Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 27:25 - ಕನ್ನಡ ಸತ್ಯವೇದವು J.V. (BSI)

25 ತಾರ್ಷೀಷಿನ ಹಡಗುಗಳು ಸಾಲುಸಾಲಾಗಿ ನಿನಗೆ ಬೇಕಾದ ದಿನಸುಗಳನ್ನು ಒಯ್ದುಕೊಂಡು ಬಂದವು. ನೀನು ಭರ್ತಿಯಾಗಿ ಸಮುದ್ರಮಧ್ಯದಲ್ಲಿ ಬಹು ಭಾರವಾದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ತಾರ್ಷೀಷಿನ ಹಡಗಿನ ಪ್ರಯಾಣಿಕರು ನಿನ್ನನ್ನು ನಿನ್ನ ಮಾರುಕಟ್ಟೆಯಲ್ಲಿ ಹೊಗಳುವರು. ನೀನು ಸಮುದ್ರ ಮಧ್ಯದಲ್ಲಿ ಬಹಳ ಘನವುಳ್ಳವಳಾದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ನಿನಗೆ ಬೇಕಾದ ದಿನಸುಗಳನು ತಂದವು ತಾರ್ಷೀಷಿನ ಹಡಗುಗಳು ಸಾಲುಸಾಲಾಗಿ ನೀನು ಭರ್ತಿಯಾಗಿ, ಸಮುದ್ರದ ಮಧ್ಯೆಯಿದ್ದೆ ಬಹು ಭಾರವಾಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ತಾರ್ಷೀಷಿನ ಹಡಗುಗಳು ನೀನು ಮಾರಿದ ವಸ್ತುಗಳನ್ನು ಕೊಂಡೊಯ್ದವು. “‘ತೂರೇ, ನೀನು ಆ ಸರಕು ಸಾಗಾಣಿಕೆಯ ಹಡಗುಗಳಂತಿರುವೆ. ಸಮುದ್ರಮಧ್ಯದಲ್ಲಿ ಅನೇಕ ಐಶ್ವರ್ಯಗಳಿಂದ ತುಂಬಿದವಳಾಗಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 “ ‘ತಾರ್ಷೀಷಿನ ಹಡಗುಗಳು ನಿನ್ನ ಮಾರುಕಟ್ಟೆಗೆ ಸರಕುಗಳನ್ನು ತರುತ್ತಿದ್ದವು. ಹೀಗೆ ನೀನು ತುಂಬಿದ್ದೀ ಮತ್ತು ಸಮುದ್ರಗಳ ಮಧ್ಯದಲ್ಲಿ ಬಹಳ ಘನವುಳ್ಳವಳಾದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 27:25
8 ತಿಳಿವುಗಳ ಹೋಲಿಕೆ  

ಎಲ್ಲಾ ದೊಡ್ಡ ದೊಡ್ಡ ಹಡಗುಗಳು, ಅಂತೂ ನೋಡತಕ್ಕ ಮನೋಹರವಾದ ಪ್ರತಿಯೊಂದು ವಸ್ತುವಿಗೂ ಆ ದಿನವು ತಪ್ಪದೆ ಬರುವದು.


ತಾರ್ಷೀಷಿನ ಹಡಗುಗಳೇ, ಅಂಗಲಾಚಿರಿ ನಿಮ್ಮ ಆಶ್ರಯವು ಹಾಳಾಯಿತು.


ದೇವರೇ, ನೀನು ಬಿರುಗಾಳಿಯಿಂದ ತಾರ್ಷಿಷ್ ದೇಶದ ದೊಡ್ಡ ದೊಡ್ಡ ಹಡಗುಗಳನ್ನು ಒಡೆದುಬಿಟ್ಟಂತಾಯಿತು.


ಯೆಹೋವನು ನಿನ್ನನ್ನು ವೈಭವಪಡಿಸಿರುವದನ್ನು ಕೇಳಿ ತಾರ್ಷೀಷಿನ ಹಡಗುಗಳು ನಿನ್ನ ದೇವರಾದ ಯೆಹೋವನ ನಾಮಮಹತ್ತಿನ ವಿಧಿಯೂ ಇಸ್ರಾಯೇಲಿನ ಸದಮಲಸ್ವಾವಿುಯ ಸನ್ನಿಧಿಯೂ ಆದ ಸ್ಥಾನಕ್ಕೆ ನಿನ್ನ ಮಕ್ಕಳನ್ನು ಅವರ ಬೆಳ್ಳಿ ಬಂಗಾರಗಳ ಸಮೇತ ದೂರದಿಂದ ತರುವದರಲ್ಲಿ ಮುಂದಾಗುತ್ತಿವೆ.


ಹೀರಾಮನ ನಾವೆಗಳ ಜೊತೆಯಲ್ಲಿ ಸೊಲೊಮೋನನ ತಾರ್ಷೀಷ್ ಹಡಗುಗಳು ಹೋಗಿ ಮೂರು ವರುಷಕ್ಕೊಮ್ಮೆ ಬಂಗಾರ, ಬೆಳ್ಳಿ, ದಂತ, ಕಪಿ, ನವಿಲು ಇವುಗಳನ್ನು ತರುತ್ತಿದ್ದವು.


ಯಾವಾನನ ಸಂತಾನದವರು - ಎಲೀಷಾ, ತಾರ್ಷೀಷ್, ಕಿತ್ತೀಮ್, ದೋದಾ ಎಂಬ ಸ್ಥಳಗಳವರು; ಇವರು ಸಮುದ್ರದ ರೇವುಗಳಲ್ಲಿ ಹರಡಿಕೊಂಡರು.


ವ್ಯಾಪಾರದ ಹಡಗುಗಳಂತೆ ದೂರದಿಂದ ಬೇಕಾದ ಆಹಾರವನ್ನು ತರುವಳು.


ನಿನ್ನ ವ್ಯಾಪಾರಿಗಳಾಗಿ ಉತ್ತಮಾಂಬರ ಕಸೂತಿಯ ಧೂಮ್ರದ ನಿಲುವಂಗಿ ಮೊದಲಾದ ಮಾಲುಗಳನ್ನೂ ಹಗ್ಗಗಳಿಂದ ಬಲವಾಗಿ ಬಿಗಿದ ವಿಚಿತ್ರವಸ್ತ್ರಗಳ ಮೂಟೆಗಳನ್ನೂ ನಿನಗಾಗಿ ಗಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು