ಯೆಹೆಜ್ಕೇಲನು 24:23 - ಕನ್ನಡ ಸತ್ಯವೇದವು J.V. (BSI)23 ರುಮಾಲನ್ನು ಸುತ್ತಿಕೊಂಡು ಕೆರಗಳನ್ನು ಮೆಟ್ಟಿಕೊಂಡು ಇರುವಿರಿ; ನೀವು ಗೋಳಾಡುವದಿಲ್ಲ, ಅಳುವದಿಲ್ಲ; ನಿಮ್ಮ ಅಧರ್ಮದಿಂದ ಕ್ಷೀಣವಾಗಿ ಹೋಗುವಿರಿ, ಒಬ್ಬರೆದುರಿಗೊಬ್ಬರು ನರಳುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ರುಮಾಲುಗಳು ನಿಮ್ಮ ತಲೆಯ ಮೇಲೆಯೂ, ಕೆರಗಳು ನಿಮ್ಮ ಪಾದಗಳ ಅಡಿಯಲ್ಲಿಯೂ ಇರುವವು; ನೀವು ಗೋಳಾಡುವುದಿಲ್ಲ, ಅಳುವುದಿಲ್ಲ; ನಿಮ್ಮ ಅಧರ್ಮದಿಂದ ಕ್ಷೀಣವಾಗಿ ಹೋಗುವಿರಿ, ಒಬ್ಬರ ಸಂಗಡಲೊಬ್ಬರು ನರಳುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಗಾರಿಗೆಯನ್ನು ತಿನ್ನದೆ, ರುಮಾಲನ್ನು ಸುತ್ತಿಕೊಂಡು, ಕೆರಗಳನ್ನು ಮೆಟ್ಟಿಕೊಂಡು ಇರುವಿರಿ; ನೀವು ಗೋಳಾಡುವುದಿಲ್ಲ, ಅಳುವುದಿಲ್ಲ. ಆದರೆ ನಿಮ್ಮ ಅಧರ್ಮದಿಂದ ಕ್ಷೀಣವಾಗಿ ನರಳುವಿರಿ. ಒಬ್ಬರೆದುರಿಗೆ ಒಬ್ಬರು ನರಳುವಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ನೀವು ನಿಮ್ಮ ಮುಂಡಾಸವನ್ನು ಧರಿಸಿಕೊಂಡು ಕಾಲಿಗೆ ಕೆರವನ್ನು ಹಾಕಿಕೊಳ್ಳುವಿರಿ. ನೀವು ನಿಮ್ಮ ದುಃಖವನ್ನು ತೋರಿಸಿಕೊಳ್ಳುವುದಿಲ್ಲ. ನೀವು ಅಳುವದೂ ಇಲ್ಲ. ಆದರೆ ನೀವು ನಿಮ್ಮ ಪಾಪಗಳ ದೆಸೆಯಿಂದ ಕೃಶರಾಗುವಿರಿ. ನೀವು ಒಬ್ಬರಿಗೊಬ್ಬರು ದುಃಖದ ಶಬ್ದಗಳನ್ನು ಮಾಡುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ನಿಮ್ಮ ಮುಂಡಾಸಗಳು ನಿಮ್ಮ ತಲೆಯ ಮೇಲೆಯೂ ನಿಮ್ಮ ಪಾದರಕ್ಷೆಯು ನಿಮ್ಮ ಪಾದಗಳ ಅಡಿಯಲ್ಲಿಯೂ ಇರುವುವು. ನೀವು ಗೋಳಾಡದೆ ಅಳದೆ ನಿಮ್ಮ ಅಕ್ರಮಗಳಿಂದ ಕುಂದಿಹೋಗಿ ಒಬ್ಬರ ಸಂಗಡಲೊಬ್ಬರು ನರಳುವಿರಿ. ಅಧ್ಯಾಯವನ್ನು ನೋಡಿ |