Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 25:17 - ಕನ್ನಡ ಸತ್ಯವೇದವು J.V. (BSI)

17 ಅವರೆಲ್ಲರನ್ನು ಬಲವಾಗಿ ಖಂಡಿಸಿ ಮುಯ್ಯಿಗೆ ಮುಯ್ಯಿತೀರಿಸುವೆನು; ಹೀಗೆ ಪ್ರತೀಕಾರಮಾಡಲು ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅವರೆಲ್ಲರನ್ನು ಬಲವಾಗಿ ಖಂಡಿಸಿ ಮುಯ್ಯಿಗೆಮುಯ್ಯಿ ತೀರಿಸುವೆನು; ಹೀಗೆ ಪ್ರತಿಕಾರಮಾಡುವುದರಿಂದ ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅವರೆಲ್ಲರನ್ನು ಬಹಳವಾಗಿ ಖಂಡಿಸಿ ಮುಯ್ಯಿಗೆ ಮುಯ್ಯಿ ತೀರಿಸುವೆನು; ಹೀಗೆ ಪ್ರತೀಕಾರಮಾಡುವೆನು, ನಾನೇ ಸರ್ವೇಶ್ವರ ಎಂದು ಅವರಿಗೆ ಗೊತ್ತಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನಾನು ಅವರೊಂದಿಗೆ ಮುಯ್ಯಿತೀರಿಸಿಕೊಳ್ಳುವೆನು. ನನ್ನ ಕೋಪವು ಅವರಿಗೆ ಪಾಠ ಕಲಿಸುವದು. ನಾನು ಯೆಹೋವನೆಂದು ಆಗ ಅವರು ತಿಳಿದುಕೊಳ್ಳುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನಾನು ದೊಡ್ಡ ಪ್ರತಿದಂಡನೆಯನ್ನು ಉರಿಯುಳ್ಳ ಗದರಿಕೆಗಳ ಸಂಗಡ ಅವರಲ್ಲಿ ಮುಯ್ಯಿತೀರಿಸುವೆನು. ಹೀಗೆ ಪ್ರತೀಕಾರ ಮಾಡಿದ ಮೇಲೆ ನಾನೇ ಯೆಹೋವ ದೇವರೆಂದು ಅವರಿಗೆ ತಿಳಿಯುವುದು.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 25:17
9 ತಿಳಿವುಗಳ ಹೋಲಿಕೆ  

ನಾನು ಎದೋವಿುಗೆ ನನ್ನ ಜನರಾದ ಇಸ್ರಾಯೇಲ್ಯರ ಕೈಯಿಂದ ಮುಯ್ಯಿತೀರಿಸುವೆನು; ಅವರು ನನ್ನ ಕೋಪರೋಷಗಳಿಗೆ ತಕ್ಕ ಹಾಗೆ ಅದಕ್ಕೆ ಮಾಡುವರು; ನನ್ನ ಪ್ರತೀಕಾರವು ಎದೋವಿುನ ಅನುಭವಕ್ಕೆ ಬರುವದು; ಇದು ಕರ್ತನಾದ ಯೆಹೋವನ ನುಡಿ.


ಮೋವಾಬ್ಯರಿಗೂ ದಂಡನೆಗಳನ್ನು ವಿಧಿಸಿ ತೀರಿಸುವೆನು; ಆಗ ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವದು.


ನಾನು ಕೋಪದಿಂದಲೂ ರೋಷದಿಂದಲೂ ಕಠಿನವಾದ ಖಂಡನೆಯಿಂದಲೂ ನಿನಗೆ ಮಾಡುವ ದಂಡನೆಗಳು ಸುತ್ತಲಿನ ಜನಾಂಗಗಳ ದೂಷಣಪರಿಹಾಸಗಳಿಗೂ ಬುದ್ಧಿವಾದಾಶ್ಚರ್ಯಗಳಿಗೂ ಆಸ್ಪದವಾಗುವವು; ಇದು ಯೆಹೋವನಾದ ನನ್ನ ನುಡಿ.


ಯೆಹೋವನು ನ್ಯಾಯತೀರಿಸುವವನಾಗಿ ತನ್ನನ್ನು ಪ್ರಕಟಿಸಿಕೊಂಡಿದ್ದಾನೆ; ದುಷ್ಟರು ತಾವೇ ಕಲ್ಪಿಸಿದ ಕುಯುಕ್ತಿಯಲ್ಲಿ ಸಿಕ್ಕಿಕೊಂಡಿದ್ದಾರಲ್ಲಾ. ಹಿಗ್ಗಾಯೋನ್ ಸೆಲಾ.


ನಾನು ರಬ್ಬಾಪಟ್ಟಣವನ್ನು ಒಂಟೆಗಳಿಗೆ ಲಾಯವನ್ನಾಗಿಯೂ ಅಮ್ಮೋನ್ ಸೀಮೆಯನ್ನು ಹಿಂಡುಗಳಿಗೆ ರೊಪ್ಪವನ್ನಾಗಿಯೂ ಮಾಡುವೆನು; ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು.


ಹತರಾದವರು ನಿಮ್ಮ ಮಧ್ಯದಲ್ಲಿ ಬೀಳುವರು; ಆಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು.


ಆದದರಿಂದ ಯೆಹೋವನು ಮತ್ತೆ ಹೇಳುವದೇನಂದರೆ - ನೀನು ನನ್ನನ್ನು ಯೆಹೋವನೆಂದು ತಿಳಿದುಕೊಳ್ಳುವದಕ್ಕಾಗಿ ನನ್ನ [ಸೇವಕನ] ಕೈಯಲ್ಲಿರುವ ಕೋಲಿನಿಂದ ನೈಲ್ ನದಿಯ ನೀರನ್ನು ಹೊಡಿಸುವೆನು; ಆಗ ಅದು ರಕ್ತವಾಗುವದು.


ಅವರು ಜನಾಂಗಗಳಿಗೆ ಮುಯ್ಯಿತೀರಿಸುವರು; ಅನ್ಯಜನಗಳನ್ನು ದಂಡಿಸುವರು;


[ಯೆಹೋಯಾಖೀನನು ಸೆರೆಯಾದ] ಹನ್ನೊಂದನೆಯ ವರುಷದ [ಒಂದಾನೊಂದು] ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು