ಯೆಹೆಜ್ಕೇಲನು 27:22 - ಕನ್ನಡ ಸತ್ಯವೇದವು J.V. (BSI)22 ಶೆಬದವರೂ ರಗ್ಮದವರೂ ನಿನ್ನ ಕಡೆಯ ವರ್ತಕರಾಗಿ ಕನಕ ಮುಖ್ಯ ಮುಖ್ಯ ಸುಗಂಧದ್ರವ್ಯ ಸಮಾಸ್ತಾಮೂಲ್ಯರತ್ನ ಈ ಸರಕುಗಳನ್ನು ನಿನಗೋಸ್ಕರ ತಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 “ಶೆಬದವರೂ ಮತ್ತು ರಗ್ಮದವರೂ ನಿನ್ನ ಕಡೆಯ ವರ್ತಕರಾಗಿ, ಎಲ್ಲಾ ಶ್ರೇಷ್ಠವಾದ ಸುಗಂಧದ್ರವ್ಯದಿಂದಲೂ, ಅಮೂಲ್ಯವಾದ ರತ್ನಗಳಿಂದಲೂ, ಚಿನ್ನದಿಂದಲೂ ನಿನ್ನೊಡನೆ ವ್ಯಾಪಾರ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಶೆಬದವರೂ ರಗ್ಮದವರೂ ನಿನ್ನ ಕಡೆಯ ವರ್ತಕರಾಗಿ ಕನಕ, ಮುಖ್ಯ ಮುಖ್ಯ ಸುಗಂಧದ್ರವ್ಯ, ಸಮಸ್ತ ಅಮೂಲ್ಯರತ್ನ, ಈ ವಸ್ತುಗಳನ್ನು ನಿನಗಾಗಿ ತರುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಶೆಬ ಮತ್ತು ರಗ್ಮದ ವ್ಯಾಪಾರಿಗಳು ನಿನ್ನೊಂದಿಗೆ ವ್ಯಾಪಾರ ಮಾಡಿದರು. ಅವರು ನಿನಗೆ ಸಂಬಾರ ಜೀನಸು, ರತ್ನಗಳು ಮತ್ತು ಚಿನ್ನವನ್ನು ಬದಲಿಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 “ ‘ಶೆಬದವರು, ರಾಮದವರು ನಿನ್ನ ಕಡೆಯ ವರ್ತಕರಾಗಿ ಎಲ್ಲಾ ಶ್ರೇಷ್ಠವಾದ ಸುಗಂಧ ದ್ರವ್ಯದಿಂದಲೂ ಎಲ್ಲಾ ಬೆಲೆಯುಳ್ಳ ರತ್ನಗಳಿಂದಲೂ ಚಿನ್ನದಿಂದಲೂ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡೆಸಿದರು. ಅಧ್ಯಾಯವನ್ನು ನೋಡಿ |
ಅದಕ್ಕೆ ಅವರ ತಂದೆಯಾದ ಇಸ್ರಾಯೇಲನು ಅವರಿಗೆ - ನೀವು ಹೋಗಲೇಬೇಕಾಗಿದ್ದರೆ ಒಂದು ಕೆಲಸ ಮಾಡಿರಿ; ಈ ದೇಶದಲ್ಲಿ ದೊರಕುವ ಶ್ರೇಷ್ಠವಾದ ವಸ್ತುಗಳಲ್ಲಿ ಕೆಲವನ್ನು ನಿಮ್ಮ ಸಾಮಾನಿನಲ್ಲಿಟ್ಟು, ಆ ಮನುಷ್ಯನಿಗೆ ಕಾಣಿಕೆಯಾಗಿ ತೆಗೆದುಕೊಂಡು ಹೋಗಿರಿ; ಸ್ವಲ್ಪ ತೈಲ, ಸ್ವಲ್ಪ ದ್ರಾಕ್ಷಾರಸದ ಕಾಕಂಬಿ, ಹಾಲುಮಡ್ಡಿ, ರಕ್ತಬೋಳ, ಆಕ್ರೋಡು, ಬಾದಾವಿು ಇವುಗಳನ್ನು ತೆಗೆದುಕೊಂಡುಹೋಗಿ ಕೊಡಿರಿ.