Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 25:3 - ಕನ್ನಡ ಸತ್ಯವೇದವು J.V. (BSI)

3 ಕರ್ತನಾದ ಯೇಹೋವನ ಮಾತನ್ನು ಕೇಳು - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - [ಅಮ್ಮೋನೇ,] ನನ್ನ ಪವಿತ್ರಾಲಯವು ಹೊಲಸಾದದ್ದನ್ನು, ಇಸ್ರಾಯೇಲ್ ದೇಶವು ಹಾಳುಬಿದ್ದದ್ದನ್ನು, ಯೆಹೂದವಂಶದವರು ಸೆರೆಹೋದದ್ದನ್ನು ನೀನು ನೋಡಿ ಅಹಹ ಎಂದು ಹಿಗ್ಗಿಕೊಂಡದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ‘ಕರ್ತನಾದ ಯೆಹೋವನ ಮಾತನ್ನು ಕೇಳು’ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಅಮ್ಮೋನೇ, ನನ್ನ ಪವಿತ್ರಾಲಯವು ಅಪವಿತ್ರವಾದದ್ದನ್ನು, ಇಸ್ರಾಯೇಲ್ ದೇಶವು ಹಾಳುಬಿದ್ದದನ್ನು, ಯೆಹೂದ ವಂಶದವರು ಸೆರೆಹೋದದ್ದನ್ನು ನೀನು ನೋಡಿ, “ಅಹಾ!” ಎಂದು ಹಿಗ್ಗಿಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಸರ್ವೇಶ್ವರನಾದ ದೇವರ ವಾಕ್ಯವನ್ನು ಕೇಳು - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಅಮ್ಮೋನೇ, ನನ್ನ ಪವಿತ್ರಾಲಯವು ಅಪವಿತ್ರವಾದುದ್ದನ್ನು, ಇಸ್ರಯೇಲ್ ನಾಡು ಪಾಳುಬಿದ್ದುದನ್ನು, ಯೆಹೂದ್ಯವಂಶದವರು ಗಡೀಪಾರಾದುದನ್ನು ನೋಡಿ ನೀನು ಹಿರಿಹಿರಿ ಹಿಗ್ಗಿಹೋದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅಮ್ಮೋನಿಯರಿಗೆ ಹೀಗೆ ಹೇಳು: ‘ನನ್ನ ಒಡೆಯನಾದ ಯೆಹೋವನ ಮಾತುಗಳನ್ನು ಕೇಳಿರಿ. ಆತನು ಹೇಳುವುದೇನೆಂದರೆ, ನನ್ನ ಪವಿತ್ರಾಲಯವು ಅಪವಿತ್ರಗೊಂಡಾಗಲೂ ಇಸ್ರೇಲ್ ದೇಶವು ನಾಶವಾದಾಗಲೂ ಯೆಹೂದದ ಜನರು ಸೆರೆ ಒಯ್ಯಲ್ಪಟ್ಟಾಗಲೂ ನೀವು ಸಂತೋಷಪಟ್ಟಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅಮ್ಮೋನ್ಯರಿಗೆ ಹೇಳು, ‘ಸಾರ್ವಭೌಮ ಯೆಹೋವ ದೇವರ ವಾಕ್ಯವನ್ನು ಕೇಳಿರಿ. ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ, ನೀವು ನನ್ನ ಪರಿಶುದ್ಧ ಸ್ಥಳವನ್ನು ಅಪವಿತ್ರ ಪಡಿಸಿದಾಗಲೂ ಇಸ್ರಾಯೇಲಿನ ದೇಶವು ಹಾಳಾದಾಗಲೂ ಯೆಹೂದನ ಮನೆತನದವರು ಸೆರೆಯಲ್ಲಿದ್ದಾಗಲೂ ನೀವು “ಆಹಾ!” ಅಂದದ್ದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 25:3
16 ತಿಳಿವುಗಳ ಹೋಲಿಕೆ  

ಶತ್ರುವು ನಿಮ್ಮನ್ನು ನೋಡಿ ಆಹಾ, ಎನ್ನುತ್ತಾ ಈ ಪುರಾತನದುರ್ಗಗಳು ನಮ್ಮ ವಶವಾಗಿವೆ ಎಂದು ಹಿಗ್ಗಿಕೊಂಡದರಿಂದ ಈ ದೈವೋಕ್ತಿಯನ್ನು ನುಡಿಯಬೇಕೆಂದು ಕರ್ತನಾದ ಯೆಹೋವನ ಅಪ್ಪಣೆಯಾಯಿತು -


ಬಡವರನ್ನು ಹಾಸ್ಯಮಾಡುವವನು ಸೃಷ್ಟಿಕರ್ತನನ್ನೇ ಹೀನೈಸುವನು; [ಪರರ] ವಿಪತ್ತಿಗೆ ಹಿಗ್ಗುವವನು ದಂಡನೆಯನ್ನು ಹೊಂದದಿರನು.


ನನ್ನ ಶತ್ರುವೇ, ನನ್ನ ವಿಷಯದಲ್ಲಿ ಹಿಗ್ಗಬೇಡ; ನಾನು ಬಿದ್ದಿದ್ದರೂ ಏಳುವೆನು, ಕತ್ತಲಲ್ಲಿ ಕೂತಿದ್ದರೂ ಯೆಹೋವನು ನನಗೆ ಬೆಳಕಾಗಿರುವನು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನೀನು ಚಪ್ಪಾಳೆಹೊಡೆದು ಕಾಲಿನಿಂದ ನೆಲವನ್ನು ಬಡಿದು ಇಸ್ರಾಯೇಲ್ ದೇಶವನ್ನು ಮನಃಪೂರ್ವಕವಾಗಿ ತಿರಸ್ಕರಿಸಿ ಅದರ ಗತಿಗೆ ಹಿಗ್ಗಿಕೊಂಡದರಿಂದ


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ಯೆಹೂದವಂಶವು ಎಲ್ಲಾ ಜನಾಂಗಗಳ ಹಾಗೆಯೇ ಇದೆ, [ವಿಶೇಷವೇನು] ಎಂದು ಮೋವಾಬೂ ಸೇಯೀರೂ ಅಂದುಕೊಂಡದರಿಂದ


ಊಚ್ ದೇಶದಲ್ಲಿ ವಾಸಿಸುವ ಎದೋಮೆಂಬ ಯುವತಿಯೇ, ಹರ್ಷಿಸು, ಉಲ್ಲಾಸಗೊಳ್ಳು; ಆದರೆ [ರೋಷಪಾನದ] ಪಾತ್ರೆಯು ನಿನ್ನ ಪಾಲಿಗೂ ಬರುವದು; ಅಮಲೇರಿದವಳಾಗಿ ನಿನ್ನನ್ನು ನೀನೇ ಬೆತ್ತಲೆ ಮಾಡಿಕೊಳ್ಳುವಿ.


ನರಪುತ್ರನೇ, ನೀನು ದೈವಸಂಕಲ್ಪವನ್ನು ಪ್ರಕಟಿಸುತ್ತಾ ಹೀಗೆ ನುಡಿ - ಅಮ್ಮೋನ್ಯರ ವಿಷಯದಲ್ಲಿಯೂ ಅವರು ಮಾಡುವ ದೂಷಣೆಯ ವಿಷಯದಲ್ಲಿಯೂ ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ಖಡ್ಗ, ಖಡ್ಗ, ಸಂಹರಿಸುವದಕ್ಕೆ ಹಿರಿದಿದೆ, ವಿುಂಚುವಂತೆ ತೀರಾತಿಕ್ಕಿದೆ;


ಮೋವಾಬ್ಯರೂ ಅಮ್ಮೋನ್ಯರೂ ಉಬ್ಬಟೆಯಿಂದ ನನ್ನ ಜನರ ಮೇರೆಯನ್ನು ಮೀರಿ ಅವರ ಮೇಲೆ ಹೊರಿಸಿರುವ ದೂರುದೂಷಣೆಗಳು ನನ್ನ ಕಿವಿಗೆ ಬಿದ್ದಿವೆ.


ಇವರು ಬೀಜ ಬಿತ್ತಿದ ತರುವಾಯ ವಿುದ್ಯಾನ್ಯರೂ ಅಮಾಲೇಕ್ಯರೂ ಮೂಡಣ ದೇಶದವರೂ ಇವರಿಗೆ ವಿರೋಧವಾಗಿ ದಂಡೆತ್ತಿ ಬಂದು ಇಳುಕೊಂಡು


ಅವರು ನನ್ನನ್ನು ನೋಡಿ ಬಾಯಿಕಿಸಿದು - ಆಹಾ, ಆಹಾ, ನಮ್ಮ ಕಣ್ಣು ಕಂಡಿತಲ್ಲಾ ಅನ್ನುತ್ತಾರೆ.


ಯೆರೂಸಲೇಮ್ ಪುರಿಯು ದಿಕ್ಕಾಪಾಲಾಗಿ ಅಲೆದು ಕಷ್ಟಪಡುವಾಗ ಪುರಾತನಕಾಲದಿಂದ ತನಗಿದ್ದ ಭೋಗ್ಯ ವಸ್ತುಗಳನ್ನು ಜ್ಞಾಪಿಸಿಕೊಳ್ಳುತ್ತಾಳೆ; ಆಕೆಗೆ ಯಾರ ಸಹಾಯವೂ ಇಲ್ಲದೆ ಆಕೆಯ ಜನರು ವಿರೋಧಿಯ ಕೈಗೆ ಸಿಕ್ಕಿದಾಗ ಹಾಳುಬಿದ್ದಿರುವ ಆಕೆಯನ್ನು ವೈರಿಗಳು ನೋಡಿ ಹಾಸ್ಯಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು