Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 26:19 - ಕನ್ನಡ ಸತ್ಯವೇದವು J.V. (BSI)

19 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ನಿನ್ನನ್ನು ಹಾಳೂರು ಮಾಡಿ ನಿರ್ಜನಪಟ್ಟಣಗಳ ಗತಿಗೆ ತಂದು ನೀನು ಜಲರಾಶಿಯಲ್ಲಿ ಮುಣುಗಿಹೋಗುವಂತೆ ನಿನ್ನ ಮೇಲೆ ಮಹಾಸಾಗರವನ್ನು ಉಕ್ಕಿಸುವಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ನಿನ್ನನ್ನು ಹಾಳು ಊರನ್ನಾಗಿ ಮಾಡಿ, ನಿರ್ಜನ ಪಟ್ಟಣಗಳ ಗತಿಗೆ ತಂದು, ನೀನು ಜಲರಾಶಿಯಲ್ಲಿ ಮುಳುಗಿ ಹೋಗುವಂತೆ ನಿನ್ನ ಮೇಲೆ ಮಹಾಸಾಗರವನ್ನು ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: - “ನಾನು ನಿನ್ನನ್ನು ಹಾಳೂರು ಮಾಡಿ ನಿರ್ಜನ ಪಟ್ಟಣಗಳ ಗತಿಗೆ ತಂದು, ನೀನು ಜಲರಾಶಿಯಲ್ಲಿ ಮುಣುಗಿಹೋಗುವಂತೆ ನಿನ್ನ ಮೇಲೆ ಮಹಾಸಾಗರವನ್ನು ಉಕ್ಕಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಇದು ನನ್ನ ಒಡೆಯನಾದ ಯೆಹೋವನ ನುಡಿ. “ತೂರ್, ನಾನು ನಿನ್ನನ್ನು ನಾಶಮಾಡುವೆನು. ಆಗ ನೀನು ಬರಿದಾದ ನಗರವಾಗಿರುವೆ. ಯಾರೂ ಅಲ್ಲಿ ವಾಸ ಮಾಡುವದಿಲ್ಲ. ನಿನ್ನ ಮೇಲೆ ಸಮುದ್ರವು ತುಂಬುವಂತೆ ಮಾಡುವೆನು. ಆ ಮಹಾಸಾಗರವು ನಿನ್ನನ್ನು ಮುಚ್ಚಿಬಿಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 “ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ನಿನ್ನನ್ನು ನಿವಾಸಿಗಳಿಲ್ಲದ ಪಟ್ಟಣದ ಹಾಗೆ ಹಾಳಾದ ಪಟ್ಟಣವಾಗಿ ಮಾಡುವಾಗ ಹೆಚ್ಚು ನೀರು ಮುಚ್ಚುವ ಹಾಗೆ ಅಗಾಧ ಜಲರಾಶಿಯನ್ನು ನಿನ್ನ ಮೇಲೆ ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 26:19
7 ತಿಳಿವುಗಳ ಹೋಲಿಕೆ  

ಕರ್ತನಾದ ಯೆಹೋವನು ಇಂತೆನ್ನುತಾನೆ - ಇಗೋ, ತೂರೇ, ನಿನಗೆ ವಿರುದ್ಧನಾಗಿದ್ದೇನೆ; ಸಮುದ್ರವು ತೆರೆಗಳನ್ನು ಎಬ್ಬಿಸುವಂತೆ ನಾನು ಬಹುಜನಾಂಗಗಳನ್ನು ನಿನ್ನ ಮೇಲೆ ಎಬ್ಬಿಸುವೆನು.


ಇನ್ನೂ ಆ ದೇವದೂತನು ನನಗೆ ಹೇಳಿದ್ದು - ಆ ಜಾರಸ್ತ್ರೀಯು ವಾಸಿಸಿರುವ ನೀರುಗಳನ್ನು ಕಂಡಿಯಲ್ಲ? ಅವು ಪ್ರಜೆ ಸಮೂಹ ಜನ ಭಾಷೆಗಳನ್ನು ಸೂಚಿಸುತ್ತವೆ.


ಅಂತ್ಯಕಾಲದಲ್ಲಿ ದಕ್ಷಿಣರಾಜನು ಉತ್ತರರಾಜನ ಮೇಲೆ ಬೀಳಲು ಅವನು ರಥಾಶ್ವಬಲಗಳಿಂದಲೂ ಬಹು ನಾವೆಗಳಿಂದಲೂ ಕೂಡಿ ದಕ್ಷಿಣರಾಜನ ಮೇಲೆ ರಭಸವಾಗಿ ಬಿದ್ದು ನಾಡುನಾಡುಗಳಲ್ಲಿ ನುಗ್ಗಿ ತುಂಬಿತುಳುಕಿ ಹರಡಿಕೊಳ್ಳುವನು.


ಅರುವತ್ತೆರಡು ವಾರಗಳಾದ ಮೇಲೆ ಅಭಿಷಿಕ್ತನೊಬ್ಬನು ಛೇದಿಸಲ್ಪಡುವನು; ಅವನಿಗೆ ಏನೂ ಇರದು; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪವಿತ್ರಾಲಯವನ್ನೂ ಹಾಳುಮಾಡುವರು; ತುಂಬಿತುಳುಕುವ ಪ್ರಲಯವು ಪಟ್ಟಣವನ್ನು ಕೊನೆಗಾಣಿಸುವದು; ಅಂತ್ಯದವರೆಗೂ ಯುದ್ಧವಾಗುವದು, ನಿಶ್ಚಿತನಾಶನಗಳು ಸಂಭವಿಸುವವು.


ಹುಟ್ಟುಹಾಕುವವರು ನಿನ್ನನ್ನು ಮಹಾತರಂಗಗಳಿಗೆ ಸಿಕ್ಕಿಸಿದ್ದಾರೆ; ಮೂಡಣ ಗಾಳಿಯು ನಿನ್ನನ್ನು ಸಾಗರಮಧ್ಯದಲ್ಲಿ ಒಡೆದುಬಿಟ್ಟಿದೆ.


ಆತನು ನನ್ನನ್ನು - ನರಪುತ್ರನೇ, ಈ ಎಲುಬುಗಳಿಗೆ ಜೀವವು ಬರಬಹುದೋ ಎಂದು ಕೇಳಲು ನಾನು - ಕರ್ತನಾದ ಯೆಹೋವನೇ, ನೀನೇ ಬಲ್ಲೆ ಎಂದುತ್ತರಕೊಟ್ಟೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು