Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 24:22 - ಕನ್ನಡ ಸತ್ಯವೇದವು J.V. (BSI)

22 ನಾನು ಮಾಡಿದಂತೆ ಆಗ ನೀವೂ ಮಾಡುವಿರಿ, ಅಂದರೆ ಬಟ್ಟೆಯಿಂದ ಬಾಯನ್ನು ಮುಚ್ಚಿಕೊಳ್ಳದೆ ಗಾರಿಗೆಯನ್ನು ತಿನ್ನದೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ನಾನು ಮಾಡಿದಂತೆ ಆಗ ನೀವೂ ಮಾಡುವಿರಿ, ಅಂದರೆ ಬಟ್ಟೆಯಿಂದ ಬಾಯನ್ನು ಮುಚ್ಚಿಕೊಳ್ಳದೆ, ಮನುಷ್ಯರ ರೊಟ್ಟಿಯನ್ನು ತಿನ್ನದೆ ಇರುವಿರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ನಾನು ಮಾಡಿದಂತೆ ಆಗ ನೀವೂ ಮಾಡುವಿರಿ, ಅಂದರೆ ಬಟ್ಟೆಯಿಂದ ಬಾಯನ್ನು ಮುಚ್ಚಿಕೊಳ್ಳದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನಾನು ನನ್ನ ಸತ್ತ ಹೆಂಡತಿಗೆ ಮಾಡಿದಂತೆಯೇ ನೀವೂ ಮಾಡುವಿರಿ. ನಿಮ್ಮ ದುಃಖವನ್ನು ತೋರಿಸಲು ನೀವು ನಿಮ್ಮ ಮೀಸೆಯನ್ನು ಮುಚ್ಚಿಕೊಳ್ಳುವುದಿಲ್ಲ. ಯಾರಾದರೂ ಸತ್ತಾಗ, ಗೋಳಾಡುವವರು ತಿನ್ನುವ ಆಹಾರವನ್ನು ನೀವು ತಿನ್ನುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ನಾನು ಮಾಡಿದ ಹಾಗೆ ನೀವು ಮಾಡುವಿರಿ; ನಿಮ್ಮ ಮೀಸೆ ಮತ್ತು ಗಡ್ಡವನ್ನು ಮುಚ್ಚಿಕೊಳ್ಳುವುದಿಲ್ಲ ಅಥವಾ ದುಃಖಿಸುವವರ ಸಾಂಪ್ರದಾಯಿಕ ಆಹಾರವನ್ನು ತಿನ್ನುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 24:22
9 ತಿಳಿವುಗಳ ಹೋಲಿಕೆ  

ಶತ್ರುವಿನ ತುರಗಗಳ ಗೊರಸುಗಳು ನೆಲವನ್ನು ಅಪ್ಪಳಿಸುವ ಶಬ್ದಕ್ಕೂ, ರಥಗಳ ರಭಸಕ್ಕೂ, ಚಕ್ರಗಳ ಬಿರುಗುಟ್ಟುವಿಕೆಗೂ ತಂದೆಗಳು ಹೆದರುತ್ತಾ ಜೋಲುಗೈಯವರಾಗಿ ತಮ್ಮ ಮಕ್ಕಳನ್ನು ಹಿಂದಿರುಗಿ ನೋಡರು;


ಯಾಜಕರು ಕತ್ತಿಯಿಂದ ಸಂಹೃತರಾದರು; ಇವರ ವಿಧವೆಯರು ದುಃಖಕ್ರಿಯೆಗಳನ್ನು ನೆರವೇರಿಸಲಿಲ್ಲ.


ಅವನ ಮನೆಯವರಲ್ಲಿ ಯಾರಾದರೂ ಉಳಿದರೆ ವ್ಯಾಧಿಯು ಅವರನ್ನು ಮಣ್ಣಿಗೆ ಸೇರಿಸುವದು, ಅವರ ವಿಧವೆಯರು ದುಃಖಕ್ರಿಯೆಗಳನ್ನು ನೆರವೇರಿಸುವದಿಲ್ಲ.


ಯಾರಲ್ಲಿ ಕುಷ್ಠದ ಗುರುತು ಕಾಣಬಂತೋ ಅವನು ತನ್ನ ಬಟ್ಟೆಗಳನ್ನು ಹರಿದುಕೊಂಡು ತಲೆಯನ್ನು ಕೆದರಿಕೊಂಡು ಬಾಯಿಯನ್ನು ಬಟ್ಟೆಯಿಂದ ಮುಚ್ಚಿಕೊಂಡು - ನಾನು ಅಶುದ್ಧನು ಅಶುದ್ಧನು ಎಂದು ಕೂಗಿಕೊಳ್ಳಬೇಕು.


ಇಸ್ರಾಯೇಲ್ ವಂಶದವರಿಗೆ ಹೀಗೆ ಸಾರು - ಹಾ, ನಿಮಗೆ ಮುಖ್ಯಬಲವೂ ನೇತ್ರಾನಂದವೂ ಪ್ರಾಣಪ್ರಿಯವೂ ಆದ ನನ್ನ ಪವಿತ್ರಾಲಯವನ್ನು ನಾನು ಹೊಲೆಮಾಡಿಸುವೆನು. ನೀವು ಬಿಟ್ಟುಬಂದಿರುವ ನಿಮ್ಮ ಗಂಡುಹೆಣ್ಣುಮಕ್ಕಳು ಖಡ್ಗಕ್ಕೆ ತುತ್ತಾಗುವರು ಎಂಬದಾಗಿ ಕರ್ತನಾದ ಯೆಹೋವನು ನುಡಿದಿದ್ದಾನೆ.


ರುಮಾಲನ್ನು ಸುತ್ತಿಕೊಂಡು ಕೆರಗಳನ್ನು ಮೆಟ್ಟಿಕೊಂಡು ಇರುವಿರಿ; ನೀವು ಗೋಳಾಡುವದಿಲ್ಲ, ಅಳುವದಿಲ್ಲ; ನಿಮ್ಮ ಅಧರ್ಮದಿಂದ ಕ್ಷೀಣವಾಗಿ ಹೋಗುವಿರಿ, ಒಬ್ಬರೆದುರಿಗೊಬ್ಬರು ನರಳುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು