Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 23:8 - ಕನ್ನಡ ಸತ್ಯವೇದವು J.V. (BSI)

8 ಅವಳು ಐಗುಪ್ತದಲ್ಲಿದ್ದಂದಿಂನಿಂದಲೂ ತನ್ನ ಸೂಳೆತನವನ್ನು ಬಿಡಲಿಲ್ಲ; ಅವಳ ಬಾಲ್ಯದಲ್ಲಿಯೇ ಅಲ್ಲಿನವರು ಅವಳೊಂದಿಗೆ ಮಲಗಿ ಅವಳ ಎಳೆಯ ತೊಟ್ಟುಗಳನ್ನು ನಸುಕಿ ಅವಳ ಸಂಗಡ ಸೂಳೆಗಾರಿಕೆಯನ್ನು ಹೆಚ್ಚೆಚ್ಚಾಗಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವಳು ಐಗುಪ್ತದಲ್ಲಿ ವಾಸಿಸುವ ದಿನದವರೆಗೂ ತನ್ನ ವ್ಯಭಿಚಾರವನ್ನು ಬಿಡಲಿಲ್ಲ; ಅವಳ ಬಾಲ್ಯದಲ್ಲಿಯೇ ಅಲ್ಲಿನವರು ಅವಳೊಂದಿಗೆ ಮಲಗಿ, ಅವಳ ಎಳೆಯ ತೊಟ್ಟುಗಳನ್ನು ಒತ್ತಿ, ಅವಳ ಸಂಗಡ ವ್ಯಭಿಚಾರಿಕೆಯನ್ನು ಹೆಚ್ಚೆಚ್ಚಾಗಿ ನಡೆಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅವಳು ಈಜಿಪ್ಟಿನಲ್ಲಿ ಇದ್ದಂದಿನಿಂದಲೂ ತನ್ನ ಸೂಳೆತನವನ್ನು ಬಿಡಲಿಲ್ಲ; ಬಾಲ್ಯದಲ್ಲಿಯೇ ಅಲ್ಲಿಯವರು ಅವಳೊಂದಿಗೆ ಮಲಗಿ, ಅವಳ ಎಳೆಯ ತೊಟ್ಟುಗಳನ್ನು ನಸುಕಿ, ಅವಳ ಸಂಗಡ ಸೂಳೆಗಾರಿಕೆಯನ್ನು ಹೆಚ್ಚೆಚ್ಚಾಗಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಇದರ ಜೊತೆಯಲ್ಲಿಯೇ ಈಜಿಪ್ಟಿನೊಂದಿಗೆ ತನ್ನ ಪ್ರಣಯ ಸಂಬಂಧವನ್ನು ಮುಂದುವರಿಸುತ್ತಿದ್ದಳು. ಆಕೆಯು ಇನ್ನೂ ಎಳೆಯ ಹುಡುಗಿಯಾಗಿದ್ದಾಗಲೇ ಈಜಿಪ್ಟ್ ಆಕೆಯೊಂದಿಗೆ ಸಂಭೋಗ ಮಾಡಿತ್ತು. ಅವಳ ಎಳೆ ಸ್ತನಗಳನ್ನು ಹಿಸುಕಿದವರಲ್ಲಿ ಮೊದಲನೆಯವರು ಈಜಿಪ್ಟಿನವರೇ. ಈಜಿಪ್ಟ್ ತನ್ನ ಅನೈತಿಕ ಪ್ರೀತಿಯನ್ನು ಆಕೆಯ ಮೇಲೆ ಸುರಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವಳು ಈಜಿಪ್ಟಿನಲ್ಲಿ ಇದ್ದಾಗಿನಿಂದಲೂ ವ್ಯಭಿಚಾರವನ್ನು ಬಿಡಲಿಲ್ಲ. ಅವಳ ಯೌವನದಲ್ಲಿ ಪುರುಷರು ಅವಳ ಸಂಗಡ ಮಲಗಿದರು. ಅವರೆಲ್ಲರೂ ಅವಳ ಕನ್ಯತ್ವದ ಸ್ತನಗಳನ್ನು ಒತ್ತಿ, ಅವಳ ಮೇಲೆ ವ್ಯಭಿಚಾರ ನಡೆಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 23:8
10 ತಿಳಿವುಗಳ ಹೋಲಿಕೆ  

ಆದರೂ ಇವಳು ತಾನು ಐಗುಪ್ತದೇಶದಲ್ಲಿ ಸೂಳೆಯಾಗಿದ್ದ ತನ್ನ ಎಳೆಪ್ರಾಯವನ್ನು ಜ್ಞಾಪಕಮಾಡಿಕೊಂಡು ತನ್ನ ಸೂಳೆತನವನ್ನು ಇನ್ನೂ ಹೆಚ್ಚಿಸಿ


ಅವರು ಐಗುಪ್ತದಲ್ಲಿ ಸೂಳೆತನ ಮಾಡುತ್ತಿದ್ದರು, ಬಾಲ್ಯದಲ್ಲೇ ಸೂಳೆಯರಾಗಿ ನಡೆಯುತ್ತಿದ್ದರು; ಅಲ್ಲಿ ಅವರ ಸ್ತನಗಳು ಹಿಸಕಲ್ಪಟ್ಟವು, ಎಳೆಯ ತೊಟ್ಟುಗಳು ನಸುಕಲ್ಪಟ್ಟವು.


ಅವನು ಆ ಚಿನ್ನವನ್ನು ತನ್ನ ವಶಕ್ಕೆ ತೆಗೆದುಕೊಂಡು ಬಸವನ ಆಕಾರವನ್ನು ಉಳಿಯಿಂದ ರೂಪಿಸಿ ಎರಕ ಹೊಯಿಸಲಾಗಿ ಅವರು - ಇಸ್ರಾಯೇಲ್ಯರೇ, ನೋಡಿರಿ; ಇದೇ ನಿಮ್ಮನ್ನು ಐಗುಪ್ತದೇಶದಿಂದ ಕರಕೊಂಡುಬಂದ ದೇವರು ಎಂದು ಹೇಳಿದರು.


ತಮ್ಮ ದೇವರಾದ ಯೆಹೋವನ ಆಜ್ಞೆಗಳನ್ನೆಲ್ಲಾ ಮೀರಿ ಎರಡು ಎರಕದ ಬಸವಮೂರ್ತಿಗಳು, ಅಶೇರವಿಗ್ರಹಸ್ತಂಭ ಇವುಗಳನ್ನು ಮಾಡಿಕೊಂಡರು; ಆಕಾಶಸೈನ್ಯ ಬಾಳ್‍ದೇವತೆ ಇವುಗಳನ್ನು ಪೂಜಿಸಿದರು;


ಆದರೂ ಅವನು ಇಸ್ರಾಯೇಲ್ಯರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಬೇತೇಲ್, ದಾನ್ ಎಂಬ ಊರುಗಳಲ್ಲಿದ್ದ ಚಿನ್ನದ ಬಸವಗಳನ್ನು ಪೂಜಿಸುತ್ತಿದ್ದನು.


ಬಹಳವಾಗಿ ಆಲೋಚಿಸಿ ಕಡೆಯಲ್ಲಿ ಬಂಗಾರದ ಎರಡು ಬಸವ ಮೂರ್ತಿಗಳನ್ನು ಮಾಡಿಸಿ ಇಸ್ರಾಯೇಲ್ಯರಿಗೆ - ನೀವು ಜಾತ್ರೆಗಾಗಿ ಯೆರೂಸಲೇವಿುಗೆ ಹೋದದ್ದು ಸಾಕಾಯಿತು; ಇಗೋ, ನಿಮ್ಮನ್ನು ಐಗುಪ್ತದಿಂದ ಕರತಂದ ದೇವರುಗಳು ಇಲ್ಲಿರುತ್ತವೆ ಎಂದು ಹೇಳಿ


[ಒಹೊಲೀಬಳೇ,] ನಿನ್ನ ಪುಟ್ಟಮೊಲೆಗಳಿಗೆ ಆಶೆಬಿದ್ದ ಐಗುಪ್ತ್ಯರಿಂದ ತೊಟ್ಟುಗಳನ್ನು ನಸುಕಿಸಿಕೊಂಡ ನಿನ್ನ ಎಳೆಪ್ರಾಯದ ಕಾಮವನ್ನು ನೀನು ನೆನಪಿಗೆ ತಂದುಕೊಂಡು ಆ ವಿುಂಡರನ್ನು ಮೋಹಿಸಿದಿಯಲ್ಲಾ.


ಈ ಸಾಕ್ಷಿಗಳ ಶವಗಳು ಮಹಾ ಪಟ್ಟಣದ ಬೀದಿಯಲ್ಲಿ ಬಿದ್ದಿರುವವು. ಆ ಪಟ್ಟಣಕ್ಕೆ ಗೂಢಾರ್ಥವಾಗಿ ಸೊದೋಮ್ ಎಂತಲೂ ಐಗುಪ್ತ ಎಂತಲೂ ಹೆಸರುಗಳುಂಟು; ಇವರ ಒಡೆಯನು ಸಹ ಅಲ್ಲಿಯೇ ಶಿಲುಬೆಗೆ ಹಾಕಲ್ಪಟ್ಟನು.


ನೀವೆಲ್ಲರೂ ನಿಮ್ಮ ಕಣ್ಣಿಗೆ ಇಷ್ಟವಾದ ಅಸಹ್ಯವಸ್ತುಗಳನ್ನು ಬಿಸಾಟುಬಿಡಿರಿ, ಐಗುಪ್ತದ ವಿಗ್ರಹಗಳಿಂದ ನಿಮ್ಮನ್ನು ಹೊಲಸು ಮಾಡಿಕೊಳ್ಳಬೇಡಿರಿ; ನಾನು ನಿಮ್ಮ ದೇವರಾದ ಯೆಹೋವನು ಎಂಬದಾಗಿ ಅವರನ್ನು ಎಚ್ಚರಿಸಿದೆನು.


ಅದರಲ್ಲಿ ಒಂದು ಬೊಟ್ಟನ್ನೂ ಉಳಿಸದೆ ಕುಡಿದು ಅದರ ಬೋಕಿಗಳನ್ನು ಕಚ್ಚಿ ನೆಕ್ಕಿ ನಿನ್ನ ಮೊಲೆಗಳನ್ನು ಬಗಿದುಕೊಳ್ಳುವಿ; ಇದು ನನ್ನ ಅಪ್ಪಣೆ ಎಂಬದೇ ಕರ್ತನಾದ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು