Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 24:11 - ಕನ್ನಡ ಸತ್ಯವೇದವು J.V. (BSI)

11 ಆಮೇಲೆ ಹಂಡೆಯು ಕಾದು ತಾಮ್ರವು ಕೆಂಪಾಗಿ ಒಳಗಣ ಕಲ್ಮಷವು ಕರಗಿ ಕಿಲುಬು ಇಲ್ಲವಾಗುವಂತೆ ಅದನ್ನು ಬರಿದುಮಾಡಿ ಕೆಂಡಗಳ ಮೇಲೆ ಇಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 “ಆ ಮೇಲೆ ಹಂಡೆಯು ಕಾದು ತಾಮ್ರವು ಕೆಂಪಾಗಿ, ಒಳಗಿನ ಕಲ್ಮಷವು ಕರಗಿ, ಕಿಲುಬು ಇಲ್ಲವಾಗುವಂತೆ ಅದನ್ನು ಬರಿದುಮಾಡಿ ಕೆಂಡಗಳ ಮೇಲೆ ಇಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆಮೇಲೆ ಹಂಡೆಯು ಕಾದು ತಾಮ್ರವು ಕೆಂಪಾಗಿ, ಒಳಗಣ ಕಲ್ಮಷವು ಕರಗಿ ಕಿಲುಬು ಇಲ್ಲವಾಗುವಂತೆ, ಅದನ್ನು ಬರಿದುಮಾಡಿ ಕೆಂಡಗಳ ಮೇಲೆ ಇಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಬರಿದಾದ ಹಂಡೆಯು ಉರಿಯುವ ಕೆಂಡಗಳ ಮೇಲಿದ್ದು, ಕಾದು ಅದರ ತಾಮ್ರವು ಕೆಂಪಾಗಲಿ. ಮತ್ತು ಅದರೊಳಗಿರುವ ಕಲೆಗಳು ಕರಗಿಹೋಗಲಿ. ಮತ್ತು ಅದರ ಕಿಲುಬು ಸುಟ್ಟುಹೋಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆಮೇಲೆ ಹಂಡೆಯು ಕಾದು ತಾಮ್ರವು ಕೆಂಪಾಗಿ, ಒಳಗಣ ಕಲ್ಮಶವು ಕರಗಿ ಕಿಲುಬು ಇಲ್ಲವಾಗುವಂತೆ ಅದನ್ನು ಬರಿದುಮಾಡಿ ಕೆಂಡಗಳ ಮೇಲೆ ಇಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 24:11
21 ತಿಳಿವುಗಳ ಹೋಲಿಕೆ  

ಮೇಲಿಗಲ್ಲ ಕೇಡಿಗಾಗಿಯೇ ಈ ಪಟ್ಟಣದ ಮೇಲೆ ದೃಷ್ಟಿಯಿಟ್ಟಿದ್ದೇನೆ; ಇದು ಬಾಬೆಲಿನ ಅರಸನ ಕೈವಶವಾಗುವದು, ಅವನು ಸುಟ್ಟು ಬಿಡುವನು; ಇದು ಯೆಹೋವನ ನುಡಿ.


ಇಗೋ, ಆ ದಿನವು ಬರುತ್ತಿದೆ, ಒಲೆಯಂತೆ ಉರಿಯುತ್ತಿದೆ; ಸಕಲ ಅಹಂಕಾರಿಗಳೂ ದುಷ್ಕರ್ಮಿಗಳೂ ಹೊಟ್ಟಿನಂತಿರುವರು; ಬರುತ್ತಿರುವ ಆ ದಿನವು ಅವರಿಗೆ ಅಗ್ನಿಪ್ರಲಯವಾಗುವದು; ಬುಡ ರೆಂಬೆಗಳಾವದನ್ನೂ ಉಳಿಸದು.


ನಿನ್ನ ಮೇಲೆ ಕೈಮಾಡಿ ಪುಟಹಾಕಿ ನಿನ್ನ ಕಲ್ಮಷವನ್ನು ಸಂಪೂರ್ಣವಾಗಿ ಹೋಗಲಾಡಿಸಿ ನಿನ್ನ ಕಂದುಕಸರನ್ನೆಲ್ಲಾ ತೆಗೆದು ಬಿಡುವೆನು.


ಆತನು ಮೊರವನ್ನು ಕೈಯಲ್ಲಿ ಹಿಡಿದಿದ್ದಾನೆ; ತನ್ನ ಕಣದಲ್ಲಿಯ ರಾಶಿಯನ್ನು ತೂರಿ ಹಸನುಮಾಡಿ ತನ್ನ ಗೋದಿಯನ್ನು ಕಣಜದಲ್ಲಿ ತುಂಬಿಕೊಂಡು ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟುಬಿಡುವನು ಎಂದು ಹೇಳಿದನು.


ನಾನು ನಿಮ್ಮ ಮೇಲೆ ನಿರ್ಮಲೋದಕವನ್ನು ಪ್ರೋಕ್ಷಿಸಲು ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ ಸಕಲವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.


ದ್ರೋಹಿಗಳಾದವರನ್ನು ನಿಮ್ಮೊಳಗಿಂದ ಗುಡಿಸಿಬಿಡುವೆನು; ಅವರು ಪ್ರವಾಸಿಗಳಾಗಿದ್ದ ದೇಶದಿಂದ ನಾನು ಅವರನ್ನು ಪಾರುಮಾಡಿದರೂ ಅವರು ಇಸ್ರಾಯೇಲ್ ದೇಶಕ್ಕೆ ಸೇರುವದೇ ಇಲ್ಲ ; ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು.


ಯೆಹೋವನ ಆಲಯವನ್ನೂ ಅರಮನೆಯನ್ನೂ ಯೆರೂಸಲೇವಿುನ ಎಲ್ಲಾ ದೊಡ್ಡ ಮನೆಗಳನ್ನೂ ಸುಟ್ಟುಬಿಟ್ಟನು.


ಮತ್ತು ಕಸ್ದೀಯರು ಅರಮನೆಯನ್ನೂ ಪ್ರಜೆಗಳ ಮನೆಗಳನ್ನೂ ಬೆಂಕಿಯಿಂದ ಸುಟ್ಟು ಯೆರೂಸಲೇವಿುನ ಸುತ್ತಣ ಗೋಡೆಗಳನ್ನು ಕೆಡವಿದರು.


ನೀನು ಬಾಬೆಲಿನ ಅರಸನ ಸರದಾರರನ್ನು ಮರೆಹೊಗದಿದ್ದರೆ ಈ ಪಟ್ಟಣವು ಕಸ್ದೀಯರ ಕೈವಶವಾಗುವದು. ಅವರು ಅದನ್ನು ಬೆಂಕಿಯಿಂದ ಸುಟ್ಟುಬಿಡುವರು, ನೀನು ಅವರ ಕೈಯಿಂದ ತಪ್ಪಿಸಿಕೊಳ್ಳಲಾರೆ ಎಂದು ಹೇಳಿದನು.


ನಿಮ್ಮನ್ನು ಪ್ರತಿಭಟಿಸುವ ಕಸ್ದೀಯರಲ್ಲಿ ಗಾಯಪಟ್ಟವರು ಮಾತ್ರ ಉಳಿಯುವಂತೆ ನೀವು ಆ ಸೈನ್ಯವನ್ನೆಲ್ಲಾ ಒಂದು ವೇಳೆ ಹೊಡೆದಿದ್ದರೂ ಆ ಗಾಯಪಟ್ಟವರೇ ತಮ್ಮ ತಮ್ಮ ಗುಡಾರಗಳಿಂದ ಎದ್ದುಬಂದು ಈ ಪಟ್ಟಣವನ್ನು ಬೆಂಕಿಯಿಂದ ಸುಟ್ಟುಬಿಡುತ್ತಿದ್ದರು.


ಮತ್ತು ಈ ಪಟ್ಟಣಕ್ಕೆ ಪ್ರತಿಭಟಿಸುವ ಕಸ್ದೀಯರು ಇದರೊಳಗೆ ನುಗ್ಗಿ ಬೆಂಕಿಯಿಕ್ಕಿ ಯಾವ ಮನೆಗಳ ಮಾಳಿಗೆಗಳಲ್ಲಿ ನನ್ನ ಜನರು ಬಾಳನಿಗೆ ಧೂಪಹಾಕಿ ಅನ್ಯದೇವತೆಗಳಿಗೆ ಪಾನವನ್ನು ನೈವೇದ್ಯವಾಗಿ ಅರ್ಪಿಸಿ ನನ್ನನ್ನು ಕೆಣಕಿದ್ದಾರೋ ಆ ಮನೆಗಳಿರುವ ಈ ಪಟ್ಟಣವನ್ನು ಸುಟ್ಟುಬಿಡುವರು.


ಹೀಗಿರಲು ಯಾಕೋಬ್ಯರು ಯಜ್ಞವೇದಿಯ ಕಲ್ಲುಗಳನ್ನೆಲ್ಲಾ ಸುಣ್ಣದಂತೆ ಪುಡಿ ಪುಡಿಮಾಡಿ ಅಶೇರವೆಂಬ ವಿಗ್ರಹಸ್ತಂಭಗಳನ್ನೂ ಸೂರ್ಯಸ್ತಂಭಗಳನ್ನೂ ಇನ್ನು ಪ್ರತಿಷ್ಠಿಸದೆ ಹೋದರೆ ಅದೇ ಅವರ ಅಧರ್ಮಕ್ಕೆ ಪ್ರಾಯಶ್ಚಿತ್ತವಾಗುವದು, ಮತ್ತು ಅವರ ಪಾಪಪರಿಹಾರಕ್ಕೆ ಗುರುತಾದ ಪೂರ್ಣಫಲವೂ ಇದೇ.


ಆಗ ಕರ್ತನಾದ ಯೆಹೋವನು ನ್ಯಾಯತೀರ್ಪಿನ ಆತ್ಮದಿಂದಲೂ ದಹಿಸುವ ಆತ್ಮದಿಂದಲೂ ಚೀಯೋನಿನ ಸ್ತ್ರೀಯರ ಕಲ್ಮಷವನ್ನೂ ಯೆರೂಸಲೇವಿುನ ಮಧ್ಯದಲ್ಲಿನ ರಕ್ತವನ್ನೂ ತೊಳೆದುಬಿಟ್ಟ ಮೇಲೆ


ತುಂಬಾ ಸೌದೆ ಹಾಕು, ಬೆಂಕಿಯನ್ನುರಿಸು, ಮಾಂಸವನ್ನು ತೀರಾ ಬೇಯಿಸು, ಸಾರನ್ನು ಮಂದಮಾಡು, ಎಲುಬುಗಳು ಹೊತ್ತಿಹೋಗಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು