Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 26:13 - ಕನ್ನಡ ಸತ್ಯವೇದವು J.V. (BSI)

13 ನಾನು ನಿನ್ನ ಸಂಗೀತಗಳ ಧ್ವನಿಯನ್ನು ನಿಲ್ಲಿಸಿಬಿಡುವೆನು; ನಿನ್ನ ಕಿನ್ನರಿಗಳ ನುಡಿಯು ಇನ್ನು ಕೇಳಿಸದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಾನು ನಿನ್ನ ಸಂಗೀತಗಳ ಧ್ವನಿಯನ್ನು ನಿಲ್ಲಿಸಿಬಿಡುವೆನು; ನಿನ್ನ ಕಿನ್ನರಿಗಳ ನುಡಿಯು ಇನ್ನು ಕೇಳಿಸದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನಾನು ನಿನ್ನ ಸಂಗೀತಗಳ ಧ್ವನಿಯನ್ನು ನಿಲ್ಲಿಸಿಬಿಡುವೆನು; ನಿನ್ನ ಕಿನ್ನರಿಗಳ ನುಡಿ ಇನ್ನು ಕೇಳಿಸದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಿನ್ನ ಸಂತಸದ ಹಾಡುಗಳನ್ನು ನಾನು ನಿಲ್ಲಿಸಿಬಿಡುವೆನು. ನಿನ್ನ ಕಿನ್ನರಿ ಸ್ವರವನ್ನು ಜನರು ಇನ್ನೆಂದೂ ಕೇಳರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆಗ ನಿನ್ನ ಹಾಡುಗಳ ಶಬ್ದವನ್ನು ನಿಲ್ಲಿಸುವೆನು. ನಿನ್ನ ಕಿನ್ನರಿಗಳ ಧ್ವನಿ ಇನ್ನು ಕೇಳಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 26:13
16 ತಿಳಿವುಗಳ ಹೋಲಿಕೆ  

ಯೆಹೂದದ ಪಟ್ಟಣಗಳಲ್ಲಿಯೂ ಯೆರೂಸಲೇವಿುನ ಬೀದಿಗಳಲ್ಲಿಯೂ ಹರ್ಷಸಂಭ್ರಮಗಳ ಧ್ವನಿಯನ್ನೂ ವಧೂವರರ ಸ್ವರವನ್ನೂ ನಿಲ್ಲಿಸಿಬಿಡುವೆನು, ದೇಶವು ಹಾಳೇ ಹಾಳಾಗುವದು. ಇದು ಯೆಹೋವನ ನುಡಿ.


ಅದೇನಂದರೆ ಎಲ್ಲರೂ ಮರೆತ ಸೂಳೆಯೇ, ಕಿನ್ನರಿಯನ್ನು ತೆಗೆದುಕೊಂಡು ಊರಲ್ಲಿ ಅಲೆಯುತ್ತಾ ಜನರು ನಿನ್ನನ್ನು ಜ್ಞಾಪಿಸಿಕೊಳ್ಳುವಂತೆ ಚೆನ್ನಾಗಿ ನುಡಿಸಿ ಬಹು ಗೀತಗಳನ್ನು ಹಾಡು ಎಂಬದೇ.


ಇದಲ್ಲದೆ ನಾನು ಅವುಗಳಲ್ಲಿ ಹರ್ಷಸಂಭ್ರಮಗಳ ಧ್ವನಿಯನ್ನೂ ವಧೂವರರ ಸ್ವರವನ್ನೂ ಬೀಸುವ ಕಲ್ಲಿನ ಸದ್ದನ್ನೂ ದೀಪದ ಬೆಳಕನ್ನೂ ನಿಲ್ಲಿಸಿಬಿಡುವೆನು.


ಇಸ್ರಾಯೇಲಿನ ದೇವರೂ ಸೇನಾಧೀಶ್ವರನಾದ ಯೆಹೋವನೂ ಆಗಿರುವಾತನು ಹೀಗಂದಿದ್ದಾನೆ - ಇಗೋ, ನಿಮ್ಮ ಕಾಲದಲ್ಲಿ ನಿಮ್ಮ ಕಣ್ಣೆದುರಿಗೆ ಹರ್ಷಸಂಭ್ರಮಗಳ ಧ್ವನಿಯನ್ನೂ ವಧೂವರರ ಸ್ವರವನ್ನೂ ಈ ಸ್ಥಳದೊಳಗೆ ನಿಲ್ಲಿಸಿಬಿಡುವೆನು.


ನಿನ್ನ ವೈಭವವೂ ವೀಣಾನಾದವೂ ಪಾತಾಳಕ್ಕೆ ತಳ್ಳಲ್ಪಟ್ಟಿವೆ; ನಿನಗೆ ಹುಳಗಳೇ ಹಾಸಿಗೆ, ಕ್ರಿವಿುಗಳೇ ಹೊದಿಕೆ.


ನಾನು ಅವಳ ಉಲ್ಲಾಸ, ಹಬ್ಬ, ಅಮಾವಾಸ್ಯೆ, ಸಬ್ಬತ್ತು, ಮಹೋತ್ಸವ, ಇವುಗಳನ್ನೆಲ್ಲಾ ನಿಲ್ಲಿಸಿಬಿಡುವೆನು.


ದೇವರ ಉದ್ಯಾನವನವಾದ ಏದೆನಿನಲ್ಲಿ ನೀನಿದ್ದಿ; ಮಾಣಿಕ್ಯ ಪುಷ್ಯರಾಗ ಪಚ್ಚೆ ಪೀತರತ್ನ ಬೆರುಲ್ಲ ವೈಡೂರ್ಯ ನೀಲಕೆಂಪರಲು ಸ್ಫಟಿಕ ಈ ನವರತ್ನಗಳಿಂದ ಭೂಷಿತವಾಗಿದ್ದಿ; ನಿನ್ನಲ್ಲಿನ [ಈ ರತ್ನಗಳ] ಗೂಡುಗಳೂ ಮನೆಗಳೂ ಸುವರ್ಣ ರಚಿತವಾಗಿದ್ದವು; ನಿನ್ನ ಸೃಷ್ಟಿಯ ದಿನದಲ್ಲಿ ಸಿದ್ಧವಾದವು.


ನಿಮ್ಮ ಉಲ್ಲಾಸದ ಪಟ್ಟಣವು ಇದೇನೋ? ಅದರ ಉತ್ಪತ್ತಿಯು ಪುರಾತನವಾದದ್ದೇ ಸರಿ; ಅದರ ಜನರು ಮುಂದೆ ನಡೆದು ಅತಿ ದೂರದಲ್ಲಿಯೂ ನಿವಾಸಮಾಡಿಕೊಂಡಿದ್ದರಲ್ಲಾ.


ಕೋಲಾಹಲದಿಂದ ತುಂಬಿ ಆರ್ಭಟಿಸುವ ಪಟ್ಟಣವೇ, ಸಂಭ್ರಮದ ಊರೇ! ನಿನ್ನಲ್ಲಿ ಹತರಾದವರು ಖಡ್ಗಹತರಲ್ಲ, ಯುದ್ಧದಲ್ಲಿ ಮೃತರಲ್ಲ.


ಕಿನ್ನರಿ, ವೀಣೆ, ದಮ್ಮಡಿ, ಕೊಳಲು, ದ್ರಾಕ್ಷಾರಸ ಇವುಗಳೇ ಅವರ ಔತಣಗಳ ಸೊಬಗು; ಯೆಹೋವನ ಕೆಲಸವನ್ನೋ ಅವರು ಲಕ್ಷಿಸರು, ಆತನ ಹಸ್ತಕಾರ್ಯವನ್ನು ಆಲೋಚಿಸರು.


ಆ ದೇಶದ ನೀರವಂಜಿ ಮರಗಳಿಗೆ ನಮ್ಮ ಕಿನ್ನರಿಗಳನ್ನು ತೂಗಹಾಕಿದೆವು.


ಹಿಂಸೆಗೆ ಈಡಾದ ಕನ್ಯೆಯಂತಿರುವ ಚೀದೋನ್ ನಗರಿಯೇ, ಇನ್ನು ಮೇಲೆ ನಿನಗೆ ಹರ್ಷವೇ ಇಲ್ಲ; ಎದ್ದು ಕಿತ್ತೀವಿುಗೆ ಸಮುದ್ರದ ಮೇಲೆ ಹಾದುಹೋಗು, ಅಲ್ಲಿಯೂ ನಿನಗೆ ವಿಶ್ರಾಂತಿಯಿರದು ಎಂದು ಹೇಳಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು