Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 24:13 - ಕನ್ನಡ ಸತ್ಯವೇದವು J.V. (BSI)

13 ನಿನ್ನ ಪುಂಡಾಟವು ಅಸಹ್ಯವಾಗಿರುವದರಿಂದಲೂ ನಾನು ನಿನ್ನನ್ನು ಎಷ್ಟು ಶುದ್ಧಿಮಾಡಿದರೂ ನೀನು ಶುದ್ಧಿಯಾಗದೆ ಹೋದದರಿಂದಲೂ ನಾನು ನನ್ನ ರೋಷವನ್ನು ನಿನ್ನಲ್ಲಿ ತೀರಿಸಿ ಶಾಂತನಾಗುವವರೆಗೂ ನೀನು ನಿನ್ನ ಕೊಳೆಯನ್ನು ಇನ್ನು ಕಳೆದುಕೊಳ್ಳದೆ ಶುದ್ಧಿಯಾಗದೆ ಇರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 “ಅಂತೆಯೇ ನಿನ್ನ ದುಷ್ಕರ್ಮವು ಅಸಹ್ಯವಾಗಿರುವುದರಿಂದಲೂ, ನಾನು ನಿನ್ನನ್ನು ಎಷ್ಟು ಶುದ್ಧಿಮಾಡಿದರೂ ನೀನು ಶುದ್ಧಿಯಾಗದೆ ಹೋದದ್ದರಿಂದಲೂ ನಾನು ನನ್ನ ರೋಷವನ್ನು ನಿನ್ನಲ್ಲಿ ತೀರಿಸಿ ಶಾಂತನಾಗುವವರೆಗೂ ನೀನು ನಿನ್ನ ಕೊಳೆಯನ್ನು ಇನ್ನು ಕಳೆದುಕೊಳ್ಳದೆ, ಶುದ್ಧಿಯಾಗದೆ ಇರುವಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅಂತೆಯೇ ನಿನ್ನ ಲಂಪಟತನ ಅಸಹ್ಯವಾಗಿರುವುದರಿಂದಲೂ ನಾನು ನಿನ್ನನ್ನು ಎಷ್ಟು ಶುದ್ಧಿಮಾಡಿದರೂ ನೀನು ಶುದ್ಧಿಯಾಗದೆ ಹೋದದ್ದರಿಂದಲೂ ನಾನು ನನ್ನ ರೋಷವನ್ನು ನಿನ್ನಲ್ಲಿ ಹರಿಸಿ ಶಾಂತನಾಗುವವರೆಗೂ ನೀನು ನಿನ್ನ ಕೊಳೆಯನ್ನು ಇನ್ನೂ ಕಳೆದುಕೊಳ್ಳದೆ, ಶುದ್ಧಿಯಾಗದೆ ಇರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 “‘ನಿನ್ನ ವಿರುದ್ಧ ನನಗಿರುವ ಕೋಪ ತೃಪ್ತಿಗೊಳ್ಳುವ ತನಕ ನೀನು ಮತ್ತೆಂದಿಗೂ ಶುದ್ಧಳಾಗುವುದಿಲ್ಲ. ನಿನ್ನನ್ನು ತೊಳೆದು ಕಲೆಗಳನ್ನು ತೆಗೆಯಲು ನನಗೆ ಮನಸ್ಸಿತ್ತು. ಆದರೆ ಕಲೆಗಳು ಹೋಗಲಿಲ್ಲ. ಆದ್ದರಿಂದ ನಿನ್ನ ಮೇಲಿನ ನನ್ನ ಕೋಪವು ತಣ್ಣಗಾಗುವ ತನಕ ನಾನು ನಿನ್ನನ್ನು ತೊಳೆಯುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ ‘ನಿನ್ನ ಅಶುದ್ಧತ್ವವು ದುಷ್ಕರ್ಮವುಳ್ಳದ್ದು. ನಾನು ನಿನ್ನನ್ನು ಪರಿಶುದ್ಧಮಾಡಿದರೂ ನೀನು ಶುದ್ಧವಾಗದ ಕಾರಣ ನಾನು ನನ್ನ ರೋಷವನ್ನು ನಿನ್ನ ಮೇಲೆ ಕಳುಹಿಸುವಷ್ಟು ಕಾಲದವರೆಗೂ ಇನ್ನು ಮೇಲೆ ನೀನು ನಿನ್ನ ಅಪವಿತ್ರದಿಂದ ಇನ್ನು ಶುದ್ಧವಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 24:13
30 ತಿಳಿವುಗಳ ಹೋಲಿಕೆ  

ನರಪುತ್ರನೇ, ಆ ನಾಡಿಗೆ ಹೀಗೆ ಹೇಳು - ದೇವರ ಕೋಪದ ಈ ದಿನದಲ್ಲಿ ನೀನು ಶುದ್ಧಿಯಾಗದ ದೇಶ, ಮಳೆಯಿಲ್ಲದ ದೇಶ.


ಹೀಗೆ ನನ್ನ ಸಿಟ್ಟನ್ನು ತೀರಿಸಿಕೊಳ್ಳುವೆನು, ನನ್ನ ರೋಷವನ್ನು ಅವರ ಮೇಲೆ ಸುರಿದು ಶಾಂತನಾಗುವೆನು; ಆಗ್ರಹದಿಂದ ಮಾತಾಡಿದವನು ಯೆಹೋವನಾದ ನಾನೇ ಎಂಬದು ನನ್ನ ಕೋಪವನ್ನು ಅವರ ಮೇಲೆ ಹೊಯ್ದುಬಿಟ್ಟ ಬಳಿಕ ಅವರಿಗೆ ಗೊತ್ತಾಗುವದು.


ಪ್ರಿಯರೇ, ಈ ವಾಗ್ದಾನಗಳು ನಮಗಿರುವದರಿಂದ ನಾವು ಶರೀರಾತ್ಮಗಳ ಕಲ್ಮಶವನ್ನು ತೊಲಗಿಸಿ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಿಂದ ಕೂಡಿದವರಾಗಿ ಪವಿತ್ರತ್ವವನ್ನು ಸಿದ್ಧಿಗೆ ತರುವದಕ್ಕೆ ಪ್ರಯತ್ನಿಸೋಣ.


ಅದು ದೈವೋಕ್ತಿಗೆ ಕಿವಿಗೊಡಲಿಲ್ಲ, ಶಿಕ್ಷಣೆಗೆ ಒಳಪಡಲಿಲ್ಲ, ಯೆಹೋವನಲ್ಲಿ ಭರವಸವಿಡಲಿಲ್ಲ, ತನ್ನ ದೇವರ ಸನ್ನಿಧಿಗೆ ಸಮೀಪಿಸಲಿಲ್ಲ.


ಹೀಗೆ ನಾನು ನಿನ್ನ ಮೇಲಣ ಸಿಟ್ಟನ್ನು ತೀರಿಸಲು ನನ್ನ ರೋಷವು ನಿನ್ನ ಕಡೆಯಿಂದ ತೊಲಗಿಬಿಡುವದು; ನಾನು ಶಾಂತನಾಗಿ ಇನ್ನು ಮೇಲೆ ಕೋಪಗೊಳ್ಳೆನು.


ಆದಕಾರಣ ನಾನೂ ಕೋಪೋದ್ರೇಕದಿಂದ ವರ್ತಿಸುವೆನು, ಕಟಾಕ್ಷಿಸೆನು, ಉಳಿಸೆನು; ಅವರು ಕೂಗಿಕೊಳ್ಳುವ ಮಹಾಶಬ್ದವು ನನ್ನ ಕಿವಿಗೆ ಬಿದ್ದರೂ ಲಾಲಿಸೆನು.


ಅನ್ಯಾಯ ಮಾಡುವವನು ಇನ್ನೂ ಅನ್ಯಾಯಮಾಡಲಿ; ಮೈಲಿಗೆಯಾದವನು ತನ್ನನ್ನು ಇನ್ನೂ ಮೈಲಿಗೆಮಾಡಿಕೊಳ್ಳಲಿ; ನೀತಿವಂತನು ಇನ್ನೂ ನೀತಿಯನ್ನು ಅನುಸರಿಸಲಿ; ಪವಿತ್ರನು ತನ್ನನ್ನು ಇನ್ನೂ ಪವಿತ್ರಮಾಡಿಕೊಳ್ಳಲಿ.


[ಇದರಿಂದ, ಯೆರೂಸಲೇಮೇ,] ನೀನು ನನಗೆ ನಿಶ್ಚಯವಾಗಿ ಭಯಪಡುವಿ, ಶಿಕ್ಷಣೆಗೆ ಒಳಪಡುವಿ, ನಿನ್ನ ನಿವಾಸವು ನಾಶವಾಗದು, ನಾನು ನಿನಗೆ ವಿಧಿಸಿದ್ದೊಂದೂ [ತಗಲದು] ಎಂದು ಅಂದುಕೊಂಡೆನು; ಅವರಾದರೋ ಆತುರಗೊಂಡು ತಮ್ಮ ನಡತೆಯನ್ನೆಲ್ಲಾ ಕೆಡಿಸಿಕೊಂಡರು.


ನಾನು ನನ್ನ ಜನರ ದುರವಸ್ಥೆಯನ್ನು ತಪ್ಪಿಸಿ ಇಸ್ರಾಯೇಲನ್ನು ಸ್ವಸ್ಥಮಾಡಬೇಕೆಂದಿರುವಾಗ ಎಫ್ರಾಯೀವಿುನ ಅಧರ್ಮವೂ ಸಮಾರ್ಯದ ದುಷ್ಟತನವೂ ವ್ಯಕ್ತವಾಗುತ್ತವೆ; ಎಲ್ಲರೂ ಮೋಸಮಾಡುತ್ತಾರೆ, ಒಳಗೆ ಕಳ್ಳರು ನುಗ್ಗುತ್ತಾರೆ, ಹೊರಗೆ ಡಕಾಯಿತಿಯವರು ಸುಲಿಯುತ್ತಾರೆ.


ಆಮೇಲೆ ಹಂಡೆಯು ಕಾದು ತಾಮ್ರವು ಕೆಂಪಾಗಿ ಒಳಗಣ ಕಲ್ಮಷವು ಕರಗಿ ಕಿಲುಬು ಇಲ್ಲವಾಗುವಂತೆ ಅದನ್ನು ಬರಿದುಮಾಡಿ ಕೆಂಡಗಳ ಮೇಲೆ ಇಡು.


ಎಫ್ರಾಯೀಮು ಹೀಗೆ ಪ್ರಲಾಪಿಸಿಕೊಳ್ಳುವದನ್ನು ಕೇಳೇ ಕೇಳಿದ್ದೇನೆ - ನೀನು ನನ್ನನ್ನು ಶಿಕ್ಷಿಸಿದ್ದೀ, ಪಳಗದ ಹೋರಿಯಂತೆ ಶಿಕ್ಷೆಯನ್ನು ಅನುಭವಿಸಿದೆನು; ನನ್ನನ್ನು ತಿರುಗಿಸು, ನೀನು ತಿರುಗಿಸಿದ ಹಾಗೆ ತಿರುಗುವೆನು; ನೀನು ನನ್ನ ದೇವರಾದ ಯೆಹೋವನಲ್ಲವೆ.


ಹೀಗಿರಲು ಸೇನಾಧೀಶ್ವರನಾದ ಯೆಹೋವನು ನನ್ನ ಕಿವಿಗೆ ಗೋಚರಪಡಿಸಿದ್ದೇನಂದರೆ - ನೀವು ಸಾಯುವ ತನಕ ಈ ಅಧರ್ಮಕ್ಕೆ ಪ್ರಾಯಶ್ಚಿತ್ತವು ಇಲ್ಲವೇ ಇಲ್ಲ ಎಂದು ಸೇನಾಧೀಶ್ವರನಾಗಿರುವ ಯೆಹೋವನೆಂಬ ಕರ್ತನಾದ ನಾನು ನುಡಿದಿದ್ದೇನೆ ಎಂಬದೇ.


ಆಕೆಯ ನೆರಿಗೆಯು ಹೊಲಸಾಗಿತ್ತು, ಮುಂದಿನ ಗತಿಯೇನೆಂದು ಮನಸ್ಸಿಗೆ ತರಲಿಲ್ಲ; ಆದಕಾರಣ ವಿಪರೀತ ಹೀನಸ್ಥಿತಿಯಲ್ಲಿ ಬಿದ್ದು ಬಿಟ್ಟಳು; ಸಂತೈಸುವವರೇ ಇಲ್ಲ. ಯೆಹೋವನೇ, ನನ್ನ ಕಷ್ಟವನ್ನು ಲಕ್ಷಿಸು; ನನ್ನ ಶತ್ರು ಹೆಚ್ಚಳಪಡುತ್ತಾನಲ್ಲಾ [ಎಂದು ಮೊರೆಯಿಡುತ್ತಾಳೆ].


ಆಮೇಲೆ ಅವನು ನನಗೆ - ಆಹಾ, ಉತ್ತರದೇಶಕ್ಕೆ ಹೋದವುಗಳು ಅಲ್ಲಿ ನನ್ನ ಕೋಪವನ್ನು ಶಾಂತಿಗೊಳಿಸಿವೆ ಎಂದು ಕೂಗಿ ಹೇಳಿದನು.


ಆ ಮಚ್ಚೆ ಇದ್ದ ವಸ್ತುವನ್ನು ತೊಳೆಸಿದ ಮೇಲೆ ಯಾಜಕನು ನೋಡುವಾಗ ಆ ಮಚ್ಚೆಯು ಹರಡಿಕೊಳ್ಳದೆ ಇದ್ದಾಗ್ಯೂ ಅದರ ಬಣ್ಣ ಮೊದಲಿದ್ದಂತೆಯೇ ಇದ್ದರೆ ಆ ವಸ್ತು ಅಶುದ್ಧ. ಕುಷ್ಠರೋಗದ ಗುರುತು ಅದರ ಮೇಲಣ ಕಡೆಯಿಂದಾಗಲಿ ಕೆಳಗಣ ಕಡೆಯಿಂದಾಗಲಿ ಆ ವಸ್ತುವಿನೊಳಗೆ ವ್ಯಾಪಿಸಿದದರಿಂದ ಅದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.


ಅವನು ಆ ಕಲ್ಲುಗಳನ್ನು ತೆಗಿಸಿ ಮನೆಯ ಗೋಡೆಗಳನ್ನು ಗೀಚಿಸಿ ಗಿಲಾವು ಮಾಡಿಸಿದ ಮೇಲೆ ಆ ರೋಗದ ಗುರುತು ತಿರಿಗಿ ಕಾಣಬಂದರೆ ಯಾಜಕನು ಬಂದು ನೋಡಬೇಕು.


ನಾನು ನಿನ್ನ ವ್ಯಭಿಚಾರಗಳನ್ನು, ನಿನ್ನ ಹೇಕಾರಗಳನ್ನು, ನಿನ್ನ ಕೆಟ್ಟ ಸೂಳೆಗಾರಿಕೆಯನ್ನು, ಅಂತು ಗುಡ್ಡಗಳಲ್ಲಿಯೂ ಬೈಲಿನಲ್ಲಿಯೂ ನೀನು ನಡಿಸಿದ ಅಸಹ್ಯಕಾರ್ಯಗಳನ್ನು ನೋಡಿದ್ದೇನೆ. ಯೆರೂಸಲೇಮೇ, ನಿನ್ನ ಗತಿಯನ್ನು ಏನೆಂದು ಹೇಳಲಿ! ನೀನು ಶುದ್ಧಳಾಗಲು ಇನ್ನೆಷ್ಟು ಕಾಲಬೇಕು?


ನಮ್ಮನ್ನು ನಿನ್ನ ಕಡೆಗೆ ತಿರುಗಿಸು; ನೀನು ತಿರುಗಿಸಿದ ಹಾಗೆ ತಿರುಗುವೆವು; ಪೂರ್ವಕಾಲದ ಸುಸ್ಥಿತಿಯನ್ನು ನಮಗೆ ಮತ್ತೆ ದಯಪಾಲಿಸು.


ನಿನ್ನಲ್ಲಿನ ಮೂರನೆಯ ಒಂದು ಭಾಗದವರು ವ್ಯಾಧಿಯಿಂದ ಸಾಯುವರು, ನಿನ್ನ ಮಧ್ಯದಲ್ಲಿ ಕ್ಷಾಮದಿಂದ ನಾಶವಾಗುವರು; ಇನ್ನೊಂದು ಭಾಗದವರು ನಿನ್ನ ಸುತ್ತಲು ಖಡ್ಗದಿಂದ ಹತರಾಗುವರು; ಮತ್ತೊಂದು ಭಾಗದವರನ್ನು ನಾನು ಎಲ್ಲಾ ಕಡೆಯ ಗಾಳಿಗೂ ತೂರಿ ಅವರ ಹಿಂದೆ ಕತ್ತಿಯನ್ನು ಬೀಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು