Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 23:9 - ಕನ್ನಡ ಸತ್ಯವೇದವು J.V. (BSI)

9 ಆದಕಾರಣ ನಾನು ಅವಳನ್ನು ಅವಳ ವಿುಂಡರ ಕೈಗೆ ಅಂದರೆ ಅವಳು ಮೋಹಿಸಿದ ಅಶ್ಶೂರ್ಯರ ಕೈಗೆ ಒಪ್ಪಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 “ಆದಕಾರಣ ನಾನು ಅವಳನ್ನು ಅವಳ ಪ್ರಿಯರ ಕೈಗೆ ಅಂದರೆ ಅವಳು ಮೋಹಿಸಿದ ಅಶ್ಶೂರ್ಯರ ಕೈಗೆ ಒಪ್ಪಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆದಕಾರಣ ನಾನು ಅವಳನ್ನು ಅವಳ ಮಿಂಡರ ಕೈಗೆ ಅಂದರೆ, ಅವಳು ಮೋಹಿಸಿದ ಅಸ್ಸೀರಿಯರ ಕೈಗೆ ಒಪ್ಪಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆಕೆಯ ಪ್ರಿಯತಮರಿಗೆ ನಾನು ಆಕೆಯನ್ನು ಬಿಟ್ಟುಕೊಟ್ಟೆನು. ಆಕೆಗೆ ಅಶ್ಶೂರದವರು ಬೇಕಾಯಿತು. ನಾನು ಆಕೆಯನ್ನು ಅವರಿಗೆ ಬಿಟ್ಟುಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ಆದ್ದರಿಂದ ನಾನು ಅವಳನ್ನು ಮೋಹಿಸಿದ ಅವಳ ಪ್ರಿಯರ ಕೈಗೆ ಅಸ್ಸೀರಿಯರ ಕೈಗೆ ಒಪ್ಪಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 23:9
13 ತಿಳಿವುಗಳ ಹೋಲಿಕೆ  

ಇಸ್ರಾಯೇಲು ಐಗುಪ್ತದೇಶಕ್ಕೆ ಹಿಂದಿರುಗದು; ಅದು [ನನ್ನ ಕಡೆಗೆ] ಹಿಂದಿರುಗಲು ಒಪ್ಪದ ಕಾರಣ ಅಶ್ಶೂರವೇ ಅದಕ್ಕೆ ರಾಜನಾಗಬೇಕು.


ದುರ್ಮಾರ್ಗದಲ್ಲಿ ನಡೆಯುವದನ್ನು ಬಿಡಲಿಲ್ಲವಾದದರಿಂದ ಯೆಹೋವನು ತನ್ನ ಸೇವಕರಾದ ಎಲ್ಲಾ ಪ್ರವಾದಿಗಳ ಮುಖಾಂತರವಾಗಿ ಮುಂತಿಳಿಸಿದಂತೆ ಅವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟನು. ಅವರು ಸೆರೆಯವರಾಗಿ ತಮ್ಮ ದೇಶದಿಂದ ಅಶ್ಶೂರ್ ದೇಶಕ್ಕೆ ಒಯ್ಯಲ್ಪಟ್ಟು ಇಂದಿನವರೆಗೂ ಅಲ್ಲೇ ಇರುತ್ತಾರೆ.


ಇಸ್ರಾಯೇಲ್ಯರ ಅರಸನಾದ ಪೆಕಹನ ಕಾಲದಲ್ಲಿ ಅಶ್ಶೂರ್ ದೇಶದ ಅರಸನಾದ ತಿಗ್ಲತ್ಪಿಲೆಸೆರನೆಂಬವನು ಬಂದು ಇಯ್ಯೋನ್, ಆಬೇಲ್ಬೇತ್ಮಾಕಾ, ಯಾನೋಹ, ಕೆದೆಷ್, ಹಾಚೋರ್ ಮೊದಲಾದ ನಫ್ತಾಲಿಯ ಊರುಗಳನ್ನೂ ಗಿಲ್ಯಾದ್, ಗಲಿಲಾಯ ಪ್ರಾಂತಗಳನ್ನೂ ಸ್ವಾಧೀನಪಡಿಸಿಕೊಂಡು ಅವುಗಳ ನಿವಾಸಿಗಳನ್ನು ಅಶ್ಶೂರ್ ದೇಶಕ್ಕೆ ಸೆರೆಯಾಗಿ ತೆಗೆದುಕೊಂಡುಹೋದನು.


ಇದಲ್ಲದೆ ಹತ್ತು ಕೊಂಬುಗಳನ್ನೂ ಮೃಗವನ್ನೂ ಕಂಡಿಯಲ್ಲ? ಇವುಗಳಿಂದ ಸೂಚಿತರಾದವರು ಆ ಜಾರಸ್ತ್ರೀಯನ್ನು ದ್ವೇಷಿಸಿ ಅವಳನ್ನು ಗತಿಗೆಟ್ಟವಳನ್ನಾಗಿಯೂ ಬಟ್ಟೆಯಿಲ್ಲದವಳನ್ನಾಗಿಯೂ ಮಾಡಿ ಅವಳ ಮಾಂಸವನ್ನು ತಿಂದು ಅವಳನ್ನು ಬೆಂಕಿಯಿಂದ ಸುಟ್ಟುಬಿಡುವರು.


ಆದದರಿಂದ ಅಶ್ಶೂರದ ಅರಸನಾದ ಪೂಲ್, ತಿಗ್ಲತ್ಪಿಲೆಸರ್ ಎಂಬವರು ಇಸ್ರಾಯೇಲ್ ದೇವರ ಪ್ರೇರಣೆಯಿಂದ ಬಂದು ರೂಬೇನ್ಯರು, ಗಾದ್ಯರು, ಮನಸ್ಸೆಕುಲದ ಅರ್ಧ ಜನರು ಇವರನ್ನು ಹಲಹ, ಹಾಬೋರ್ ಹಾರ ಎಂಬ ಪ್ರಾಂತಗಳಿಗೂ ಗೋಜಾನ್ ನದಿಯ ಪ್ರದೇಶಗಳಿಗೂ ಸೆರೆಯೊಯ್ದರು. ಅವರು ಇಂದಿನವರೆಗೂ ಅಲ್ಲೇ ಇರುತ್ತಾರೆ.


ಎಲೈ, [ನಗರಿಯೇ,] ನೀನು ಸೂರೆಯಾಗುವಾಗ ಏನು ಮಾಡುವಿ? ನೀನು ರಕ್ತಾಂಬರವನ್ನು ಹೊದ್ದು ಸುವರ್ಣಾಭರಣಗಳಿಂದ ನಿನ್ನನ್ನು ಅಲಂಕರಿಸಿಕೊಂಡು ನೀಲಾಂಜನದಿಂದ ವಿಶಾಲಾಕ್ಷಿಯಾದರೇನು, ನಿನ್ನನ್ನು ಸೊಗಸು ಮಾಡಿಕೊಳ್ಳುವದು ವ್ಯರ್ಥ; ನಿನ್ನ ವಿುಂಡರು ನಿನ್ನನ್ನು ಧಿಕ್ಕರಿಸಿ ನಿನ್ನ ಪ್ರಾಣವನ್ನೇ ಹುಡುಕುತ್ತಾರೆ.


ಇವುಗಳನ್ನು ನಾನು ನೋಡಿ ನೀನು ರವಿುಸಿದ ನಿನ್ನ ಎಲ್ಲಾ ವಿುಂಡರನ್ನೂ ನೀನು ಮೋಹಿಸಿದ ಸಮಸ್ತರನ್ನೂ ನೀನು ಹಗೆಮಾಡಿದ ಎಲ್ಲರೊಂದಿಗೆ ಸುತ್ತುಮುತ್ತಲು ನಿನಗೆ ವಿರುದ್ಧವಾಗಿ ಕೂಡಿಸಿ ಅವರ ಕಣ್ಣೆದುರಿಗೆ ನಿನ್ನನ್ನು ಬೆತ್ತಲೆಗೈದು ನಿನ್ನ ಮಾನವನ್ನು ಬಟ್ಟಬೈಲುಮಾಡುವೆನು.


ಇವಳು ಮುಚ್ಚುಮರೆಯಿಲ್ಲದೆ ಸೂಳೆತನಮಾಡಿ ತನ್ನ ಮಾನವನ್ನು ಕೆಡಿಸಿಕೊಂಡಾಗ ನನ್ನ ಅನುರಾಗವು ಮೊದಲು ಇವಳ ಅಕ್ಕನಿಂದ ಅಗಲಿದ ಹಾಗೆ ಇವಳಿಂದಲೂ ಅಗಲಿತು.


ಹೀಗಿರಲು, ಒಹೊಲೀಬಳೇ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ಯಾವ ವಿುಂಡರಿಂದ ನಿನ್ನ ಆಶೆ ತೊಲಗಿತೋ ಆ ವಿುಂಡರನ್ನು ಅಂದರೆ ಮನೋಹರ ಯುವಕರೂ ಯಾರೂ ತಪ್ಪದೆ ನಾಯಕೋಪನಾಯಕರೂ ಪ್ರಭುಪ್ರಧಾನರೂ ಅಶ್ವಾರೂಢರೂ ಆದ ಬಾಬೆಲಿನವರು,


ಭ್ರಷ್ಟಳಾದ ಇಸ್ರಾಯೇಲು ಹಾದರಮಾಡಿದ ಕಾರಣದಿಂದಲೇ ನಾನು ಅವಳನ್ನು ನಿರಾಕರಿಸಿ ತ್ಯಾಗಪತ್ರ ಕೊಟ್ಟದ್ದನ್ನು ಯೆಹೂದವೆಂಬ ದ್ರೋಹಿಯಾದ ಅವಳ ತಂಗಿಯು ನೋಡಿಯೂ ಅಂಜದೆ ತಾನೂ ಹೋಗಿ ಸೂಳೆತನವನ್ನು ನಡಿಸಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು