Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 24:7 - ಕನ್ನಡ ಸತ್ಯವೇದವು J.V. (BSI)

7 ಯೆರೂಸಲೇಮು ಸುರಿಸಿದ ರಕ್ತವು ಅದರಲ್ಲೇ ನಿಂತಿದೆ; ದೂಳು ಮುಚ್ಚೀತೆಂದು ಆ ಪಟ್ಟಣದವರು ಅದನ್ನು ನೆಲದ ಮೇಲೆ ಹೊಯ್ಯದೆ ಬರೀ ಬಂಡೆಯ ಮೇಲೆ ನಿಲ್ಲಿಸಿರುತ್ತಾರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 “ಯೆರುಸಲೇಮ್ ನಗರ ಸುರಿಸಿದ ರಕ್ತವು ಅದರ ಮಧ್ಯದಲ್ಲಿದೆ; ಅದು ಅದನ್ನು ಬಂಡೆಯ ತುದಿಯಲ್ಲಿ ಇಟ್ಟಿದ್ದಾರೆ. ಧೂಳು ಮುಚ್ಚುವ ಹಾಗೆ ನೆಲದ ಮೇಲೆ ಚೆಲ್ಲಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಜೆರುಸಲೇಮ್ ನಗರ ಸುರಿಸಿದ ರಕ್ತ ಅದರಲ್ಲೇ ನಿಂತಿದೆ. ಧೂಳು ಮುಚ್ಚೀತೆಂದು ಆ ಪಟ್ಟಣದವರು ಅದನ್ನು ನೆಲದ ಮೇಲೆ ಹೊಯ್ಯದೆ, ಬರೀ ಬಂಡೆಯ ಮೇಲೆ ನಿಲ್ಲಿಸಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಜೆರುಸಲೇಮು ಕಿಲುಬು ಹಿಡಿದ ಹಂಡೆಯಂತಿದೆ. ಯಾಕೆಂದರೆ ಆಕೆ ಸುರಿಸಿದ ರಕ್ತದ ಕಲೆಗಳು ಇನ್ನೂ ಇವೆ. ಆಕೆಯು ಆ ರಕ್ತವನ್ನು ನೆಲದ ಮೇಲೆ ಸುರಿಯದೆ ಬಂಡೆಯ ಮೇಲೆ ಸುರಿದು ಅದಕ್ಕೆ ಮಣ್ಣನ್ನೂ ಮುಚ್ಚಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ ‘ಅದರ ರಕ್ತವು ಅದರ ಮಧ್ಯದಲ್ಲಿದೆ; ಅದು ಅದನ್ನು ಬಂಡೆಯ ತುದಿಯಲ್ಲಿ ಇಟ್ಟಿದೆ. ಧೂಳು ಮುಚ್ಚುವ ಹಾಗೆ ನೆಲದ ಮೇಲೆ ಚೆಲ್ಲಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 24:7
12 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ಯರಲ್ಲಿಯಾಗಲಿ ಅವರ ನಡುವೆ ಇಳುಕೊಂಡಿರುವ ಅನ್ಯದೇಶದವರಲ್ಲಿಯಾಗಲಿ ಯಾವನಾದರೂ ಬೇಟೆಯಾಡಿ ತಿನ್ನತಕ್ಕ ಮೃಗವನ್ನು ಇಲ್ಲವೆ ಪಕ್ಷಿಯನ್ನು ಹಿಡಿದರೆ ಅವನು ಅದರ ರಕ್ತವನ್ನು ಸುರಿಸಿ ಮಣ್ಣಿನಿಂದ ಮುಚ್ಚಿಬಿಡಬೇಕು.


ರಕ್ತವನ್ನು ಮಾತ್ರ ಭುಜಿಸಬಾರದು; ಅದನ್ನು ನೀರಿನಂತೆ ಭೂವಿುಯ ಮೇಲೆ ಸುರಿದುಬಿಡಬೇಕು.


ಅಸಹ್ಯಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾದರೂ ಎಳ್ಳಷ್ಟೂ ನಾಚಿಕೆಪಡಲಿಲ್ಲ, ಲಜ್ಜೆಯ ಗಂಧವನ್ನೂ ತಿಳಿಯಲಿಲ್ಲ; ಆದಕಾರಣ ನಾನು ದಂಡಿಸುವ ಸಮಯದಲ್ಲಿ ಅವರು ಮುಗ್ಗರಿಸುವರು, ಬೀಳುವವರ ಸಂಗಡ ಬಿದ್ದೇ ಹೋಗುವರು ಎಂದು ಯೆಹೋವನು ಅನ್ನುತ್ತಾನೆ.


ಇದಲ್ಲದೆ ನಿರ್ದೋಷಿಗಳಾದ ದರಿದ್ರರ ಪ್ರಾಣರಕ್ತವು ನಿನ್ನ ನೆರಿಗೆಯಲ್ಲಿ ಅಂಟಿಕೊಂಡಿದೆ; ಇವರು ಕನ್ನ ಕೊರೆಯುವದನ್ನು ಕಂಡೆನೆಂಬ ನೆವ ನಿನಗಿಲ್ಲ, ನಿನ್ನ ಈ ಎಲ್ಲಾ ದುರಭ್ಯಾಸಗಳ ದೆಸೆಯಿಂದ [ನಿನ್ನನ್ನು ದಂಡಿಸುವೆನು].


ಇಗೋ, ಯೆಹೋವನು ಭೂನಿವಾಸಿಗಳಿಗೆ ಅವರ ಪಾಪಫಲವನ್ನು ತಿನ್ನಿಸಬೇಕೆಂದು ತನ್ನ ಸ್ಥಳದಿಂದ ಹೊರಡುತ್ತಾನೆ; ಭೂವಿುಯು ತನ್ನಲ್ಲಿ ಇಂಗಿದ್ದ ರಕ್ತವನ್ನು ವ್ಯಕ್ತಗೊಳಿಸುವದು, ತನ್ನ ನಿವಾಸಿಗಳಲ್ಲಿ ಹತರಾಗಿದ್ದವರನ್ನು ಇನ್ನು ಮರೆಮಾಜದು.


ಅವರ ಮುಖಭಾವವೇ ಅವರಿಗೆ ವಿರುದ್ಧ ಸಾಕ್ಷಿಯಾಗಿದೆ; ತಮ್ಮ ಪಾಪವನ್ನು ಮರೆಮಾಜದೆ ಸೊದೋವಿುನವರಂತೆ ಮೆರೆಯಿಸುತ್ತಾರೆ. ಅಯ್ಯೋ, ಅವರ ಆತ್ಮದ ಗತಿಯೇ! ತಮಗೆ ತಾವೇ ಕೇಡು ಮಾಡಿಕೊಂಡಿದ್ದಾರೆ.


ಭೂವಿುಯೇ, ನನ್ನ ರಕ್ತವನ್ನು ಮುಚ್ಚಬೇಡ! ನನ್ನ ಮೊರೆಗೆ ಬಿಡುವು ಸಿಕ್ಕದಿರಲಿ!


ಅವನಿಗೆ - ನೀನು ಕೊಲೆ ಮಾಡಿ ಸ್ವಾಸ್ತ್ಯವನ್ನು ಸಂಪಾದಿಸಿಕೊಂಡಿಯಲ್ಲವೋ? ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲೇ ನಿನ್ನ ರಕ್ತವನ್ನೂ ನೆಕ್ಕುವವು ಎಂಬದಾಗಿ ಯೆಹೋವನು ಅನ್ನುತ್ತಾನೆ ಎಂದು ಅವನಿಗೆ ಹೇಳು ಎಂಬದೇ.


ಅದನ್ನು ಭುಜಿಸದೆ ನೀರಿನಂತೆ ಭೂವಿುಯ ಮೇಲೆ ಸುರಿದುಬಿಡಬೇಕು.


ನೀನು ಸುರಿಸಿದ ರಕ್ತದಿಂದ ಅಪರಾಧಿಯೂ ಮಾಡಿಕೊಂಡ ಬೊಂಬೆಗಳಿಂದ ಹೊಲಸೂ ಆಗಿ ಶಿಕ್ಷೆಯ ಸಮಯವನ್ನು ಹತ್ತಿರಕ್ಕೆ ತಂದುಕೊಂಡು ದಂಡನೆಯ ಕಾಲಕ್ಕೆ ಬಂದಿದ್ದೀ; ಆದಕಾರಣ ನಿನ್ನನ್ನು ಜನಾಂಗಗಳ ದೂಷಣೆಗೂ ಸಕಲ ದೇಶಗಳ ಹಾಸ್ಯಕ್ಕೂ ಗುರಿಮಾಡಿದ್ದೇನೆ.


ಯೆಹೋವನಾದ ನನಗೆ ಜನರು ಪಾಪಮಾಡಿದ ಕಾರಣ ಕುರುಡರಂತೆ ನಡೆಯುವ ಹಾಗೆ ಅವರನ್ನು ಸಂಕಟಪಡಿಸುವೆನು; ಅವರ ರಕ್ತವು ದೂಳಿನಂತೆ ಚೆಲ್ಲಿಹೋಗುವದು, ಅವರ ಮಾಂಸವು ಮಲದ ಹಾಗೆ ಬಿದ್ದಿರುವದು.


ಸದ್ಧರ್ಮಿಗಳು ಅವರಿಗೆ ನ್ಯಾಯತೀರಿಸಿ ವ್ಯಭಿಚಾರಿಣಿಯರಿಗೂ ರಕ್ತಸುರಿಸುವ ಹೆಂಗಸರಿಗೂ ತಕ್ಕ ದಂಡನೆಯನ್ನು ಅವರಿಗೆ ವಿಧಿಸುವರು; ಅವರು ವ್ಯಭಿಚಾರಿಣಿಯರು, ಅವರ ಕೈ ರಕ್ತವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು