Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 24:3 - ಕನ್ನಡ ಸತ್ಯವೇದವು J.V. (BSI)

3 ಈ ದ್ರೋಹಿವಂಶಕ್ಕೆ ದೃಷ್ಟಾಂತವನ್ನೆತ್ತಿ ಹೀಗೆ ಹೇಳು - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಹಂಡೆಯನ್ನು ಒಲೆಯ ಮೇಲಿಡು, ಮೇಲಿಡು, ಅದರಲ್ಲಿ ನೀರನ್ನು ಹೊಯ್ಯಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 “ಈ ದಂಗೆಕೋರ ಮನೆತನದವರಿಗೆ ದೃಷ್ಟಾಂತವನ್ನು ತಿಳಿಸಿ ಹೀಗೆ ಹೇಳು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಹಂಡೆಯನ್ನು ಒಲೆಯ ಮೇಲಿಡು, ಮೇಲಿಡು, ಅದರಲ್ಲಿ ನೀರನ್ನು ಹೊಯ್ಯಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಈ ದ್ರೋಹಿವಂಶಕ್ಕೆ ದೃಷ್ಟಾಂತಕೊಟ್ಟು ಹೀಗೆ ಹೇಳು - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಹಂಡೆಯನ್ನು ಒಲೆಯ ಮೇಲಿಡು, ಮೇಲಿಡು, ಅದರಲ್ಲಿ ನೀರನ್ನು ಹೊಯ್ಯಿಸು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಈ ವಿಷಯವನ್ನು ವಿಧೇಯರಾಗದ ಆ ಸಂತಾನಕ್ಕೆ ತಿಳಿಸು. ಅವರಿಗೆ ಹೀಗೆ ಹೇಳು, ‘ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “‘ಹಂಡೆಯನ್ನು ಬೆಂಕಿಯ ಮೇಲಿಟ್ಟು ಅದರಲ್ಲಿ ನೀರು ಹೊಯ್ಯಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ದಂಗೆಕೋರ ಮನೆತನದವರಿಗೆ ಸಾಮ್ಯವನ್ನು ತಿಳಿಸಿ ಅವರಿಗೆ ಹೇಳಬೇಕಾದದ್ದೇನೆಂದರೆ: ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಹಂಡೆಯನ್ನು ಒಲೆಯ ಮೇಲಿಡು, ಮೇಲಿಟ್ಟು ಅದರಲ್ಲಿ ನೀರನ್ನು ಸುರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 24:3
30 ತಿಳಿವುಗಳ ಹೋಲಿಕೆ  

ಆಗ ನಾನು - ಅಯ್ಯೋ, ಕರ್ತನಾದ ಯೆಹೋವನೇ, ಇವನು ಒಗಟುಗಾರನಲ್ಲವೆ ಎಂದು ಈ ಜನರು ನನ್ನ ವಿಷಯವಾಗಿ ಅಂದುಕೊಳ್ಳುತ್ತಾರೆ ಎಂಬದಾಗಿ ಅರಿಕೆಮಾಡಿದೆನು.


ನರಪುತ್ರನೇ, ನೀನು ಇಸ್ರಾಯೇಲ್ ವಂಶದವರಿಗೆ ಈ ಸಾಮ್ಯವನ್ನು ಒಗಟಾಗಿ ಹೇಳು -


ಇವರು - ಮನೆಗಳನ್ನು ಕಟ್ಟಿಕೊಳ್ಳುವ ಕಾಲವು ಬಂದಿಲ್ಲ; ಈ ಪಟ್ಟಣವು ಹಂಡೆ, ನಾವು ಮಾಂಸ ಎಂದು ಹೇಳುತ್ತಾರೆ.


ನರಪುತ್ರನೇ, ನೀನು ಮುಳ್ಳುಕೊಂಪೆಗಲಿಗೆ ಸಿಕ್ಕಿಕೊಂಡು ಚೇಳುಗಳ ನಡುವೆ ವಾಸಿಸುವಂತೆ ಅವರ ಮಧ್ಯದಲ್ಲಿದ್ದರೂ ಅವರಿಗೆ ಭಯಪಡಬೇಡ, ಅವರ ಗದರಿಕೆಗೆ ಹೆದರದಿರು; ಅವರು ದ್ರೋಹಿವಂಶದವರು; ಅವರ ಬಿರುನುಡಿಗೆ ದಿಗಿಲುಪಡಬೇಡ, ಅವರ ಬಿರುನೋಟಕ್ಕೆ ಬೆಚ್ಚದಿರು.


ಆತನು ನನಗೆ ಹೀಗೆ ಹೇಳಿದನು - ನರಪುತ್ರನೇ, ನನಗೆ ವಿರುದ್ಧವಾಗಿ ತಿರುಗಿಬಿದ್ದು ದ್ರೋಹಮಾಡಿದ ಜನಾಂಗದವರಾದ ಇಸ್ರಾಯೇಲ್ಯರ ಬಳಿಗೆ ನಿನ್ನನ್ನು ಕಳುಹಿಸುವೆನು; ಈ ದಿನದವರೆಗೆ ಅವರೂ ಅವರ ಪಿತೃಗಳೂ ನನಗೆ ಅಪರಾಧಮಾಡುತ್ತಲೇ ಇದ್ದಾರೆ.


ಆಕಾಶಮಂಡಲವೇ, ಆಲಿಸು! ಭೂಮಂಡಲವೇ, ಕೇಳು! ಯೆಹೋವನು ಮಾತಾಡುತ್ತಿದ್ದಾನೆ; ನಾನು ಸಾಕಿ ಸಲಹಿದ ಮಕ್ಕಳೇ ನನಗೆ ದ್ರೋಹಮಾಡಿದ್ದಾರೆ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಹಾ, ರಕ್ತಮಯವಾದ ಪಟ್ಟಣದ ಗತಿಯನ್ನು ಏನು ಹೇಳಲಿ! ಆ ಹಂಡೆಯ ಕಿಲುಬು ಬಿಟ್ಟುಹೋಗದೆ ಅದರಲ್ಲೇ ಲೆಪ್ಪವಾಗಿದೆಯಲ್ಲಾ! ಮಾಂಸದ ತುಂಡುಗಳನ್ನು ಸಿಕ್ಕಿ ಸಿಕ್ಕಿದ ಹಾಗೆ ತೆಗೆದುಬಿಡು, ಇದಕ್ಕೆ ಕ್ರಮದ ಚೀಟು ಇಲ್ಲ.


ಇದಲ್ಲದೆ ಆತನು - ನರಪುತ್ರನೇ, ನಾನು ನಿನಗೆ ನುಡಿಯುವ ಮಾತನ್ನು ಕೇಳು; ಅವಿಧೇಯರಾದ ಆ ವಂಶದವರಂತೆ ನೀನು ಅವಿಧೇಯನಾಗಿರಬೇಡ; ನಾನು ಕೊಡುವದನ್ನು ಬಾಯಿತೆರೆದು ತಿಂದುಬಿಡು ಅಂದನು.


ಇವರು ದ್ರೋಹದ ಜನಾಂಗದವರು, ಮೋಸದ ಸಂತಾನದವರು, ಯೆಹೋವನ ಉಪದೇಶವನ್ನು ಕೇಳಲೊಲ್ಲದ ಸಂತತಿಯವರಷ್ಟೆ;


ಯೆಹೋವನು ಹೀಗೆ ನುಡಿಯುತ್ತಾನೆ :- ದ್ರೋಹಿಗಳಾದ [ನನ್ನ] ಮಕ್ಕಳ ಗತಿಯನ್ನು ಏನು ಹೇಳಲಿ! ಇವರು ನನ್ನನ್ನು ಕೇಳದೆ ಒಂದು ಆಲೋಚನೆಯನ್ನು ಸಾಗಿಸಿ ನನ್ನ ಆತ್ಮಪ್ರೇರಿತರಾಗದೆ ಉಪಾಯವನ್ನು ನೆಯ್ದು ಪಾಪದ ಮೇಲೆ ಪಾಪವನ್ನು ಸೇರಿಸಿಕೊಂಡಿದ್ದಾರೆ;


ನಾನು ಬಾಯ್ದೆರೆದು ಸಾಮ್ಯರೂಪವಾಗಿ ಉಪದೇಶಿಸುವೆನು. ಪೂರ್ವಕಾಲದ ಗೂಢಾರ್ಥಗಳನ್ನು ಹೊರಪಡಿಸುವೆನು.


ಚಂಡಿಗಳೇ, ಮನಶ್ಶುದ್ಧಿಯೂ ಕರ್ಣಶುದ್ಧಿಯೂ ಇಲ್ಲದವರೇ, ನಿಮ್ಮ ಪಿತೃಗಳು ಹೇಗೋ ಹಾಗೆಯೇ ನೀವೂ ಯಾವಾಗಲೂ ಪವಿತ್ರಾತ್ಮನನ್ನು ಎದುರಿಸುವವರಾಗಿದ್ದೀರಿ.


ಆತನು - ದೇವರ ರಾಜ್ಯದ ಗುಟ್ಟುಗಳನ್ನು ತಿಳಿಯುವ ವರವು ನಿಮಗೇ ಕೊಟ್ಟದೆ, ಉಳಿದವರಿಗೆ ಕಣ್ಣಿದ್ದರೂ ನೋಡದಂತೆಯೂ, ಕಿವಿಯಿದ್ದರೂ ತಿಳುಕೊಳ್ಳದಂತೆಯೂ ಸಾಮ್ಯರೂಪವಾಗಿ ಹೇಳಲಾಗುತ್ತದೆ.


ಇವನು ತಮ್ಮನ್ನೇ ಕುರಿತು ಈ ಸಾಮ್ಯವನ್ನು ಹೇಳಿದನು ಎಂದು ಅವರು ತಿಳುಕೊಂಡು ಆತನನ್ನು ಹಿಡಿಯುವದಕ್ಕೆ ಸಂದರ್ಭನೋಡುತ್ತಿದ್ದರು. ಆದರೆ ಜನರಿಗೆ ಭಯಪಟ್ಟು ಆತನನ್ನು ಬಿಟ್ಟುಹೋದರು.


ಆ ದಿನದಲ್ಲಿ ಜನರು ನಿಮ್ಮ ವಿಷಯವಾಗಿ ಪದ್ಯವನ್ನೆತ್ತಿ - ಅಯ್ಯೋ, ನಾವು ತೀರಾ ಸೂರೆ ಹೋದೆವಲ್ಲಾ! [ಯೆಹೋವನು] ನಮ್ಮವರ ಸ್ವಾಸ್ತ್ಯವನ್ನು ಪರಾಧೀನಮಾಡಿದ್ದಾನೆ; ಅಕಟಾ, ಅದನ್ನು ನಮ್ಮಿಂದ ತೊಲಗಿಸಿದ್ದಾನಲ್ಲಾ! ನಮ್ಮ ಭೂವಿುಯನ್ನು ದೇವದ್ರೋಹಿಗಳಿಗೆ ಹಂಚಿಕೊಟ್ಟಿದ್ದಾನೆ ಎಂದು ಶೋಕಗೀತವಾಗಿ ಹಾಡುವರು.


ದ್ರೋಹಿವಂಶದವರಾದ ಈ ಜನರಿಗೆ ಹೀಗೆ ಹೇಳು - ಇದರ ಅಭಿಪ್ರಾಯವು ನಿಮಗೆ ಗೊತ್ತಿಲ್ಲವೋ? ಇಗೋ, ಬಾಬೆಲಿನ ಅರಸನು ಯೆರೂಸಲೇವಿುಗೆ ಬಂದು ಅಲ್ಲಿನ ಅರಸನನ್ನೂ ಪ್ರಧಾನರನ್ನೂ ಹಿಡಿದು ಬಾಬೆಲಿಗೆ ಒಯ್ದುಕೊಂಡು ಹೋದನು;


ನಾನೇ ಯೆಹೋವನು; ನಾನು ನುಡಿದೇ ನುಡಿಯುವೆನು; ನಾನು ನುಡಿದ ಮಾತು ನೆರವೇರುವದು, ಇನ್ನು ನಿಧಾನವಾಗದು; ದ್ರೋಹಿ ವಂಶದವರೇ, ನಾನು ನಿಮ್ಮ ಕಾಲದಲ್ಲಿ ನುಡಿಯುವದು ಮಾತ್ರವಲ್ಲದೆ ನುಡಿದದ್ದನ್ನು ನೆರವೇರಿಸುವೆನು; ಇದು ಕರ್ತನಾದ ಯೆಹೋವನ ವಾಕ್ಯ.


ನರಪುತ್ರನೇ, ನೀನು ದ್ರೋಹಿವಂಶದ ಮಧ್ಯದಲ್ಲಿ ವಾಸಿಸುತ್ತೀ, ಆ ವಂಶದವರು ದ್ರೋಹಿಗಳಾಗಿರುವದರಿಂದ ಕಣ್ಣಿದ್ದರೂ ಕಾಣರು, ಕಿವಿಯಿದ್ದರೂ ಕೇಳರು.


ಈ ಪಟ್ಟಣವು ನಿಮಗೆ ಹಂಡೆಯಾಗುವದಿಲ್ಲ; ನೀವು ಅದರಲ್ಲಿನ ಮಾಂಸವಾಗುವದಿಲ್ಲ. ಇಸ್ರಾಯೇಲಿನ ಮೇರೆಯಲ್ಲಿ ನಿಮಗೆ ದಂಡನೆಯನ್ನು ವಿಧಿಸುವೆನು.


ಆದಕಾರಣ ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಿಮ್ಮ ದೋಷದಿಂದ ಹತರಾಗಿ ಪಟ್ಟಣದಲ್ಲಿ ಬಿದ್ದಿರುವ ನಿಮ್ಮವರ ಶವಗಳೇ ಹಂಡೆಯಲ್ಲಿನ ಮಾಂಸ, ಈ ಪಟ್ಟಣವು ಹಂಡೆ, ನಿಮ್ಮನ್ನಾದರೋ ನಾನು ಪಟ್ಟಣದೊಳಗಿಂದ ಕಿತ್ತುಹಾಕುವೆನು.


ನಿನ್ನ ಹಣೆಯನ್ನು ಕಗ್ಗಲ್ಲಿಗಿಂತ ಕಠಿನವಾದ ವಜ್ರದಷ್ಟು ಕಠಿನಪಡಿಸಿದ್ದೇನೆ; ಅವರು ದ್ರೋಹಿವಂಶದವರು, ಅವರಿಗೆ ಭಯಪಡಬೇಡ; ಅವರ ಬಿರುನೋಟಕ್ಕೆ ಬೆಚ್ಚದಿರು.


ಇನ್ನೊಂದು ಸಲ ಯೆಹೋವನು ಏನು ನೋಡುತ್ತೀ ಎಂದು ನನ್ನನ್ನು ಕೇಳಿದನು. ಅದಕ್ಕೆ ನಾನು - ಉರಿಸುತ್ತಿರುವ ಬೆಂಕಿಯಿಂದುಕ್ಕುವ ಹಂಡೆಯನ್ನು ನೋಡುತ್ತೇನೆ. ಅದರ ಬಾಯಿ ಬಡಗಲಿಂದ ಇತ್ತ ಬಾಗಿಕೊಂಡಿದೆ ಅಂದೆನು.


ಅವರಾದರೋ ಎದುರುಬಿದ್ದು ಆತನ ಪವಿತ್ರಾತ್ಮನನ್ನು ದುಃಖಪಡಿಸಿದರು; ಆದದರಿಂದ ಆತನು ಮಾರ್ಪಟ್ಟು ಅವರಿಗೆ ಶತ್ರುವಾಗಿ ತಾನೇ ಅವರೊಡನೆ ಹೋರಾಡಿದನು.


ಎಲೀಷನು ತಿರಿಗಿ ಗಿಲ್ಗಾಲಿಗೆ ಹೋದನು. ಆಗ ದೇಶದಲ್ಲಿ ಬರವಿದ್ದಿತು. ಪ್ರವಾದಿ ಮಂಡಲಿಯವರು ತನ್ನ ಮುಂದೆ ಕೂಡಿ ಬರಲು ಅವನು ತನ್ನ ಸೇವಕನಿಗೆ - ದೊಡ್ಡ ಹಂಡೆಯನ್ನು ತೆಗೆದುಕೊಂಡು ಇವರಿಗೋಸ್ಕರ ಅಡಿಗೆಮಾಡು ಎಂದು ಆಜ್ಞಾಪಿಸಿದನು.


ಆಗ ಯೆಹೋವನು ನನಗೆ ಹೀಗೆ ಹೇಳಿದನು - ಈ ದೇಶನಿವಾಸಿಗಳೆಲ್ಲರ ಮೇಲೆ ಬಡಗಲಿಂದ ಕೇಡು ಉಕ್ಕಿ ಬರುವದು.


ಆ ಪಟ್ಟಣವು ನನಗೆ ಅರೀಯೇಲಾಗಿಯೇ ಪರಿಣವಿುಸುವದು.


ಆತನು ಈ ಮಾತನ್ನು ಹೇಳಿದ ಕೂಡಲೆ ದೇವರಾತ್ಮವು ನನ್ನೊಳಗೆ ಸೇರಿ ನಾನು ಎದ್ದುನಿಂತುಕೊಳ್ಳುವಂತೆ ಮಾಡಿತು; ಆಗ ನನ್ನೊಡನೆ ಮಾತಾಡಿದಾತನ ನುಡಿಯನ್ನು ಚೆನ್ನಾಗಿ ಕೇಳಿದೆನು.


ಅವರು ದ್ರೋಹಿವಂಶದವರು, ಒಂದು ವೇಳೆ ಕೇಳದೆ ಹೋದಾರು; ಕೇಳಿದರೂ ಕೇಳದೆ ಹೋದರೂ ಒಬ್ಬ ಪ್ರವಾದಿಯು ತಮ್ಮ ಮಧ್ಯದಲ್ಲಿ ಕಾಣಿಸಿಕೊಂಡಿದ್ದಾನೆಂದು ತಿಳಿದೇ ಇರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು