Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 26:11 - ಕನ್ನಡ ಸತ್ಯವೇದವು J.V. (BSI)

11 ಅವನು ತನ್ನ ಕುದುರೆಗಳ ಗೊರಸುಗಳಿಂದ ನಿನ್ನ ಬೀದಿಗಳನ್ನು ತುಳಿಸಿ ಖಡ್ಗದಿಂದ ನಿನ್ನ ಜನರನ್ನು ಸಂಹರಿಸಿ ನಿನ್ನ ಬಲವಾದ ಕಲ್ಲುಕಂಬಗಳನ್ನು ಕೆಡವುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವನು ತನ್ನ ಕುದುರೆಗಳ ಗೊರಸುಗಳಿಂದ ನಿನ್ನ ಬೀದಿಗಳನ್ನು ತುಳಿಸಿ, ಖಡ್ಗದಿಂದ ನಿನ್ನ ಜನರನ್ನು ಸಂಹರಿಸಿ, ನಿನ್ನ ಬಲವಾದ ಕಲ್ಲು ಕಂಬಗಳನ್ನು ಕೆಡವಿ ಹಾಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅವನು ತನ್ನ ಕುದುರೆಗಳ ಗೊರಸುಗಳಿಂದ ನಿನ್ನ ಬೀದಿಗಳನ್ನು ತುಳಿಸಿ, ಖಡ್ಗದಿಂದ ನಿನ್ನ ಜನರನ್ನು ಸಂಹರಿಸಿ, ನಿನ್ನ ಬಲವಾದ ಕಲ್ಲುಕಂಬಗಳನ್ನು ಕೆಡಹುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಬಾಬಿಲೋನಿನ ರಾಜನು ಕುದುರೆಯ ಮೇಲೆ ಕುಳಿತುಕೊಂಡು ನಿನ್ನ ನಗರದೊಳಗೆ ಪ್ರವೇಶಮಾಡುವನು. ನಿನ್ನ ರಸ್ತೆಗಳ ಮೇಲೆ ಅವನ ಕುದುರೆಯ ಗೊರಸು ಶಬ್ದವೇರಿಸುವದು. ನಿನ್ನನ್ನು ತನ್ನ ಖಡ್ಗದಿಂದ ಸಂಹರಿಸುವನು. ನಿನ್ನ ನಗರದಲ್ಲಿನ ಉನ್ನತಸ್ತಂಭಗಳು ಕೆಡವಲ್ಪಡುವವು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅವನು ತನ್ನ ಕುದುರೆಗಳ ಗೊರಸುಗಳಿಂದ ನಿನ್ನ ಬೀದಿಗಳನ್ನೆಲ್ಲಾ ತುಳಿಸುವನು; ನಿನ್ನ ಜನರನ್ನು ಖಡ್ಗದಿಂದ ಕೊಲ್ಲುವನು; ನಿನ್ನ ಬಲವಾದ ಕಂಬಗಳು ನೆಲಕ್ಕೆ ಬೀಳುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 26:11
5 ತಿಳಿವುಗಳ ಹೋಲಿಕೆ  

ಆತನು ಎತ್ತರದಲ್ಲಿ ವಾಸಿಸುವವರನ್ನೂ [ಅವರ] ಉನ್ನತಪಟ್ಟಣವನ್ನೂ ತಗ್ಗಿಸಿದ್ದಾನೆ. ಅದನ್ನು ಕೆಡವಿ ನೆಲಸಮಮಾಡಿ ದೂಳಿಗೆ ತಂದಿದ್ದಾನೆ.


ಅವರ ಅಂಬುಗಳು ಮೊನೆಯಾಗಿವೆ, ಬಿಲ್ಲುಗಳು ಬಿಗಿದಿವೆ; ಕುದುರೆಗಳ ಗೊರಸೆಗಳು ಕಲ್ಲಿನಂತಿವೆ; ಚಕ್ರಗಳು ಬಿರುಗಾಳಿಯಂತೆ ರಭಸವಾಗಿವೆ;


ಅವರ ಕುದುರೆಗಳು ಚಿರತೆಗಳಿಗಿಂತ ವೇಗವಾಗಿವೆ, ಸಂಜೆಯ ತೋಳಗಳಿಗಿಂತ ಚುರುಕಾಗಿವೆ; ಅವರ ಸವಾರರು ಕುದುರೆಗಳನ್ನು ಕುಣಿದಾಡಿಸುವರು; ದೂರದಿಂದ ಹತ್ತಿಕೊಂಡು ಬರುವರು; ಕೊಳ್ಳೆಗೆ ಆತುರಪಡುವ ಹದ್ದಿನಂತೆ ಹಾರಾಡುವರು.


ದೇಶದಲ್ಲಿ ಧ್ವಜವೆತ್ತಿರಿ, ರಾಜ್ಯಗಳಲ್ಲೆಲ್ಲಾ ಕೊಂಬೂದಿರಿ, ಜನಾಂಗಗಳನ್ನು ಸನ್ನಾಹಮಾಡಿರಿ, ಬಾಬೆಲಿನ ಮೇಲೆ ಬೀಳಲಿಕ್ಕೆ ಅರರಾಟ್, ವಿುನ್ನಿ, ಅಷ್ಕೆನಜ್ ಎಂಬ ರಾಷ್ಟ್ರಗಳನ್ನು ಕರೆದುಕೊಳ್ಳಿರಿ, ಸೋಲಿಸಲು ಸೇನಾಪತಿಯನ್ನು ನೇವಿುಸಿರಿ, ಅಶ್ವಬಲವನ್ನು ಬಿರುಸಾದ ವಿುಡಿತೆದಂಡಿನೋಪಾದಿಯಲ್ಲಿ ಬರಮಾಡಿರಿ.


ಐಗುಪ್ತದೇಶದಲ್ಲಿರುವ ಸೂರ್ಯಪುರಿಯ ಸ್ತಂಭಗಳನ್ನು ಒಡೆದುಹಾಕಿ ಐಗುಪ್ತದ ದೇವಾಲಯಗಳನ್ನು ಬೆಂಕಿಯಿಂದ ಸುಟ್ಟುಬಿಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು