ಯೆಹೆಜ್ಕೇಲನು 26:14 - ಕನ್ನಡ ಸತ್ಯವೇದವು J.V. (BSI)14 ನಾನು ನಿನ್ನನ್ನು ಬೋಳುಬಂಡೆ ಮಾಡುವೆನು; ನೀನು ಬಲೆಗಳಿಗೆ ಹಾಸಬಂಡೆಯಾಗುವಿ; ನಿನ್ನ ಮೇಲೆ ಇನ್ನು ಕಟ್ಟಡಕಟ್ಟರು; ಯೆಹೋವನಾದ ನಾನೇ ಅಪ್ಪಣೆಕೊಟ್ಟಿದ್ದೇನೆ; ಇದು ಕರ್ತನಾದ ಯೇಹೋವನ ನುಡಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನಾನು ನಿನ್ನನ್ನು ಬೋಳು ಬಂಡೆಯನ್ನಾಗಿ ಮಾಡುವೆನು; ನೀನು ಬಲೆಗಳನ್ನು ಹಾಕುವ ಸ್ಥಳವಾಗುವಿ; ನಿನ್ನ ಮೇಲೆ ಇನ್ನು ಕಟ್ಟಡವನ್ನು ಕಟ್ಟುವುದಿಲ್ಲ; ಯೆಹೋವನಾದ ನಾನೇ ಅಪ್ಪಣೆ ಕೊಟ್ಟಿದ್ದೇನೆ” ಇದು ಕರ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ನಾನು ನಿನ್ನನ್ನು ಬೋಳುಬಂಡೆಮಾಡುವೆನು; ನೀನು ಬಲೆಗಳಿಗೆ ಹಾಸುಬಂಡೆಯಾಗುವೆ; ಇನ್ನು ನೀನು ಪುನಃ ನಿರ್ಮಾಣ ಹೊಂದಲಾರೆ; ಸರ್ವೇಶ್ವರನಾದ ನಾನು ಅಪ್ಪಣೆಕೊಟ್ಟಿದ್ದೇನೆ; ಇದು ಸರ್ವೇಶ್ವರನಾದ ದೇವರ ನುಡಿ.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ನಾನು ನಿನ್ನನ್ನು ಬರಿದಾದ ಬಂಡೆಯನ್ನಾಗಿ ಮಾಡುವೆನು. ಸಮುದ್ರದ ತೀರದಲ್ಲಿ ಬಲೆಗಳನ್ನು ಹರಡುವ ಸ್ಥಳವಾಗಿ ನೀನು ಮಾರ್ಪಡುವೆ. ನೀನು ತಿರುಗಿ ಕಟ್ಟಲ್ಪಡುವದಿಲ್ಲ. ಇದು ಒಡೆಯನಾದ ಯೆಹೋವನ ನುಡಿ.” ನನ್ನ ಒಡೆಯನಾದ ಯೆಹೋವನು ಇದನ್ನು ನನಗೆ ತಿಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ನಿನ್ನನ್ನು ಬೋಳು ಬಂಡೆಯಂತೆ ಮಾಡುವೆನು. ನೀನು ಅಲ್ಲಿ ಬಲೆಹಾಸುವ ಸ್ಥಳವಾಗುವೆ. ನೀನು ಪುನಃ ಕಟ್ಟಲಾಗದೆ ಹೋಗುವಿ. ಯೆಹೋವ ದೇವರಾದ ನಾನೇ ಅದನ್ನು ಹೇಳಿದ್ದೇನೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |