Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 24:9 - ಕನ್ನಡ ಸತ್ಯವೇದವು J.V. (BSI)

9 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಹಾ, ರಕ್ತಮಯವಾದ ಪಟ್ಟಣದ ಗತಿಯನ್ನು ಏನು ಹೇಳಲಿ! ನಾನೇ ಬೆಂಕಿಯನ್ನು ರಾಶಿಯಾಗಿ ಹೆಚ್ಚಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ, ರಕ್ತಾಪರಾಧವುಳ್ಳ ಆ ಪಟ್ಟಣಕ್ಕೆ ಕಷ್ಟ! ನಾನೇ ಬೆಂಕಿಯನ್ನು ರಾಶಿಯಾಗಿ ಹೆಚ್ಚಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ಹಾ, ರಕ್ತಮಯವಾದ ಪಟ್ಟಣವೇ, ನಿನಗೆ ಧಿಕ್ಕಾರ! ನಾನೇ ಬೆಂಕಿಯನ್ನು ರಾಶಿಯಾಗಿ ಹೆಚ್ಚಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “‘ಆದ್ದರಿಂದ ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ಕೊಲೆಗಾರರಿಂದ ತುಂಬಿದ್ದ ನಗರಕ್ಕೆ ಕೇಡು ಉಂಟಾಗುವದು. ನಾನು ಸೌದೆಯ ಗುಡ್ಡೆಯನ್ನು ದೊಡ್ಡದು ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ ‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಆ ರಕ್ತಾಪರಾಧವುಳ್ಳ ಪಟ್ಟಣಕ್ಕೆ ಕಷ್ಟ! ನಾನೇ ಬೆಂಕಿಯನ್ನು ರಾಶಿಯಾಗಿ ಹೆಚ್ಚಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 24:9
20 ತಿಳಿವುಗಳ ಹೋಲಿಕೆ  

ಅಯ್ಯೋ, ಪಟ್ಟಣವನ್ನು ನರಹತ್ಯದಿಂದ ಕಟ್ಟಿ ಊರನ್ನು ಅನ್ಯಾಯದಿಂದ ಸ್ಥಾಪಿಸುವವನ ಗತಿಯನ್ನು ಏನು ಹೇಳಲಿ!


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಹಾ, ರಕ್ತಮಯವಾದ ಪಟ್ಟಣದ ಗತಿಯನ್ನು ಏನು ಹೇಳಲಿ! ಆ ಹಂಡೆಯ ಕಿಲುಬು ಬಿಟ್ಟುಹೋಗದೆ ಅದರಲ್ಲೇ ಲೆಪ್ಪವಾಗಿದೆಯಲ್ಲಾ! ಮಾಂಸದ ತುಂಡುಗಳನ್ನು ಸಿಕ್ಕಿ ಸಿಕ್ಕಿದ ಹಾಗೆ ತೆಗೆದುಬಿಡು, ಇದಕ್ಕೆ ಕ್ರಮದ ಚೀಟು ಇಲ್ಲ.


ಪುರಾತನ ಕಾಲದಿಂದಲೂ ಅಗ್ನಿಕುಂಡವು ಸಿದ್ಧವಾಗಿದೆ; ಹೌದು, ರಾಜನಿಗೆ ಅಣಿಯಾಗಿದೆ; ಅದನ್ನು ಆಳವಾಗಿಯೂ ಅಗಲವಾಗಿಯೂ ಮಾಡಿದ್ದಾನೆ; ಅದರಲ್ಲಿನ ಚಿತೆಯೊಳಗೆ ಬೆಂಕಿಯೂ ಬೇಕಾದಷ್ಟು ಕೊರಡುಗಳೂ ಇವೆ; ಯೆಹೋವನ ಶ್ವಾಸವು ಗಂಧಕದ ಪ್ರವಾಹದೋಪಾದಿಯಲ್ಲಿ ಅದನ್ನು ಉರಿಸುವದು.


ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಸೇರಿದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.


ಮಹಾ ಪಟ್ಟಣವು ಮೂರು ಭಾಗವಾಯಿತು; ಜನಾಂಗಗಳ ಪಟ್ಟಣಗಳು ಬಿದ್ದವು. ಇದಲ್ಲದೆ ದೇವರು ದೊಡ್ಡ ಬಾಬೆಲನ್ನು ಜ್ಞಾಪಿಸಿಕೊಂಡು ತನ್ನ ಉಗ್ರಕೋಪವೆಂಬ ದ್ರಾಕ್ಷಾರಸದ ಪಾತ್ರೆಯನ್ನು ಅವಳಿಗೆ ಕುಡಿಯಲು ಕೊಟ್ಟನು.


ಅವರು ದೇವಜನರ ಮತ್ತು ಪ್ರವಾದಿಗಳ ರಕ್ತವನ್ನು ಸುರಿಸಿದರು; ನೀನು ಅವರಿಗೆ ರಕ್ತವನ್ನೇ ಕುಡಿಯುವದಕ್ಕೆ ಕೊಟ್ಟಿದ್ದೀ; ಇದಕ್ಕೆ ಅವರು ಪಾತ್ರರು ಎಂದು ಹೇಳುವದನ್ನು ಕೇಳಿದೆನು.


ಅದನ್ನು ಪಟ್ಟಣದ ಹೊರಗೆ ಆ ತೊಟ್ಟಿಯಲ್ಲಿ ತುಳಿದರು. ಆ ತೊಟ್ಟಿಯೊಳಗಿಂದ ರಕ್ತವು ಹೊರಟು ಕುದುರೆಗಳ ಕಡಿವಾಣಗಳನ್ನು ಮುಟ್ಟುವಷ್ಟು ಆಳವಾಗಿ ಇನ್ನೂರು ಮೈಲಿ ದೂರ ಹರಿಯಿತು.


ಸೊದೋಮ ಗೊಮೋರ ಪಟ್ಟಣಗಳವರೂ ಅವುಗಳ ಸುತ್ತುಮುತ್ತಣ ಪಟ್ಟಣಗಳವರೂ ಆ ದೂತರಂತೆ ನಡೆದುಕೊಂಡು ತಮ್ಮನ್ನು ಜಾರತ್ವಕ್ಕೆ ಒಪ್ಪಿಸಿಬಿಟ್ಟು ಸ್ವಭಾವವಿರುದ್ಧವಾದ ಭೋಗವನ್ನನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ದಂಡನೆಯನ್ನು ಅನುಭವಿಸುತ್ತಾ [ದುರ್ಮಾರ್ಗಿಗಳಿಗೆ ಆಗುವ ದುರ್ಗತಿಗೆ] ಉದಾಹರಣೆಯಾಗಿ ಇಡಲ್ಪಟ್ಟಿದ್ದಾರೆ.


ಆಗ ನಮ್ಮ ಕರ್ತನಾದ ಯೇಸುವು ದೇವರನ್ನರಿಯದವರಿಗೂ ತನ್ನ ಸುವಾರ್ತೆಗೆ ಒಳಪಡದವರಿಗೂ ಪ್ರತೀಕಾರವನ್ನು ಸಲ್ಲಿಸುವನು.


ಅಯ್ಯೋ, ರಕ್ತಮಯಪುರಿಯ ಗತಿಯನ್ನು ಏನೆಂದು ಹೇಳಲಿ! ಅದು ಸುಳ್ಳಿನಿಂದಲೂ ಸುಲಿಗೆಯಿಂದಲೂ ತುಂಬಿದೆ; ಕೊಳ್ಳೆಹೊಡೆಯುವದನ್ನು ಬಿಡುವದೇ ಇಲ್ಲ.


ಆದಕಾರಣ ನಾನು ನನ್ನ ಕೋಪವನ್ನು ಅವರ ಮೇಲೆ ಸುರಿಸಿ ನನ್ನ ರೋಷಾಗ್ನಿಯಿಂದ ಅವರನ್ನು ಧ್ವಂಸಮಾಡಿ ಅವರ ದುರ್ನಡತೆಯನ್ನು ಅವರ ತಲೆಗೇ ಕಟ್ಟಿದ್ದೇನೆ; ಇದು ಕರ್ತನಾದ ಯೆಹೋವನ ನುಡಿ.


ಅವರ ಶರಣನು ಭಯದಿಂದ ಹೋಗಿಬಿಡುವನು; ಅವರ ಪ್ರಧಾನರು ಹೆದರಿ ಧ್ವಜಸ್ಥಾನದಿಂದ ದಿಕ್ಕಾಪಾಲಾಗುವರು. ಚೀಯೋನಿನಲ್ಲಿ ಅಗ್ನಿಯನ್ನೂ ಯೆರೂಸಲೇವಿುನಲ್ಲಿ ಒಲೆಯನ್ನೂ ಮಾಡಿಕೊಂಡಿರುವ ಯೆಹೋವನ ನುಡಿ ಇದೇ.


ತುಂಬಾ ಸೌದೆ ಹಾಕು, ಬೆಂಕಿಯನ್ನುರಿಸು, ಮಾಂಸವನ್ನು ತೀರಾ ಬೇಯಿಸು, ಸಾರನ್ನು ಮಂದಮಾಡು, ಎಲುಬುಗಳು ಹೊತ್ತಿಹೋಗಲಿ.


ನರಪುತ್ರನೇ, ನೀನು ಯೆರೂಸಲೇವಿುಗೆ ಅಭಿಮುಖನಾಗಿ ಅಲ್ಲಿನ ಪವಿತ್ರಸ್ಥಾನಗಳ ಕಡೆಗೆ ಮಾತಾಡುತ್ತಾ ಇಸ್ರಾಯೇಲ್ ದೇಶದ ಪ್ರಸ್ತಾಪವನ್ನೆತ್ತಿ ಆ ದೇಶಕ್ಕೆ ಹೀಗೆ ಸಾರಿಹೇಳು -


ಯೆಹೋವನು ಇಂತೆನ್ನುತ್ತಾನೆ - ಆಹಾ, ನಾನು ನಿನಗೆ ವಿರುದ್ಧನಾಗಿದ್ದೇನೆ, ನನ್ನ ಖಡ್ಗವನ್ನು ಒರೆಯಿಂದ ಹಿರಿದು ನಿನ್ನಲ್ಲಿನ ಶಿಷ್ಟರನ್ನೂ ದುಷ್ಟರನ್ನೂ ಸಂಹರಿಸಿಬಿಡುವೆನು.


ನರಪುತ್ರನೇ, ರಕ್ತಮಯವಾದ ಆ ಪಟ್ಟಣಕ್ಕೆ ನ್ಯಾಯತೀರಿಸಲು ನಿನ್ನ ಮನಸ್ಸು ಸ್ಥಿರವೋ, ಸ್ಥಿರವಾಗಿದೆಯೋ? ಅದರ ದುರಾಚಾರಗಳನ್ನೆಲ್ಲಾ ಅದಕ್ಕೆ ಹೀಗೆ ತಿಳಿಸು -


ಹಿಂಡಿನಲ್ಲಿ ಶ್ರೇಷ್ಠವಾದದ್ದನ್ನು ತೆಗೆದುಕೋ; ಹಂಡೆಯ ತಳದಲ್ಲಿ ಎಲುಬುಗಳನ್ನು ರಾಶಿಯಾಗಿ ಒಟ್ಟು; ಚೆನ್ನಾಗಿ ಕುದಿಸು; ಹೌದು, ಎಲುಬುಗಳು ಅದರಲ್ಲಿ ಬೇಯಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು