Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 27:26 - ಕನ್ನಡ ಸತ್ಯವೇದವು J.V. (BSI)

26 ಹುಟ್ಟುಹಾಕುವವರು ನಿನ್ನನ್ನು ಮಹಾತರಂಗಗಳಿಗೆ ಸಿಕ್ಕಿಸಿದ್ದಾರೆ; ಮೂಡಣ ಗಾಳಿಯು ನಿನ್ನನ್ನು ಸಾಗರಮಧ್ಯದಲ್ಲಿ ಒಡೆದುಬಿಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಹುಟ್ಟುಹಾಕುವವರು ನಿನ್ನನ್ನು ಮಹಾ ತರಂಗಗಳಿಗೆ ಸಿಕ್ಕಿಸಿದ್ದಾರೆ; ಮೂಡಣ ಗಾಳಿಯು ನಿನ್ನನ್ನು ಸಾಗರದ ಮಧ್ಯದಲ್ಲಿ ಒಡೆದುಬಿಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಹುಟ್ಟುಹಾಕುವವರು ನಿನ್ನ ಸಿಕ್ಕಿಸಿಹರು ಮಹಾತರಂಗಗಳಿಗೆ ಸಾಗರಮಧ್ಯೆ ಒಡೆದು ಚೂರಾಗಿರುವೆ ಸಿಕ್ಕಿ ಮೂಡಣಗಾಳಿಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ನಿನ್ನನ್ನು ಹುಟ್ಟುಹಾಕುವವರು ಸಮುದ್ರದ ಬಹುದೂರ ನಿನ್ನನ್ನು ನಡಿಸಿದರು. ಆದರೆ ಪೂರ್ವದಿಂದ ಬಂದ ಬಲವುಳ್ಳ ಗಾಳಿಯು ನಿನ್ನನ್ನು ಮುರಿಯುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಹುಟ್ಟು ಹಾಕುವವರು ನಿನ್ನನ್ನು ಸಿಕ್ಕಿಸಿದ್ದಾರೆ. ಪೂರ್ವದಿಕ್ಕಿನ ಗಾಳಿಯು ಸಮುದ್ರದ ಮಧ್ಯದಲ್ಲಿ ನಿನ್ನನ್ನು ಮುರಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 27:26
13 ತಿಳಿವುಗಳ ಹೋಲಿಕೆ  

ದೇವರೇ, ನೀನು ಬಿರುಗಾಳಿಯಿಂದ ತಾರ್ಷಿಷ್ ದೇಶದ ದೊಡ್ಡ ದೊಡ್ಡ ಹಡಗುಗಳನ್ನು ಒಡೆದುಬಿಟ್ಟಂತಾಯಿತು.


ಸ್ವಲ್ಪ ಹೊತ್ತಿನ ಮೇಲೆ ಆ ದ್ವೀಪದ ಮೇಲಣಿಂದ ಈಶಾನ್ಯಪೂರ್ವವಾಯು ಎಂಬ ಹುಚ್ಚುಗಾಳಿಯು ಹೊಡೆಯಿತು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ನಿನ್ನನ್ನು ಹಾಳೂರು ಮಾಡಿ ನಿರ್ಜನಪಟ್ಟಣಗಳ ಗತಿಗೆ ತಂದು ನೀನು ಜಲರಾಶಿಯಲ್ಲಿ ಮುಣುಗಿಹೋಗುವಂತೆ ನಿನ್ನ ಮೇಲೆ ಮಹಾಸಾಗರವನ್ನು ಉಕ್ಕಿಸುವಾಗ


ಶತ್ರುಗಳು ಮೇಲೆ ಬಿದ್ದಾಗ ನನ್ನ ಜನರನ್ನು ಮೂಡಣ ಗಾಳಿಯಿಂದಲೋ ಎಂಬಂತೆ ದಿಕ್ಕಾಪಾಲುಮಾಡುವೆನು. ಅವರ ವಿಪತ್ತಿನ ದಿನದಲ್ಲಿ ಅವರ ಕಡೆಗೆ ಮುಖತಿರುಗಿಸದೆ ಬೆನ್ನು ಮಾಡುವೆನು.


ಇನ್ನೂ ಆ ದೇವದೂತನು ನನಗೆ ಹೇಳಿದ್ದು - ಆ ಜಾರಸ್ತ್ರೀಯು ವಾಸಿಸಿರುವ ನೀರುಗಳನ್ನು ಕಂಡಿಯಲ್ಲ? ಅವು ಪ್ರಜೆ ಸಮೂಹ ಜನ ಭಾಷೆಗಳನ್ನು ಸೂಚಿಸುತ್ತವೆ.


ಆದರೆ ಮಧ್ಯದಲ್ಲಿ ಅವರಿಗೆ ಮರಳುದಿಬ್ಬ ಸಿಕ್ಕಿದಾಗ ಅದಕ್ಕೆ ನಾವೆಯನ್ನು ಹತ್ತಿಸಿದರು. ಮುಂಭಾಗವು ತಗಲಿಕೊಂಡು ಅಲ್ಲಾಡದೆ ನಿಂತಿತು. ಹಿಂಭಾಗವು ತೆರೆಗಳ ಹೊಡೆತದಿಂದ ಒಡೆದುಹೋಗುತ್ತಾ ಬಂತು.


ಈಗಲಾದರೋ ನೀನು ಸಮುದ್ರದಿಂದ ಹಾಳಾದಿ. ನಿನ್ನ ಸರಕುಗಳೂ ನಿನ್ನಲ್ಲಿ ಸೇರಿಕೊಂಡಿದ್ದ ಸಕಲ ಜನರೂ ಅಗಾಧಜಲದಲ್ಲಿ ಮುಣುಗಿಹೋದರು.


ನಿನ್ನ ಹಗ್ಗಗಳು ಸಡಲಿ ಸ್ತಂಭದ ಪಾದವನ್ನು ಸ್ಥಿರಪಡಿಸಿಕೊಳ್ಳಲಾರದೆ ಹೋದವು, ಪಠವನ್ನು ಮುದುರದಂತೆ ಹಿಡಿದಿರಲಿಕ್ಕೂ ಆಗಲಿಲ್ಲ; ಆಗ ದೊಡ್ಡ ಸೂರೆಯು ಕೊಳ್ಳೆಯಾಗಿ ಹಂಚುವದಕ್ಕೆ ಆಸ್ಪದವಾಯಿತು. ಕುಂಟರೂ ಸುಲಿಗೆಮಾಡಿದರು.


ತಾರ್ಷೀಷಿನ ಹಡಗುಗಳೇ, ಅಂಗಲಾಚಿರಿ ನಿಮ್ಮ ಆಶ್ರಯವು ಹಾಳಾಯಿತು.


ನಿನ್ನ ಆಸ್ತಿಯು, ನಿನ್ನ ದಿನಸುಗಳು, ನಿನ್ನ ಸರಕುಗಳು, ನಿನ್ನ ನಾವಿಕರು, ನಿನ್ನ ಅಂಬಿಗರು, ನಿನ್ನ ಕಂಡಿಗಳನ್ನು ಭದ್ರಪಡಿಸುವವರು, ನಿನ್ನ ವ್ಯಾಪಾರಿಗಳು, ನಿನ್ನಲ್ಲಿನ ಸಮಸ್ತ ಸೈನಿಕರು, ಅಂತು ನಿನ್ನೊಳಗೆ ಸೇರಿಕೊಂಡಿರುವ ನಿನ್ನ ಸಿಬ್ಬಂದಿಯೆಲ್ಲವೂ ನಿನ್ನ ನಾಶನದ ದಿನದಲ್ಲಿ ಸಮುದ್ರದೊಳಗೆ ಮುಣುಗಿಹೋಗುವದು.


ನಿನ್ನನ್ನು ಪಾತಾಳಕ್ಕೆ ತಳ್ಳಿಬಿಡುವರು; ಸಮುದ್ರಮಧ್ಯದಲ್ಲಿ ನಿನಗೆ ಹತರಾದವರ ಗತಿ ಸಂಭವಿಸುವದು.


ನಾವು ಕಿವಿಯಿಂದ ಕೇಳಿದಂತೆಯೇ ಈಗ ಕಣ್ಣಾರೆ ಕಂಡೆವು; ನಮ್ಮ ದೇವರೂ ಸೇನಾಧೀಶನೂ ಆಗಿರುವ ಯೆಹೋವನ ಸಂಸ್ಥಾನದಲ್ಲಿ ಆತನ ಮಹತ್ತನ್ನು ನೋಡಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು