೃತ್ಯಗಳಿಗೂ ತಕ್ಕ ಹಾಗೆ ನಾನು ನಿಮ್ಮನ್ನು ದಂಡಿಸದೆ ನನ್ನ ಹೆಸರಿನ ನಿವಿುತ್ತವೇ ನಾನು ನಿಮ್ಮನ್ನು ಸಹಿಸಿಕೊಂಡಿರುವಾಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು; ಇದು ಕರ್ತನಾದ ಯೆಹೋವನ ನುಡಿ.


ನಾನು ಪ್ರಮಾಣಮಾಡಿ ನಿಮ್ಮ ಪಿತೃಗಳಿಗೆ ಯಾವ ದೇಶವನ್ನು ಕೊಟ್ಟೆನೋ ಆ ಇಸ್ರಾಯೇಲ್ ದೇಶಕ್ಕೆ ನಿಮ್ಮನ್ನು ಬರಮಾಡುವಾಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು.


ನೀನು ನಿನ್ನ ಯೌವನಕಾಲವನ್ನು ಜ್ಞಾಪಕಮಾಡಿಕೊಳ್ಳದೆ ಈ ದುಷ್ಕೃತ್ಯಗಳನ್ನೆಲ್ಲಾ ನಡಿಸಿ ನನ್ನನ್ನು ರೇಗಿಸಿದ್ದರಿಂದ ಇಗೋ, ನಾನು ನಿನ್ನ ದುರ್ಮಾರ್ಗದ ಫಲವನ್ನು ನಿನ್ನ ತಲೆಗೆ ಕಟ್ಟುವೆನು; ನೀನು ಲೆಕ್ಕವಿಲ್ಲದ ದುರಾಚಾರಗಳನ್ನು ನಡಿಸಿದ್ದಲ್ಲದೆ ಈ ಅಸಹ್ಯ ಕಾರ್ಯವನ್ನೂ ಮಾಡಿದ್ದೀಯಲ್ಲಾ. ಇದು ಕರ್ತನಾದ ಯೆಹೋವನ ನುಡಿ.


ಆದರೆ ಯಾರ ಚಿತ್ತವು ತಮ್ಮ ಅಸಹ್ಯವಸ್ತುಗಳನ್ನೂ ಹೇಯವಿಗ್ರಹಗಳನ್ನೂ ಅನುಸರಿಸುತ್ತದೋ ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು. ಇದು ಕರ್ತನಾದ ಯೆಹೋವನ ನುಡಿ.


ಯೆಹೋವನು ನ್ಯಾಯತೀರಿಸುವವನಾಗಿ ತನ್ನನ್ನು ಪ್ರಕಟಿಸಿಕೊಂಡಿದ್ದಾನೆ; ದುಷ್ಟರು ತಾವೇ ಕಲ್ಪಿಸಿದ ಕುಯುಕ್ತಿಯಲ್ಲಿ ಸಿಕ್ಕಿಕೊಂಡಿದ್ದಾರಲ್ಲಾ. ಹಿಗ್ಗಾಯೋನ್ ಸೆಲಾ.


ಈಗ ನಿನ್ನ ದುರ್ನಡತೆಯ ಮತ್ತು ದುರಾಚಾರಗಳ ಫಲವನ್ನು ನೀನು ಅನುಭವಿಸಬೇಕಾಗಿ ಬಂತು. ಇದು ಯೆಹೋವನ ನುಡಿ.


ಹೀಗೆ ನಾನು ದೇಶದೊಳಗಿಂದ ಪುಂಡಾಟವನ್ನು ತೊಲಗಿಸುವೆನು; ಇದರಿಂದ ಸಮಸ್ತ ಸ್ತ್ರೀಯರಿಗೂ ನಿಮ್ಮ ಪುಂಡಾಟವನ್ನು ಅನುಸರಿಸಬಾರದೆಂದು ಬುದ್ಧಿಬರುವದು. ನಿಮ್ಮ ಪುಂಡಾಟದ ಫಲವನ್ನು ನಿಮಗೆ ತಿನ್ನಿಸುವರು;


[ಯೆಹೋಯಾಖೀನನು ಸೆರೆಯಾದ] ಒಂಭತ್ತನೆಯ ವರುಷದ ಹತ್ತನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು